Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 12:11 - ಕನ್ನಡ ಸತ್ಯವೇದವು C.L. Bible (BSI)

11 ಸರ್ವೇಶ್ವರನಾದ ನನ್ನ ಮಾತನ್ನು ಕೇಳು: ನಿನ್ನ ಮನೆಯವರಿಂದಲೇ ನಿನಗೆ ಕೇಡು ಉಂಟಾಗುವಂತೆ ಮಾಡುವೆನು. ನಿನ್ನ ಹೆಂಡತಿಯರನ್ನು ನಿನ್ನೆದುರಿನಲ್ಲೇ ಇನ್ನೊಬ್ಬನಿಗೆ ಕೊಡುವೆನು. ಅವನು ಹಗಲಿನಲ್ಲೇ ಅವರ ಕೂಡ ಮಲಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಯೆಹೋವನಾದ ನನ್ನ ಮಾತನ್ನು ಕೇಳು. ನಾನು ನಿನ್ನ ಮನೆಯವರಿಂದಲೇ ನಿನಗೆ ಕೇಡು ಉಂಟಾಗುವಂತೆ ಮಾಡುವೆನು. ನಿನ್ನ ಹೆಂಡತಿಯರನ್ನು ತೆಗೆದು ನಿನ್ನೆದುರಿನಲ್ಲಿಯೇ ಇನ್ನೊಬ್ಬನಿಗೆ ಕೊಡುವೆನು. ಅವನು ಹಗಲಿನಲ್ಲಿಯೇ ಅವರ ಕೂಡ ಮಲಗುವನು. ನೀನು ಅದನ್ನು ಗುಪ್ತವಾಗಿ ಮಾಡಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಯೆಹೋವನಾದ ನನ್ನ ಮಾತನ್ನು ಕೇಳು - ನಾನು ನಿನ್ನ ಮನೆಯವರಿಂದಲೇ ನಿನಗೆ ಕೇಡು ಉಂಟಾಗುವಂತೆ ಮಾಡುವೆನು. ನಿನ್ನ ಹೆಂಡತಿಯರನ್ನು ತೆಗೆದು ನಿನ್ನೆದುರಿನಲ್ಲಿಯೇ ಇನ್ನೊಬ್ಬನಿಗೆ ಕೊಡುವೆನು. ಅವನು ಹಗಲಿನಲ್ಲಿಯೇ ಅವರ ಕೂಡ ಮಲಗುವನು. ನೀನು ಅದನ್ನು ಗುಪ್ತವಾಗಿ ಮಾಡಿದಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 “ಯೆಹೋವನು ಹೇಳುವುದೇನೆಂದರೆ: ‘ನಾನು ನಿನಗೆ ತೊಂದರೆಯನ್ನುಂಟುಮಾಡುತ್ತೇನೆ. ನಿನ್ನ ಸ್ವಂತ ಕುಟುಂಬದಿಂದಲೇ ಈ ತೊಂದರೆಯು ಬರುತ್ತದೆ. ನಾನು ನಿನ್ನ ಪತ್ನಿಯರನ್ನು ತೆಗೆದುಕೊಂಡು ನಿನಗೆ ತೀರ ಹತ್ತಿರನಾಗಿರುವ ಒಬ್ಬ ವ್ಯಕ್ತಿಗೆ ಕೊಡುತ್ತೇನೆ. ಅವನು ನಿನ್ನ ಪತ್ನಿಯರ ಜೊತೆಯಲ್ಲಿ ಮಲಗುತ್ತಾನೆ. ಇದು ಎಲ್ಲರಿಗೂ ತಿಳಿಯುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 “ಯೆಹೋವ ದೇವರು ಹೇಳುವುದೇನೆಂದರೆ: ‘ಇಗೋ, ನಾನು ನಿನ್ನ ಮನೆಯಲ್ಲಿ ಕೆಟ್ಟದ್ದನ್ನು ನಿನಗೆ ವಿರೋಧವಾಗಿ ಏಳುವಂತೆ ಮಾಡಿ, ನಿನ್ನ ಕಣ್ಣುಗಳ ಮುಂದೆ ನಿನ್ನ ಹೆಂಡತಿಯರನ್ನು ತೆಗೆದು, ನಿನ್ನ ನೆರೆಯವನಿಗೆ ಕೊಡುವೆನು. ಅವನು ಹಗಲು ಹೊತ್ತಿನಲ್ಲಿಯೇ ಅವರ ಸಂಗಡ ಮಲಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 12:11
13 ತಿಳಿವುಗಳ ಹೋಲಿಕೆ  

“ನೀವು ಮದುವೆಮಾಡಿಕೊಂಡ ಮಹಿಳೆಯನ್ನು ಮತ್ತೊಬ್ಬನು ಮಾನಭಂಗಪಡಿಸುವನು; ನೀವು ಕಟ್ಟಿಕೊಂಡ ಮನೆಯಲ್ಲಿ ಮತ್ತೊಬ್ಬನು ವಾಸಮಾಡುವನು; ನೀವು ಮಾಡಿದ ದ್ರಾಕ್ಷಿತೋಟದ ಬೆಳೆ ನಿಮಗೆ ದೊರಕದು.


ಅವನು ಗೂಢಚಾರನನ್ನು ಕಳುಹಿಸಿ ಇಸ್ರಯೇಲರ ಎಲ್ಲಾ ಕುಲದವರಿಗೆ, “ನೀವು ತುತೂರಿಯ ಧ್ವನಿಯನ್ನು ಕೇಳುತ್ತಲೇ ‘ಅಬ್ಷಾ‍ಲೋಮನು ಹೆಬ್ರೋನಿನಲ್ಲಿ ಅರಸ’ ಎಂದು ಘೋಷಿಸಿರಿ,” ಎಂದು ಹೇಳಿಸಿದ್ದನು.


ಅರಸನ ಬಳಿಗೆ ನ್ಯಾಯನಿರ್ಣಯಕ್ಕಾಗಿ ಬರುತ್ತಿದ್ದ ಎಲ್ಲಾ ಇಸ್ರಯೇಲರಿಗೆ ಅಬ್ಷಾಲೋಮನು ಹೀಗೆಯೇ ಮಾಡಿ ಎಲ್ಲರ ಮನಸ್ಸುಗಳನ್ನು ತನ್ನ ಕಡೆಗೆ ಒಲಿಸಿಕೊಳ್ಳುತ್ತಿದ್ದನು.


“ಒಬ್ಬ ಪ್ರವಾದಿ ಮರುಳುಗೊಂಡು ದೈವೋಕ್ತಿಯೊಂದನ್ನು ನುಡಿದರೆ, ಆ ಪ್ರವಾದಿಯನ್ನು ಮರುಳುಗೊಳಿಸಿದವನು ಸರ್ವೇಶ್ವರನಾದ ನಾನೇ. ನಾನು ಅವನ ಮೇಲೆ ಕೈಯೆತ್ತಿ ಇಸ್ರಯೇಲರಾದ ನನ್ನ ಜನರಿಂದ ತೆಗೆದುಹಾಕಿ ಅವನನ್ನು ನಿರ್ನಾಮ ಮಾಡುವೆನು.


ಅವನು ಅನೇಕ ಸ್ತ್ರೀಯರನ್ನು ಮದುವೆಮಾಡಿಕೊಳ್ಳಬಾರದು; ಮಾಡಿಕೊಂಡರೆ ಅವನ ಮನಸ್ಸು ಸರ್ವೇಶ್ವರನಿಗೆ ವಿಮುಖವಾಗಲು ಅವಕಾಶವಾಗುವುದು. ಅವನು ಬೆಳ್ಳಿಬಂಗಾರವನ್ನು ವಿಶೇಷವಾಗಿ ಗಳಿಸಿಕೊಳ್ಳಬಾರದು.


ಆಗ ಅವನು ಜೆರುಸಲೇಮಿನಲ್ಲಿದ್ದ ತನ್ನ ಸೇವಕರಿಗೆ, “ಏಳಿ, ಓಡಿಹೋಗೋಣ; ಇಲ್ಲೇ ಇದ್ದರೆ ನಾವು ಅಬ್ಷಾಲೋಮನ ಕೈಯಿಂದ ತಪ್ಪಿಸಿಕೊಳ್ಳಲಾರೆವು. ಬೇಗ ಹೊರಡೋಣ; ಅವನು ಅಕಸ್ಮಾತ್ತಾಗಿ ನಮ್ಮ ಮೇಲೆ ಬಿದ್ದು ನಮಗೆ ದುರ್ಗತಿಯನ್ನುಂಟುಮಾಡಿ ಪಟ್ಟಣದವರನ್ನೆಲ್ಲಾ ಕತ್ತಿಯಿಂದ ಸಂಹರಿಸಾನು,” ಎಂದು ಹೇಳಿದನು.


ಇದಲ್ಲದೆ ಅವನು ಅಬೀಷೈಗೂ ತನ್ನ ಎಲ್ಲಾ ಸೇವಕರಿಗೂ, “ನೋಡಿ, ನನ್ನಿಂದ ಹುಟ್ಟಿದ ನನ್ನ ಮಗನೇ ನನ್ನ ಪ್ರಾಣವನ್ನು ತೆಗೆಯಬೇಕೆಂದಿರುವಲ್ಲಿ ಈ ಬೆನ್ಯಾಮೀನ್ಯನು ಹೀಗೆ ಮಾಡುವುದು ಯಾವ ಲೆಕ್ಕ? ಬಿಡಿ, ಅವನು ಶಪಿಸಲಿ; ಹೀಗೆ ಮಾಡಬೇಕೆಂದು ಸರ್ವೇಶ್ವರನೇ ಅವನಿಗೆ ಆಜ್ಞಾಪಿಸಿದ್ದಾರೆ.


ನನ್ನ ಸತಿ ಮತ್ತೊಬ್ಬನಿಗೆ ಧಾನ್ಯಬೀಸುವ ದಾಸಿಯಾಗಲಿ ಅಂಥ ನನ್ನ ಸತಿಯೊಡನೆ ಇತರರು ಸಂಗಮಿಸಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು