Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 13:39 - ಕನ್ನಡ ಸತ್ಯವೇದವು C.L. Bible (BSI)

39 ಅರಸ ದಾವೀದನು, ಅಮ್ನೋನನ ಸಾವಿನ ದುಃಖ ಶಮನವಾದ ಮೇಲೆ ತನ್ನ ಮಗ ಅಬ್ಷಾಲೋಮನನ್ನು ನೋಡಲು ಹಾತೊರೆಯತೊಡಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಅರಸನಾದ ದಾವೀದನು ಅಮ್ನೋನನ ಮರಣದ ವಿಷಯವಾಗಿ ಆದರಣೆಹೊಂದಿ ತನ್ನ ಮಗನಾದ ಅಬ್ಷಾಲೋಮನನ್ನು ನೋಡುವುದಕ್ಕಾಗಿ ಬಹಳ ಆಸೆಪಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ಅರಸನಾದ ದಾವೀದನು ಅಮ್ನೋನನ ಮರಣದ ವಿಷಯ ಆದರಣೆಹೊಂದಿ ತನ್ನ ಮಗನಾದ ಅಬ್ಷಾಲೋಮನನ್ನು ತಿರಿಗಿ ನೋಡುವದಕ್ಕೆ ಬಹಳ ಆತುರಪಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 ಅಮ್ನೋನನ ಮರಣದ ವಿಷಯದಲ್ಲಿ ರಾಜನಾದ ದಾವೀದನು ಸಂತೈಸಿಕೊಂಡನು. ಆದರೆ ಅವನು ಅಬ್ಷಾಲೋಮನನ್ನು ಕಾಣಲು ಬಹಳವಾಗಿ ಹಾತೊರೆಯತೊಡಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 ಆದರೆ ಅರಸನಾದ ದಾವೀದನು ಅಮ್ನೋನನ ಸಾವಿನ ದುಃಖ ಶಮನವಾದ ಮೇಲೆ ಅಬ್ಷಾಲೋಮನ ಬಳಿಗೆ ಹೋಗಲು ಬಯಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 13:39
10 ತಿಳಿವುಗಳ ಹೋಲಿಕೆ  

ಇಸಾಕನು ಆಕೆಯನ್ನು ತನ್ನ ತಾಯಿ ಸಾರಳ ಗುಡಾರಕ್ಕೆ ಕರೆದುಕೊಂಡು ಹೋದನು. ಹೀಗೆ ಅವನು ರೆಬೆಕ್ಕಳನ್ನು ವರಿಸಿದನು; ಆಕೆ ಅವನಿಗೆ ಪತ್ನಿಯಾದಳು. ಆಕೆಯ ಮೇಲಿನ ಪ್ರೀತಿ, ತನ್ನ ತಾಯಿ ಸಾರಳನ್ನು ಕಳೆದುಕೊಂಡಿದ್ದ ಅವನಿಗೆ ಸಾಂತ್ವನ ತಂದಿತು.


ಬಹಳ ದಿನಗಳಾದ ಮೇಲೆ ಯೆಹೂದನ ಹೆಂಡತಿಯಾಗಿದ್ದ ಶೂಗನ ಮಗಳು ತೀರಿಹೋದಳು. ದುಃಖಶಮನವಾದ ಮೇಲೆ ಯೆಹೂದನು, ತನ್ನ ಕುರಿಗಳಿಗೆ ಉಣ್ಣೇ ಕತ್ತರಿಸುವವರಿದ್ದ ತಿಮ್ನಾ ಊರಿಗೆ ಹೋದನು. ಅದುಲ್ಲಾಮ್ಯದ ತನ್ನ ಗೆಳೆಯ ಹೀರಾ ಅವನ ಜೊತೆಯಲ್ಲಿ ಹೋದನು.


ದುಃಖಶಮನಮಾಡಲು ಪುತ್ರಪುತ್ರಿಯರೆಲ್ಲರು ಎಷ್ಟು ಪ್ರಯತ್ನಿಸಿದರೂ ಅವನು ಸಾಂತ್ವನಗೊಳ್ಳಲಿಲ್ಲ; "ನಾನು ಹೀಗೆಯೇ ಹಂಬಲಿಸುತ್ತಾ ನನ್ನ ಮಗನಿರುವ ಮೃತ್ಯುಲೋಕವನ್ನು ಸೇರುತ್ತೇನೆ,” ಎಂದು ಮಗನಿಗಾಗಿ ದುಃಖಿಸುತ್ತಲೇ ಇದ್ದ.


ನಿಮ್ಮನ್ನೆಲ್ಲಾ ನೋಡಲು ಅವನು ಹಂಬಲಿಸುತ್ತಿದ್ದಾನೆ. ತಾನು ಅಸ್ವಸ್ಥನಾದ ಸುದ್ದಿಯು ನಿಮ್ಮ ಕಿವಿಗೆ ಮುಟ್ಟಿತೆಂದು ತಿಳಿದು ಬಹಳ ವ್ಯಸನಪಡುತ್ತಿದ್ದಾನೆ.


ನಿನ್ನ ವಿಧಿಗಳನೆ ಹಂಬಲಿಸುತಿರುವೆ ಅನುದಿನ I ಇದು ಕಾರಣ ಕರಗಿಹೋಗುತಿದೆ ಎನ್ನ ಚೇತನ II


ಹಂಬಲಿಸಿ ಸೊರಗಿಹೋಗಿದೆ ಎನ್ನ ಮನ I ಕಾಣಬೇಕೆಂದು ಪ್ರಭುವಿನ ಪ್ರಾಂಗಣ II


ನಿಮ್ಮ ಗಂಡು ಹೆಣ್ಣು ಮಕ್ಕಳನ್ನು ನಿಮ್ಮ ಮುಂದೆಯೇ ಹಿಡಿದು ಅನ್ಯರಿಗೆ ವಶಪಡಿಸುವರು; ನೀವು ಹಗಲೆಲ್ಲಾ ಅವರನ್ನು ಕಾಣಬೇಕೆಂದು ಹಂಬಲಿಸುತ್ತಾ ಕಂಗೆಡುವಿರಿ; ಆದರೆ ನಿಮ್ಮ ಯತ್ನವೇನೂ ಸಾಗುವುದಿಲ್ಲ.


ತಂದೆಯ ಮನೆಗೆ ಹಿಂದಿರುಗುವ ಅಭಿಲಾಶೆಯಿಂದ ನೀನು ಹೀಗೆ ಬಂದು ಬಿಟ್ಟಿದ್ದೇನೋ ಸರಿ. ಆದರೆ ನನ್ನ ಕುಲದೇವರುಗಳನ್ನು ಕದ್ದದ್ದು ಏಕೆ?” ಎಂದು ಕೇಳಿದನು.


ಅರಸನು ಅಬ್ಷಾಲೋಮನಿಗಾಗಿ ಹಂಬಲಿಸುತ್ತಿರುವುದು ಚೆರೂಯಳ ಮಗನಾದ ಯೋವಾಬನಿಗೆ ತಿಳಿಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು