Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 14:21 - ಕನ್ನಡ ಸತ್ಯವೇದವು C.L. Bible (BSI)

21 ಅನಂತರ ಅರಸನು ಯೋವಾಬನಿಗೆ, “ನೀನು ಕೇಳಿಕೊಂಡದ್ದನ್ನು ಅನುಗ್ರಹಿಸಿದ್ದೇನೆ; ಹೋಗಿ ಆ ಯುವಕ ಅಬ್ಷಾಲೋಮನನ್ನು ಕರೆದುಕೊಂಡು ಬಾ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಅನಂತರ ಅರಸನು ಯೋವಾಬನಿಗೆ, “ನೀನು ಕೇಳಿಕೊಂಡದ್ದನ್ನು ಅನುಗ್ರಹಿಸಿದ್ದೇನೆ, ಹೋಗಿ ಯೌವನಸ್ಥನಾದ ಅಬ್ಷಾಲೋಮನನ್ನು ಕರೆದುಕೊಂಡು ಬಾ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಅನಂತರ ಅರಸನು ಯೋವಾಬನಿಗೆ - ನೀನು ಕೇಳಿಕೊಂಡದ್ದನ್ನು ಅನುಗ್ರಹಿಸಿದ್ದೇನೆ; ಹೋಗಿ ಯೌವನಸ್ಥನಾದ ಅಬ್ಷಾಲೋಮನನ್ನು ಕರಕೊಂಡು ಬಾ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ರಾಜನು ಯೋವಾಬನಿಗೆ, “ನೀನು ಕೇಳಿಕೊಂಡದ್ದನ್ನು ಅನುಗ್ರಹಿಸಿದ್ದೇನೆ. ಈಗ ಯುವಕನಾದ ಅಬ್ಷಾಲೋಮನನ್ನು ಹಿಂದಕ್ಕೆ ಕರೆದುಕೊಂಡು ಬಾ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಆದ್ದರಿಂದ ಅರಸನು ಯೋವಾಬನಿಗೆ, “ನಾನು ಈ ಕಾರ್ಯವನ್ನು ಮಾಡಿದೆನು. ನೀನು ಹೋಗಿ ಯೌವನಸ್ಥನಾದ ಅಬ್ಷಾಲೋಮನನ್ನು ತಿರುಗಿ ಕರೆದುಕೊಂಡು ಬಾ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 14:21
4 ತಿಳಿವುಗಳ ಹೋಲಿಕೆ  

ಆಗ ಆ ಸ್ತ್ರೀ, “ಸಮೀಪ ಬಂಧುವು ನನ್ನ ಎರಡನೆಯ ಮಗನನ್ನು ಕೊಂದು ನನ್ನ‍ನ್ನು ಪೂರ್ಣವಾಗಿ ಹಾಳುಮಾಡದಂತೆ ಅರಸರು ತಾವಾಗಿ ನೋಡಿಕೊಳ್ಳುವರೆಂಬುದಾಗಿ ನನ್ನ ದೇವರಾದ ಸರ್ವೇಶ್ವರನ ಮೇಲೆ ಆಣೆಯಿಟ್ಟು ಪ್ರಮಾಣ ಮಾಡಬೇಕು,” ಎಂದು ಬೇಡಿಕೊಂಡಳು. ಅದಕ್ಕೆ ದಾವೀದನು, “ಸರ್ವೇಶ್ವರನಾಣೆ, ನಿನ್ನ ಮಗನ ತಲೆಕೂದಲುಗಳಲ್ಲಿ ಒಂದನ್ನೂ ನೆಲಕ್ಕೆ ಬೀಳ್ಗೊಡುವುದಿಲ್ಲ,” ಎಂದು ಹೇಳಿದನು.


ಅರಸನಿಗೆ ಅತೀವ ದುಃಖವಾಯಿತು. ಆದರೂ ಅತಿಥಿಗಳೆಲ್ಲರ ಮುಂದೆ ತಾನು ಮಾಡಿದ ಪ್ರಮಾಣದ ನಿಮಿತ್ತ ಅವಳ ಕೋರಿಕೆಯನ್ನು ನಿರಾಕರಿಸಲಾಗಲಿಲ್ಲ.


ಇಸ್ರಯೇಲರ ರಕ್ಷಕನಾದ ಸರ್ವೇಶ್ವರನ ಆಣೆ, ಪಾಪಮಾಡಿದವರು ಯಾರೇ ಆಗಿರ಼ಲಿ, ಮಗನಾದ ಯೋನಾತಾನನಾಗಿದ್ದರೂ ಸರಿಯೇ, ಅವನು ಸಾಯಲೇಬೇಕು,” ಎಂದು ಹೇಳಿದನು. ಜನರು ಏನೂ ಮಾತಾಡದೆ ಮೌನವಾಗಿದ್ದರು.


ಆಗ ಯೋವಾಬನು ನೆಲಕ್ಕೆ ಬಿದ್ದು ನಮಸ್ಕರಿಸಿ ಅರಸನನ್ನು ಹರಸಿ, “ಅರಸರೇ, ನನ್ನ ಒಡೆಯರೇ, ನೀವು ನಿಮ್ಮ ಸೇವಕನಾದ ನನ್ನ ಬಿನ್ನಹವನ್ನು ಆಲಿಸಿದ್ದರಿಂದ ನಿಮ್ಮ ದೃಷ್ಟಿಯಲ್ಲಿ ನನಗೆ ದಯೆದೊರಕಿತೆಂದು ಈಗ ಗೊತ್ತಾಯಿಸು,” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು