Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 11:8 - ಕನ್ನಡ ಸತ್ಯವೇದವು C.L. Bible (BSI)

8 ಅನಂತರ ಅವನಿಗೆ, “ನೀನು ಮನೆಗೆ ಹೋಗಿ ಕೈಕಾಲು ತೊಳೆದುಕೋ,” ಎಂದು ಹೇಳಿದನು. ಊರೀಯನು ಅರಮನೆಯಿಂದ ಹೊರಟ ಕೂಡಲೆ ಅವನ ಹಿಂದೆಯೇ ಅರಸನ ಭೋಜನ ಪದಾರ್ಥಗಳೂ ಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅವನಿಗೆ, “ಮನೆಗೆ ಹೋಗಿ ಕೈಕಾಲು ತೊಳೆದುಕೋ” ಎಂದು ಹೇಳಿದನು. ಊರೀಯನು ಅರಮನೆಯಿಂದ ಹೊರಟ ಕೂಡಲೆ ಅವನ ಹಿಂದೆಯೆ ಅರಸನ ಭೋಜನ ಪದಾರ್ಥಗಳು ಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಮನೆಗೆ ಹೋಗಿ ಕೈಕಾಲು ತೊಳೆದುಕೋ ಎಂದು ಹೇಳಿದನು. ಊರೀಯನು ಅರಮನೆಯಿಂದ ಹೊರಟ ಕೂಡಲೆ ಅವನ ಹಿಂದೆಯೇ ಅರಸನ ಭೋಜನ ಪದಾರ್ಥಗಳೂ ಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನಂತರ ದಾವೀದನು ಊರೀಯನಿಗೆ, “ಮನೆಗೆ ಹೋಗಿ ವಿಶ್ರಾಂತಿಯನ್ನು ಪಡೆ” ಎಂದನು. ಊರೀಯನು ರಾಜನ ಮನೆಯನ್ನು ಬಿಟ್ಟುಹೋದನು. ಊರೀಯನಿಗೆ ರಾಜನು ಕೊಡುಗೆಗಳನ್ನು ಸಹ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ದಾವೀದನು ಊರೀಯನಿಗೆ, “ನೀನು ನಿನ್ನ ಮನೆಗೆ ಹೋಗಿ ನಿನ್ನ ಕಾಲುಗಳನ್ನು ತೊಳಕೋ,” ಎಂದನು. ಊರೀಯನು ಅರಸನ ಮನೆಯಿಂದ ಹೊರಟುಹೋದನು. ನಂತರ ಅರಸನು ಅವನಿಗೆ ಉಪಹಾರ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 11:8
11 ತಿಳಿವುಗಳ ಹೋಲಿಕೆ  

ನೀರು ತರಿಸಿಕೊಡುತ್ತೇನೆ, ಕಾಲುತೊಳೆದುಕೊಂಡು ಈ ಮರದ ನೆರಳಿನಲ್ಲಿ ವಿಶ್ರಮಿಸಿಕೊಳ್ಳಿ.


ನಾವು ಯಾರಿಗೆ ಲೆಕ್ಕ ಒಪ್ಪಿಸಬೇಕಾಗಿದೆಯೋ, ಅವರ ಕಣ್ಣಿಗೆ ಮುಚ್ಚುಮರೆಯಾದುದು ಯಾವುದೂ ಇಲ್ಲ. ಅವರ ದೃಷ್ಟಿಗೆ ಎಲ್ಲವೂ ಬಟ್ಟಬಯಲು.


ಮುಚ್ಚುಮರೆಯಾಗಿರುವುದೆಲ್ಲಾ ಬಟ್ಟಬಯಲಾಗುವುದು; ಗುಟ್ಟಾಗಿರುವುದೆಲ್ಲಾ ರಟ್ಟಾಗುವುದು.


ಅನಂತರ ಆ ಮಹಿಳೆಯ ಕಡೆ ತಿರುಗಿ ಸಿಮೋನನಿಗೆ, “ಈಕೆಯನ್ನು ನೋಡಿದೆಯಾ? ನಾನು ನಿನ್ನ ಮನೆಗೆ ಬಂದಾಗ ನೀನು ನನ್ನ ಕಾಲಿಗೆ ನೀರು ಕೊಡಲಿಲ್ಲ; ಈಕೆಯಾದರೋ ನನ್ನ ಪಾದಗಳನ್ನು ತನ್ನ ಕಣ್ಣೀರಿನಿಂದ ತೊಳೆದು ತಲೆಗೂದಲಿನಿಂದ ಒರಸಿರುವಳು.


ತಮ್ಮ ಆಲೋಚನೆಯನ್ನು ಸರ್ವೇಶ್ವರ ಸ್ವಾಮಿಯಿಂದ ಬಚ್ಚಿಡುವುದಕ್ಕಾಗಿ ಒಳಸಂಚುಮಾಡುವವರಿಗೆ ಧಿಕ್ಕಾರ ! ಇವರು, “ನಮ್ಮನ್ನು ಯಾರು ನೋಡಿಯಾರು? ನಮ್ಮನ್ನು ಯಾರು ಗಮನಿಸಿಯಾರು?” ಎಂದುಕೊಂಡು ಕತ್ತಲಲ್ಲೇ ತಮ್ಮ ಕೃತ್ಯಗಳನ್ನು ನಡೆಸುತ್ತಾರೆ.


ಅವನ ಬಾಯಿ ಬೆಣ್ಣೆಗಿಂತ ನಯ, ಆದರೆ ಹೃದಯ ಕಲಹಭರಿತ I ನುಡಿ ಎಣ್ಣೆಗಿಂತ ನುಣುಪು, ಆದರೆ ಬಿಚ್ಚುಗತ್ತಿಗಿಂತ ಹರಿತ II


ದೇವಾ, ನಿನಗದು ಬಯಲಾಗದಿರುತ್ತಿತ್ತೆ? I ನಮ್ಮೆದೆ ಗುಟ್ಟು ನಿನಗೆ ತಿಳಿಯದಿರುತ್ತಿತ್ತೆ? II


ಹುಸಿಯ ನುಡಿವರು ನೆರೆಯವರೊಡನೆ ಪ್ರತಿಯೋರ್ವರು I ಕಪಟ ಮನದ ತುಟಿಮಾತಿನ ಸ್ತುತಿಗಾರರವರು II


ಜೋಸೆಫನು ತನ್ನ ಮುಂದೆ ಬಡಿಸಿದ್ದ ಪದಾರ್ಥಗಳಲ್ಲಿ ಅವರಿಗೆ ಭಾಗಗಳನ್ನು ಕಳಿಸಿದನು. ಬೆನ್ಯಾಮೀನನಿಗೆ ಬಂದ ಭಾಗವಾದರೋ ಮಿಕ್ಕವರ ಭಾಗಗಳಿಗಿಂತ ಐದರಷ್ಟು ಹೆಚ್ಚಾಗಿತ್ತು. ಅವರು ಯಥೇಚ್ಛವಾಗಿ ಪಾನಮಾಡಿ ಜೋಸೆಫನ ಸಂಗಡ ಸಂಭ್ರಮದಿಂದಿದ್ದರು.


ಆಮೇಲೆ ಗೃಹನಿರ್ವಾಹಕನು ಅವರೆಲ್ಲರನ್ನು ಜೋಸೆಫನ ಮನೆಯೊಳಗೆ ಕರೆತಂದು ಕಾಲು ತೊಳೆದುಕೊಳ್ಳುವುದಕ್ಕೆ ನೀರನ್ನು ಕೊಡಿಸಿದನು. ಅವರ ಕತ್ತೆಗಳಿಗೆ ಮೇವು ಹಾಕಿಸಿದನು.


ಸ್ವಾಮಿಗಳೇ, ನಿಮ್ಮ ದಾಸನ ಮನೆಗೆ ಬಂದು ರಾತ್ರಿ ತಂಗಿರಿ. ಕಾಲುಗಳನ್ನು ತೊಳೆದುಕೊಳ್ಳಿ. ಬೆಳಿಗ್ಗೆ ಎದ್ದು ನಿಮ್ಮ ಪ್ರಯಾಣವನ್ನು ಮುಂದುವರಿಸಬಹುದು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು