Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 14:2 - ಕನ್ನಡ ಸತ್ಯವೇದವು C.L. Bible (BSI)

2 ಅವನು ತೆಕೋವದಿಂದ ಒಬ್ಬ ಬುದ್ಧಿವಂತೆಯಾದ ಸ್ತ್ರೀಯನ್ನು ಕರೆಕಳುಹಿಸಿ ಆಕೆಗೆ, “ನೀನು ಪ್ರಿಯರನ್ನು ಕಳೆದುಕೊಂಡು ಬಹುದಿವಸಗಳಿಂದ ಶೋಕಪಡುತ್ತಿರುವ ಸ್ತ್ರೀಯೋ ಎಂಬಂತೆ ನಟಿಸಿ ಶೋಕವಸ್ತ್ರಗಳನ್ನು ಧರಿಸಿಕೋ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ತೆಕೋವ ಪಟ್ಟಣದಿಂದ ಒಬ್ಬ ಬುದ್ಧಿವಂತೆಯಾದ ಸ್ತ್ರೀಯನ್ನು ಕರೆದುಕೊಂಡು ಬರಲು ತಿಳಿಸಿದನು. ಅವನು ಆಕೆಗೆ, “ನೀನು ಪ್ರಿಯರನ್ನು ಕಳೆದುಕೊಂಡು ಬಹು ದಿನಗಳಿಂದ ಶೋಕಪಡುತ್ತಿರುವ ಸ್ತ್ರೀಯೋ ಎಂಬಂತೆ ಶೋಕವಸ್ತ್ರಗಳನ್ನು ಧರಿಸಿಕೊಂಡು ಎಣ್ಣೆಹಚ್ಚಿಕೊಳ್ಳದೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ತೆಕೋವದಿಂದ ಒಬ್ಬ ಬುದ್ದಿವಂತೆಯಾದ ಸ್ತ್ರೀಯನ್ನು ಕರೇಕಳುಹಿಸಿ ಆಕೆಗೆ - ನೀನು ಪ್ರಿಯರನ್ನು ಕಳಕೊಂಡು ಬಹುದಿವಸಗಳಿಂದ ಶೋಕಪಡುತ್ತಿರುವ ಸ್ತ್ರೀಯೋ ಎಂಬಂತೆ ಶೋಕವಸ್ತ್ರಗಳನ್ನು ಧರಿಸಿಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆದ್ದರಿಂದ ಯೋವಾಬನು ಒಬ್ಬ ಬುದ್ಧಿವಂತ ಸ್ತ್ರೀಯನ್ನು ತೆಕೋವದಿಂದ ಕರೆತರಲು ಸಂದೇಶಕರನ್ನು ಅಲ್ಲಿಗೆ ಕಳುಹಿಸಿದನು. ಈ ಬುದ್ಧಿವಂತಳಾದ ಸ್ತ್ರೀಗೆ ಯೋವಾಬನು, “ದಯವಿಟ್ಟು ನಿನ್ನ ಚರ್ಮಕ್ಕಾಗಲಿ ತಲೆಕೂದಲಿಗಾಗಲಿ ಎಣ್ಣೆಯನ್ನು ಹಚ್ಚಿಕೊಳ್ಳಬೇಡ; ಚೆನ್ನಾಗಿರುವ ವಸ್ತ್ರಗಳನ್ನು ತೊಟ್ಟುಕೊಳ್ಳದೆ ಶೋಕಸೂಚಕ ವಸ್ತ್ರಗಳನ್ನು ಧರಿಸಿಕೋ. ಸತ್ತವನಿಗಾಗಿ ಅನೇಕ ದಿನಗಳಿಂದ ರೋಧಿಸುತ್ತಿರುವ ಸ್ತ್ರೀಯಂತೆ ನಟಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆದುದರಿಂದ ಯೋವಾಬನು ತೆಕೋವಗೆ ಮನುಷ್ಯರನ್ನು ಕಳುಹಿಸಿ, ಅಲ್ಲಿಂದ ಒಬ್ಬ ಜ್ಞಾನವುಳ್ಳ ಸ್ತ್ರೀಯನ್ನು ಕರಿಸಿ ಅವಳಿಗೆ, “ನೀನು ಗೋಳಾಡುವವಳ ಹಾಗೆ ನಟಿಸಿ, ದುಃಖ ವಸ್ತ್ರಗಳನ್ನು ಧರಿಸಿಕೋ; ತಲೆಗೆ ಎಣ್ಣೆಯನ್ನು ಹಚ್ಚಿಕೊಳ್ಳದೆ, ಸತ್ತವನಿಗೋಸ್ಕರ ಅನೇಕ ದಿವಸಗಳಿಂದ ದುಃಖಿಸುವವಳ ಹಾಗಿದ್ದು,

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 14:2
17 ತಿಳಿವುಗಳ ಹೋಲಿಕೆ  

ಜುದೇಯದಲ್ಲಿ ಮಹಾ ಭೂಕಂಪ ಆಗುವುದಕ್ಕೆ ಎರಡು ವರ್ಷಗಳ ಮುಂಚೆ, ತೆಕೋವದ ಕುರುಬರಲ್ಲೊಬ್ಬನಾದ ಆಮೋಸನಿಗೆ ಇಸ್ರಯೇಲಿನ ವಿಷಯವಾಗಿ ದೇವರಿಂದ ಬಂದ ಪ್ರಕಟನೆಗಳು ಇವು. ಆಗ ಜುದೇಯ ನಾಡನ್ನು ಉಜ್ಜೀಯನೆಂಬ ಅರಸನು ಆಳುತ್ತಿದ್ದ ಕಾಲ. ಅಂತೆಯೇ, ಯೋವಾಷನ ಮಗನಾದ ಯಾರೊಬ್ಬಾಮನು ಇಸ್ರಯೇಲನ್ನು ಆಳುತ್ತಿದ್ದ ಕಾಲ.


ನೀನು ಸ್ನಾನಮಾಡಿಕೊಂಡು ಸುಗಂಧ ತೈಲವನ್ನು ಹಚ್ಚಿ, ಸೊಗಸಾದ ಉಡುಪನ್ನು ತೊಟ್ಟುಕೊ. ಆಮೇಲೆ ಕಣಕ್ಕೆ ಹೋಗು. ಅವನು ಅನ್ನಪಾನಮಾಡಿ ಮುಗಿಸುವವರೆಗೂ ಅವನಿಗೆ ಕಾಣಿಸಿಕೊಳ್ಳಬೇಡ.


ಬೆನ್ಯಮೀನ್ ಕುಲದವರೇ, ಜೆರುಸಲೇಮಿನಿಂದ ವಲಸೆಹೋಗಿರಿ. ತೆಕೋವದಲ್ಲಿ ಕೊಂಬನ್ನೂದಿರಿ. ಬೇತ್‍ಹಕ್ಕೆರೆಮಿನಲ್ಲಿ ಧ್ವಜವನ್ನೆತ್ತಿರಿ. ಏಕೆಂದರೆ ಅತಿ ವಿನಾಶಕರವಾದ ವಿಪತ್ತು ಉತ್ತರದಿಂದ ತಲೆದೋರುತ್ತಿದೆ.


ತೆಕೋವದ ಶ್ರೀಮಂತರಾದರೋ ತಮ್ಮ ಒಡೆಯರ ಸೇವೆಗಾಗಿ ಹೆಗಲನ್ನು ಕೊಡಲಿಲ್ಲ.


ಅವರು ಮರುದಿನ ಬೆಳಿಗ್ಗೆ ಎದ್ದು ತೆಕೋವ ಮರುಭೂಮಿಗೆ ಹೊರಟರು. ಹೊರಡುವಾಗ ಯೆಹೋಷಾಫಾಟನು ಎದ್ದು ನಿಂತು, “ಯೆಹೂದ್ಯರೇ, ಜೆರುಸಲೇಮಿನವರೇ, ನನ್ನ ಮಾತನ್ನು ಕೇಳಿರಿ; ಸರ್ವೇಶ್ವರನಲ್ಲಿ ಭರವಸೆ ಇಡಿ, ಆಗ ಸುರಕ್ಷಿತರಾಗುವಿರಿ; ಸರ್ವೇಶ್ವರನ ಪ್ರವಾದಿಗಳನ್ನು ನಂಬಿರಿ, ಆಗ ಸಾರ್ಥಕರಾಗುವಿರಿ,” ಎಂದು ಹೇಳಿದನು.


ಆಗ ದಾವೀದನು ನೆಲದಿಂದೆದ್ದು, ಸ್ನಾನ ಮಾಡಿ ತೈಲ ಹಚ್ಚಿಕೊಂಡು, ತನ್ನ ಬಟ್ಟೆಗಳನ್ನು ಬದಲಿಸಿ, ಸರ್ವೇಶ್ವರನ ಮಂದಿರಕ್ಕೆ ಹೋಗಿ ಆರಾಧನೆ ಮಾಡಿದನು. ಅನಂತರ ಮನೆಗೆ ಬಂದು ಆಹಾರ ತರಿಸಿ ಊಟಮಾಡಿದನು.


ಆದರೆ ನೀನು ಉಪವಾಸ ಕೈಗೊಂಡಾಗ ಮುಖ ತೊಳೆದುಕೊ, ತಲೆಬಾಚಿಕೊ.


ನಿನ್ನ ಬಟ್ಟೆಗಳು ಬೆಳ್ಳಗಿರಲಿ, ತಲೆಗೆ ಎಣ್ಣೆಯ ಕೊರತೆ ಇಲ್ಲದಿರಲಿ.


ಒದಗಿಸುವೆ ಬೇಸಾಯದ ಆಹಾರವನು I ಹೃದಯವನು ಮುದಗೊಳಿಸುವ ದ್ರಾಕ್ಷಾರಸವನು I ಮುಖಕೆ ಮೆರಗನ್ನೀಯುವ ತಿಳಿತೈಲಗಳನು I ದೇಹವನು ಗಟ್ಟಿಮುಟ್ಟಾಗಿಸುವ ರೊಟ್ಟಿಯನು II


ಆ ದೊಡ್ಡ ಮೂಲೆಬುರುಜಿನ ಎದುರಿನಿಂದ ಓಫೇಲ್ ಗೋಡೆಯವರೆಗಿರುವ ಗೋಡೆಯ ಇನ್ನೊಂದು ಭಾಗವನ್ನು ತೆಕೋವದವರು ದುರಸ್ತಿಮಾಡಿದರು.


ಊರೀಯನ ಮರಣವಾರ್ತೆಯನ್ನು ಅವನ ಹೆಂಡತಿ ಕೇಳಿ ಗಂಡನಿಗಾಗಿ ಅತ್ತು ಗೋಳಾಡಿದಳು.


ಆಗ ಆ ಊರಿನ ಬುದ್ಧಿವಂತೆಯಾದ ಒಬ್ಬ ಮಹಿಳೆ ಅವರಿಗೆ, “ಕೇಳಿ, ದಯವಿಟ್ಟು ಕೇಳಿ; ಯೋವಾಬನು ಮಾತಾಡುವುದಕ್ಕಾಗಿ ನನ್ನ ಬಳಿಗೆ ಬರಬೇಕೆಂದು ಹೇಳಿ,” ಎಂದು ಕೂಗಿದಳು. ಯೋವಾಬನು ಬಂದನು. ಆ ಸ್ತ್ರೀ,


ಆಗ ಯಾರೊಬ್ಬಾಮನು ತನ್ನ ಹೆಂಡತಿಗೆ, “ನೀನು ಎದ್ದು ನನ್ನ ಹೆಂಡತಿಯೆಂದು ಯಾರಿಗೂ ಗೊತ್ತಾಗದಂತೆ ವೇಷಮಾರ್ಪಡಿಸಿಕೊಂಡು ಶಿಲೋವಿಗೆ ಹೋಗು. ನಾನು ಈ ಜನರಿಗೆ ಅರಸನಾಗಬೇಕೆಂದು ನನಗೆ ಮುಂತಿಳಿಸಿದ ಪ್ರವಾದಿ ಅಹೀಯನು ಅಲ್ಲಿರುತ್ತಾನೆ.


ಆದರೆ ಸರ್ವೇಶ್ವರ ಅವನಿಗೆ, ಯಾರೊಬ್ಬಾಮನ ಹೆಂಡತಿ ಅಸ್ವಸ್ಥನಾದ ತನ್ನ ಮಗನ ವಿಷಯದಲ್ಲಿ ದೈವೋತ್ತರವನ್ನು ಕೇಳುವುದಕ್ಕೆ ತನ್ನನ್ನು ಅನ್ಯಳೆಂದು ತೋರ್ಪಡಿಸಿಕೊಂಡು ಬರುತ್ತಾಳೆ; ಆಕೆಗೆ ಇಂಥಿಂಥ ಉತ್ತರಕೊಡು, ಎಂದು ತಿಳಿಸಿದ್ದರು.


ಮನೆಗೆ ಬಂದ ಮೇಲೆ ತಾನು ಹಾಕಿಕೊಂಡಿದ್ದ ಮುಸುಕನ್ನು ತೆಗೆದಿಟ್ಟು ವಿಧವೆಯ ವಸ್ತ್ರಗಳನ್ನು ಮತ್ತೆ ಉಟ್ಟುಕೊಂಡಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು