Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 12:13 - ಕನ್ನಡ ಸತ್ಯವೇದವು C.L. Bible (BSI)

13 ಆಗ ದಾವೀದನು ನಾತಾನನಿಗೆ, “ನಾನು ಸರ್ವೇಶ್ವರನಿಗೆ ವಿರುದ್ಧ ಪಾಪಮಾಡಿದ್ದೇನೆ,” ಎಂದು ಹೇಳಿದನು. ನಾತಾನನು ಅವನಿಗೆ, “ಸರ್ವೇಶ್ವರ ನಿನ್ನ ಪಾಪವನ್ನು ಕ್ಷಮಿಸಿದ್ದಾರೆ; ನೀನು ಸಾಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆಗ ದಾವೀದನು ನಾತಾನನಿಗೆ, “ನಾನು ಯೆಹೋವನಿಗೆ ವಿರುದ್ಧವಾಗಿ ಪಾಪ ಮಾಡಿದ್ದೇನೆ” ಎಂದು ಹೇಳಿದನು. ನಾತಾನನು ಅವನಿಗೆ “ಯೆಹೋವನು ನಿನ್ನ ಪಾಪವನ್ನು ಕ್ಷಮಿಸಿದ್ದಾನೆ, ನೀನು ಸಾಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆಗ ದಾವೀದನು ನಾತಾನನಿಗೆ - ನಾನು ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದ್ದೇನೆ ಎಂದು ಹೇಳಿದನು. ನಾತಾನನು ಅವನಿಗೆ - ಯೆಹೋವನು ನಿನ್ನ ಪಾಪವನ್ನು ಕ್ಷವಿುಸಿದ್ದಾನೆ, ನೀನು ಸಾಯುವದಿಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆಗ ದಾವೀದನು ನಾತಾನನಿಗೆ, “ನಾನು ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದೆನು” ಎಂದನು. ನಾತಾನನು ದಾವೀದನಿಗೆ, “ಯೆಹೋವನು ನಿನ್ನ ಪಾಪವನ್ನು ಕ್ಷಮಿಸಿದ್ದಾನೆ. ನೀನು ಸಾಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆಗ ದಾವೀದನು ನಾತಾನನಿಗೆ, “ನಾನು ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿದ್ದೇನೆ,” ಎಂದನು. ನಾತಾನನು ದಾವೀದನಿಗೆ, “ನೀನು ಸಾಯದ ಹಾಗೆ ಯೆಹೋವ ದೇವರು ನಿನ್ನ ಪಾಪವನ್ನು ಪರಿಹರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 12:13
46 ತಿಳಿವುಗಳ ಹೋಲಿಕೆ  

ಪಾಪಗಳನ್ನು ಮುಚ್ಚಿಟ್ಟುಕೊಳ್ಳುವವನಿಗೆ ಮುಕ್ತಿ ದೊರಕದು; ಅವುಗಳನ್ನು ಒಪ್ಪಿಕೊಂಡು ಬಿಟ್ಟರೆ ಕರುಣೆ ದೊರಕುವುದು.


ಹೌದು ದೇವಾ, ನಿನಗೆ ದ್ರೋಹವೆಸಗಿದೆ I ನಿನ್ನ ಕಣ್ಗೆ ಕೆಟ್ಟದುದನೆ ಮಾಡಿದೆ II ನಿನ್ನ ನಿರ್ಣಯವು ನ್ಯಾಯಯುತ I ನೀ ನೀಡುವ ತೀರ್ಪು ನಿರ್ಲಿಪ್ತ II


ಜನರ ಎಣಿಕೆ ಮಾಡಿಸಿದ ನಂತರ ದಾವೀದನನ್ನು ಮನಸ್ಸಾಕ್ಷಿ ಕಾಡತೊಡಗಿತು. ಆದುದರಿಂದ ಅವನು, “ಸರ್ವೇಶ್ವರಾ, ನಾನು ಬುದ್ಧಿಹೀನ ಕಾರ್ಯವನ್ನು ಮಾಡಿ ಪಾಪಿಯಾದೆ; ದಯವಿಟ್ಟು ನಿಮ್ಮ ದಾಸನ ಅಪರಾಧವನ್ನು ಕ್ಷಮಿಸಿ,” ಎಂದು ಪ್ರಾರ್ಥಿಸಿದನು.


ತನ್ನ ಮುಂದೆ ನಿಂತಿದ್ದ ಸೇವಕರಿಗೆ ಆ ದೂತನು, “ಈತನ ಮಲಿನವಾದ ಬಟ್ಟೆಗಳನ್ನು ತೆಗೆದುಬಿಡಿ,” ಎಂದನು. ಅನಂತರ ಯೆಹೋಶುವನಿಗೆ, “ನಿನ್ನ ದೋಷವನ್ನು ತೊಲಗಿಸಿದ್ದೇನೆ. ಶ್ರೇಷ್ಠವಾದ ಬಟ್ಟೆಗಳನ್ನು ನಿನಗೆ ತೊಡಿಸುವೆನು,” ಎಂದನು.


ಆದರೂ ಮಗನು, ‘ಅಪ್ಪಾ, ದೇವರಿಗೂ ನಿಮಗೂ ವಿರುದ್ಧವಾಗಿ ಪಾಪಮಾಡಿದ್ದೇನೆ; ನಿಮ್ಮ ಮಗನೆನಿಸಿಕೊಳ್ಳುವ ಯೋಗ್ಯತೆಯೂ ನನಗಿಲ್ಲ’ ಎಂದ.


ಅದಕ್ಕೆ ಸೌಲನು, “ನಾನು ಪಾಪಮಾಡಿದ್ದೇನೆ; ದಯವಿಟ್ಟು ಇಸ್ರಯೇಲರ ಮುಂದೆ ಹಾಗು ಜನರ ಹಿರಿಯರ ಮುಂದೆ ನನ್ನ ಮಾನವನ್ನು ಉಳಿಸಿ; ನಾನು ನಿಮ್ಮ ದೇವರಾದ ಸರ್ವೇಶ್ವರಸ್ವಾಮಿಯನ್ನು ಆರಾಧಿಸಲು ಶಕ್ತನಾಗುವಂತೆ ಹಿಂದಿರುಗಿ ನನ್ನ ಜೊತೆಯಲ್ಲೇ ಬನ್ನಿ,” ಎಂದು ಬೇಡಿಕೊಂಡನು.


“ಯಾವನಾದರು ಪರಪತ್ನಿಯೊಡನೆ ವ್ಯಭಿಚಾರ ಮಾಡಿದರೆ ಅವರಿಬ್ಬರಿಗೂ ಮರಣಶಿಕ್ಷೆಯಾಗಬೇಕು.


ನಂಬಲರ್ಹವಾದ ಸಾಕ್ಷಿಯೂ ಮೃತ್ಯುವಿನಿಂದ ಪುನರುತ್ಥಾನ ಹೊಂದಿದವರಲ್ಲಿ ಪ್ರಪ್ರಥಮರೂ ಭೂರಾಜರ ಒಡೆಯರೂ ಆದ ಯೇಸುಕ್ರಿಸ್ತರಿಂದಲೂ ನಿಮಗೆ ಕೃಪಾಶೀರ್ವಾದವೂ ಶಾಂತಿಸಮಾಧಾನವೂ ಲಭಿಸಲಿ! ನಮ್ಮನ್ನು ಪ್ರೀತಿಸುವವರೂ ತಮ್ಮ ರಕ್ತದಿಂದ ನಮ್ಮ ಪಾಪಗಳನ್ನು ತೊಳೆದವರೂ


ಹಾಗೆ ಸಮರ್ಪಿಸಬೇಕಾಗಿದ್ದ ಪಕ್ಷದಲ್ಲಿ ಲೋಕಾದಿಯಿಂದಲೂ ಅವರು ಅನೇಕ ಸಾರಿ ಮರಣಯಾತನೆಯನ್ನು ಅನುಭವಿಸಬೇಕಾಗಿ ಬರುತ್ತಿತ್ತು; ಅದಕ್ಕೆ ಬದಲಾಗಿ ಯುಗಾಂತ್ಯವಾದ ಈ ಕಾಲದಲ್ಲಿ ಪಾಪನಿವಾರಣೆ ಮಾಡಬೇಕೆಂಬ ಉದ್ದೇಶದಿಂದ ಒಮ್ಮೆಗೇ ತಮ್ಮನ್ನು ತಾವೇ ಬಲಿಯಾಗಿ ಸಮರ್ಪಿಸಿಕೊಳ್ಳಲೆಂದು ಯೇಸು ಪ್ರತ್ಯಕ್ಷರಾದರು.


ಬದಲಿಗೆ, ದೇವರು ಬೆಳಕಿನಲ್ಲಿರುವಂತೆ ನಾವೂ ಬೆಳಕಿನಲ್ಲಿ ನಡೆದರೆ ನಮ್ಮಲ್ಲಿ ಪರಸ್ಪರ ಅನ್ಯೋನ್ಯತೆ ಇರುತ್ತದೆ. ಆಗ ದೇವರ ಪುತ್ರನಾದ ಯೇಸುವಿನ ರಕ್ತವು ನಮ್ಮನ್ನು ಎಲ್ಲ ಪಾಪದಿಂದಲೂ ಶುದ್ಧಗೊಳಿಸುತ್ತದೆ.


ಇದನ್ನು ಕೇಳಿದ ಆ ಜನರ ಹೃದಯದಲ್ಲಿ ಅಲಗು ನೆಟ್ಟಂತಾಯಿತು. ಅವರು ಪ್ರೇಷಿತರನ್ನು ಉದ್ದೇಶಿಸಿ, “ಸಹೋದರರೇ, ಈಗ ನಾವು ಮಾಡಬೇಕಾದುದು ಏನು?” ಎಂದು ಕೇಳಿದರು.


ಅದರಂತೆಯೇ ಆಳುಗಳನ್ನು ಕಳುಹಿಸಿ, ಸೆರೆಮನೆಯಲ್ಲಿದ್ದ ಯೊವಾನ್ನನ ತಲೆಯನ್ನು ಕಡಿಸಿದನು;


ಒಂದು ವೇಳೆ ದುಃಖಪಡಿಸಿದರೂ ಕೃಪಾತಿಶಯದಿಂದ ಕನಿಕರಿಸಬಲ್ಲ.


ಪರಿಹರಿಸಿದೆ ನಿನ್ನ ದ್ರೋಹಗಳನ್ನು ಮಂಜಿನಂತೆ ಚದರಿಸಿದ್ದೇನೆ ನಿನ್ನ ಪಾಪಗಳನು ಮೋಡದಂತೆ ವಿಮೋಚಿಸಿದ್ದೇನೆ ನೀ ನನಗೆ ಅಭಿಮುಖನಾಗಬೇಕೆಂದೆ.”


ನನಗೋಸ್ಕರ ನೀನು ಹಣ ತೆತ್ತು ಅಗರಬತ್ತಿ ತರಲಿಲ್ಲ ಯಜ್ಞಪಶುಗಳ ವಪೆಯಿಂದ ನನ್ನನ್ನು ತೃಪ್ತಿಪಡಿಸಲಿಲ್ಲ. ಬದಲಿಗೆ ನನ್ನನ್ನು ಪೀಡಿಸಿರುವೆ ನಿನ್ನ ಪಾಪಗಳಿಂದ ಬೇಸರಗೊಳಿಸಿರುವೆ ನನ್ನನು ನಿನ್ನ ದೋಷಗಳಿಂದ.


ನಾ ಪಟ್ಟ ದುಃಖವು ನನ್ನ ಸುಖಕ್ಕಾಗಿಯೇ ನನ್ನಾತ್ಮವನ್ನು ನಾಶಕೂಪದಿಂದ ರಕ್ಷಿಸಿದ್ದು ನಿನ್ನ ಪ್ರೀತಿಯೇ; ನನ್ನ ಪಾಪಗಳನ್ನೆಲ್ಲಾ ನೀ ಹಾಕಿರುವೆ ನಿನ್ನ ಬೆನ್ನ ಹಿಂದೆ.


ಕೇಳುವ ಕಿವಿಗೆ ಕೊಡುವ ಬುದ್ಧಿವಾದವು ಹೊನ್ನಿನ ಮುರುವು, ಅಪರಂಜಿಯ ಆಭರಣವು.


ಬಲಿಯರ್ಪಣೆಯಲಿ ನಿನಗೊಲವಿಲ್ಲ I ದಹನ ಬಲಿಯಿತ್ತರು ನಿನಗೆ ಬೇಕಿಲ್ಲ II


ಆಗ ಅವನು ಜನರ ಮುಂದೆ ಈ ಪರಿ ಹಾಡುವನು: ‘ಪಾಪ ಮಾಡಿದೆ; ಸನ್ಮಾರ್ಗ ಬಿಟ್ಟು ನಡೆದೆ ಆದರೂ ದಂಡಿಸಲಿಲ್ಲ ದೇವರು ನನ್ನ ಪಾಪಕ್ಕೆ ತಕ್ಕಂತೆ.


ಈ ಮಾತನ್ನು ಹೇಳಿದ ಪ್ರವಾದಿಗೆ ಅರಸನು, “ನಿನ್ನನ್ನು ನಾನು ಆಲೋಚನಾಮಂತ್ರಿಯನ್ನಾಗಿ ನೇಮಿಸಲಿಲ್ಲ; ಬಾಯಿಮುಚ್ಚುವಿಯೋ: ಅಥವಾ ಏಟು ತಿನ್ನುವಿಯೋ?’ ಎಂದನು. ಅದಕ್ಕೆ ಅವನು, “ನೀವು ನನ್ನ ಬುದ್ಧಿವಾದವನ್ನು ಆಲಿಸದೆ ಹೀಗೆ ಮಾಡುವುದರಿಂದ ದೇವರು ನಿಮ್ಮನ್ನು ನಾಶಮಾಡಬೇಕೆಂದು ನಿಶ್ಚಯಿಸಿಕೊಂಡಿದ್ದಾರೆಂದು ನಾನು ಬಲ್ಲೆ,” ಎಂದು ಹೇಳಿ ಸುಮ್ಮನಾದನು.


ಆಸನು ಈ ಮಾತುಗಳಿಂದ ಬೇಸರಗೊಂಡು, ದರ್ಶಿಯ ಮೇಲೆ ಕುಪಿತನಾಗಿ, ಅವನನ್ನು ಸೆರೆಮನೆಯಲ್ಲಿಡಿಸಿ ಕೋಳಹಾಕಿದನು. ಇದಲ್ಲದೆ, ಜನರಲ್ಲಿ ಕೆಲವರನ್ನು ಪೀಡಿಸಿದನು.


ಬಳಿಕ ಅರಸನು ಎಲೀಯನನ್ನು ಕರೆದುತರುವುದಕ್ಕಾಗಿ ಒಬ್ಬ ಪಂಚಾಶದಧಿಪತಿಯನ್ನು ಅವನ ಐವತ್ತುಮಂದಿ ಸಿಪಾಯಿಗಳೊಡನೆ ಕಳುಹಿಸಿದನು. ಇವನು ಬಂದು ಎಲೀಯನು ಬೆಟ್ಟದ ತುದಿಯಲ್ಲಿ ಕುಳಿತಿರುವುದನ್ನು ಕಂಡನು. “ದೈವಪುರುಷರೇ, ಇಳಿದು ಬನ್ನಿ, ಅರಸರು ತಮ್ಮನ್ನು ಕರೆಯುತ್ತಿದ್ದಾರೆ,” ಎಂದು ಆಮಂತ್ರಿಸಿದನು.


ಅವನು, “ನಮಗಾಗಿ ಸರ್ವೇಶ್ವರನ ಸನ್ನಿಧಿಯಲ್ಲಿ ವಿಚಾರಿಸಬಲ್ಲವನಾದ ಇನ್ನೊಬ್ಬ ಪ್ರವಾದಿಯಿರುತ್ತಾನೆ; ಅವನು ಇಮ್ಲನ ಮಗನಾದ ಮೀಕಾಯೆಹು ಎಂಬವನು. ಆದರೆ ನಾನು ಅವನನ್ನು ಹಗೆಮಾಡುತ್ತೇನೆ; ಅವನು ನನ್ನನ್ನು ಕುರಿತು ಯಾವಾಗಲೂ ಶುಭವನ್ನಲ್ಲ, ಅಶುಭವನ್ನೇ ಮುಂತಿಳಿಸುತ್ತಾನೆ,” ಎಂದು ಉತ್ತರಕೊಟ್ಟನು. ಅದಕ್ಕೆ ಯೆಹೋಷಾಫಾಟನು, “ಅರಸರು ಹಾಗನ್ನಬಾರದು,” ಎಂದನು.


ಅಹಾಬನು ಎಲೀಯನನ್ನು ನೋಡಿ, “ಎಲೈ ವೈರಿಯೇ, ನೀನು ನನ್ನನ್ನು ಕಂಡುಹಿಡಿದೆಯಾ?” ಎಂದು ಕೇಳಿದನು. ಅವನು, “ಹೌದು, ಕಂಡುಹಿಡಿದೆ, ನೀನು ನಿನ್ನನ್ನು ಪಾಪಕ್ಕೆ ಮಾರಿಬಿಟ್ಟು, ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಯಾದೆ.


ಬೇತೇಲಿನ ಪೀಠದ ಬಳಿ ನಿಂತಿದ್ದ ಅರಸನು ಆ ದೈವಭಕ್ತನು ಪೀಠಕ್ಕೆ ವಿರೋಧವಾಗಿ ನುಡಿದದ್ದನ್ನು ಕೇಳಿ ಕೈಚಾಚಿ, “ಅವನನ್ನು ಹಿಡಿಯಿರಿ,” ಎಂದು ಆಜ್ಞಾಪಿಸಿದನು. ಕೂಡಲೆ ಅವನ ಕೈ ಒಣಗಿಹೋಯಿತು. ಅವನು ಅದನ್ನು ಹಿಂತೆಗೆದುಕೊಳ್ಳಲಾಗಲಿಲ್ಲ.


ಆಗ ಸೌಲನು ಸಮುವೇಲನಿಗೆ, “ಏನು? ನಾನು ಸರ್ವೇಶ್ವರನ ಮಾತನ್ನು ಕೇಳಲಿಲ್ಲವೇ? ಅವರು ಕಳುಹಿಸಿದಲ್ಲಿಗೆ ಹೋಗಿ ಅಮಾಲೇಕ್ಯರನ್ನೆಲ್ಲ ಸಂಹರಿಸಿ ಅವರ ಅರಸನಾದ ಅಗಾಗನನ್ನು ಹಿಡಿದದುತಂದೆ.


ಕೊಲೆ ಮಾಡಿದವನಿಗೆ ಮರಣದಂಡನೆಯಾಗಬೇಕು.


ಸುಂಕವಸೂಲಿಯವನಾದರೋ ದೂರದಲ್ಲೇ ನಿಂತು, ತಲೆಯನ್ನೂ ಮೇಲಕ್ಕೆ ಎತ್ತದೆ, ‘ಓ ದೇವರೇ, ನಾನು ಪಾಪಿ; ನನಗೆ ದಯೆತೋರಿ,’ ಎನ್ನುತ್ತಾ ಎದೆಬಡಿದುಕೊಂಡ.


ಈ ಮನೆಯಲ್ಲಿ ನನಗಿಂತ ಹೆಚ್ಚಿನ ಅಧಿಕಾರ ಪಡೆದವರು ಒಬ್ಬರೂ ಇಲ್ಲ; ನಿಮ್ಮನ್ನು ಬಿಟ್ಟು ಮಿಕ್ಕ ಎಲ್ಲವನ್ನು ನನಗೆ ಅಧೀನಮಾಡಿದ್ದಾರೆ. ನೀವು ಅವರ ಧರ್ಮಪತ್ನಿ ಅಲ್ಲವೆ? ಹೀಗಿರುವಲ್ಲಿ, ನಾನು ಇಂತಹ ಮಹಾದುಷ್ಕೃತ್ಯವೆಸಗಿ ದೇವರಿಗೆ ವಿರುದ್ಧ ಹೇಗೆ ಪಾಪಮಾಡಲಿ?” ಎಂದು ಆಕೆಗೆ ಉತ್ತರಕೊಟ್ಟ.


ಆಗ ದಾವೀದನು, “ನಾನು ಬುದ್ಧಿಹೀನ ಕಾರ್ಯವನ್ನು ಮಾಡಿ ಪಾಪಿಯಾದೆ; ದಯವಿಟ್ಟು ನಿಮ್ಮ ದಾಸನ ಅಪರಾಧವನ್ನು ಕ್ಷಮಿಸಿ,” ಎಂದು ದೇವರನ್ನು ಪ್ರಾರ್ಥಿಸಿದನು.


ಪಡುವಣದಿಂದ ಮೂಡಣವೆಷ್ಟೋ ದೂರ I ದೂಡಿದನಾತ ನಮ್ಮ ಪಾಪಗಳನು ಅಷ್ಟು ದೂರ II


ಆಗ ಫರೋಹನು ಮೋಶೆ ಮತ್ತು ಆರೋನರನ್ನು ಕರೆಯಿಸಿ, ಅವರಿಗೆ, “ನಾನು ಅಪರಾಧಿಯೆಂದು ಈಗ ಒಪ್ಪಿಕೊಳ್ಳುತ್ತೇನೆ. ಸರ್ವೇಶ್ವರನು ಸತ್ಯವಂತನು; ನಾನೂ ನನ್ನ ಜನರೂ ತಪ್ಪಿತಸ್ಥರು.


ದಾವೀದನು ಜನಸಂಹಾರಕ ದೂತನನ್ನು ಕಂಡಾಗ ಸರ್ವೇಶ್ವರನಿಗೆ, “ಮೂರ್ಖತನದಿಂದ ಪಾಪಮಾಡಿದವನು ನಾನು; ಕುರಿಗಳಂತಿರುವ ಈ ಜನರು ಏನು ಮಾಡಿದ್ದಾರೆ? ನಿಮ್ಮ ಕೈ ನನ್ನನ್ನೂ ನನ್ನ ಮನೆಯವರನ್ನೂ ಶಿಕ್ಷಿಸಲಿ,” ಎಂದು ಬೇಡಿಕೊಂಡನು.


ಅಂತರಂಗ ಶುದ್ಧಿಯನು ನೀ ಬಯಸುತಿ I ಅಂತರ್ಯ ಜ್ಞಾನವನು ಉದಯಗೊಳಿಸುತಿ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು