Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 14:14 - ಕನ್ನಡ ಸತ್ಯವೇದವು C.L. Bible (BSI)

14 ನೆಲದ ಮೇಲೆ ಚೆಲ್ಲಿ ತಿರುಗಿ ತುಂಬಿಕೊಳ್ಳಲಾಗದ ನೀರಿನಂತೆ ಇದ್ದೇವೆ ನಾವು. ಮನುಷ್ಯರ ಪ್ರಾಣತೆಗೆಯುವುದಕ್ಕೆ ದೇವರಿಗೆ ಇಷ್ಟ ಇಲ್ಲ; ಹೊರದೂಡಲಾದವನು ತಿರುಗಿ ಬಳಿಗೆ ಬರುವ ಹಾಗೆ ಅವರು ಸದುಪಾಯಗಳನ್ನು ಕಲ್ಪಿಸುವವರಾಗಿರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನಾವು ಸಾಯುವವರು. ನೆಲದ ಮೇಲೆ ಚೆಲ್ಲಿದ ನೀರು ಪುನಃ ತೆಗೆದುಕೊಳ್ಳಲು ಆಗದಂತೆ ಇರುವ ನೀರಿನಂತೆ ನಾವು. ಮನುಷ್ಯರ ಪ್ರಾಣವನ್ನು ತೆಗೆಯುವುದಕ್ಕೆ ದೇವರಿಗೆ ಇಷ್ಟವಿಲ್ಲ. ತಳ್ಳಲ್ಪಟ್ಟವನು ತಿರುಗಿ ತನ್ನ ಬಳಿಗೆ ಬರುವ ಹಾಗೆ ಆತನು ಸದುಪಾಯಗಳನ್ನು ಕಲ್ಪಿಸುವವನಾಗಿರುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನಾವು ಸಾಯುವವರು; ನೆಲದ ಮೇಲೆ ಚೆಲ್ಲಲ್ಪಟ್ಟು ತಿರಿಗಿ ಕೂಡಿಸಲ್ಪಡಲಾರದ ನೀರಿನಂತಿದ್ದೇವೆ. ಮನುಷ್ಯರ ಪ್ರಾಣವನ್ನು ತೆಗೆಯುವದಕ್ಕೆ ದೇವರಿಗೆ ಇಷ್ಟವಿಲ್ಲ; ತಳ್ಳಲ್ಪಟ್ಟವನು ತಿರಿಗಿ ತನ್ನ ಬಳಿಗೆ ಬರುವ ಹಾಗೆ ಆತನು ಸದುಪಾಯಗಳನ್ನು ಕಲ್ಪಿಸುವವನಾಗಿರುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನಾವೆಲ್ಲ ಎಂದಾದರೂ ಒಂದು ದಿನ ಸಾಯುತ್ತೇವೆ ಎನ್ನುವುದು ನಿಜ. ನಾವೆಲ್ಲ ನೆಲದ ಮೇಲೆ ಚೆಲ್ಲಿದ ನೀರಿನಂತಿದ್ದೇವೆ. ಈ ನೀರನ್ನು ನೆಲದಿಂದ ಮತ್ತೆ ಒಟ್ಟುಗೂಡಿಸುವುದು ಯಾವ ವ್ಯಕ್ತಿಯಿಂದಲೂ ಸಾಧ್ಯವಿಲ್ಲ. ಆದರೆ ಜೀವವನ್ನು ತೆಗೆದುಬಿಡಲು ದೇವರು ಇಚ್ಛಿಸುವುದಿಲ್ಲ. ಬಲಾತ್ಕಾರವಾಗಿ ಹೊರಗೆ ನೂಕಲ್ಪಟ್ಟವನು ತಿರುಗಿ ತನ್ನ ಬಳಿಗೆ ಬರುವ ಹಾಗೆ ಆತನದೇ ಆದ ಉಪಾಯವಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನಾವೆಲ್ಲರೂ ಸಾಯುವುದು ಅವಶ್ಯವೇ. ನಾವು ನೆಲದ ಮೇಲೆ ಚೆಲ್ಲಿ ತಿರುಗಿ ತುಂಬಿಕೊಳ್ಳಲಾಗದ ನೀರಿನ ಹಾಗೆ ಇದ್ದೇವೆ. ಆದರೆ ದೇವರು ಹಾಗೆ ಯಾರ ಪ್ರಾಣವನ್ನೂ ತೆಗೆಯ ಬಯಸುವವರಲ್ಲ. ಅದಕ್ಕೆ ಬದಲಾಗಿ ಬಹಿಷ್ಕಾರವಾದವವರನ್ನು ತಿರುಗಿ ತಮ್ಮ ಬಳಿಗೆ ಬರುವಂತೆ ದೇವರು ಸದುಪಾಯಗಳನ್ನು ಕಲ್ಪಿಸುವವರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 14:14
31 ತಿಳಿವುಗಳ ಹೋಲಿಕೆ  

ನನ್ನನು ಮರಣಕ್ಕೆ ಗುರಿಮಾಡುವೆಯೆಂದು ತಿಳಿದಿದೆ ಸಮಸ್ತಜೀವಿಗಳು ತೆರಳುವ ಮಂದಿರಕ್ಕೆ ಸೇರಿಸುವೆಯೆಂದು ಗೊತ್ತೇ ಇದೆ.


ಪ್ರತಿಯೊಬ್ಬ ಮಾನವನು ಸಾಯುವುದು ಒಂದೇ ಸಾರಿ. ಅನಂತರ ಅವನು ನ್ಯಾಯತೀರ್ಪಿಗೆ ಗುರಿಯಾಗಬೇಕು.


ಏಕೆಂದರೆ ಮಹಾಯಾಜಕನು ಜೀವದಿಂದಿರುವ ತನಕ ಅವನು ಆಶ್ರಯನಗರದೊಳಗೇ ಇರಬೇಕಾಗಿತ್ತು. ಮಹಾಯಾಜಕನು ತೀರಿಹೋದ ನಂತರ ಅವನು ತನ್ನ ಆಸ್ತಿಪಾಸ್ತಿಯಿರುವ ಸ್ಥಳಕ್ಕೆ ಹೋಗಬಹುದು.


ಸಮಸ್ತಜನರು ಒಟ್ಟಾಗಿ ಅಳಿದುಹೋಗುವರು ಮರಳಿ ಮನುಷ್ಯರೆಲ್ಲರೂ ಮಣ್ಣಾಗಿ ಮಾರ್ಪಡುವರು.


ಅವನು ಓಡಿಹೋಗಿದ್ದ ಆಶ್ರಯನಗರಕ್ಕೆ ತಿರುಗಿ ಸೇರಿಸಬೇಕು. ಪಟ್ಟಾಭಿಷೇಕ ಹೊಂದಿದ ಮಹಾಯಾಜಕನು ಜೀವದಿಂದಿರುವ ತನಕ ಅವನು ಆ ಪಟ್ಟಣದಲ್ಲೇ ವಾಸಿಸಬೇಕು.


ಕೈತಪ್ಪಿ ಮತ್ತೊಬ್ಬನನ್ನು ಕೊಂದವನು ಇಸ್ರಯೇಲನಾಗಿರಲಿ, ಪರದೇಶದವನಾಗಿರಲಿ ಅಥವಾ ನಿಮ್ಮ ಮಧ್ಯೆ ವಾಸಿಸುವವನಾಗಿರಲಿ, ಆ ಆರು ಪಟ್ಟಣಗಳೊಳಗೆ ಒಂದಕ್ಕೆ ಓಡಿಹೋಗಿ ಆಶ್ರಯಪಡೆಯಲಿ.


ಜೀವಿತರಿಗೆ ಖಂಡಿತವಾಗಿ ಸಾಯುತ್ತೇವೆಂಬ ತಿಳುವಳಿಕೆಯಾದರೂ ಉಂಟು. ಸತ್ತವರಿಗಾದರೋ ಯಾವ ತಿಳುವಳಿಕೆಯೂ ಇಲ್ಲ; ಅವರಿಗೆ ಇನ್ನು ಮೇಲೆ ಯಾವ ಪ್ರತಿಫಲವೂ ಇಲ್ಲ; ಅವರ ಹೆಸರನ್ನೂ ಜನರು ಮರೆತುಬಿಡುತ್ತಾರೆ.


ಕ್ಷಯಿಸುತ್ತಿರುವೆ ನಾ ಚೆಲ್ಲಿದ ನೀರಿನಂತೆ I ಎಲುಬುಗಳು ಅಲುಗಿವೆ, ಎದೆ ಕರಗಿದೆ ಮೇಣದಂತೆ II


ಸತ್ತಮೇಲೆ ಮನುಜ ಮರಳಿ ಬದುಕುತ್ತಾನೆಯೇ? ಬದುಕುವುದಾದರೆ ಮುಕ್ತಿಹೊಂದುವವರೆಗೆ ನನ್ನ ವಾಯಿದೆಯ ದಿನವೆಲ್ಲ ನಾ ಕಾದಿರುವೆ.


ತಮ್ಮ ಶಿಷ್ಯರನ್ನು ಹೆರೋದನ ಪಕ್ಷದ ಕೆಲವರ ಸಮೇತ ಸ್ವಾಮಿಯ ಬಳಿಗೆ ಕಳುಹಿಸಿದರು. ಇವರು ಬಂದು, “ಬೋಧಕರೇ, ತಾವು ಸತ್ಯವಂತರು, ಸತ್ಯಕ್ಕನುಸಾರ ದೈವಮಾರ್ಗವನ್ನು ಬೋಧಿಸುವವರು, ಮುಖದಾಕ್ಷಿಣ್ಯಕ್ಕೆ ಎಡೆಕೊಡದವರು; ಎಂದೇ, ಸ್ಥಾನಮಾನಗಳಿಗೆ ಮಣಿಯದವರು. ಇದೆಲ್ಲಾ ನಮಗೆ ಚೆನ್ನಾಗಿ ಗೊತ್ತಿದೆ.


ನಮ್ಮ ಆಯುಷ್ಕಾಲ ಎಪ್ಪತ್ತು ವರುಷ I ಹೆಚ್ಚಾಗಿದ್ದರೆ ಬಲ, ಎಂಬತ್ತು ವರುಷ II


ಇಳೆಯ ಮಾನವರನು ನೀ ಮಣ್ಣುಪಾಲಾಗಿಸುತಿಹೆ I ‘ನರಪುತ್ರರೇ, ಮರಳಿ ಮಣ್ಣಿಗೆ ಸೇರಿರಿ’ ಎನ್ನುತಿಹೆ II


ನೀರಂತೆ ಚೆಲ್ಲಿ ಹರಾ ನೆತ್ತರನು ಜೆರುಸಲೇಮ್ ಸುತ್ತಲು I ನಮ್ಮವರ ಶವಗಳನು ಹೂಳಲು ಯಾರೂ ಇಲ್ಲದಿರಲು II


ಅವರಾಗಲಿ ಬೇಗನೆ ಕಾಣದೆ ಹೋಗುವ ತೊರೆಯಂತೆ I ನಸುಕಿ ನಾಶವಾಗಲಿ ಪಾದದಡಿ ಸಿಲುಕಿದ ಗರಿಕೆಕಣದಂತೆ II


ಅಧಿಪತಿಗಳಿಗೆ ಮುಖದಾಕ್ಷಿಣ್ಯವನ್ನು ತೋರಿಸುವನು ಬಡವ-ಬಲ್ಲಿದನೆಂಬ ಭೇದವನ್ನು ಮಾಡನು. ಏಕೆಂದರೆ ಅವರೆಲ್ಲರು ಆ ದೇವನಿಂದಲೇ ಸೃಷ್ಟಿಯಾದವರು.


ಆಗ ದಾವೀದನು ಆ ದೂತನಿಗೆ, “ನೀನು ಹೋಗಿ ಯೋವಾಬನಿಗೆ, ‘ವ್ಯಸನಪಡಬೇಕಾಗಿಲ್ಲ; ಕತ್ತಿ ಈ ದಿನ ಒಬ್ಬನನ್ನು ನುಂಗಿದರೆ ನಾಳೆ ಇನ್ನೊಬ್ಬನನ್ನು ನುಂಗುತ್ತದೆ. ಮತ್ತಷ್ಟು ಶೂರತನದಿಂದ ಯುದ್ಧಮಾಡಿ ಪಟ್ಟಣವನ್ನು ಕೆಡವಿಬಿಡಿ, ಎಂಬುದಾಗಿ ಅರಸರು ಆಜ್ಞಾಪಿಸುತ್ತಾರೆ’ ಎಂದು ಹೇಳಿ ಅವನನ್ನು ಧೈರ್ಯಪಡಿಸು,” ಎಂದನು.


ನಿಮ್ಮ ದೇವರಾದ ಸರ್ವೇಶ್ವರ ದೇವಾದಿದೇವರು, ಸರ್ವೇಶ್ವರಾಧಿ ಸರ್ವೇಶ್ವರ. ಅವರು ಪರಮ ದೇವರೂ ಪರಾಕ್ರಮಿಯೂ ಭಯಂಕರರೂ ಆಗಿದ್ದಾರೆ. ಅವರು ಮುಖದಾಕ್ಷಿಣ್ಯ ನೋಡುವವರಲ್ಲ, ಲಂಚ ತೆಗೆದುಕೊಳ್ಳುವವರಲ್ಲ.


“ಆದರೆ ಅವರು ತಾವೂ ತಮ್ಮ ಪಿತೃಗಳೂ ನನಗೆ ದ್ರೋಹಿಗಳಾಗಿ ಪಾಪ ಮಾಡಿದವರೆಂದು ಒಪ್ಪಿಕೊಂಡು, ನನಗೆ ವಿರೋಧವಾಗಿ ನಡೆದದ್ದರಿಂದಲೇ


ನೀವು ದೇವರಿಗೆ ಪ್ರಾರ್ಥನೆಮಾಡುವಾಗ, ಅವರನ್ನು “ತಂದೆಯೇ” ಎಂದು ಸಂಬೋಧಿಸುತ್ತೀರಿ. ಅವರು ಪಕ್ಷಪಾತಿ ಅಲ್ಲ. ಎಲ್ಲರಿಗೂ ಅವರವರ ಕೃತ್ಯಗಳಿಗೆ ತಕ್ಕಂತೆ ನ್ಯಾಯತೀರ್ಪು ನೀಡುವವರು. ಆದ್ದರಿಂದ ನಿಮ್ಮ ಇಹಲೋಕದ ಯಾತ್ರೆಯನ್ನು ಭಯಭಕ್ತಿಯಿಂದ ಸಾಗಿಸಿರಿ.


ಆಗ ಪೇತ್ರನು ಹೀಗೆಂದು ಉಪದೇಶ ಮಾಡಿದನು: “ದೇವರು ಪಕ್ಷಪಾತಿಯಲ್ಲ. ಈ ವಿಷಯ ನನಗೆ ಮನದಟ್ಟಾಗಿದೆ.


ಆದರೆ ಕೊಲ್ಲಬೇಕೆಂಬ ಯೋಚನೆಯಿಲ್ಲದೆ ಆಕಸ್ಮಿಕವಾಗಿ ಒಬ್ಬನ ಹತ್ಯ ಆಗಿದ್ದರೆ ಆ ಹತ್ಯೆಗೆ ಕಾರಣವಾದವನು ನಾನು ನೇಮಿಸುವ ಆಶ್ರಯ ಸ್ಥಳಕ್ಕೆ ಓಡಿಹೋಗಿ ಬದುಕಬಹುದು.


ಅದಿರಲಿ, ತಮ್ಮ ಸೇವಕಿ ಆದ ನನ್ನನ್ನು ಜನರು ಹೆದರಿಸಿದ್ದರಿಂದ ನಾನು ಈ ಸಂಗತಿಯನ್ನು ಅರಸರಿಗೆ ತಿಳಿಸಿದರೆ ಅವರು ತಮ್ಮ ಸೇವಕಿಯ ಬಿನ್ನಹವನ್ನು ಆಲಿಸಾರು ಎಂದುಕೊಂಡು ನನ್ನ ಒಡೆಯರಾದ ಅರಸರಿಗೆ ಇದನ್ನು ತಿಳಿಸುವುದಕ್ಕೆ ಬಂದೆ.


ದಾವೀದನ ಸಂತಾನದವರನ್ನು ಅವರ ಪಾಪದ ನಿಮಿತ್ತ ತಲೆ ತಗ್ಗಿಸುವಂತೆ ಮಾಡುವೆನು. ಆದರೆ ಸದಾಕಾಲಕ್ಕೂ ಅಲ್ಲ, ಎಂದು ಹೇಳಿದ್ದಾರೆ,” ಎಂದನು.


ಎನ್ನ ಗೋಣು ಒಣಗಿಹೋಗಿದೆ ಒಡೆದ ಮಡಕೆಯಂತೆ I ಅಂಗುಳಕೆ ಜಿಹ್ವೆ ಅಂಟಿದೆ; ಮಣ್ಣಿಗೆನ್ನ ಸೇರಿಸಿದೆ II


ಆತನಚಲ ಪ್ರೀತಿ ಇನ್ನು ಮಾಯವಾಯಿತೋ? I ಆತನ ವಾಗ್ದಾನ ತಲತಲಾಂತರಕು ಮುಗಿಯಿತೋ? II


ನರಮಾನವನನ್ನು ಸ್ವಾಮಿ ಸದಾಕಾಲಕ್ಕೂ ತೊರೆದುಬಿಡುವವನಲ್ಲ.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ದುಷ್ಟನ ಸಾವಿನಲ್ಲಿ ನನಗೆ ಲವಲೇಶವಾದರೂ ಸಂತೋಷವಿಲ್ಲ. ಅವನು ತನ್ನ ದುರ್ಮಾರ್ಗವನ್ನು ಬಿಟ್ಟು ಬಾಳುವುದೇ ನನಗೆ ಸಂತೋಷ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು