Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 11:2 - ಕನ್ನಡ ಸತ್ಯವೇದವು C.L. Bible (BSI)

2 ಒಂದು ದಿನ ಸಂಜೆ ಹೊತ್ತಿನಲ್ಲಿ ದಾವೀದನು ಮಂಚದಿಂದೆದ್ದು ಅರಮನೆಯ ಮಾಳಿಗೆಯ ಮೇಲೆ ತಿರುಗಾಡುತ್ತಿದ್ದನು. ಆಗ ಅಲ್ಲಿಂದ ಬಹು ಸುಂದರಿಯಾದ ಒಬ್ಬ ಸ್ತ್ರೀ ಸ್ನಾನಮಾಡುವುದನ್ನು ಕಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅವನು ಒಂದು ದಿನ ಸಂಜೆ ಹೊತ್ತಿನಲ್ಲಿ ಅರಮನೆಯ ಮಾಳಿಗೆಯ ಮೇಲೆ ತಿರುಗಾಡುತ್ತಿದ್ದನು. ಅವನು ಅಲ್ಲಿಂದ ಬಹು ಸುಂದರಿಯಾದ ಒಬ್ಬ ಸ್ತ್ರೀ ಸ್ನಾನಮಾಡುವುದನ್ನು ಕಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅವನು ಒಂದು ದಿವಸ ಸಂಜೇ ಹೊತ್ತಿನಲ್ಲಿ ಮಂಚದಿಂದೆದ್ದು ಅರಮನೆಯ ಮಾಳಿಗೆಯ ಮೇಲೆ ತಿರುಗಾಡುತ್ತಿರುವಾಗ ಅಲ್ಲಿಂದ ಬಹುಸುಂದರಿಯಾದ ಒಬ್ಬ ಸ್ತ್ರೀ ಸ್ನಾನಮಾಡುವದನ್ನು ಕಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಅವನು ಸಾಯಂಕಾಲ ತನ್ನ ಹಾಸಿಗೆಯಿಂದ ಮೇಲೆದ್ದು ಅರಮನೆಯ ಮಾಳಿಗೆಯ ಮೇಲಕ್ಕೆ ಹೋಗಿ ತಿರುಗಾಡುತ್ತಿದ್ದನು. ದಾವೀದನು ಮಾಳಿಗೆಯ ಮೇಲಿರುವಾಗ, ಒಬ್ಬ ಹೆಂಗಸು ಸ್ನಾನ ಮಾಡುತ್ತಿರುವುದನ್ನು ನೋಡಿದನು. ಅವಳು ಅತ್ಯಂತ ಸುಂದರಳಾಗಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ದಾವೀದನು ಒಂದು ದಿನ ಸಾಯಂಕಾಲದಲ್ಲಿ ತನ್ನ ಹಾಸಿಗೆಯಿಂದ ಎದ್ದು, ಅರಮನೆಯ ಉಪ್ಪರಿಗೆಯ ಮೇಲೆ ತಿರುಗಾಡುತ್ತಾ ಇದ್ದು, ಸ್ನಾನ ಮಾಡುತ್ತಿರುವ ಒಬ್ಬ ಸ್ತ್ರೀಯನ್ನು ಕಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 11:2
28 ತಿಳಿವುಗಳ ಹೋಲಿಕೆ  

ಆದರೆ ನಾನು ಹೇಳುತ್ತೇನೆ, ಕೇಳಿ; ಪರಸ್ತ್ರೀಯನ್ನು ಕಾಮದೃಷ್ಟಿಯಿಂದ ನೋಡುವ ಪ್ರತಿಯೊಬ್ಬನೂ ತನ್ನ ಹೃದಯದಲ್ಲಿ ಆಕೆಯೊಡನೆ ಆಗಲೇ ವ್ಯಭಿಚಾರ ಮಾಡಿದವನೇ ಆಗುತ್ತಾನೆ.


ವ್ಯರ್ಥವಾದವುಗಳು ನಾಟದಿರಲಿ ಕಣ್ಗೆ I ಚೇತನ ನೀಡು ನಿನ್ನ ಮಾರ್ಗದಲಿ ನನಗೆ II


ಲೋಕಸಂಬಂಧವಾದ ದೈಹಿಕ ದುರಿಚ್ಛೆ, ಕಣ್ಣಿನ ಕಾಮುಕತೆ, ಐಶ್ವರ್ಯದ ಅಹಂಭಾವ - ಇಂಥವು ಪಿತನಿಂದ ಬಂದುವಲ್ಲ, ಲೋಕದಿಂದಲೇ ಬಂದುವು.


ಮಾರನೆಯ ದಿನ ಅವರು ಪ್ರಯಾಣ ಮಾಡಿ ಜೊಪ್ಪವನ್ನು ಸಮೀಪಿಸಿದಾಗ ಮಧ್ಯಾಹ್ನ ಸಮಯ. ಆಗತಾನೇ ಪೇತ್ರನು ಪ್ರಾರ್ಥನೆ ಮಾಡಲು ಮಾಳಿಗೆಯ ಮೇಲಕ್ಕೆ ಹೋದನು.


ನಿನ್ನ ಹೃದಯ ಅವಳ ಬೆಡಗನ್ನು ಮೋಹಿಸದಿರಲಿ; ಕಣ್ಣು ಮಿಟುಕಿಸಿ ಅವಳು ನಿನ್ನನ್ನು ವಶಮಾಡಿಕೊಳ್ಳದಿರಲಿ.


“ಕನ್ಯೆಯನು (ಕಾಮದೃಷ್ಟಿಯಿಂದ) ನೋಡೆನೆಂದು ಮಾಡಿಕೊಂಡಿರುವೆ ನನ್ನ ಕಣ್ಣುಗಳೊಡನೆ ಒಪ್ಪಂದವನು.


ಎಲ್ಲದರ ಅಂತ್ಯಕಾಲವು ಹತ್ತಿರವಾಯಿತು. ಈ ಕಾರಣ ನೀವು ಜಿತೇಂದ್ರಿಯರಾಗಿಯೂ ಜಾಗ್ರತರಾಗಿಯೂ ಪ್ರಾರ್ಥನೆಮಾಡುತ್ತಿರಿ.


ಆಕರ್ಷಣೆ ನೆಚ್ಚತಕ್ಕದಲ್ಲ. ಅಲಂಕಾರ ನೆಲೆಯಾದುದಲ್ಲ; ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವಳೆ ಸ್ತುತ್ಯಾರ್ಹಳು.


“ನೀವು ಹೊಸ ಮನೆಯನ್ನು ಕಟ್ಟಿಸಿಕೊಳ್ಳುವಾಗ ನಿಮ್ಮ ಮನೆಯ ಮಾಳಿಗೆಯ ಮೇಲೆ ಸುತ್ತಲೂ ಸಣ್ಣ ಕೈಗೋಡೆಯನ್ನು ಕಟ್ಟಿಸಬೇಕು. ಇಲ್ಲದಿದ್ದರೆ ಒಬ್ಬನು ಆ ಮಾಳಿಗೆಯಿಂದ ಬಿದ್ದು, ಅವನ ಜೀವಹತ್ಯದೋಷ ನಿಮ್ಮ ಮನೆಯ ಮೇಲೆ ಬರುವುದು.


ಆಗ ಆ ಮಹಿಳೆ, “ಈ ಮರದ ಹಣ್ಣು ಊಟಕ್ಕೆ ಎಷ್ಟು ಚೆನ್ನಾಗಿದೆ, ನೋಟಕ್ಕೆ ಎಷ್ಟು ರಮಣೀಯವಾಗಿದೆ. ಜ್ಞಾನಾರ್ಜನೆಗೆ ಎಷ್ಟು ಆಕರ್ಷಣೀಯವಾಗಿದೆ” ಎಂದು ತಿಳಿದು, ಅದನ್ನು ತೆಗೆದುಕೊಂಡು ತಿಂದಳು; ಸಂಗಡವಿದ್ದ ಗಂಡನಿಗೂ ಕೊಟ್ಟಳು; ಅವನೂ ತಿಂದನು.


ನಾನು ಕತ್ತಲಲ್ಲಿ ಹೇಳುವುದನ್ನು ನೀವು ಬೆಳಕಿನಲ್ಲಿ ಪ್ರಚುರಪಡಿಸಿರಿ, ಕಿವಿಮಾತಾಗಿ ಕೇಳಿದ್ದನ್ನು ಮನೆಮಾಳಿಗೆಯ ಮೇಲೆ ನಿಂತು ಸಾರಿರಿ.


ಜೆರುಸಲೇಮಿನ ಮನೆಗಳೂ ಜುದೇಯದ ಅರಸರ ಮನೆಗಳೂ, ಅಂದರೆ ಯಾವ ಯಾವ ಮನೆಮಾಳಿಗೆಗಳ ಮೇಲೆ ಆಕಾಶದ ನಕ್ಷತ್ರಗಣಕ್ಕೆಲ್ಲ ಧೂಪಾರತಿ ಎತ್ತಿ ಅನ್ಯದೇವತೆಗಳಿಗೆ ಪಾನನೈವೇದ್ಯಗಳನ್ನು ಸುರಿದಿದ್ದಾರೋ ಆ ಮನೆಗಳೆಲ್ಲ ಹೊಲಸಾಗಿ ತೋಫೆತ್ ಸ್ಥಳಕ್ಕೆ ಸಮಾನವಾಗುವುವು.”


ಮೈಗಳ್ಳತನ ಗಾಢನಿದ್ರೆಯಲ್ಲಿ ಮುಳುಗಿಸುವುದು; ಸೋಮಾರಿಯು ಹಸಿವಿನಿಂದ ಬಳಲುವನು.


ಒಳಕೋಣೆಯಲ್ಲಿ ಮಂಚದ ಮೇಲೆ ಮಲಗಿದ್ದ ಅರಸನನ್ನು ಹೊಡೆದುಕೊಂದರು. ತಲೆಯನ್ನು ತೆಗೆದುಕೊಂಡರು. ರಾತ್ರಿಯೆಲ್ಲಾ ಅರಾಬಾ ತಗ್ಗಿನಲ್ಲಿ ಪ್ರಯಾಣಮಾಡಿ


ಹಿವ್ವಿಯನಾದ ಹಮೋರನ ಮಗನೂ ಆ ನಾಡಿಗೆ ಒಡೆಯನೂ ಆದ ಶೆಕೆಮನು ಆಕೆಯನ್ನು ನೋಡಿ, ಎತ್ತಿಕೊಂಡು ಹೋಗಿ, ಆಕೆಯನ್ನು ಜತೆಗೂಡಿ ಮಾನಭಂಗ ಮಾಡಿದನು.


ಈ ಮನುಷ್ಯಪುತ್ರಿಯರ ಚೆಲುವನ್ನು ಕಂಡು ದೇವಪುತ್ರರು ತಮಗೆ ಇಷ್ಟಬಂದವರನ್ನೆಲ್ಲ ಮದುವೆಯಾದರು.


ಈಷ್ಬೋಶೆತನು ಮಧ್ಯಾಹ್ನದ ಬಿಸಿಲು ಹೊತ್ತಿನಲ್ಲಿ ಮನೆಯೊಳಗೆ ಮಲಗಿರುವಾಗ ಬೇರೋತಿನ ರಿಮ್ಮೋನನ ಮಕ್ಕಳಾದ ರೇಕಾಬ್ ಹಾಗು ಬಾಣ ಎಂಬವರು ಅವನ ಮನೆಯ ಬಳಿಗೆಹೋದರು.


ಅವರು ಗುಡ್ಡದಿಂದಿಳಿದು ಪಟ್ಟಣಕ್ಕೆ ಬಂದನಂತರ ಸಮುವೇಲನು ಸೌಲನನ್ನು ತನ್ನ ಮನೆಮಾಳಿಗೆಯ ಮೇಲೆ ಕರೆದುಕೊಂಡು ಹೋಗಿ ಅವನೊಡನೆ ಮಾತನಾಡಿದನು.


ಪೋಟೀಫರನು ಹೀಗೆ ತನ್ನದನ್ನೆಲ್ಲ ಜೋಸೆಫನ ವಶಕ್ಕೆ ಒಪ್ಪಿಸಿ, ‘ಅವನು ಇದ್ದಾನಲ್ಲಾ’ ಎಂದುಕೊಂಡು, ತಾನು ತಿನ್ನುತ್ತಿದ್ದ ಆಹಾರ ಒಂದನ್ನು ಬಿಟ್ಟು, ಬೇರೆ ಏನನ್ನೂ ಕುರಿತು ಚಿಂತಿಸದೆ ಇದ್ದ.


ಮಾಳಿಗೆಯ ಮೇಲಿರುವವನು ಇಳಿದು ಮನೆಯಿಂದ ಏನನ್ನೂ ತೆಗೆದುಕೊಳ್ಳದೆ ಓಡಿಹೋಗಲಿ.


ಈಜಿಪ್ಟನ್ನು ಪ್ರವೇಶಿಸುವುದಕ್ಕೆ ಮುಂಚೆಯೆ ತನ್ನ ಹೆಂಡತಿ ಸಾರಯಳಿಗೆ, “ನೀನು ಬಲು ಚೆಲುವಾದ ಹೆಣ್ಣು;


‘ನೆರೆಯವನ ಹೆಂಡತಿಯನ್ನು ಅಪೇಕ್ಷಿಸಬೇಡ; ಅವನ ಮನೆ, ಹೊಲ, ಗಂಡಾಳು, ಹೆಣ್ಣಾಳು, ಎತ್ತು, ಕತ್ತೆ ಮುಂತಾದ ಯಾವುದನ್ನೂ ಬಯಸಬಾರದು,.


ದಾವೀದನ ಮಗನಾದ ಅಬ್ಷಾಲೋಮನಿಗೆ ತಾಮಾರಳೆಂಬ ಬಹು ಚೆಲುವೆಯಾದ ತಂಗಿಯಿದ್ದಳು. ದಾವೀದನ ಮಗ ಅಮ್ನೋನನು ಆಕೆಯನ್ನು ಮೋಹಿಸಿದನು.


ಅವನಿಗೆ ಮೂರುಮಂದಿ ಗಂಡುಮಕ್ಕಳೂ ಒಬ್ಬ ಮಗಳೂ ಇದ್ದರು. ಮಗಳ ಹೆಸರು ತಾಮಾರ್; ಈಕೆ ಬಹು ಸುಂದರಿಯಾಗಿದ್ದಳು.


ಹೊತ್ತು ಮೀರಿ, ಸಂಜೆಯಾಗಿ, ಕತ್ತಲು ಕವಿದಿದ್ದಾ ರಾತ್ರಿಯಲ್ಲಿ, ಅವನು ಹಾದುಹೋಗುತ್ತಿದ್ದ ಬೀದಿಯ ಮೂಲೆ ಮನೆಯ ಬಳಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು