Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 12:8 - ಕನ್ನಡ ಸತ್ಯವೇದವು C.L. Bible (BSI)

8 ಇದಲ್ಲದೆ, ನಾನು ನಿನಗೆ ನಿನ್ನ ಯಜಮಾನನ ಮನೆಯನ್ನೂ ಅವನ ಮಡದಿಯರನ್ನೂ ನಿನ್ನ ಮಡಿಲಿಗೆ ಹಾಕಿದೆ. ಇಸ್ರಯೇಲ್ ಮತ್ತು ಯೆಹೂದ ಕುಲಗಳನ್ನು ನಿನ್ನ ವಶಕ್ಕೆ ಕೊಟ್ಟೆ. ಇದೂ ಸಾಲದಿದ್ದರೆ, ನಾನು ನಿನಗೆ ಇನ್ನೂ ಬೇಕಾದದ್ದನ್ನು ಕೊಡುತ್ತಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಇದಲ್ಲದೆ ನಾನು ನಿನಗೆ ನಿನ್ನ ಯಜಮಾನನ ಮನೆಯನ್ನು ಒಪ್ಪಿಸಿದೆನು. ಅವನ ಹೆಂಡತಿಯರನ್ನು ನಿನ್ನ ಮಗ್ಗುಲಿಗೆ ಕೊಟ್ಟೆನು. ಇಸ್ರಾಯೇಲ್ ಹಾಗೂ ಯೆಹೂದ ಕುಲಗಳನ್ನು ನಿನಗೆ ವಶಪಡಿಸಿದೆನು. ಇದೂ ಸಾಕಾಗಾದೆ ಹೋಗಿದ್ದರೆ ನಾನು ನಿನಗೆ ಇನ್ನೂ ಬೇಕಾದದ್ದನ್ನು ಕೊಡುತ್ತಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಇದಲ್ಲದೆ ನಾನು ನಿನಗೆ ನಿನ್ನ ಯಜಮಾನನ ಮನೆಯನ್ನು ಒಪ್ಪಿಸಿದೆನು; ಅವನ ಹೆಂಡತಿಯರನ್ನು ನಿನ್ನ ಮಗ್ಗಲಿಗೆ ಕೊಟ್ಟೆನು. ಇಸ್ರಾಯೇಲ್ ಮತ್ತು ಯೆಹೂದ ಕುಲಗಳನ್ನು ನಿನಗೆ ವಶಪಡಿಸಿದೆನು. ಇದು ಸಾಕಾಗಿರದಿದ್ದರೆ ನಾನು ನಿನಗೆ ಇನ್ನೂ ಬೇಕಾದದ್ದನ್ನು ಕೊಡುತ್ತಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಅವನ ಕುಟುಂಬವನ್ನೂ ಅವನ ಪತ್ನಿಯರನ್ನೂ ನಿನಗೆ ಕೊಟ್ಟವನು ನಾನೇ. ನಿನ್ನನ್ನು ಇಸ್ರೇಲಿನ ಮತ್ತು ಯೆಹೂದದ ರಾಜನನ್ನಾಗಿ ಮಾಡಿದವನು ನಾನೇ. ಅದು ಸಾಲದು ಎನ್ನುವಂತೆ, ನಾನು ಮತ್ತಷ್ಟು ಹೆಚ್ಚಿನದನ್ನೂ ನೀಡಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನಿನ್ನ ಯಜಮಾನನ ಮನೆಯನ್ನೂ, ನಿನ್ನ ಯಜಮಾನನ ಹೆಂಡತಿಯರನ್ನೂ ನಿನಗೆ ಕೊಟ್ಟು; ಇಸ್ರಾಯೇಲಿನ ಮನೆಯನ್ನೂ, ಯೆಹೂದದ ಮನೆಯನ್ನೂ ನಿನಗೆ ಕೊಟ್ಟೆನು. ಇದು ಸಾಲದೆ ಇದ್ದರೆ, ಇಂಥಿಂಥವುಗಳನ್ನು ನಿನಗೆ ಇನ್ನೂ ಕೊಡುತ್ತಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 12:8
11 ತಿಳಿವುಗಳ ಹೋಲಿಕೆ  

ದೇವನೆಮಗೆ ಬೆಳಕು ಕೊಡುವ ಸೂರ್ಯನು I ಕಾದಿಟ್ಟು ರಕ್ಷಿಸುವ ಗುರಾಣಿಯು I ಸನ್ಮಾರ್ಗಿಗೆ ಈವನು ಸಕಲ ವರಗಳನು II


ಆಗ ದಾವೀದನು, “ಹೆದರಬೇಡ; ನಿನ್ನ ತಂದೆ ಯೋನಾತಾನನ ನೆನಪಿನಲ್ಲಿ ನಿನಗೆ ದಯೆತೋರಿಸುತ್ತೇನೆ. ನಿನ್ನ ಅಜ್ಜ ಸೌಲನ ಭೂಮಿಯನ್ನೆಲ್ಲಾ ನಿನಗೆ ಹಿಂದಕ್ಕೆ ಕೊಡುತ್ತೇನೆ; ಇದಲ್ಲದೆ ನೀನು ಪ್ರತಿದಿನ ನನ್ನ ಪಂಕ್ತಿಯಲ್ಲೇ ಊಟಮಾಡಬೇಕು,” ಎಂದು ಹೇಳಿದನು.


ದೇವರು ತಮ್ಮ ಸ್ವಂತ ಪುತ್ರನನ್ನೇ ನಮ್ಮೆಲ್ಲರಿಗಾಗಿ ಕೊಡಲು ಹಿಂಜರಿಯಲಿಲ್ಲ. ತಮ್ಮ ಪುತ್ರನನ್ನೇ ಬಲಿದಾನವಾಗಿ ಅರ್ಪಿಸಿದ ದೇವರು ಮತ್ತೇನನ್ನು ತಾನೇ ನಮಗೆ ವರದಾನವಾಗಿ ಕೊಡದಿರಲಾರರು?


ಸರ್ವೇಶ್ವರನಾದ ನನ್ನ ಮಾತನ್ನು ಕೇಳು: ನಿನ್ನ ಮನೆಯವರಿಂದಲೇ ನಿನಗೆ ಕೇಡು ಉಂಟಾಗುವಂತೆ ಮಾಡುವೆನು. ನಿನ್ನ ಹೆಂಡತಿಯರನ್ನು ನಿನ್ನೆದುರಿನಲ್ಲೇ ಇನ್ನೊಬ್ಬನಿಗೆ ಕೊಡುವೆನು. ಅವನು ಹಗಲಿನಲ್ಲೇ ಅವರ ಕೂಡ ಮಲಗುವನು.


ಸರ್ವೇಶ್ವರಾ, ಸರ್ವೆಶ್ವರಾ, ಇದೂ ಸಾಲದೆಂದೆಣಿಸಿ, ನಿಮ್ಮ ದಾಸನ ಬಹು ಮುಂದಿನ ಸಂತಾನದ ವಿಷಯದಲ್ಲೂ ತಾವು ವಾಗ್ದಾನ ಮಾಡಿರುವಿರಿ. ಸರ್ವೇಶ್ವರಾ, ಸರ್ವೇಶ್ವರಾ, ತಾವು ಹೀಗೆ ವರ್ತಿಸುವುದು ನರಮಾನವರಿಗೆ ಎಂಥಾ ಭಾಗ್ಯ!


ಅವನು ಹೆಬ್ರೋನಿನಲ್ಲಿದ್ದುಕೊಂಡು ಯೆಹೂದ ಕುಲ ಒಂದನ್ನೇ ಆಳಿದ್ದು ಏಳು ವರ್ಷ ಆರು ತಿಂಗಳು; ಜೆರುಸಲೇಮಿನಲ್ಲಿದ್ದುಕೊಂಡು ಯೆಹೂದ್ಯರನ್ನು ಹಾಗು ಇಸ್ರಯೇಲರನ್ನು ಆಳಿದ್ದು ಮೂವತ್ತಮೂರು ವರ್ಷ.


ತರುವಾಯ ಯೆಹೂದ್ಯರು ಅಲ್ಲಿಗೆ ಬಂದು ದಾವೀದನನ್ನು ಅಭಿಷೇಕಿಸಿ ತಮ್ಮ ಕುಲಕ್ಕೆ ಅರಸನನ್ನಾಗಿ ಮಾಡಿಕೊಂಡರು. ಸೌಲನ ಶವವನ್ನು ಸಮಾಧಿಮಾಡಿದವರು ಯಾಬೇಷ್ ಗಿಲ್ಯಾದಿನವರೇ ಎಂಬ ಸಂಗತಿ ದಾವೀದನಿಗೆ ತಿಳಿಯಿತು.


ಆದರೆ ನೀನು ಸರ್ವೇಶ್ವರನ ಮಾತನ್ನು ಕೇಳದೆ, ಕೊಳ್ಳೆಗಾಗಿ ಮನಸೋತು, ಅವರಿಗೆ ದ್ರೋಹಮಾಡಿದ್ದೇಕೆ?” ಎಂದನು.


ಪ್ರಭು, ನೀ ದಯಾಳು, ದೇವಾ ನೀ ಕರುಣಾಮೂರ್ತಿ I ಸಹನಶೀಲನು, ಸತ್ಯಸ್ವರೂಪಿ, ಪ್ರೇಮಮೂರ್ತಿ II


ಆಗ ಅರಸ ಸೊಲೊಮೋನನು ತನ್ನ ತಾಯಿಗೆ, “ಅದೋನೀಯನಿಗಾಗಿ ಶೂನೇಮ್ಯಳಾದ ಅಬೀಷಗಳನ್ನು ಮಾತ್ರ ಕೇಳುವುದೇಕೆ? ಅವನಿಗೆ ರಾಜ್ಯವನ್ನೂ ಕೊಡಬೇಕೆಂದು ಕೇಳು; ಅವನು ನನ್ನ ಅಣ್ಣನಲ್ಲವೇ? ಯಾಜಕ ಎಬ್ಯಾತಾರನೂ ಚೆರೂಯಳ ಮಗ ಯೋವಾಬನೂ ಅವನ ಪಕ್ಷದವರಾಗಿದ್ದಾರೆ,” ಎಂದು ಉತ್ತರಕೊಟ್ಟನು.


ಐಶ್ವರ್ಯವಂತನಿಗೆ ಬಹಳ ಕುರಿದನಗಳಿದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು