Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 13:7 - ಕನ್ನಡ ಸತ್ಯವೇದವು C.L. Bible (BSI)

7 ದಾವೀದನು ಅರಮನೆಗೆ ಆಳುಗಳನ್ನು ಕಳುಹಿಸಿ ಆಕೆಗೆ, “ನೀನು ನಿನ್ನ ಅಣ್ಣ ಅಮ್ನೋನನ ಮನೆಗೆ ಹೋಗಿ ಅವನಿಗಾಗಿ ಆಹಾರವನ್ನು ಸಿದ್ಧಮಾಡು,” ಎಂದು ಹೇಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆಗ ದಾವೀದನು ಅರಮನೆಗೆ ಆಳುಗಳನ್ನು ಕಳುಹಿಸಿ ಆಕೆಗೆ, “ನೀನು ನಿನ್ನ ಅಣ್ಣನಾದ ಅಮ್ನೋನನ ಮನೆಗೆ ಹೋಗಿ ಅವನಿಗೋಸ್ಕರ ಆಹಾರವನ್ನು ಸಿದ್ಧಮಾಡು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ದಾವೀದನು ಅರಮನೆಗೆ ಆಳುಗಳನ್ನು ಕಳುಹಿಸಿ ಆಕೆಗೆ - ನೀನು ನಿನ್ನ ಅಣ್ಣನಾದ ಅಮ್ನೋನನ ಮನೆಗೆ ಹೋಗಿ ಅವನಿಗೋಸ್ಕರ ಆಹಾರವನ್ನು ಸಿದ್ಧಮಾಡು ಎಂದು ಹೇಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ದಾವೀದನು ತಾಮಾರಳ ಮನೆಗೆ ಸಂದೇಶಕರನ್ನು ಕಳುಹಿಸಿದನು. ಸಂದೇಶಕರು ತಾಮಾರಳಿಗೆ, “ನಿನ್ನ ಸೋದರನಾದ ಅಮ್ನೋನನ ಮನೆಗೆ ಹೋಗಿ ಅವನಿಗೋಸ್ಕರ ಸ್ವಲ್ಪ ಊಟವನ್ನು ತಯಾರಿಸು” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆಗ ದಾವೀದನು ತನ್ನ ಮನೆಯಲ್ಲಿರುವ ತಾಮಾರಳ ಬಳಿಗೆ ಮನುಷ್ಯನನ್ನು ಕಳುಹಿಸಿ, “ನೀನು ನಿನ್ನ ಸಹೋದರ ಅಮ್ನೋನನ ಮನೆಗೆ ಹೋಗಿ, ಅವನಿಗೆ ಅಡಿಗೆಯನ್ನು ಮಾಡಿ ಇಡು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 13:7
3 ತಿಳಿವುಗಳ ಹೋಲಿಕೆ  

ಅಮ್ನೋನನು ಅಸ್ವಸ್ಥನಾದವನೋ ಎಂಬಂತೆ ಮಲಗಿಕೊಂಡನು. ಅರಸನು ಅವನನ್ನು ನೋಡುವುದಕ್ಕೆ ಬಂದಾಗ ಅವನು ಅರಸನಿಗೆ, “ದಯವಿಟ್ಟು ನನ್ನ ತಂಗಿ ತಾಮಾರಳನ್ನು ನನ್ನ ಬಳಿಗೆ ಕಳುಹಿಸಿ; ಆಕೆ ನನ್ನ ಕಣ್ಮುಂದೆಯೇ ಒಂದೆರಡು ಭಕ್ಷ್ಯಗಳನ್ನು ಮಾಡಿಕೊಡುವುದಾದರೆ ಊಟಮಾಡುತ್ತೇನೆ,” ಎಂದು ಬೇಡಿಕೊಂಡನು.


ಕೂಡಲೆ ಆಕೆ ತನ್ನ ಅಣ್ಣನಾದ ಅಮ್ನೋನನ ಮನೆಗೆ ಹೋದಳು; ಅವನು ಮಲಗಿದ್ದನು. ಆಕೆ ಹೋಗಿ ಹಿಟ್ಟು ತೆಗೆದುಕೊಂಡು ನಾದಿ ಅವನ ಕಣ್ಮುಂದೆಯೇ ಭಕ್ಷ್ಯಗಳನ್ನು ಮಾಡಿ ಸುಟ್ಟಳು.


ದಾವೀದ ನಗರದಲ್ಲಿ ದಾವೀದನು ತನ್ನ ವೈಯಕ್ತಿಕ ಉಪಯೋಗಕ್ಕಾಗಿ ಮನೆಗಳನ್ನು ಕಟ್ಟಿಸಿಕೊಂಡನು. ದೇವಮಂಜೂಷಕ್ಕೂ ಒಂದು ಸ್ಥಳವನ್ನು ಸಿದ್ಧಪಡಿಸಿ ಅದಕ್ಕೆ ಒಂದು ಗುಡಾರವನ್ನು ಹಾಕಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು