2 ಸಮುಯೇಲ 14:19 - ಕನ್ನಡ ಸತ್ಯವೇದವು C.L. Bible (BSI)19 ಅರಸನು, “ಈ ಕಾರ್ಯದಲ್ಲಿ ಯೋವಾಬನ ಕೈಯಿರುತ್ತದೆ ಅಲ್ಲವೇ?’ ಎಂದು ಕೇಳಿದನು. ಅದಕ್ಕೆ ಆ ಸ್ತ್ರೀ, “ಅರಸರ ಜೀವದಾಣೆ, ಅರಸರು ಒಂದು ಮಾತು ಹೇಳಿದರೆ ನಾವು ತಪ್ಪಿಸಿಕೊಂಡು ಎಡಕ್ಕಾಗಲಿ ಬಲಕ್ಕಾಗಲಿ ಜಾರಿಕೊಳ್ಳುವುದಕ್ಕೆ ಆಗುವುದಿಲ್ಲ; ನಿಮ್ಮ ದಾಸಿಯಾದ ನನ್ನನ್ನು ಪ್ರೇರಿಸಿ ಈ ಎಲ್ಲಾ ಮಾತುಗಳನ್ನು ನನಗೆ ಕಲಿಸಿಕೊಟ್ಟವರು ನಿಮ್ಮ ಸೇವಕನಾದ ಯೋವಾಬನೇ ಹೌದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಅರಸನು, “ಈ ಕಾರ್ಯದಲ್ಲಿ ಯೋವಾಬನ ಕೈವಾಡ ಇದೆಯೇ?” ಎಂದು ಕೇಳಿದನು. ಅದಕ್ಕೆ ಆ ಸ್ತ್ರೀಯು, “ಅರಸನ ಜೀವದಾಣೆ, ಅರಸನು ಒಂದು ಮಾತು ಹೇಳಿದರೆ ನಾವು ತಪ್ಪಿಸಿಕೊಂಡು ಎಡಕ್ಕಾಗಲಿ, ಬಲಕ್ಕಾಗಲಿ ಜಾರಿಕೊಳ್ಳುವುದಕ್ಕೆ ಆಗುವುದಿಲ್ಲ. ನಿನ್ನ ದಾಸಿಯಾದ ನನ್ನನ್ನು ಪ್ರೇರೇಪಿಸಿ, ಈ ಎಲ್ಲಾ ಮಾತುಗಳನ್ನು ನನಗೆ ಕಲಿಸಿ ಕೊಟ್ಟವನು ನಿನ್ನ ಸೇವಕನಾದ ಯೋವಾಬನೇ ಹೌದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಅರಸನು - ಈ ಕಾರ್ಯದಲ್ಲಿ ಯೋವಾಬನ ಕೈಯಿರುತ್ತದಲ್ಲವೋ ಎಂದು ಕೇಳಿದನು. ಅದಕ್ಕೆ ಸ್ತ್ರೀಯು - ಅರಸನ ಜೀವದಾಣೆ, ಅರಸನು ಒಂದು ಮಾತು ಹೇಳಿದರೆ ನಾವು ತಪ್ಪಿಸಿಕೊಂಡು ಎಡಕ್ಕಾಗಲಿ ಬಲಕ್ಕಾಗಲಿ ಜಾರಿಕೊಳ್ಳುವದಕ್ಕೆ ಆಗುವದಿಲ್ಲ; ನಿನ್ನ ದಾಸಿಯಾದ ನನ್ನನ್ನು ಪ್ರೇರಿಸಿ ಈ ಎಲ್ಲಾ ಮಾತುಗಳನ್ನು ನನಗೆ ಕಲಿಸಿಕೊಟ್ಟವನು ನಿನ್ನ ಸೇವಕನಾದ ಯೋವಾಬನೇ ಹೌದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ರಾಜನು, “ಈ ವಿಚಾರಗಳನ್ನೆಲ್ಲ ಹೇಳಲು ಯೋವಾಬನು ನಿನಗೆ ತಿಳಿಸಿದನಲ್ಲವೇ?” ಎಂದನು. ಆ ಸ್ತ್ರೀಯು, “ರಾಜನಾದ ನನ್ನ ಒಡಯನೇ, ನಿಮ್ಮ ಆಣೆಯಾಗಿಯೂ, ನೀವು ಹೇಳಿದ್ದು ಸರಿ! ನಿಮ್ಮ ಸೇವಕನಾದ ಯೋವಾಬನು ಈ ವಿಷಯಗಳನ್ನು ಹೇಳಲು ನನಗೆ ತಿಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಅದಕ್ಕೆ ಅರಸನು, “ಇದೆಲ್ಲಾದರಲ್ಲಿ ಯೋವಾಬನ ಕೈ ನಿನ್ನ ಸಂಗಡ ಉಂಟಲ್ಲವೋ?” ಎಂದು ಕೇಳಿದನು. ಆ ಸ್ತ್ರೀಯು ಉತ್ತರವಾಗಿ, “ನಿನ್ನ ಜೀವದಾಣೆ, ಅರಸನಾದ ನನ್ನ ಒಡೆಯನೇ, ನೀನು ಒಂದು ಮಾತು ಹೇಳಿದರೆ, ನಾವು ಅದನ್ನು ಬಿಟ್ಟು ಎಡಕ್ಕಾದರೂ, ಬಲಕ್ಕಾದರೂ ಜಾರಿಕೊಳ್ಳುವುದಕ್ಕೆ ಆಗುವುದಿಲ್ಲ; ಏಕೆಂದರೆ ನಿನ್ನ ಸೇವಕನಾದ ಯೋವಾಬನು ನನಗೆ ಆಜ್ಞಾಪಿಸಿ, ಈ ಎಲ್ಲಾ ಮಾತುಗಳನ್ನು ನಿನ್ನ ಸೇವಕಳಿಗೆ ಹೇಳಿಕೊಟ್ಟನು. ಅಧ್ಯಾಯವನ್ನು ನೋಡಿ |
ಅದಕ್ಕೆ ಊರೀಯನು, “ಒಡಂಬಡಿಕೆಯ ಮಂಜೂಷ, ಇಸ್ರಯೇಲರು ಹಾಗು ಯೆಹೂದ್ಯರು ಗುಡಾರಗಳಲ್ಲೇ ವಾಸವಾಗಿದ್ದಾರೆ. ನನ್ನ ಒಡೆಯನಾದ ಯೋವಾಬನೂ ಅವನ ಸೇವಕರೂ ಬಯಲಿನಲ್ಲೇ ಪಾಳೆಯಮಾಡಿಕೊಂಡಿದ್ದಾರೆ. ಹೀಗಿರುವಲ್ಲಿ, ನಾನು ನನ್ನ ಮನೆಗೆ ಹೋಗಿ ಉಂಡು, ಕುಡಿದು, ಹೆಂಡತಿಯೊಡನೆ ಮಲಗಿಕೊಳ್ಳುವುದು ಹೇಗೆ? ನಿಮ್ಮಾಣೆ, ನಿಮ್ಮ ಜೀವದ ಆಣೆ, ನಾನು ಇಂಥದನ್ನು ಎಂದಿಗೂ ಮಾಡಲಾರೆ,” ಎಂದು ಉತ್ತರಕೊಟ್ಟನು.