Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 12:14 - ಕನ್ನಡ ಸತ್ಯವೇದವು C.L. Bible (BSI)

14 ಆದರೂ ನೀನು ಈ ಕೃತ್ಯದಿಂದ, ಸರ್ವೇಶ್ವರನ ವೈರಿಗಳು ಅವರನ್ನು ಬಹಳವಾಗಿ ನಿಂದಿಸುವುದಕ್ಕೆ ಆಸ್ಪದಕೊಟ್ಟೆ. ಆದುದರಿಂದ ನಿನ್ನಿಂದ ಹುಟ್ಟಲಿರುವ ಮಗು ಸತ್ತುಹೋಗುವುದು,”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆದರೂ ನೀನು ಈ ಕೃತ್ಯದಿಂದ ಯೆಹೋವನ ವೈರಿಗಳು ಆತನನ್ನು ಬಹಳವಾಗಿ ನಿಂದಿಸುವುದಕ್ಕೆ ಆಸ್ಪದ ಕೊಟ್ಟಿದ್ದರಿಂದ ನಿನ್ನಿಂದ ಹುಟ್ಟಿರುವ ಮಗುವು ಸತ್ತೇ ಹೋಗುವುದು” ಎಂದು ಹೇಳಿ ಮನೆಗೆ ಹೊರಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆದರೂ ನೀನು ಈ ಕೃತ್ಯದಿಂದ ಯೆಹೋವನ ವೈರಿಗಳು ಆತನನ್ನು ಬಹಳವಾಗಿ ನಿಂದಿಸುವದಕ್ಕೆ ಆಸ್ಪದ ಕೊಟ್ಟದರಿಂದ ನಿನ್ನಿಂದ ಹುಟ್ಟಿರುವ ಮಗುವು ಸತ್ತೇ ಹೋಗುವದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನೀನು ನಿನ್ನ ಪಾಪಕೃತ್ಯಗಳಿಂದ ಯೆಹೋವನ ವೈರಿಗಳು ಯೆಹೋವನನ್ನು ಹೆಚ್ಚು ದ್ವೇಷಿಸುವಂತೆ ಮಾಡಿದೆ. ನಿನಗೆ ಹುಟ್ಟಿದ ಗಂಡುಮಗು ಈ ಕಾರಣಕ್ಕಾಗಿ ಸತ್ತುಹೋಗುವುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಹೇಗಿದ್ದರೂ ಈ ಕಾರ್ಯದಿಂದ ನೀನು ಯೆಹೋವ ದೇವರ ಶತ್ರುಗಳಿಗೆ ಬಹಳವಾಗಿ ದೇವದೂಷಣೆ ಮಾಡುವಂತೆ ಆಸ್ಪದ ಕೊಟ್ಟ ಕಾರಣ, ನಿನಗೆ ಹುಟ್ಟಿದ ಮಗುವು ಖಂಡಿತವಾಗಿ ಸಾಯುವುದು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 12:14
16 ತಿಳಿವುಗಳ ಹೋಲಿಕೆ  

ಈ ಕಾರಣದಿಂದ. “ನಿಮ್ಮ ದೆಸೆಯಿಂದಲೇ ಯೆಹೂದ್ಯರಲ್ಲದವರು ದೇವರ ಹೆಸರನ್ನು ದೂಷಿಸುತ್ತಾರೆ,” ಎಂದು ಪವಿತ್ರಗ್ರಂಥದಲ್ಲಿ ಬರೆದಿದೆ.


ಈಗಲೂ ಅನ್ಯರು ನನ್ನ ಜನರನ್ನು ಕಾರಣವಿಲ್ಲದೆ ಕರೆದೊಯ್ದಿದ್ದಾರೆ. ಇಲ್ಲಿ ನಾನು ಸುಮ್ಮನಿರುವುದಾದರೂ ಹೇಗೆ? ಆಳುತ್ತಿರುವವರು ನನ್ನ ಪ್ರಜೆಯಾದವರನ್ನು ಗೋಳಿಡಿಸುತ್ತಿದ್ದಾರೆ, ಎಡೆಬಿಡದೆ ನನ್ನ ಶ್ರೀ ನಾಮವು ದಿನವೆಲ್ಲ ದೂಷಣೆಗೆ ಗುರಿಯಾಗುತ್ತಿದೆ.


ನನ್ನ ಪ್ರೀತಿಪಾತ್ರರನ್ನು ನಾನು ಖಂಡಿಸುತ್ತೇನೆ ಮತ್ತು ದಂಡಿಸುತ್ತೇನೆ. ಆದುದರಿಂದ ಉತ್ಸಾಹದಿಂದಿರು, ದೇವರಿಗೆ ಅಭಿಮುಖನಾಗಿರು.


ಸರ್ವೇಶ್ವರ ತಾವು ಪ್ರೀತಿಸುವವನನ್ನು ಶಿಕ್ಷಿಸುವರು; ತಮಗೆ ಮಗನೆಂದು ಬರಮಾಡಿಕೊಳ್ಳುವವನನ್ನು ದಂಡಿಸುವರು.”


ಪ್ರಭು, ನಿನ್ನಿಂದ ಶಿಕ್ಷಿತನಾದ ಮಾನವ ಧನ್ಯ I ನಿನ್ನಿಂದ ಧರ್ಮೋಪದೇಶ ಪಡೆದವನು ಧನ್ಯ II


ಹಾಗೇನಾದರೂ ಪ್ರಭುವಿನ ವಿಚಾರಣೆಗೆ ನಾವು ಒಳಪಟ್ಟರೆ ಅವರು ನಮ್ಮನ್ನು ದಂಡಿಸಿ ತಿದ್ದುತ್ತಾರೆ. ಪ್ರಪಂಚದೊಂದಿಗೆ ನಾವು ತಪ್ಪಿತಸ್ಥರಾಗದಂತೆ ಮಾಡುತ್ತಾರೆ.


ಪಾಪಕ್ಕೆ ಪ್ರಚೋದಿಸುವ ಲೋಕಕ್ಕೆ ಧಿಕ್ಕಾರ!


“ಜಗದ ಜನಾಂಗಗಳಲ್ಲಿ ನನಗೆ ಆಪ್ತರಾದವರೆಂದರೆ ನೀವು. ಆದಕಾರಣ ನೀವು ಮಾಡಿರುವ ಎಲ್ಲಾ ಪಾಪಗಳಿಗೆ ತಕ್ಕ ಪ್ರಾಯಶ್ಚಿತ್ತವನ್ನು ಸವಿಯುವಂತೆ ಮಾಡುವೆನು.”


ಎಲ್ಲಿಯತನಕ ದೇವಾ, ಶತ್ರುನಿಂದೆಗೆ ನೀ ಗುರಿಯಾಗುವೇ? I ಅನವರತ ನಿನ್ನ ನಾಮವನು ಧಿಕ್ಕರಿಸುವುದು ಸರಿಯೇ? II


ಆಮೇಲೆ ನಾನು ಅವರಿಗೆ, “ನೀವು ಮಾಡಿದ್ದು ಸರಿಯಲ್ಲ; ನಾವು ನಮ್ಮ ವಿರೋಧಿಗಳಾದ ಅನ್ಯಜನರ ನಿಂದೆಗೆ ಗುರಿಯಾಗದಂತೆ ದೇವರಲ್ಲಿ ಭಯಭಕ್ತಿಯುಳ್ಳವರಾಗಿ ನಡೆದುಕೊಳ್ಳಬೇಕಲ್ಲವೇ?


ಎಂದು ಹೇಳಿ ಮನೆಗೆ ಹೊರಟು ಹೋದನು. ಊರೀಯನ ಹೆಂಡತಿಯಲ್ಲಿ ದಾವೀದನಿಗೆ ಹುಟ್ಟಿದ ಮಗು ಸರ್ವೇಶ್ವರನ ಶಿಕ್ಷೆಯಿಂದಾಗಿ ಬಹು ಅಸ್ವಸ್ಥವಾಯಿತು.


ಪ್ರಭು ಸೇನಾಧೀಶ್ವರಾ, I ನನ್ನಿಂದ ನಿರಾಶೆಯಾಗದಿರಲಿ, ನಿನ್ನ ನಂಬಿದವರಿಗೆ II ಇಸ್ರಯೇಲರ ದೇವಾ I ನನ್ನಿಂದ ನಿಂದೆಯಾಗದಿರಲಿ ನಿನ್ನ ದರ್ಶನಾರ್ಥಿಗಳಿಗೆ II


ಸ್ವಾಮಿ ದೇವಾ, ನೀನವರಿಗೆ ಸದುತ್ತರ ಪಾಲಿಸಿದೆ I ತಪ್ಪನು ದಂಡಿಸಿದೆಯಾದರೂ ಕ್ಷಮಿಸುವ ದೇವನಾಗಿದ್ದೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು