Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 13:28 - ಕನ್ನಡ ಸತ್ಯವೇದವು C.L. Bible (BSI)

28 ಇದಕ್ಕೆ ಮೊದಲೇ ಅಬ್ಷಾಲೋಮನು ತನ್ನ ಆಳುಗಳಿಗೆ, “ಕೇಳಿ, ಅಮ್ನೋನನು ದ್ರಾಕ್ಷಾರಸ ಕುಡಿದು ಮತ್ತನಾಗಿರುವಾಗ ನಾನು ಹೊಡೆಯಬೇಕೆಂದು ಹೇಳಿದಕೂಡಲೆ ಅವನನ್ನು ಹೊಡೆದು ಕೊಂದುಹಾಕಿ; ಹೆದರಬೇಡಿ, ನಿಮಗೆ ಆಜ್ಞಾಪಿಸಿದವನು ನಾನಲ್ಲವೆ? ಧೈರ್ಯದಿಂದಿರಿ, ಶೂರರಾಗಿರಿ,” ಎಂದು ಹೇಳಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಇದಕ್ಕೆ ಮೊದಲೇ ಅಬ್ಷಾಲೋಮನು ತನ್ನ ಆಳುಗಳಿಗೆ, “ಕೇಳಿರಿ, ಅಮ್ನೋನನು ದ್ರಾಕ್ಷಾರಸ ಕುಡಿದು ಮತ್ತನಾಗಿರುವಾಗ ನಾನು ಹೊಡೆಯಬೇಕೆಂದು ಹೇಳಿದ ಕೂಡಲೆ ಅವನನ್ನು ಹೊಡೆದು ಕೊಂದುಹಾಕಿರಿ. ಹೆದರಬೇಡಿರಿ, ನಿಮಗೆ ಆಜ್ಞಾಪಿಸಿದವನು ನಾನಲ್ಲವೇ? ಧೈರ್ಯದಿಂದಿರಿ ಮತ್ತು ಶೂರರಾಗಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಇದಕ್ಕೆ ಮೊದಲೇ ಅಬ್ಷಾಲೋಮನು ತನ್ನ ಆಳುಗಳಿಗೆ - ಕೇಳಿರಿ, ಅಮ್ನೋನನು ದ್ರಾಕ್ಷಾರಸ ಕುಡಿದು ಮತ್ತನಾಗಿರುವಾಗ ನಾನು ಹೊಡೆಯಬೇಕೆಂದು ಹೇಳಿದ ಕೂಡಲೆ ಅವನನ್ನು ಹೊಡೆದು ಕೊಂದುಹಾಕಿರಿ; ಹೆದರಬೇಡಿರಿ, ನಿಮಗೆ ಆಜ್ಞಾಪಿಸಿದವನು ನಾನಲ್ಲವೋ? ಧೈರ್ಯದಿಂದಿರಿ, ಶೂರರಾಗಿರಿ ಎಂದು ಹೇಳಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಆಗ ಅಬ್ಷಾಲೋಮನು ತನ್ನ ಸೇವಕರಿಗೆ ಈ ರೀತಿ ಆಜ್ಞೆ ಮಾಡಿದನು: “ಅಮ್ನೋನನನ್ನು ಗಮನಿಸುತ್ತಿರಿ. ಅವನು ಮತ್ತನಾಗಿ ಆನಂದಿಸುತ್ತಿರುವಾಗ ನಾನು ಆಜ್ಞೆಯನ್ನು ಕೊಡುತ್ತೇನೆ. ಆಗ ನೀವು ಅವನ ಮೇಲೆ ಆಕ್ರಮಣಮಾಡಿ ಕೊಲ್ಲಬೇಕು. ನಿಮಗೆ ಶಿಕ್ಷೆಯಾಗುತ್ತದೆ ಎಂಬ ಭಯವಿಲ್ಲದಿರಲಿ, ಯಾಕೆಂದರೆ ನೀವು ನನ್ನ ಆಜ್ಞೆಯನ್ನು ಪಾಲಿಸಿದಿರಷ್ಟೇ, ಆದ್ದರಿಂದ ಶಕ್ತರಾಗಿಯೂ ಧೈರ್ಯವಂತರಾಗಿಯೂ ಇರಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಅಬ್ಷಾಲೋಮನು ತನ್ನ ಸೇವಕರಿಗೆ, “ನೀವು ನೋಡಿಕೊಳ್ಳಿರಿ. ಅಮ್ನೋನನ ಮನಸ್ಸು ದ್ರಾಕ್ಷಾರಸದಿಂದ ಅಮಲೇರಿದಾಗ ನಾನು ನಿಮಗೆ ಅವನನ್ನು ಹೊಡೆಯಿರಿ ಎಂದು ಹೇಳಿದಕೂಡಲೆ, ಅವನನ್ನು ಕೊಂದುಹಾಕಿರಿ, ಭಯಪಡಬೇಡಿರಿ. ನಾನು ನಿಮಗೆ ಆಜ್ಞಾಪಿಸಿದ್ದೇನಲ್ಲಾ, ಧೈರ್ಯವಾಗಿರಿ, ಶೂರರಾಗಿರಿ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 13:28
30 ತಿಳಿವುಗಳ ಹೋಲಿಕೆ  

ಅವರಿಬ್ಬರೂ ಕುಳಿತು ಅನ್ನಪಾನಗಳನ್ನು ತೆಗೆದುಕೊಂಡರು. ಊಟವಾದ ಮೇಲೆ ಆ ಸ್ತ್ರೀಯ ತಂದೆ ಪುನಃ ಅವನಿಗೆ, “ದಯವಿಟ್ಟು ಈ ರಾತ್ರಿ ಇಲ್ಲೇ ಇದ್ದು ಸಂತೋಷಪಡು,” ಎಂದು ಹೇಳಿದರೂ ಅವನು ಹೊರಡಲು ಸಿದ್ಧನಾದನು.


ಅವರು ಭೋಜನದಿಂದ ತೃಪ್ತಿಪಡುವಷ್ಟರಲ್ಲಿ ಆ ಊರಲ್ಲಿದ್ದ ನೀಚ ಜನರು ಬಂದು, ಆ ಮನೆಯನ್ನು ಸುತ್ತಿಕೊಂಡು, ಕದಗಳನ್ನು ಬಡಿದು, ಮನೆಯ ಯಜಮಾನನಾದ ಮುದುಕನಿಗೆ, “ನಿನ್ನ ಮನೆಗೆ ಬಂದಿರುವಂಥ ಮನುಷ್ಯನನ್ನು ಹೊರಗೆ ತೆಗೆದುಕೊಂಡು ಬಾ; ಅವನೊಡನೆ ನಮಗೆ ಸಂಗಮವಾಗಬೇಕು,” ಎಂದು ಕೂಗಿದರು.


ಅನಂತರ ಅವನು, ಅವನ ಉಪಪತ್ನಿ ಹಾಗು ಸೇವಕನು ಹೋಗುವುದಕ್ಕ ಸಿದ್ಧರಾಗಲು ಆ ಸ್ತ್ರೀಯ ತಂದೆ ಅಳಿಯನಿಗೆ, “ಹೊತ್ತುಮೀರಿತು; ಸಂಜೆ ಆಯಿತು. ದಯವಿಟ್ಟು ಈ ದಿನ ರಾತ್ರಿ ಇಲ್ಲೇ ಇರು; ನೋಡು, ಸಂಜೆಯಾಗಿಹೋಯಿತು. ಈ ರಾತ್ರಿ ಇಲ್ಲಿದ್ದು ನಮ್ಮೊಡನೆ ಸಂತೋಷಪಡು; ನಾಳೆ ಬೆಳಿಗ್ಗೆ ಎದ್ದು ನಿನ್ನ ಮನೆಗೆ ಹೋಗಬಹುದು,” ಎಂದು ಬೇಡಿಕೊಂಡನು.


ಇತ್ತ ಬೋವಜನು ಅನ್ನಪಾನ ಮಾಡಿ ಸಂತುಷ್ಟನಾಗಿದ್ದನು. ಅನಂತರ ಜವೆಗೋದಿಯ ರಾಶಿಯ ಬಳಿ ಹೋಗಿ ಮಲಗಿಕೊಂಡನು. ರೂತಳು ನಿಶ್ಯಬ್ಧವಾಗಿ ಅವನ ಬಳಿಗೆ ಹೋದಳು. ಅವನ ಪಾದಗಳ ಮೇಲಿದ್ದ ಹೊದಿಕೆಯನ್ನು ಮೆತ್ತಗೆ ಸರಿಸಿ, ಅಲ್ಲೇ ಮಲಗಿಕೊಂಡಳು. ಸುಮಾರು ನಡುರಾತ್ರಿಯಲ್ಲಿ ಅವನಿಗೆ ತಟ್ಟನೆ ಎಚ್ಚರವಾಯಿತು. ಬಗ್ಗಿ ನೋಡಿದಾಗ ಸ್ತ್ರೀಯೊಬ್ಬಳು ಪಾದಗಳ ಬಳಿ ಮಲಗಿರುವುದನ್ನು ಕಂಡು ಚಕಿತಗೊಂಡು, “ನೀನು ಯಾರು?” ಎಂದು ಕೇಳಿದನು.


ಅದಕ್ಕೆ ಪ್ರತ್ಯುತ್ತರವಾಗಿ ಪೇತ್ರ ಮತ್ತು ಉಳಿದ ಪ್ರೇಷಿತರು, “ನಾವು ವಿಧೇಯರಾಗಬೇಕಾದದ್ದು ದೇವರಿಗೆ, ಮಾನವರಿಗಲ್ಲ.


“ಮಿತಿಮೀರಿದ ಭೋಜನದಿಂದಾಗಲಿ, ಕುಡಿತದಿಂದಾಗಲಿ, ಲೌಕಿಕ ಚಿಂತೆಗಳಿಂದಾಗಲಿ ಮಂದಮತಿಗಳಾಗಬೇಡಿ. ಆ ದಿನವು ಅನಿರೀಕ್ಷಿತ ಉರುಲಿನಂತೆ ನಿಮ್ಮನ್ನು ಸಿಕ್ಕಿಸೀತು, ಜಾಗರೂಕರಾಗಿರಿ!


ಆತನ ವೈರಿಗಳು ಹೆಣೆದುಕೊಂಡಿದ್ದರೂ ಮುಳ್ಳುಗಳಂತೆ ಕುಡಿದು ಮತ್ತರಾಗಿ ಮುಳುಗಿದ್ದರೂ ಮದ್ಯದಲ್ಲೆ ತುತ್ತಾಗುವರು ಬೆಂಕಿಗೆ ತೀರ ಒಣಗಿದ ಕೂಳೆಯಂತೆ.


ಅದೇ ರಾತ್ರಿ ಬಾಬಿಲೋನಿನ ರಾಜ ಬೇಲ್ಶಚ್ಚರನು ಕೊಲ್ಲಲ್ಪಟ್ಟನು.


ವಿನೋದಕ್ಕಾಗಿ ಔತಣ, ಆನಂದಕ್ಕಾಗಿ ಮದ್ಯಪಾನ; ಎಲ್ಲವನ್ನು ಒದಗಿಸಿಕೊಡುವುದಕ್ಕಾಗಿ ಹಣ.


ಹೋಗು, ನಿನ್ನ ಅನ್ನವನ್ನು ಸಂತೋಷದಿಂದ ತಿನ್ನು; ದ್ರಾಕ್ಷಾರಸವನ್ನು ಉಲ್ಲಾಸದಿಂದ ಕುಡಿ; ದೇವರು ನಿನ್ನ ನಡತೆಯನ್ನು ಈಗಾಗಲೇ ಮೆಚ್ಚಿಕೊಂಡಿದ್ದಾರೆ.


ಒದಗಿಸುವೆ ಬೇಸಾಯದ ಆಹಾರವನು I ಹೃದಯವನು ಮುದಗೊಳಿಸುವ ದ್ರಾಕ್ಷಾರಸವನು I ಮುಖಕೆ ಮೆರಗನ್ನೀಯುವ ತಿಳಿತೈಲಗಳನು I ದೇಹವನು ಗಟ್ಟಿಮುಟ್ಟಾಗಿಸುವ ರೊಟ್ಟಿಯನು II


ಏಳನೆಯ ದಿನ ಅರಸ ಅಹಷ್ವೇರೋಷನು ಮಧುಪಾನ ಮಾಡಿ ಆನಂದ ಲಹರಿಯಲ್ಲಿದ್ದಾಗ ಬಹುಸುಂದರಿಯಾದ ತನ್ನ


ಮಧ್ಯಾಹ್ನದಲ್ಲಿ, ಬೆನ್ಹದದನು ತನ್ನ ಸಹಾಯಕ್ಕಾಗಿ ಬಂದ ಮೂವತ್ತೆರಡು ಮಂದಿ ರಾಜರ ಸಂಗಡ ಮದ್ಯಪಾನಮಾಡಿ ಮತ್ತನಾಗಿ, ಡೇರೆಯಲ್ಲಿ ಕುಳಿತುಕೊಂಡಿದ್ದಾಗ ಇವರು ಪಟ್ಟಣದಿಂದ ಹೊರಗೆ ಬಂದರು.


ಅದರಲ್ಲಿ ಹೀಗೆ ಬರೆಯಲಾಗಿತ್ತು : “ಊರೀಯನು ಗಾಯಗೊಂಡು ಸಾಯುವಂತೆ ಅವನನ್ನು ಘೋರಯುದ್ಧ ನಡೆಯುತ್ತಿರುವ ಕಡೆ, ಮುಂಭಾಗದಲ್ಲೇ ನಿಲ್ಲಿಸಿ, ನೀವು ಹಿಂದಕ್ಕೆ ಸರಿದುಕೊಳ್ಳಿ.”


ಮರುದಿನ ದಾವೀದನು ಅವನನ್ನು ಅನ್ನಪಾನ ತೆಗೆದುಕೊಳ್ಳಬೇಕೆಂದು ತನ್ನ ಮನೆಗೆ ಕರೆದುಕೊಂಡು ಹೋಗಿ ಕುಡಿಸಿ ಮತ್ತನನ್ನಾಗಿ ಮಾಡಿದನು. ಆದರೆ ಆ ರಾತ್ರಿಯೂ ಅವನು ಹೋಗಿ ತನ್ನ ಯಜಮಾನನ ಸೇವಕರ ಹತ್ತಿರ ಹಾಸಿಗೆ ಹಾಸಿ ಮಲಗಿಕೊಂಡನೇ ಹೊರತು ತನ್ನ ಮನೆಗೆ ಹೋಗಲಿಲ್ಲ.


ಆಗ ಅರಸನು, “ಹೆದರಬೇಡ, ನಿನಗೇನು ಕಾಣಿಸುತ್ತದೆ?” ಎಂದು ಆಕೆಯನ್ನು ಕೇಳಿದನು. “ಭೂಮಿಯೊಳಗಿಂದ ಪ್ರೇತಾತ್ಮವೊಂದು ಬರುತ್ತಿರುವುದನ್ನು ನೋಡುತ್ತಿದ್ದೇನೆ,” ಎಂದು ಉತ್ತರಕೊಟ್ಟಳು.


ಅದಕ್ಕೆ ಸೌಲನು, ” ಸರ್ವೇಶ್ವರನಾಣೆ, ಈ ವಿಷಯದಲ್ಲಿ ನೀನು ದಂಡನೆಗೆ ಗುರಿಯಾಗುವುದಿಲ್ಲ,” ಎಂದು ಆಕೆಗೆ ಸರ್ವೇಶ್ವರನ ಹೆಸರಿನಲ್ಲಿ ಪ್ರಮಾಣ ಮಾಡಿದನು.


ನಾನು ನಿನಗೆ ಆಜ್ಞಾಪಿಸಿದಂತೆ ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಅಂಜಬೇಡ, ಕಳವಳಗೊಳ್ಳಬೇಡ. ನೀನು ಹೋಗುವ ಎಡೆಗಳಲ್ಲೆಲ್ಲ ನಿನ್ನ ದೇವರೂ ಸರ್ವೇಶ್ವರನೂ ಆದ ನಾನು ನಿನ್ನ ಸಂಗಡ ಇರುತ್ತೇನೆ,” ಎಂದು ಹೇಳಿದರು.


ಒಮ್ಮೆ ಅವನು ಕುಡಿದು ಅಮಲೇರಿ ಗುಡಾರದಲ್ಲಿ ಬೆತ್ತಲೆಯಾಗಿ ಬಿದ್ದಿದ್ದನು.


ನೀನು ನನ್ನ ಆಜ್ಞೆಯನ್ನು ತಿರಸ್ಕರಿಸಿದೆ; ಹಾಗು ಹಿತ್ತಿಯನಾದ ಊರೀಯನನ್ನು ಅಮ್ಮೋನಿಯರ ಕತ್ತಿಯಿಂದ ಕೊಲ್ಲಿಸಿ ಅವನ ಹೆಂಡತಿಯನ್ನು ನಿನ್ನ ಹೆಂಡತಿಯನ್ನಾಗಿ ತೆಗೆದುಕೊಂಡೆ. ಆದ್ದರಿಂದ ಕತ್ತಿ ನಿನ್ನ ಮನೆಯನ್ನು ಬಿಟ್ಟು ತೊಲಗುವುದಿಲ್ಲ.


ಆದರೂ ಅಬ್ಷಾಲೋಮನು ಬಹಳವಾಗಿ ಒತ್ತಾಯಪಡಿಸಿದ್ದರಿಂದ ಅರಸನು ಅಮ್ನೋನನನ್ನೂ ತನ್ನ ಬೇರೆ ಎಲ್ಲಾ ಮಕ್ಕಳನ್ನೂ ಕಳುಹಿಸಿದನು.


ಆಗ ಆ ಅರಸನು ಅವರನ್ನು ಕರೆಯಿಸಿ, “ನೀವು ಗಂಡುಮಕ್ಕಳನ್ನು ಉಳಿಸಿದ್ದು ಏಕೆ? ಎಂದು ವಿಚಾರಿಸಿದನು.


ಅಲ್ಲದೆ ತನ್ನ ಸೈನಿಕರಿಗೆ, "ನೀವು ದಾವೀದನಿಗೆ, 'ಅರಸರು ನಿಮ್ಮನ್ನು ಮೆಚ್ಚಿಕೊಂಡಿದ್ದಾರೆ; ಅವರ ಎಲ್ಲ ಸೇವಕರಿಗೂ ನಿಮ್ಮ ಮೇಲೆ ಪ್ರೀತಿಯಿದೆ; ನೀವು ಅರಸರ ಅಳಿಯರಾಗಲೇಬೇಕು,” ಎಂದು ಪುಸಲಾಯಿಸಿರಿ,” ಎಂದು ಗುಟ್ಟಾಗಿ ತಿಳಿಸಿದನು.


ನಿನ್ನ ದಾಸಿಯಾದ ನನಗೆ ಇಬ್ಬರು ಮಕ್ಕಳಿದ್ದರು. ಒಂದು ದಿವಸ ಇವರು ಇಬ್ಬರೂ ಹೊಲದಲ್ಲಿ ಜಗಳವಾಡಿದರು. ಅಲ್ಲಿ ಬಿಡಿಸುವವರಾರೂ ಇರಲಿಲ್ಲ. ಆದುದರಿಂದ ಒಬ್ಬನು ಇನ್ನೊಬ್ಬನನ್ನು ಹೊಡೆದು ಕೊಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು