2 ಸಮುಯೇಲ 14:20 - ಕನ್ನಡ ಸತ್ಯವೇದವು C.L. Bible (BSI)20 ಅಬ್ಷಾಲೋಮನ ವಿಷಯವನ್ನು ರೂಪಾಂತರ ಪಡಿಸುವುದಕ್ಕಾಗಿ ನಿಮ್ಮ ಸೇವಕನಾದ ಯೋವಾಬನೇ ಇದನ್ನು ಮಾಡಿದನು. ನನ್ನ ಒಡೆಯರು ದೇವದೂತನಂಥ ಜ್ಞಾನಿ; ಅವರು ಭೂಲೋಕದಲ್ಲಿ ನಡೆಯುವುದನ್ನೆಲ್ಲಾ ತಿಳಿದುಕೊಳ್ಳುತ್ತಾರೆ!” ಎಂದು ಉತ್ತರಕೊಟ್ಟಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಅಬ್ಷಾಲೋಮನು ನಡೆದಿರುವ ಘಟನೆಯಿಂದ ಅರಸನು ಕೋಪಗೊಳ್ಳದೆ ಇರುವಂತೆ ವಿಷಯವನ್ನು ಈ ರೀತಿ ಹೇಳುವಂತೆ ನಿನ್ನ ಸೇವಕನಾದ ಯೋವಾಬನೇ ಇದನ್ನು ಕಲಿಸಿದನು. ಆದರೆ ನನ್ನ ಒಡೆಯನು ದೇವದೂತನಂಥ ಜ್ಞಾನಿ. ಅವನು ಭೂಲೋಕದಲ್ಲಿ ನಡೆಯುವುದನ್ನೆಲ್ಲಾ ತಿಳಿದುಕೊಳ್ಳುವನು” ಎಂದು ಉತ್ತರಕೊಟ್ಟಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಅಬ್ಷಾಲೋಮನ ವಿಷಯವನ್ನು ರೂಪಾಂತರಪಡಿಸುವದಕ್ಕೋಸ್ಕರ ನಿನ್ನ ಸೇವಕನಾದ ಯೋವಾಬನೇ ಇದನ್ನು ಮಾಡಿದನು. ನನ್ನ ಒಡೆಯನು ದೇವದೂತನಂಥ ಜ್ಞಾನಿಯು; ಅವನು ಭೂಲೋಕದಲ್ಲಿ ನಡೆಯುವದನ್ನೆಲ್ಲಾ ತಿಳುಕೊಳ್ಳುವನು ಎಂದು ಉತ್ತರಕೊಟ್ಟಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಈ ವಿಷಯಗಳ ಬಗ್ಗೆ ನಿಮ್ಮ ದೃಷ್ಟಿಯು ಬದಲಾಗಲೆಂಬುದಕ್ಕಾಗಿ ಯೋವಾಬನು ಹೀಗೆ ಮಾಡಿದನು. ನನ್ನ ಒಡೆಯನೇ, ನೀನು ದೇವದೂತನಂತೆ ಬುದ್ಧಿವಂತನಾಗಿರುವೆ. ಈ ಲೋಕದಲ್ಲಿ ನಡೆಯುತ್ತಿರುವುದೆಲ್ಲವನ್ನೂ ನೀನು ತಿಳಿದಿರುವೆ” ಎಂದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಈ ಮಾತನ್ನು ರೂಪಕವಾಗಿ ತಿರುಗಿಸುವುದಕ್ಕೆ ನಿನ್ನ ಸೇವಕನಾದ ಯೋವಾಬನು ಇದನ್ನು ಮಾಡಿದ್ದಾನೆ. ಆದರೆ ಭೂಮಿಯಲ್ಲಿ ನಡೆಯುವುದನ್ನೆಲ್ಲಾ ತಿಳಿದುಕೊಳ್ಳುವುದಕ್ಕೆ ದೇವದೂತನ ಜ್ಞಾನದ ಹಾಗೆಯೇ ನನ್ನ ಒಡೆಯನು ಜ್ಞಾನವುಳ್ಳವನಾಗಿದ್ದಾನೆ,” ಎಂದಳು. ಅಧ್ಯಾಯವನ್ನು ನೋಡಿ |