Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 11:24 - ಕನ್ನಡ ಸತ್ಯವೇದವು C.L. Bible (BSI)

24 ಆಗ ಬಿಲ್ಲುಗಾರರು ಗೋಡೆಯ ಮೇಲಿನಿಂದ ನಿಮ್ಮ ಸೇವಕರ ಮೇಲೆ ಬಾಣಗಳನ್ನು ಎಸೆದುದರಿಂದ ಅವರಲ್ಲಿ ಕೆಲವರು ಸತ್ತರು. ಹಿತ್ತಿಯನಾದ ನಿಮ್ಮ ಸೇವಕ ಊರೀಯನೂ ಮಡಿದನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಆಗ ಬಿಲ್ಲುಗಾರರು ಗೋಡೆಯ ಮೇಲಿನಿಂದ ನಿನ್ನ ಸೇವಕರ ಮೇಲೆ ಬಾಣಗಳನ್ನು ಎಸೆದದ್ದರಿಂದ ಅವರಲ್ಲಿ ಕೆಲವರು ಸತ್ತರು. ಹಿತ್ತಿಯನಾದ ನಿನ್ನ ಸೇವಕ ಊರೀಯನೂ ಸತ್ತನು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಆಗ ಬಿಲ್ಲುಗಾರರು ಗೋಡೆಯ ಮೇಲಣಿಂದ ನಿನ್ನ ಸೇವಕರ ಮೇಲೆ ಬಾಣಗಳನ್ನು ಎಸೆದದರಿಂದ ಅವರಲ್ಲಿ ಕೆಲವರು ಸತ್ತರು. ಹಿತ್ತಿಯನಾದ ನಿನ್ನ ಸೇವಕ ಊರೀಯನೂ ಮಡಿದನು ಎಂಬದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ನಗರದ ಗೋಡೆಯ ಮೇಲಿದ್ದ ಜನರು ನಿಮ್ಮ ಸೈನಿಕರ ಮೇಲೆ ಬಾಣಗಳನ್ನು ಎಸೆದರು. ನಿಮ್ಮ ಸೈನಿಕರಲ್ಲಿ ಕೆಲವರನ್ನು ಕೊಂದರು. ಹಿತ್ತಿಯನಾದ ನಿನ್ನ ಸೈನಿಕ ಊರೀಯನೂ ಸಹ ಸತ್ತುಹೋದನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಆಗ ಬಿಲ್ಲುಗಾರರು ಗೋಡೆಯ ಮೇಲಿನಿಂದ ನಿನ್ನ ಸೇವಕರ ಮೇಲೆ ಬಾಣಗಳನ್ನು ಎಸೆದ ಕಾರಣ, ಅರಸನ ಸೇವಕರಲ್ಲಿ ಕೆಲವರು ಸತ್ತರು. ಇದಲ್ಲದೆ ನಿನ್ನ ಸೇವಕನಾದ ಊರೀಯನೆಂಬ ಹಿತ್ತಿಯನು ಸತ್ತನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 11:24
4 ತಿಳಿವುಗಳ ಹೋಲಿಕೆ  

ಆಗ ದಾವೀದನು ಆ ದೂತನಿಗೆ, “ನೀನು ಹೋಗಿ ಯೋವಾಬನಿಗೆ, ‘ವ್ಯಸನಪಡಬೇಕಾಗಿಲ್ಲ; ಕತ್ತಿ ಈ ದಿನ ಒಬ್ಬನನ್ನು ನುಂಗಿದರೆ ನಾಳೆ ಇನ್ನೊಬ್ಬನನ್ನು ನುಂಗುತ್ತದೆ. ಮತ್ತಷ್ಟು ಶೂರತನದಿಂದ ಯುದ್ಧಮಾಡಿ ಪಟ್ಟಣವನ್ನು ಕೆಡವಿಬಿಡಿ, ಎಂಬುದಾಗಿ ಅರಸರು ಆಜ್ಞಾಪಿಸುತ್ತಾರೆ’ ಎಂದು ಹೇಳಿ ಅವನನ್ನು ಧೈರ್ಯಪಡಿಸು,” ಎಂದನು.


ಅವರನ್ನು ಹೊಡೆದೆವು ನಾವು ಬಿಲ್ಲುಬಾಣಗಳಿಂದ, ಹೆಷ್ಬೋನಿನಿಂದ ದೀಬೋನಿನವರೆಗೆ ಸರ್ವನಾಶ! ಹಾಳು ಮಾಡಿದೆವು ಮೇದೆಬಾ ಊರಿನ ನೆರೆಯಲ್ಲಿರುವ ನೋಫಹದ ತನಕ.


ಆಗ ದಾವೀದನು ಹಿತ್ತಿಯನಾದ ಅಹೀಮೆಲೆಕನನ್ನು ಹಾಗು ಚೆರೂಯಳ ಮಗನೂ ಯೋವಾಬನ ತಮ್ಮನೂ ಆದ ಅಬೀಷೈಯನ್ನು ಉದ್ದೇಶಿಸಿ, “ನಿಮ್ಮಲ್ಲಿ ನನ್ನ ಸಂಗಡ ಸೌಲನ ಪಾಳೆಯಕ್ಕೆ ಯಾರು ಬರುವಿರಿ?” ಎಂದು ಕೇಳಿದನು. ಅದಕ್ಕೆ ಅಬೀಷೈಯು, “ನಾನು ಬರುತ್ತೇನೆ,” ಎಂದು ಉತ್ತರಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು