Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 12:25 - ಕನ್ನಡ ಸತ್ಯವೇದವು C.L. Bible (BSI)

25 ಪ್ರವಾದಿ ನಾತಾನನು, ಸರ್ವೇಶ್ವರನಿಂದ ಪಡೆದ ಆಜ್ಞೆಯಂತೆ ಅವರಿಗೋಸ್ಕರ, ಆ ಹುಡುಗನಿಗೆ ‘ಯೆದೀದ್ಯ’ ಎಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಪ್ರವಾದಿಯಾದ ನಾತಾನನು ಯೆಹೋವನು ತನಗೆ ಆಜ್ಞಾಪಿಸಿದಂತೆ ಯೆಹೋವನ ಪ್ರೀತಿಯ ನಿಮಿತ್ತ ಆ ಹುಡುಗನಿಗೆ “ಯೆದೀದ್ಯ” ಎಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಪ್ರವಾದಿಯಾದ ನಾತಾನನು ಯೆಹೋವನು ತನಗೆ ಆಜ್ಞಾಪಿಸಿದಂತೆ ಆತನಿಗೋಸ್ಕರವಾಗಿ ಆ ಹುಡುಗನಿಗೆ ಯೆದೀದ್ಯನು ಎಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಯೆಹೋವನು ಪ್ರವಾದಿಯಾದ ನಾತಾನನ ಮೂಲಕವಾಗಿ ಸಂದೇಶವನ್ನು ಕಳುಹಿಸಿದನು. ಯೆಹೋವನು ಆಜ್ಞಾಪಿಸಿದಂತೆ ನಾತಾನನು ಸೊಲೊಮೋನನಿಗೆ ಯೆದೀದ್ಯನೆಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಪ್ರವಾದಿಯಾದ ನಾತಾನನ ಮುಖಾಂತರ ಯೆಹೋವ ದೇವರ ನಿಮಿತ್ತ ಅವನಿಗೆ ಯೆದೀದ್ಯ ಎಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 12:25
14 ತಿಳಿವುಗಳ ಹೋಲಿಕೆ  

“ಅಂಥ ಮಹಿಳೆಯರ ದೆಸೆ ಇಂದಲೇ ಇಸ್ರಯೇಲ್ ಅರಸ ಸೊಲೊಮೋನನು ದೋಷಿಯಾದ; ಅನೇಕಾನೇಕ ಜನಾಂಗಗಳಲ್ಲಿ ಅವನಿಗೆ ಸಮಾನನಾದ ಅರಸನಿರಲಿಲ್ಲ; ಅವನು ತನ್ನ ದೇವರಿಗೆ ವಿಶೇಷಪ್ರಿಯನು; ಆದುದರಿಂದಲೇ ದೇವರು ಅವನನ್ನು ಎಲ್ಲ ಇಸ್ರಯೇಲರ ಮೇಲೆ ಅರಸನನ್ನಾಗಿ ನೇಮಿಸಿದರು. ಆದರೂ ಅನ್ಯದೇಶದ ಮಹಿಳೆಯರು ಅವನನ್ನು ಪಾಪದಲ್ಲಿ ಬೀಳಿಸಿದರು.


ಆದರೆ ಅದೇ ರಾತ್ರಿ ಸರ್ವೇಶ್ವರ ನಾತಾನನಿಗೆ ಹೀಗೆಂದು ಆಜ್ಞಾಪಿಸಿದರು:


ಆಗ ನಾತಾನನು ಸೊಲೊಮೋನನ ತಾಯಿಯಾದ ಬತ್ಷೆಬೆಗೆ, “ಹಗ್ಗೀತಳ ಮಗ ಅದೋನೀಯನು, ನಮ್ಮ ಒಡೆಯ ದಾವೀದರಿಗೆ ತಿಳಿಯದೆಯೇ ಅರಸನಾದನೆಂಬುದನ್ನು ನೀನು ಕೇಳಿರಬೇಕಲ್ಲವೆ?


ಪೇತ್ರ ಇನ್ನೂ ಮಾತನಾಡುತ್ತಿರುವಾಗಲೇ ಪ್ರಕಾಶಮಾನವಾದ ಮೇಘವೊಂದು ಅವರನ್ನು ಆವರಿಸಿತು; ಆ ಮೇಘದಿಂದ ಒಂದು ವಾಣಿ, ‘ಈತನು ನನ್ನ ಪುತ್ರ, ನನಗೆ ಪರಮಪ್ರಿಯನು, ನನ್ನ ಅಪಾರ ಮೆಚ್ಚುಗೆಗೆ ಪಾತ್ರನು. ಈತನ ಮಾತಿಗೆ ಕಿವಿಗೊಡಿ,” ಎಂದಿತು.


ಆಗ ಆಕಾಶದಿಂದ, “ಇವನೇ ನನ್ನ ಪುತ್ರ; ನನಗೆ ಪರಮಪ್ರಿಯನು, ನನ್ನ ಅಪಾರ ಮೆಚ್ಚುಗೆಗೆ ಪಾತ್ರನು,” ಎಂಬ ದೈವವಾಣಿ ಕೇಳಿಸಿತು.


ಸೇವಕರು ನಾತಾನನು ಬಂದಿರುವ ಸಂಗತಿಯನ್ನು ಅರಸನಿಗೆ ತಿಳಿಸಿದರು. ನಾತಾನನು ಅರಸನ ಮುಂದೆ ಹೋಗಿ ಸಾಷ್ಟಾಂಗ ನಮಸ್ಕಾರ ಮಾಡಿದನು.


ದಾವೀದನು ತನ್ನ ಹೆಂಡತಿ ಬತ್ಷೆಬೆಯ ಬಳಿಗೆ ಹೋಗಿ ಆಕೆಯನ್ನು ಸಂತೈಸಿ ಆಕೆಯ ಸಂಗಡ ಮಲಗಿದನು. ಆಕೆ ಮಗನನ್ನು ಹೆತ್ತಾಗ ಅವನಿಗೆ ಸೊಲೊಮೋನೆಂದು ಹೆಸರಿಟ್ಟನು. ಸರ್ವೇಶ್ವರಸ್ವಾಮಿ ಆ ಹುಡುಗನನ್ನು ಪ್ರೀತಿಸಿದರು;


ಯೋವಾಬನು ಅಮ್ಮೋನಿಯರ ಪಟ್ಟಣವಾದ ರಬ್ಬಕ್ಕೆ ಮುತ್ತಿಗೆ ಹಾಕಿದನು. ಅರಮನೆ ಇದ್ದ ಭಾಗವನ್ನು ಸ್ವಾಧೀನಮಾಡಿಕೊಂಡನು.


ಅಲ್ಲಿ ಅವನಿಗೆ ಅನೇಕ ಗಂಡುಮಕ್ಕಳು ಹುಟ್ಟಿದರು. ದಾವೀದನ ಹೆಂಡತಿ ಬತ್ಷೂವ ಅಮ್ಮೀಯೇಲನ ಮಗಳು. ಆಕೆ - ಶಿಮ್ಮ, ಶೋಬಾಬ್, ನಾತಾನ್, ಸೊಲೊಮೋನ್ ಎಂಬ ನಾಲ್ಕು ಜನ ಗಂಡುಮಕ್ಕಳಿಗೆ ಜನ್ಮವಿತ್ತಳು.


ನಿನಗೆ ಒಬ್ಬ ಮಗ ಹುಟ್ಟುವನು; ಅವನು ಸಮಾಧಾನ ಪುರುಷನಾಗಿರುವನು. ನಾನು ಅವನ ಸುತ್ತಣ ಎಲ್ಲ ವಿರೋಧಿಗಳನ್ನು ಅಡಗಿಸಿ ಅವನಿಗೆ ಶಾಂತಿ ಸಮಾಧಾನವನ್ನು ಅನುಗ್ರಹಿಸುವೆನು. ಅವನಿಗೆ ಸೊಲೊಮೋನ ಎಂಬ ಹೆಸರಿರುವುದು. ಅವನ ಕಾಲದಲ್ಲಿ ಇಸ್ರಯೇಲರಿಗೆ ಶಾಂತಿಸಮಾಧಾನವನ್ನೂ ಸೌಭಾಗ್ಯವನ್ನೂ ದಯಪಾಲಿಸುವೆನು.


ಬೆನ್ಯಾಮೀನ್ ಕುಲ ಕುರಿತು ಮೋಶೆ ನುಡಿದದ್ದು : “ಸರ್ವೇಶ್ವರನಿಗೆ ಪ್ರಿಯನಾದ ಇವನು ನಿರ್ಭಯವಾಗಿ ವಾಸಮಾಡುವನು. ಇವನನ್ನಾತ ತಬ್ಬಿರುವನು ದಿನವಿಡೀ ತನ್ನ ತೋಳತೆಕ್ಕೆಯಲಿ.”


ಆದರೆ ಯಾಜಕ ಚಾದೋಕ್, ಯೆಹೋಯಾದಾವನ ಮಗ ಬೆನಾಯ, ಪ್ರವಾದಿ ನಾತಾನ್, ಶಿಮ್ಮೀ, ರೇಗೀ ಎಂಬವರೂ ದಾವೀದನ ವಿಶೇಷ ಕಾವಲಾಳುಗಳೂ ಅದೋನಿಯನನ್ನು ಬೆಂಬಲಿಸಲಿಲ್ಲ.


ನಾತಾನನ ಮಗ ಅಜರ್ಯನು - ಪ್ರದೇಶಾಧಿಪತಿಗಳ ಮುಖ್ಯಸ್ಥ; ನಾತಾನನ ಮಗ ಜಾಬೂದನು ಯಾಜಕ ಹಾಗು ಅರಸನ ಮಿತ್ರ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು