Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 12:15 - ಕನ್ನಡ ಸತ್ಯವೇದವು C.L. Bible (BSI)

15 ಎಂದು ಹೇಳಿ ಮನೆಗೆ ಹೊರಟು ಹೋದನು. ಊರೀಯನ ಹೆಂಡತಿಯಲ್ಲಿ ದಾವೀದನಿಗೆ ಹುಟ್ಟಿದ ಮಗು ಸರ್ವೇಶ್ವರನ ಶಿಕ್ಷೆಯಿಂದಾಗಿ ಬಹು ಅಸ್ವಸ್ಥವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಊರೀಯನ ಹೆಂಡತಿಯಲ್ಲಿ ದಾವೀದನಿಗೆ ಹುಟ್ಟಿದ ಮಗು ಯೆಹೋವನ ಪೆಟ್ಟಿನಿಂದ ಬಹಳವಾಗಿ ಅಸ್ವಸ್ಥವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಎಂದು ಹೇಳಿ ಮನೆಗೆ ಹೊರಟು ಹೋದನು. ಊರೀಯನ ಹೆಂಡತಿಯಲ್ಲಿ ದಾವೀದನಿಗೆ ಹುಟ್ಟಿದ ಮಗುವು ಯೆಹೋವನ ಪೆಟ್ಟಿನಿಂದ ಬಹುವಾಗಿ ಅಸ್ವಸ್ಥವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನಾತಾನನು ಮನೆಗೆ ಹೋದನು. ದಾವೀದನಿಗೆ ಊರೀಯನ ಹೆಂಡತಿಯಲ್ಲಿ ಹುಟ್ಟಿದ ಗಂಡುಮಗುವಿಗೆ ಯೆಹೋವನು ಬಹಳ ಕಾಯಿಲೆಯನ್ನು ಬರಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ನಂತರ ನಾತಾನನು ತನ್ನ ಮನೆಗೆ ಹೋದನು. ಯೆಹೋವ ದೇವರು, ಊರೀಯನ ಹೆಂಡತಿಯು ದಾವೀದನಿಗೆ ಹೆತ್ತ ಕೂಸನ್ನು ಬಾಧಿಸಲು, ಅದು ಬಹಳ ಅಸ್ವಸ್ಥವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 12:15
9 ತಿಳಿವುಗಳ ಹೋಲಿಕೆ  

ಸರ್ವೇಶ್ವರ ವಿಧಿಸಿದ ದಂಡನೆಯ ನಿಮಿತ್ತ ಸುಮಾರು ಹತ್ತು ದಿನಗಳಾದ ನಂತರ ನಾಬಾಲನು ಸತ್ತುಹೋದನು.


ತಲ್ಲಣಗೊಳ್ಳುವುವು ನೀ ಮುಖ ಮರೆಮಾಡಿಕೊಳ್ಳಲು I ಮಣ್ಣುಪಾಲಾಗುವುವು ನೀನವುಗಳ ಉಸಿರನಡಗಿಸಲು II


ಆದರೆ ಹೆರೋದನು ದೇವರಿಗೆ ಸಲ್ಲಬೇಕಾದ ಗೌರವವನ್ನು ಸಲ್ಲಿಸಲಿಲ್ಲ. ಆದುದರಿಂದ ದೇವದೂತನು ಆ ಕ್ಷಣವೇ ಅವನನ್ನು ಸಂಹರಿಸಿದನು. ಅವನು ಹುಳಹುಪ್ಪಟೆಗಳಿಗೆ ಆಹಾರವಾದನು.


ಯಾರೊಬ್ಬಾಮನು ಅಬೀಯನ ಜೀವಮಾನದಲ್ಲಿ ಮತ್ತೆ ತಲೆಯೆತ್ತಲೇ ಇಲ್ಲ. ಕಾಲಕ್ರಮೇಣ, ಸರ್ವೇಶ್ವರನ ದಂಡನೆಯಿಂದ ಅವನು ಸತ್ತನು.


ಸರ್ವೇಶ್ವರಸ್ವಾಮಿ ಇವನನ್ನು ಕುಷ್ಠರೋಗದಿಂದ ಶಿಕ್ಷಿಸಿದರು. ಆದುದರಿಂದ ಇವನು ಜೀವದಿಂದಿರುವವರೆಗೂ ಪ್ರತ್ಯೇಕವಾದ ಮನೆಯಲ್ಲಿ ವಾಸಿಸಬೇಕಾಯಿತು. ರಾಜಗೃಹಾಧಿಪತ್ಯವನ್ನೂ ಪ್ರಜಾಪಾಲನೆಯನ್ನೂ ಇವನ ಮಗ ಯೋತಾಮನು ನೋಡಿಕೊಳ್ಳುತ್ತಿದ್ದನು.


ಇದಲ್ಲದೆ ದಾವೀದನು, “ಸರ್ವೇಶ್ವರನಾಣೆ, ಅವನು ಸರ್ವೇಶ್ವರನಿಂದಲೇ ಸಾಯುವನು; ಇಲ್ಲವೆ ಕಾಲತುಂಬಿ ಮರಣಹೊಂದುವನು; ಅಥವಾ ಯುದ್ಧದಲ್ಲಿ ಮಡಿಯುವನು.


“ಇರುವಾತನು ನಾನೇ, ನಾನೊಬ್ಬನೇ ಬದುಕಿಸುವವನು, ಕೊಲ್ಲುವವನು ನಾನೇ, ಗಾಯಗೊಳಿಸುವವನು, ವಾಸಿಮಾಡುವವನು ನಾನೇ. ಇಂದಾದರು ತಿಳಿಯಿರಿ: ನನ್ನ ವಿನಾ ದೇವರಿಲ್ಲ ನನ್ನ ಕೈಯಿಂದ ತಪ್ಪಿಸಬಲ್ಲ ಶಕ್ತನಾರೂ ಇಲ್ಲ.


ಆದರೂ ನೀನು ಈ ಕೃತ್ಯದಿಂದ, ಸರ್ವೇಶ್ವರನ ವೈರಿಗಳು ಅವರನ್ನು ಬಹಳವಾಗಿ ನಿಂದಿಸುವುದಕ್ಕೆ ಆಸ್ಪದಕೊಟ್ಟೆ. ಆದುದರಿಂದ ನಿನ್ನಿಂದ ಹುಟ್ಟಲಿರುವ ಮಗು ಸತ್ತುಹೋಗುವುದು,”


ಆದುದರಿಂದ ದಾವೀದನು ಮಗುವಿಗಾಗಿ ದೇವರನ್ನು ಪ್ರಾರ್ಥಿಸುತ್ತಾ ಉಪವಾಸ ಮಾಡುತ್ತಾ ಒಳಕೋಣೆಯಲ್ಲಿ ನೆಲದ ಮೇಲೆಯೇ ಬಿದ್ದುಕೊಂಡು ರಾತ್ರಿ ಕಳೆಯುತ್ತಿದ್ದ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು