2 ಸಮುಯೇಲ 12:18 - ಕನ್ನಡ ಸತ್ಯವೇದವು C.L. Bible (BSI)18 ಏಳನೆಯ ದಿನದಲ್ಲಿ ಮಗು ಸತ್ತಿತು. ಅವನ ಸೇವಕರು ಭಯಪಟ್ಟು ಈ ವರ್ತಮಾನವನ್ನು ದಾವೀದನಿಗೆ ತಿಳಿಸಲಿಲ್ಲ. ಅವರು, “ಹುಡುಗನು ಜೀವದಿಂದಿದ್ದಾಗಲೇ ಅವರು ನಮ್ಮ ಸಂತಾಪವನ್ನು ಲಕ್ಷಿಸಲಿಲ್ಲ. ಹೀಗಿರುವಲ್ಲಿ ಮಗುವಿನ ಮರಣವಾರ್ತೆಯನ್ನು ಅವರಿಗೆ ತಿಳಿಸಿದರೆ ಅವರು ತನಗೆ ಏನಾದರೂ ಕೇಡುಮಾಡಿಕೊಂಡಾರಲ್ಲವೇ?”, ಎಂದು ಮಾತಾಡಿಕೊಳ್ಳುತ್ತಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಏಳನೆಯ ದಿನ ಮಗು ಸತ್ತುಹೋಯಿತು. ಅವನ ಸೇವಕರು ಭಯಪಟ್ಟು ಈ ವರ್ತಮಾನವನ್ನು ದಾವೀದನಿಗೆ ತಿಳಿಸಲಿಲ್ಲ. ಅವರು, “ಹುಡುಗನು ಜೀವದಿಂದಿದ್ದಾಗಲೇ ಅವನು ನಮ್ಮ ಸಂತೈಸುವಿಕೆಯನ್ನು ಲಕ್ಷಿಸಲಿಲ್ಲ. ಹೀಗಿರುವಲ್ಲಿ ಮಗುವಿನ ಮರಣದ ವಾರ್ತೆಯನ್ನು ಅವನಿಗೆ ತಿಳಿಸಿದರೆ ಅವನು ತನಗೆ ಏನಾದರೂ ಕೇಡುಮಾಡಿಕೊಂಡಾನಲ್ಲವೇ” ಎಂದು ಮಾತನಾಡಿಕೊಳ್ಳುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಏಳನೆಯ ದಿನದಲ್ಲಿ ಮಗುವು ಸತ್ತಿತು; ಅವನ ಸೇವಕರು ಭಯಪಟ್ಟು ಈ ವರ್ತಮಾನವನ್ನು ದಾವೀದನಿಗೆ ತಿಳಿಸಲಿಲ್ಲ. ಅವರು - ಹುಡುಗನು ಜೀವದಿಂದಿದ್ದಾಗಲೇ ಅವನು ನಮ್ಮ ಸಂತೈಸುವಿಕೆಯನ್ನು ಲಕ್ಷಿಸಲಿಲ್ಲ. ಹೀಗಿರುವಲ್ಲಿ ಮಗುವಿನ ಮರಣವಾರ್ತೆಯನ್ನು ಅವನಿಗೆ ತಿಳಿಸಿದರೆ ಅವನು ತನಗೆ ಏನಾದರೂ ಕೇಡುಮಾಡಿಕೊಂಡಾನಲ್ಲವೇ ಎಂದು ಮಾತಾಡಿಕೊಳ್ಳುತ್ತಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಏಳನೆಯ ದಿನ ಆ ಮಗು ಸತ್ತಿತು. ಮಗು ಸತ್ತದ್ದನ್ನು ದಾವೀದನಿಗೆ ತಿಳಿಸಲು ಅವನ ಸೇವಕರು ಅಂಜಿದರು. ಅವರು, “ನೋಡಿ, ಮಗು ಜೀವಂತವಾಗಿರುವಾಗ ನಾವು ದಾವೀದನೊಂದಿಗೆ ಮಾತನಾಡಲು ಪ್ರಯತ್ನಿಸಿದೆವು. ಆದರೆ ಅವನು ನಮ್ಮ ಮಾತನ್ನು ಕೇಳಲಿಲ್ಲ. ಮಗುವು ಸತ್ತಿತೆಂದು ನಾವು ದಾವೀದನಿಗೆ ತಿಳಿಸಿದರೆ, ಬಹುಶಃ ಅವನು ತನಗೆ ಏನಾದರೂ ಕೇಡುಮಾಡಿಕೊಳ್ಳುತ್ತಾನೆ” ಎಂಬುದಾಗಿ ಮಾತಾಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಮಗುವು ಏಳನೆಯ ದಿವಸ ಸತ್ತು ಹೋಯಿತು. ಆಗ ಮಗುವು ಸತ್ತು ಹೋಯಿತೆಂದು ದಾವೀದನ ಸೇವಕರು ಅವನಿಗೆ ತಿಳಿಸುವುದಕ್ಕೆ ಭಯಪಟ್ಟರು. ಏಕೆಂದರೆ, “ಮಗುವು ಇನ್ನೂ ಬದುಕಿರುವಾಗ, ನಾವು ಅವನ ಸಂಗಡ ಮಾತನಾಡಿದಾಗ, ಅವನು ನಮ್ಮ ಮಾತನ್ನು ಕೇಳದೆ ಹೋದನು. ಈಗ ಮಗುವು ಸತ್ತು ಹೋಯಿತೆಂದು ನಾವು ಅವನಿಗೆ ಹೇಳಿದರೆ, ಅವನು ತನಗೆ ಏನಾದರೂ ಕೇಡುಮಾಡಿಕೊಳ್ಳುವನೋ?” ಎಂದುಕೊಂಡರು. ಅಧ್ಯಾಯವನ್ನು ನೋಡಿ |