Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 12:3 - ಕನ್ನಡ ಸತ್ಯವೇದವು C.L. Bible (BSI)

3 ಬಡವನಿಗೆ ಒಂದು ಕುರಿಮರಿಯ ಹೊರತು ಬೇರೇನೂ ಇರಲಿಲ್ಲ. ಅದೂ ಕೊಂಡು ತಂದದ್ದು. ಅದನ್ನು ಅಕ್ಕರೆಯಿಂದ ಸಾಕುತ್ತಿದ್ದ. ಅದು ದೊಡ್ಡದಾಗುವವರೆಗೆ ಮಗುವಿನಂತೆ ಅವನ ಸಂಗಡ ಹಾಗೂ ಅವನ ಮಕ್ಕಳ ಸಂಗಡವೆ ಬೆಳೆಯುತ್ತಿತ್ತು. ಅವನೊಡನೆ ರೊಟ್ಟಿ ತಿನ್ನುತ್ತಾ ಅವನ ಪಾತ್ರೆಯಲ್ಲೇ ನೀರು ಕುಡಿಯುತ್ತಾ ಇತ್ತು. ಅವನ ಎದೆಯ ಮೇಲೆಯೇ ಒರಗಿಕೊಂಡು ನಿದ್ರೆಮಾಡುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಬಡವನಿಗೆ ಒಂದು ಹೆಣ್ಣು ಕುರಿಮರಿಯ ಹೊರತು ಬೇರೇನೂ ಇರಲಿಲ್ಲ. ಅವನು ಅದನ್ನು ಕೊಂಡುಕೊಂಡು ಸಾಕುತ್ತಿದ್ದನು. ಅದು ಮಗಳಂತೆ ಅವನ ಸಂಗಡಲೂ, ಅವನ ಮಕ್ಕಳ ಸಂಗಡಲೂ ಬೆಳೆಯುತ್ತಾ, ಅವರೊಡನೆ ರೊಟ್ಟಿ ತಿನ್ನುತ್ತಾ, ಅವರ ಪಾತ್ರೆಯಲ್ಲೇ ನೀರು ಕುಡಿಯುತ್ತಾ ಇತ್ತು. ಅವನ ಎದೆ ಮೇಲೆಯೇ ಒರಗಿಕೊಂಡು ನಿದ್ದೆ ಮಾಡುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಬಡವನಿಗೆ ಒಂದು ಕುರಿಮರಿಯ ಹೊರತು ಬೇರೇನೂ ಇರಲಿಲ್ಲ. ಅವನು ಅದನ್ನು ಕೊಂಡುಕೊಂಡು ಸಾಕುತ್ತಿದ್ದನು. ಅದು ದೊಡ್ಡದಾಗುವವರೆಗೆ ಮಗಳಂತೆ ಅವನ ಸಂಗಡಲೂ ಅವನ ಮಕ್ಕಳ ಸಂಗಡಲೂ ಇದ್ದುಕೊಂಡು ಅವನೊಡನೆ ರೊಟ್ಟಿ ತಿನ್ನುತ್ತಾ ಅವನ ಪಾತ್ರೆಯಲ್ಲೇ ನೀರು ಕುಡಿಯುತ್ತಾ ಇತ್ತು; ಅವನ ಎದೆಯ ಮೇಲೆಯೇ ಒರಗಿಕೊಂಡು ನಿದ್ರೆ ಮಾಡುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆದರೆ ಬಡವನ ಹತ್ತಿರ ಅವನೇ ತಂದ ಒಂದು ಕುರಿಮರಿಯ ಹೊರತಾಗಿ ಬೇರೇನೂ ಇರಲಿಲ್ಲ. ಆ ಕುರಿಮರಿಯನ್ನು ಬಹು ಪ್ರೀತಿಯಿಂದ ಆ ಬಡವನು ಸಾಕಿದನು. ಅವನ ಮಕ್ಕಳೊಂದಿಗೆ ಈ ಕುರಿಮರಿಯೂ ಬೆಳೆಯಿತು. ಆ ಕುರಿಮರಿಯು ಬಡವನ ಊಟವನ್ನೇ ತಿನ್ನುತ್ತಿತ್ತು. ಅವನ ಬಟ್ಟಲಿನಲ್ಲಿಯೇ ಅದು ನೀರನ್ನು ಕುಡಿಯುತ್ತಿತ್ತು. ಅವನ ಎದೆಯ ಮೇಲೆಯೇ ಆ ಕುರಿಮರಿಯು ಮಲಗುತ್ತಿತ್ತು. ಆ ಕುರಿಮರಿಯು ಬಡವನಿಗೆ ಮಗಳಂತೆಯೇ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಬಡವನಿಗೆ ತಾನು ಕೊಂಡುಕೊಂಡ ಒಂದು ಚಿಕ್ಕ ಹೆಣ್ಣು ಕುರಿಮರಿಯ ಹೊರತು ಬೇರೇನೂ ಇರಲಿಲ್ಲ. ಅದು ಅವನ ಸಂಗಡ, ಅವನ ಮಕ್ಕಳ ಸಂಗಡ ಬೆಳೆದು, ಅವನ ಸ್ವಂತ ಆಹಾರ ತಿಂದು, ಅವನ ಪಾತ್ರೆಯಲ್ಲಿ ಕುಡಿದು, ಅವನ ಮಗ್ಗುಲಲ್ಲಿ ಮಲಗಿಕೊಂಡು, ಅವನಿಗೆ ಮಗಳ ಹಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 12:3
6 ತಿಳಿವುಗಳ ಹೋಲಿಕೆ  

ನೆರೆಯವನನ್ನು ನಂಬಬೇಡ, ಆಪ್ತನಲ್ಲಿ ಭರವಸೆ ಇಡಬೇಡ. ನಿನ್ನೊಡನೆ ಮಲಗುವ ಮಡದಿಯೊಂದಿಗೂ ಬಾಯಿಬಿಡಬೇಡ.


ಕೂಡಲೆ ದಾವೀದನು ಒಬ್ಬನನ್ನು ಕರೆದು ಆ ಸ್ತ್ರೀ ಯಾರೆಂದು ಕೇಳಿದನು. ಅವನು, “ಆಕೆ ಎಲೀಯಾಮನ ಮಗಳೂ ಹಿತ್ತಿಯನಾದ ಊರೀಯನ ಹೆಂಡತಿಯೂ ಆದ ಬತ್ಷೆಬೆ,” ಎಂದು ಉತ್ತರಕೊಟ್ಟನು.


“ಒಡಹುಟ್ಟಿದ ಅಣ್ಣತಮ್ಮಂದಿರಾಗಲಿ, ಮಗನಾಗಲಿ, ಮಗಳಾಗಲಿ, ಪ್ರಾಣಪ್ರಿಯಳಾದ ಹೆಂಡತಿಯಾಗಲಿ, ಆಪ್ತಮಿತ್ರನಾಗಲಿ, ನಿಮಗೆ ಅಥವಾ ನಿಮ್ಮ ಪಿತೃಗಳಿಗೆ ಗೊತ್ತಿಲ್ಲದ ಇತರ ದೇವರುಗಳನ್ನು ಪೂಜಿಸೋಣ ಬನ್ನಿ’ ಎಂದು ಒಳ ಒಳಗೇ ನಿಮಗೆ ಬೋಧಿಸಬಹುದು.


ಐಶ್ವರ್ಯವಂತನಿಗೆ ಬಹಳ ಕುರಿದನಗಳಿದ್ದವು.


ಒಂದು ದಿನ ಆ ಐಶ್ವರ್ಯವಂತನ ಮನೆಗೆ ಒಬ್ಬ ಪ್ರಯಾಣಿಕ ಬಂದ. ಆಗ ತನ್ನ ಕುರಿದನಗಳಿಂದ ಏನನ್ನೂ ಕೊಲ್ಲಲು ಆ ಐಶ್ವರ್ಯವಂತನಿಗೆ ಮನಸ್ಸಿಲ್ಲದೆ ಹೋಯಿತು. ಆ ಬಡವನ ಕುರಿಮರಿಯನ್ನೇ ಹಿಡಿದುಕೊಂಡು ಅತಿಥಿಗೋಸ್ಕರ ಅಡಿಗೆ ಮಾಡಿಸಿದ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು