Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 14:17 - ಕನ್ನಡ ಸತ್ಯವೇದವು C.L. Bible (BSI)

17 ನನ್ನ ಒಡೆಯರಾದ ಅರಸರ ಮಾತು ಸಮಾಧಾನಕ್ಕೆ ಕಾರಣವಾಗುವುದೆಂದು ನೆನಸಿ ನಿಮ್ಮ ದಾಸಿಯಾದ ನಾನು ಬಂದೆ. ನ್ಯಾಯ ಅನ್ಯಾಯಗಳನ್ನು ಕಂಡು ಹಿಡಿಯುವುದರಲ್ಲಿ ನನ್ನ ಒಡೆಯರಾದ ಅರಸರು ದೇವದೂತನಂತೆ ಇರುತ್ತೀರಿ; ನಿಮ್ಮ ದೇವರಾದ ಸರ್ವೇಶ್ವರ ನಿಮ್ಮೊಂದಿಗೆ ಇರಲಿ!” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನನ್ನ ಒಡೆಯನಾದ ಅರಸನ ಮಾತು ಸಮಾಧಾನಕ್ಕೆ ಕಾರಣವಾಗುವುದೆಂದು ನೆನಸಿ ನಿನ್ನ ದಾಸಿಯಾದ ನಾನು ಬಂದೆನು. ನ್ಯಾಯ ಅನ್ಯಾಯಗಳನ್ನು ಕಂಡುಹಿಡಿಯುವುದರಲ್ಲಿ ನನ್ನ ಒಡೆಯನಾದ ಅರಸನು ದೇವದೂತನಂತಿದ್ದಾನೆ. ನಿನ್ನ ದೇವರಾದ ಯೆಹೋವನು ನಿನ್ನ ಸಂಗಡ ಇರಲಿ” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ನನ್ನ ಒಡೆಯನಾದ ಅರಸನ ಮಾತು ಸಮಾಧಾನಕ್ಕೆ ಕಾರಣವಾಗುವದೆಂದು ನೆನಸಿ ನಿನ್ನ ದಾಸಿಯಾದ ನಾನು ಬಂದೆನು. ನ್ಯಾಯಾನ್ಯಾಯಗಳನ್ನು ಕಂಡುಹಿಡಿಯುವದರಲ್ಲಿ ನನ್ನ ಒಡೆಯನಾದ ಅರಸನು ದೇವದೂತನಂತಿರುತ್ತಾನೆ; ನಿನ್ನ ದೇವರಾದ ಯೆಹೋವನು ನಿನ್ನ ಸಂಗಡ ಇರಲಿ ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ರಾಜನಾದ ನನ್ನ ಒಡೆಯನ ಮಾತುಗಳು ನನಗೆ ವಿಶ್ರಾಂತಿಯನ್ನು ಕೊಡುತ್ತವೆ ಎಂದು ನನಗೆ ತಿಳಿದಿರುವುದರಿಂದ ನಿನ್ನ ಬಳಿಗೆ ಬಂದಿರುವೆನು. ಏಕೆಂದರೆ ನೀನು ದೇವದೂತನಂತಿರುವೆ. ಯಾವುದು ಒಳ್ಳೆಯದು, ಯಾವುದು ಕೆಟ್ಟದ್ದು ಎಂಬುದು ನಿನಗೆ ತಿಳಿದಿದೆ. ನಿನ್ನ ದೇವರಾದ ಯೆಹೋವನು ನಿನ್ನೊಂದಿಗಿರುವನು” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 “ನಿನ್ನ ದಾಸಿಯು, ‘ಅರಸನಾದ ನನ್ನ ಒಡೆಯನ ಮಾತು ಆದರಣೆಯಾಗಿರಲಿ. ಏಕೆಂದರೆ ಒಳ್ಳೆಯದನ್ನೂ, ಕೆಟ್ಟದ್ದನ್ನೂ ಕೇಳುವುದಕ್ಕೆ ಅರಸನಾದ ನನ್ನ ಒಡೆಯನು ದೇವದೂತನ ಹಾಗೆ ಇದ್ದಾನೆ ಮತ್ತು ನಿನ್ನ ದೇವರಾದ ಯೆಹೋವ ದೇವರು ನಿನ್ನ ಸಂಗಡ ಇರಲಿ,’ ಎಂದಳು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 14:17
13 ತಿಳಿವುಗಳ ಹೋಲಿಕೆ  

ಅವನು ಹಾಗೆ ಮಾಡದೆ ನನ್ನ ಒಡೆಯರಾದ ಅರಸರ ಬಳಿಗೆ ಬಂದು ನನ್ನ ವಿಷಯದಲ್ಲಿ ಚಾಡಿಹೇಳಿದ. ಅರಸರು ದೇವದೂತನ ಹಾಗಿರುತ್ತೀರಿ. ತಮಗೆ ಸರಿಕಂಡದ್ದನ್ನು ಮಾಡಿ.


ಆಗ ಆಕೀಷನು ದಾವೀದನಿಗೆ, “ನೀನು ಒಳ್ಳೆಯವನೆಂದು ನನಗೆ ಗೊತ್ತಿದೆ; ನನ್ನ ದೃಷ್ಟಿಯಲ್ಲಿ ನೀನು ದೇವದೂತನಂತಿರುವೆ; ಆದರೆ ಫಿಲಿಷ್ಟಿಯದ ರಾಜರುಗಳು, ‘ಇವನು ನಮ್ಮ ಜೊತೆಯಲ್ಲಿ ಯುದ್ಧಕ್ಕೆ ಹೊರಡಬಾರದು’ ಎಂದು ಹೇಳುತ್ತಾರೆ;


ಅಬ್ಷಾಲೋಮನ ವಿಷಯವನ್ನು ರೂಪಾಂತರ ಪಡಿಸುವುದಕ್ಕಾಗಿ ನಿಮ್ಮ ಸೇವಕನಾದ ಯೋವಾಬನೇ ಇದನ್ನು ಮಾಡಿದನು. ನನ್ನ ಒಡೆಯರು ದೇವದೂತನಂಥ ಜ್ಞಾನಿ; ಅವರು ಭೂಲೋಕದಲ್ಲಿ ನಡೆಯುವುದನ್ನೆಲ್ಲಾ ತಿಳಿದುಕೊಳ್ಳುತ್ತಾರೆ!” ಎಂದು ಉತ್ತರಕೊಟ್ಟಳು.


ಆದುದರಿಂದ ಅದನ್ನು ಆಳುವುದಕ್ಕೂ ನ್ಯಾಯಾನ್ಯಾಯಗಳನ್ನು ಕಂಡುಹಿಡಿಯುವುದಕ್ಕೂ ನನಗೆ ವಿವೇಕವನ್ನು ದಯಪಾಲಿಸಿರಿ. ಈ ಮಹಾಜನಾಂಗವನ್ನು ಆಳಲು ಯಾರೂ ಸಮರ್ಥರಲ್ಲ,” ಎಂದು ಬೇಡಿಕೊಂಡನು.


ಗಟ್ಟಿಯಾದ ಆಹಾರ ಬೆಳೆದವರಿಗೆ; ಸ್ವಂತ ಅನುಭವದಿಂದ ಒಳ್ಳೆಯದಾವುದು ಕೆಟ್ಟದ್ದಾವುದು ಎಂದು ಅರಿತುಕೊಳ್ಳಬಲ್ಲವರಿಗೆ.


ನೆರೆಯವನನ್ನು ಅಳತೆಮೀರಿ ಹೊಗಳುವವನು ಅವನ ಕಾಲಿಗೆ ಬಲೆಯನ್ನು ಒಡ್ಡುವನು.


ಬೆಳ್ಳಿಬಂಗಾರಗಳಿಗೆ ಪುಟಕುಲುಮೆಗಳಿಂದ ಶೋಧನೆ; ಮನುಷ್ಯನಿಗೆ ತನ್ನ ಸ್ತುತಿಕೀರ್ತಿಯಿಂದ ಪರಿಶೋಧನೆ.


ರುಚಿ ವಿಷಯದಲ್ಲಿ ನಾಲಿಗೆ ತಪ್ಪುಮಾಡುತ್ತದೆಯೇ? ಸತ್ಯಾಸತ್ಯಗಳ ವಿವೇಚನೆ ನನಗಿಲ್ಲವೇ?’


ಇಸ್ರಯೇಲರೆಲ್ಲರೂ ಅರಸನ ಈ ತೀರ್ಪನ್ನು ಕೇಳಿದರು. ನ್ಯಾಯನಿರ್ಣಯಿಸುವುದಕ್ಕೆ ಈತನಲ್ಲಿ ದೇವದತ್ತ ಜ್ಞಾನವಿದೆ ಎಂದು ತಿಳಿದು ಅವನ ಬಗ್ಗೆ ಅಪಾರ ಗೌರವ ಉಳ್ಳವರಾದರು.


ಆಗ ಅರಸನು ಆ ಸ್ತ್ರೀಗೆ, “ನಾನು ನಿನ್ನನ್ನು ಒಂದು ಮಾತು ಕೇಳಬೇಕೆಂದಿರುತ್ತೇನೆ; ನೀನು ಅದನ್ನು ಮರೆಮಾಡದೆ ತಿಳಿಸಬೇಕು,” ಎಂದು ಹೇಳಿದನು. ಆಕೆ, “ಅರಸರ ಅಪ್ಪಣೆಯಾಗಲಿ,” ಎಂದು ಉತ್ತರಕೊಟ್ಟಳು.


ಮೋಶೆಯ ಮಾತುಗಳನ್ನೆಲ್ಲ ಕೇಳಿದಂತೆ ನಿಮ್ಮ ಮಾತುಗಳನ್ನೂ ಕೇಳುತ್ತೇವೆ. ದೇವರಾದ ಸರ್ವೇಶ್ವರ ಮೋಶೆಯ ಸಂಗಡ ಇದ್ದ ಹಾಗೆ ನಿಮ್ಮ ಸಂಗಡವೂ ಇರಲಿ.


ನನ್ನ ತಂದೆಯ ಮನೆಯವರೆಲ್ಲರೂ ಅರಸರಾದ ನನ್ನ ಒಡೆಯರ ದೃಷ್ಟಿಯಲ್ಲಿ ಮರಣಕ್ಕೆ ಪಾತ್ರರಾಗಿದ್ದರು. ಆದರೂ ತಮ್ಮ ಸೇವಕನಾದ ನನ್ನನ್ನು ಭೋಜನಕ್ಕೆ ತಮ್ಮ ಪಂಕ್ತಿಯಲ್ಲಿ ಕುಳ್ಳಿರಿಸಿಕೊಂಡಿರಿ. ಅರಸರಿಗೆ ಹೆಚ್ಚಾಗಿ ಮೊರೆ ಇಡುವುದಕ್ಕೆ ನಾನು ಯೋಗ್ಯನಲ್ಲ,” ಎಂದು ಉತ್ತರಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು