Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 12:1 - ಕನ್ನಡ ಸತ್ಯವೇದವು C.L. Bible (BSI)

1 ಸರ್ವೇಶ್ವರಸ್ವಾಮಿ ನಾತಾನನನ್ನು ದಾವೀದನ ಬಳಿಗೆ ಕಳುಹಿಸಿದರು. ಅವನು ದಾವೀದನ ಬಳಿಗೆ ಬಂದು ಹೀಗೆಂದು ಹೇಳಿದನು: “ಒಂದು ಊರಲ್ಲಿ ಇಬ್ಬರು ವ್ಯಕ್ತಿಗಳಿದ್ದರು. ಒಬ್ಬನು ಐಶ್ವರ್ಯವಂತ, ಇನ್ನೊಬ್ಬನು ಬಡವ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನು ನಾತಾನನನ್ನು ದಾವೀದನ ಬಳಿಗೆ ಕಳುಹಿಸಿದನು. ಅವನು ದಾವೀದನ ಹತ್ತಿರ ಬಂದು ಹೇಳಿದ್ದೇನೆಂದರೆ, “ಒಂದು ಊರಿನಲ್ಲಿ ಇಬ್ಬರು ಮನುಷ್ಯರಿದ್ದರು. ಒಬ್ಬನು ಐಶ್ವರ್ಯವಂತನು ಇನ್ನೊಬ್ಬನು ಬಡವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋವನು ನಾತಾನನನ್ನು ದಾವೀದನ ಬಳಿಗೆ ಕಳುಹಿಸಿದನು. ಅವನು ಇವನ ಹತ್ತಿರ ಬಂದು ಹೇಳಿದ್ದೇನಂದರೆ - ಒಂದು ಊರಲ್ಲಿ ಇಬ್ಬರು ಮನುಷ್ಯರಿದ್ದರು; ಒಬ್ಬನು ಐಶ್ವರ್ಯವಂತನು, ಇನ್ನೊಬ್ಬನು ಬಡವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನು ನಾತಾನನನ್ನು ದಾವೀದನ ಬಳಿಗೆ ಕಳುಹಿಸಿದನು. ನಾತಾನನು ದಾವೀದನ ಬಳಿಗೆ ಬಂದು, “ಒಂದು ನಗರದಲ್ಲಿ ಇಬ್ಬರು ಮನುಷ್ಯರಿದ್ದರು. ಒಬ್ಬನು ಶ್ರೀಮಂತ. ಆದರೆ ಮತ್ತೊಬ್ಬನು ತೀರಾ ಬಡವ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರು ದಾವೀದನ ಬಳಿಗೆ ನಾತಾನನನ್ನು ಕಳುಹಿಸಿದರು. ಅವನು ದಾವೀದನ ಬಳಿಗೆ ಬಂದು ಅವನಿಗೆ, “ಒಂದು ಊರಿನಲ್ಲಿ ಇಬ್ಬರು ಮನುಷ್ಯರಿದ್ದರು. ಒಬ್ಬನು ಐಶ್ವರ್ಯವಂತನು, ಮತ್ತೊಬ್ಬನು ಬಡವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 12:1
24 ತಿಳಿವುಗಳ ಹೋಲಿಕೆ  

ಆದರೆ ಸರ್ವೇಶ್ವರ ಸ್ವಾಮಿಯ ದೂತನು ತಿಷ್ಬೀಯನಾದ ಎಲೀಯನಿಗೆ, “ನೀನು ಹೋಗಿ ಸಮಾರಿಯದ ಅರಸನ ಆ ಸೇವಕರನ್ನು ಭೇಟಿಯಾಗು. ಅವರಿಗೆ, ‘ನೀವು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸುವ ಅಗತ್ಯವಾದರೂ ಏನು? ಇಸ್ರಯೇಲರಲ್ಲಿ ದೇವರಿಲ್ಲವೆ?


ಅನೇಕ ದಿವಸಗಳಾದನಂತರ ಎಲೀಯನಿಗೆ ಸರ್ವೇಶ್ವರನ ವಾಣಿ ಉಂಟಾಯಿತು. ಬರಗಾಲದ ಮೂರನೆಯವರ್ಷದಲ್ಲಿ ಸರ್ವೇಶ್ವರ ಅವನಿಗೆ, “ನೀನು ಹೋಗಿ ಅಹಾಬನನ್ನು ಕಾಣು; ನಾನು ನಾಡಿಗೆ ಮಳೆಕೊಡುತ್ತೇನೆ,” ಎಂದರು.


ಜುದೇಯ ನಾಡಿನವನಾದ ಒಬ್ಬ ದೈವಭಕ್ತನು ಸರ್ವೇಶ್ವರನಿಂದ ಕಳುಹಿಸಲ್ಪಟ್ಟವನಾಗಿ ಬೇತೇಲಿಗೆ ಬಂದನು. ಯಾರೊಬ್ಬಾಮನು ಧೂಪಾರತಿ ಎತ್ತಲು ಪೀಠದ ಹತ್ತಿರ ನಿಂತುಕೊಂಡನು.


ನೆಲದ ಮೇಲೆ ಚೆಲ್ಲಿ ತಿರುಗಿ ತುಂಬಿಕೊಳ್ಳಲಾಗದ ನೀರಿನಂತೆ ಇದ್ದೇವೆ ನಾವು. ಮನುಷ್ಯರ ಪ್ರಾಣತೆಗೆಯುವುದಕ್ಕೆ ದೇವರಿಗೆ ಇಷ್ಟ ಇಲ್ಲ; ಹೊರದೂಡಲಾದವನು ತಿರುಗಿ ಬಳಿಗೆ ಬರುವ ಹಾಗೆ ಅವರು ಸದುಪಾಯಗಳನ್ನು ಕಲ್ಪಿಸುವವರಾಗಿರುತ್ತಾರೆ.


ಆಗ ದಾವೀದನು ಆ ದೂತನಿಗೆ, “ನೀನು ಹೋಗಿ ಯೋವಾಬನಿಗೆ, ‘ವ್ಯಸನಪಡಬೇಕಾಗಿಲ್ಲ; ಕತ್ತಿ ಈ ದಿನ ಒಬ್ಬನನ್ನು ನುಂಗಿದರೆ ನಾಳೆ ಇನ್ನೊಬ್ಬನನ್ನು ನುಂಗುತ್ತದೆ. ಮತ್ತಷ್ಟು ಶೂರತನದಿಂದ ಯುದ್ಧಮಾಡಿ ಪಟ್ಟಣವನ್ನು ಕೆಡವಿಬಿಡಿ, ಎಂಬುದಾಗಿ ಅರಸರು ಆಜ್ಞಾಪಿಸುತ್ತಾರೆ’ ಎಂದು ಹೇಳಿ ಅವನನ್ನು ಧೈರ್ಯಪಡಿಸು,” ಎಂದನು.


ನಾತಾನನು ತನಗಾದ ದರ್ಶನದ ಈ ಮಾತುಗಳನ್ನೆಲ್ಲ ದಾವೀದನಿಗೆ ಹೇಳಿದನು.


ಐಶ್ವರ್ಯವಂತನಿಗೆ ಬಹಳ ಕುರಿದನಗಳಿದ್ದವು.


ಆದರೆ ಯಾಜಕ ಚಾದೋಕ್, ಯೆಹೋಯಾದಾವನ ಮಗ ಬೆನಾಯ, ಪ್ರವಾದಿ ನಾತಾನ್, ಶಿಮ್ಮೀ, ರೇಗೀ ಎಂಬವರೂ ದಾವೀದನ ವಿಶೇಷ ಕಾವಲಾಳುಗಳೂ ಅದೋನಿಯನನ್ನು ಬೆಂಬಲಿಸಲಿಲ್ಲ.


ದಾವೀದನ ಪೂರ್ವೋತ್ತರ ಚರಿತ್ರೆ, ಅವನ ಆಳ್ವಿಕೆ, ಪರಾಕ್ರಮ ಹಾಗೂ ಅವನಿಗೂ ಇಸ್ರಯೇಲರಿಗೂ ಸುತ್ತಣ ರಾಜ್ಯಗಳಿಗೂ ಸಂಭವಿಸಿದ ಸುಖ-ದುಃಖ, ಇವುಗಳ ವರದಿಯು


ಆಗ ಪ್ರವಾದಿ ಯೆಶಾಯನು ಹಿಜ್ಕೀಯನ ಬಳಿಗೆ ಬಂದು, “ಆ ದೂತರು ಎಲ್ಲಿಯವರು? ಏನು ಕೇಳಿದರು?” ಎಂದನು. ಅದಕ್ಕೆ ಹಿಜ್ಕೀಯನು, “ಅವರು ಬಹುದೂರದ ನಾಡಾದ ಬಾಬಿಲೋನಿಯದಿಂದ ಬಂದವರು,” ಎಂದು ಉತ್ತರಕೊಟ್ಟನು.


ನಾತಾನನ ಮಗ ಅಜರ್ಯನು - ಪ್ರದೇಶಾಧಿಪತಿಗಳ ಮುಖ್ಯಸ್ಥ; ನಾತಾನನ ಮಗ ಜಾಬೂದನು ಯಾಜಕ ಹಾಗು ಅರಸನ ಮಿತ್ರ;


“ನೀನು ಹೋಗಿ ಸಮಾರಿಯಲ್ಲಿ ವಾಸಿಸುವ ಇಸ್ರಯೇಲ್ ಅರಸನನ್ನು ಕಾಣು; ಅವನು ಈಗ ನಾಬೋತನ ದ್ರಾಕ್ಷೀತೋಟವನ್ನು ಸ್ವಾಧೀನಮಾಡಿಕೊಳ್ಳುವುದಕ್ಕಾಗಿ ಅಲ್ಲಿಗೆ ಹೋಗಿದ್ದಾನೆ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು