Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 13:4 - ಕನ್ನಡ ಸತ್ಯವೇದವು C.L. Bible (BSI)

4 ಅವನು ಒಂದು ದಿನ ಅಮ್ನೋನನನ್ನು, “ರಾಜಪುತ್ರರೇ, ನೀವು ದಿನೇದಿನೇ ಕ್ಷೀಣವಾಗುತ್ತಾ ಬರುವುದೇಕೆ? ನನಗೆ ತಿಳಿಸಬಾರದೇ?,” ಎಂದು ಕೇಳಿದನು. ಅವನು, “ನನ್ನ ತಮ್ಮನಾದ ಅಬ್ಷಾಲೋಮನ ತಂಗಿ ತಾಮಾರಳ ಮೇಲೆ ನನಗೆ ಮೋಹವುಂಟಾಗಿದೆ,” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಬಹು ಯುಕ್ತಿವಂತನಾದ ಇವನು ಒಂದು ದಿನ ಅಮ್ನೋನನನ್ನು, “ರಾಜಪುತ್ರನೇ ನೀನು ದಿನೇ ದಿನೇ ಕ್ಷೀಣನಾಗುತ್ತಾ ಬರುವುದೇಕೆ? ನನಗೆ ತಿಳಿಸುವುದಿಲ್ಲವೋ” ಎಂದು ಕೇಳಲು ಅವನು, “ನನ್ನ ತಮ್ಮನಾದ ಅಬ್ಷಾಲೋಮನ ತಂಗಿ ತಾಮಾರಳ ಮೇಲೆ ನನಗೆ ಮೋಹ ಉಂಟಾಗಿದೆ” ಎಂದು ಉತ್ತರ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಬಹು ಯುಕ್ತಿವಂತನಾದ ಇವನು ಒಂದು ದಿವಸ ಅಮ್ನೋನನನ್ನು - ರಾಜಪುತ್ರನೇ, ನೀನು ದಿನೇ ದಿನೇ ಕ್ಷೀಣನಾಗುತ್ತಾ ಬರುವದೇಕೆ? ನನಗೆ ತಿಳಿಸುವದಿಲ್ಲವೋ ಎಂದು ಕೇಳಲು ಅವನು - ನನ್ನ ತಮ್ಮನಾದ ಅಬ್ಷಾಲೋಮನ ತಂಗಿ ತಾಮಾರಳ ಮೇಲೆ ನನಗೆ ಮೋಹವುಂಟಾಗಿದೆ ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯೋನಾದಾಬನು ಅಮ್ನೋನನಿಗೆ, “ದಿನದಿಂದ ದಿನಕ್ಕೆ ನೀನು ತೆಳ್ಳಗಾಗುತ್ತಲೇ ಇರುವೆ. ನೀನು ರಾಜನ ಮಗ, ನಿನ್ನ ಬಳಿ ತಿನ್ನಲು ಬಹಳ ಇದ್ದರೂ ನೀನು ತೆಳ್ಳಗಾಗುತ್ತಿರುವುದು ಏಕೆ? ನನಗೆ ತಿಳಿಸು” ಎಂದು ಕೇಳಿದನು. ಅಮ್ನೋನನು ಯೋನಾದಾಬನಿಗೆ, “ನಾನು ತಾಮಾರಳನ್ನು ಮೋಹಿಸಿದ್ದೇನೆ. ಆದರೆ ಅವಳು ನನ್ನ ಸೋದರನಾದ ಅಬ್ಷಾಲೋಮನ ತಂಗಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಯೋನಾದಾಬನು ಅಮ್ನೋನನಿಗೆ, “ಅರಸನ ಮಗನಾದ ನೀನು ದಿನದಿನಕ್ಕೆ ಏಕೆ ಕ್ಷೀಣವಾಗಿ ಹೋಗುತ್ತೀ? ನನಗೆ ತಿಳಿಸುವುದಿಲ್ಲವೋ?” ಎಂದನು. ಅದಕ್ಕೆ ಅಮ್ನೋನನು ಅವನಿಗೆ, “ನಾನು ನನ್ನ ಸಹೋದರನಾಗಿರುವ ಅಬ್ಷಾಲೋಮನ ಸಹೋದರಿ ತಾಮಾರಳನ್ನು ಪ್ರೀತಿಮಾಡುತ್ತಿದ್ದೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 13:4
11 ತಿಳಿವುಗಳ ಹೋಲಿಕೆ  

“ಪುಟ್ಟಮಂದೆಯೇ, ಭಯಪಡಬೇಡ. ನಿನ್ನ ತಂದೆ ತಮ್ಮ ಸಾಮ್ರಾಜ್ಯವನ್ನು ನಿನಗೆ ನೀಡಲು ಇಷ್ಟಪಟ್ಟಿದ್ದಾರೆ.


ದುಷ್ಕೃತ್ಯಗಳನ್ನು ಮಾಡುವುದರಲ್ಲಿ ಅವರದು ನುರಿತ ಕೈ. ಅಧಿಕಾರಿಗಳು ಮತ್ತು ನ್ಯಾಯಾಧಿಪತಿಗಳು ಲಂಚಕ್ಕಾಗಿ ಕೈಯೊಡ್ಡುತ್ತಾರೆ. ದೊಡ್ಡ ದೊಡ್ಡ ವ್ಯಕ್ತಿಗಳು ತಮ್ಮ ಅಂತರಂಗದ ದುರಾಸೆಯನ್ನು ವ್ಯಕ್ತಪಡಿಸುತ್ತಾರೆ. ಎಲ್ಲರು ಒಟ್ಟಿಗೆ ಸೇರಿ ಒಳಸಂಚುಮಾಡುತ್ತಾರೆ.


ಅಸಹ್ಯಕಾರ್ಯಗಳನ್ನು ಮಾಡಿ ಅವಮಾನಕ್ಕೆ ಗುರಿಯಾಗಿದ್ದರೂ ಎಳ್ಳಷ್ಟೂ ನಾಚಿಕೆ ಇಲ್ಲದಿದ್ದಾರೆ. ಲಜ್ಜೆಯ ಗಂಧವೂ ಅವರಿಗಿಲ್ಲ. ಆದಕಾರಣ ಬೇರೆಯವರಂತೆ ಅವರೂ ಬೀಳುವರು. ನಾನು ದಂಡಿಸುವಾಗ ಅವರು ಏಳಲಾಗದಂತೆ ಮುಗ್ಗರಿಸಿ ಬೀಳುವರು. ಇದು ಸರ್ವೇಶ್ವರನಾದ ನನ್ನ ನುಡಿ.


ಅವರ ಮುಖಲಕ್ಷಣವೇ ಅವರ ವಿರುದ್ಧ ಸಾಕ್ಷಿಯಾಗಿದೆ. ಅವರು ಸೊದೋಮಿನವರಂತೆ ತಮ್ಮ ಪಾಪಗಳನ್ನು ಮುಚ್ಚುಮರೆಯಿಲ್ಲದೆ ಮೆರೆಯಿಸುತ್ತಾರೆ. ಅಯ್ಯೋ, ಅವರಿಗೆ ಕೇಡು! ತಮಗೆ ತಾವೇ ಕೇಡನ್ನು ಬರಮಾಡಿಕೊಂಡಿದ್ದಾರೆ.


ಯಾವನಾದರೂ ತನ್ನ ಒಡಹುಟ್ಟಿದವಳನ್ನು ಅಂದರೆ ತಂದೆಯ ಮಗಳನ್ನಾಗಲಿ ತಾಯಿಯ ಮಗಳನ್ನಾಗಲಿ ಕರೆದುಕೊಂಡು ಅವಳ ಮಾನವನ್ನು ಇವನೂ ಇವನ ಮಾನವನ್ನು ಅವಳೂ ನೋಡಿದರೆ ಅದು ನಾಚಿಕೆಗೇಡಾದ ಕೆಲಸವಾಗಿರುವುದರಿಂದ ಅವರ ಕುಲದವರ ಎದುರಾಗಿಯೇ ಅವರಿಗೆ ಮರಣಶಿಕ್ಷೆಯನ್ನು ಮಾಡಿಸಬೇಕು. ಆ ಮನುಷ್ಯನು ಒಡಹುಟ್ಟಿದವಳನ್ನು ಸಂಗಮಿಸಿದುದರಿಂದ ತನ್ನ ಪಾಪದ ಫಲವನ್ನು ಅನುಭವಿಸಬೇಕು.


“ತಂದೆಯ ಮಗಳನ್ನಾಗಲಿ, ತಾಯಿಯ ಮಗಳನ್ನಾಗಲಿ ಸಂಭೋಗಿಸಬಾರದು; ಅವರು ಒಡಹುಟ್ಟಿದವರು; ಪರಸ್ತ್ರೀಯರಲ್ಲಿ ಹುಟ್ಟಿದವರಾದರೂ ಅವರು ನಿಮಗೆ ಅಕ್ಕತಂಗಿಯರು.


ಆಗ ಅವನ ಹೆಂಡತಿ ಈಜೆಬೆಲಳು, “ಇಸ್ರಯೇಲರ ಅರಸರಾದ ನೀವು ಹೀಗೆ ವರ್ತಿಸುವುದೇ! ಎದ್ದು ಊಟಮಾಡಿ, ಸಂತೋಷದಿಂದಿರಿ; ನಾನು ನಿಮಗೆ ಜೆಸ್ರೀಲಿನವನಾದ ನಾಬೋತನ ದ್ರಾಕ್ಷೀತೋಟವನ್ನು ಕೊಡುತ್ತೇನೆ,” ಎಂದು ನುಡಿದಳು.


ಅವನಿಗೆ ಯೋನಾದಾಬನೆಂಬ ಒಬ್ಬ ಗೆಳೆಯನಿದ್ದನು. ಇವನು ದಾವೀದನ ಅಣ್ಣನಾದ ಶಿಮ್ಮನ ಮಗ ಹಾಗು ಬಹು ಯುಕ್ತಿವಂತ.


ಆಗ ಯೋನಾದಾಬನು, “ನೀನು ಅಸ್ವಸ್ಥನಾದವನಂತೆ ನಟಿಸಿ ಹಾಸಿಗೆಯ ಮೇಲೆ ಮಲಗಿಕೋ; ನಿನ್ನ ತಂದೆ ನಿನ್ನನ್ನು ನೋಡುವುದಕ್ಕೆ ಬಂದಾಗ, ‘ದಯವಿಟ್ಟು ನನ್ನ ತಂಗಿ ತಾಮಾರಳನ್ನು ನನಗಾಗಿ ಆಹಾರ ಸಿದ್ಧಮಾಡುವುದಕ್ಕೆ ಕಳುಹಿಸಿ. ಆಕೆ ನನ್ನೆದುರಿನಲ್ಲೇ ಸಿದ್ಧಮಾಡಿಕೊಡುವುದಾದರೆ ಊಟಮಾಡುತ್ತೇನೆ’ ಎಂದು ಹೇಳು,” ಎಂದನು.


ಆಗ ಅವನ ಹೆಂಡತಿ ಈಜೆಬೆಲಳು ಅವನ ಬಳಿಗೆ ಬಂದು, “ನೀವೇಕೆ ಊಟಮಾಡುವುದಿಲ್ಲ? ನಿಮಗೆ ಯಾವ ಚಿಂತೆ?” ಎಂದು ಕೇಳಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು