Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 13:9 - ಕನ್ನಡ ಸತ್ಯವೇದವು C.L. Bible (BSI)

9 ಅನಂತರ ಆಕೆ ಅವುಗಳನ್ನು ಬಾಣಲಿಯಿಂದ ತೆಗೆದು ಅವನ ಮುಂದಿಟ್ಟಳು. ಅವನು ಊಟಮಾಡದೆ ಎಲ್ಲಾ ಜನರನ್ನು ತನ್ನ ಬಳಿಯಿಂದ ಹೊರಡಿಸಬೇಕೆಂದು ಅಪ್ಪಣೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅನಂತರ ಆಕೆಯು ಅವುಗಳನ್ನು ಪಾತ್ರೆಯಿಂದ ತೆಗೆದು, ಅವನ ಮುಂದೆ ಇಟ್ಟಳು. ಅವನು ಊಟಮಾಡದೆ ಎಲ್ಲಾ ಜನರನ್ನು ತನ್ನ ಬಳಿಯಿಂದ ಹೊರಡಿಸಬೇಕೆಂದು ಅಪ್ಪಣೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅನಂತರ ಆಕೆ ಅವುಗಳನ್ನು ಬಾಂಡ್ಲದಿಂದ ತೆಗೆದು ಅವನ ಮುಂದಿಟ್ಟಳು. ಅವನು ಊಟ ಮಾಡದೆ ಎಲ್ಲಾ ಜನರನ್ನು ತನ್ನ ಬಳಿಯಿಂದ ಹೊರಡಿಸಬೇಕೆಂದು ಅಪ್ಪಣೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ತಾಮಾರಳು ರೊಟ್ಟಿಗಳನ್ನು, ರೊಟ್ಟಿಮಾಡುವ ಪಾತ್ರೆಯಿಂದ ಹೊರ ತೆಗೆದು ಅಮ್ನೋನನಿಗೋಸ್ಕರ ಅವುಗಳನ್ನು ಬಡಿಸಿದಳು. ಆದರೆ ಅಮ್ನೋನನು ತಿನ್ನಲಿಲ್ಲ. ಅಮ್ನೋನನು ತನ್ನ ಸೇವಕರೆಲ್ಲರಿಗೆ, “ನೀವೆಲ್ಲರೂ ನನ್ನನ್ನು ಒಬ್ಬಂಟಿಗನನ್ನಾಗಿ ಬಿಟ್ಟು ಹೋಗಿ!” ಎಂದನು. ಆದ್ದರಿಂದ ಸೇವಕರೆಲ್ಲರೂ ಅಮ್ನೋನನ ಕೊಠಡಿಯಿಂದ ಹೊರಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಪಾತ್ರೆ ತೆಗೆದುಕೊಂಡು ಅವನ ಮುಂದೆ ಇಟ್ಟಳು. ಆದರೆ ಅಮ್ನೋನನು, “ನಾನು ಉಣ್ಣುವುದಿಲ್ಲ,” ಎಂದು ಹೇಳಿ, “ನನ್ನ ಬಳಿಯಿಂದ ಎಲ್ಲಾ ಮನುಷ್ಯರನ್ನು ಕಳುಹಿಸಿಬಿಡಿರಿ,” ಎಂದನು. ಹಾಗೆಯೇ ಎಲ್ಲರು ಅವನನ್ನು ಬಿಟ್ಟುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 13:9
5 ತಿಳಿವುಗಳ ಹೋಲಿಕೆ  

ಇದನ್ನು ಕೇಳಿದ ಮೇಲೆ ತನ್ನ ಪರಿವಾರದವರ ಮುಂದೆ, ತನ್ನನ್ನೇ ಇನ್ನು ತಡೆಹಿಡಿದುಕೊಳ್ಳಲು ಜೋಸೆಫನಿಂದ ಆಗಲಿಲ್ಲ. “ಇಲ್ಲಿಂದ ಎಲ್ಲರನ್ನು ಆಚೆ ಕಳಿಸಿರಿ,” ಎಂದು ಬಾಯ್ತೆರೆದು ಹೇಳಿದ. ಜೋಸೆಫನ ಅಣ್ಣತಮ್ಮಂದಿರಿಗೆ ತನ್ನ ಪರಿಚಯ ಸಿಗುವಂತೆ ಮಾಡುವಾಗ ಇತರರು ಯಾರೂ ಹತ್ತಿರ ಇರಲಿಲ್ಲ.


ಕೇಡನ್ನು ಮಾಡುವವನಿಗೆ ಬೆಳಕೆಂದರೆ ಆಗದು. ತನ್ನ ದುಷ್ಕೃತ್ಯಗಳು ಬಯಲಾಗಬಾರದೆಂದು ಅವನು ಬೆಳಕಿನ ಬಳಿಗೆ ಸುಳಿಯುವುದೂ ಇಲ್ಲ.


ತಾನಾದರೋ ಗಿಲ್ಗಾಲಿನಲ್ಲಿರುವ ವಿಗ್ರಹಸ್ಥಳದವರೆಗೆ ಹೋಗಿ, ಹಿಂದಿರುಗಿ ಎಗ್ಲೋನನ ಬಳಿಗೆ ಬಂದನು; “ಅರಸರೇ, ತಮಗೆ ತಿಳಿಸಬೇಕಾದ ಒಂದು ರಹಸ್ಯ ವಿಷಯವಿದೆ,” ಎಂದನು. ಆಗ ಅರಸ, “ನಿಶ್ಯಬ್ದ” ಎಂದನು. ಅವನ ಸೇವಕರೆಲ್ಲರು ಅಲ್ಲಿಂದ ಹೊರಗೆ ಹೋದರು.


ಕೂಡಲೆ ಆಕೆ ತನ್ನ ಅಣ್ಣನಾದ ಅಮ್ನೋನನ ಮನೆಗೆ ಹೋದಳು; ಅವನು ಮಲಗಿದ್ದನು. ಆಕೆ ಹೋಗಿ ಹಿಟ್ಟು ತೆಗೆದುಕೊಂಡು ನಾದಿ ಅವನ ಕಣ್ಮುಂದೆಯೇ ಭಕ್ಷ್ಯಗಳನ್ನು ಮಾಡಿ ಸುಟ್ಟಳು.


ಎಲ್ಲರೂ ಹೋದಮೇಲೆ ಅವನು ತಾಮಾರಳಿಗೆ, “ಆಹಾರವನ್ನು ಈ ಕೋಣೆಗೆ ತೆಗೆದುಕೊಂಡು ಬಾ, ನೀನಾಗಿ ತಂದುಕೊಟ್ಟರೆ ಊಟಮಾಡುತ್ತೇನೆ!” ಎಂದು ಹೇಳಿದನು. ಆಗ ತಾಮಾರಳು ತಾನು ಮಾಡಿದ ಭಕ್ಷ್ಯಗಳನ್ನು ಅಣ್ಣನಾದ ಅಮ್ನೋನನಿದ್ದ ಕೋಣೆಗೆ ತೆಗೆದುಕೊಂಡು ಹೋಗಿ ಅವನ ಮುಂದಿಟ್ಟಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು