Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 14:22 - ಕನ್ನಡ ಸತ್ಯವೇದವು C.L. Bible (BSI)

22 ಆಗ ಯೋವಾಬನು ನೆಲಕ್ಕೆ ಬಿದ್ದು ನಮಸ್ಕರಿಸಿ ಅರಸನನ್ನು ಹರಸಿ, “ಅರಸರೇ, ನನ್ನ ಒಡೆಯರೇ, ನೀವು ನಿಮ್ಮ ಸೇವಕನಾದ ನನ್ನ ಬಿನ್ನಹವನ್ನು ಆಲಿಸಿದ್ದರಿಂದ ನಿಮ್ಮ ದೃಷ್ಟಿಯಲ್ಲಿ ನನಗೆ ದಯೆದೊರಕಿತೆಂದು ಈಗ ಗೊತ್ತಾಯಿಸು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆಗ ಯೋವಾಬನು ನೆಲಕ್ಕೆ ಬಿದ್ದು ನಮಸ್ಕರಿಸಿ, ಅರಸನನ್ನು ಹರಸಿ, “ಅರಸನೇ ನನ್ನ ಒಡೆಯನೇ, ನೀನು ನಿನ್ನ ಸೇವಕನಾದ ನನ್ನ ಬಿನ್ನಹವನ್ನು ಲಾಲಿಸಿದ್ದರಿಂದ ನಿನ್ನ ದೃಷ್ಟಿಯಲ್ಲಿ ನನಗೆ ದಯೆ ದೊರಕಿತೆಂದು ಈಗ ಗೊತ್ತಾಯಿತು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಆಗ ಯೋವಾಬನು ನೆಲಕ್ಕೆ ಬಿದ್ದು ನಮಸ್ಕರಿಸಿ ಅರಸನನ್ನು ಹರಸಿ - ಅರಸನೇ, ನನ್ನ ಒಡೆಯನೇ, ನೀನು ನಿನ್ನ ಸೇವಕನಾದ ನನ್ನ ಬಿನ್ನಹವನ್ನು ಲಾಲಿಸಿದ್ದರಿಂದ ನಿನ್ನ ದೃಷ್ಟಿಯಲ್ಲಿ ನನಗೆ ದಯೆದೊರಕಿತೆಂದು ಈಗ ಗೊತ್ತಾಯಿತು ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಯೋವಾಬನು ಅರಸನಾದ ದಾವೀದನಿಗೆ ಸಾಷ್ಟಾಂಗನಮಸ್ಕಾರಮಾಡಿ, “ನಾನು ಕೇಳಿಕೊಂಡದ್ದನ್ನು ನೀನು ನೆರವೇರಿಸಿದ್ದರಿಂದ, ನೀನು ನನ್ನ ವಿಷಯದಲ್ಲಿ ಸಂತೋಷದಿಂದಿರುವೆ ಎಂಬುದು ಇಂದು ನನಗೆ ಗೊತ್ತಾಯಿತು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಆಗ ಯೋವಾಬನು ಮೋರೆ ಕೆಳಗಾಗಿ ನೆಲದ ಮೇಲೆ ಬಿದ್ದು ವಂದಿಸಿದನು. ಯೋವಾಬನು, “ಅರಸನು ತನ್ನ ಸೇವಕನ ಮಾತಿನ ಪ್ರಕಾರ ಮಾಡಿದ್ದರಿಂದ, ನನ್ನ ಒಡೆಯನಾದ ಅರಸನೇ ನಿನ್ನ ದೃಷ್ಟಿಯಲ್ಲಿ ನನಗೆ ದಯೆ ದೊರಕಿತೆಂಬುದು ಈ ಹೊತ್ತು ನಿನ್ನ ಸೇವಕನಿಗೆ ತಿಳಿಯಿತು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 14:22
13 ತಿಳಿವುಗಳ ಹೋಲಿಕೆ  

ಮಕ್ಕಳು ಆಕೆಯನ್ನು ಧನ್ಯಳೆಂದು ಹೊಗಳುವರು.


ಅವರನು ನಾನು ಬೆಚ್ಚಗಾಗಿಸದೆ ಹೋಗಿದ್ದರೆ ನನ್ನ ಕುರಿಉಣ್ಣೆಯಿಂದ, ಅವರು ನನ್ನನು ಹರಸದೇಹೋಗಿದ್ದರೆ ತಮ್ಮ ಅಂತರಾಳದಿಂದ,


ಕೇಳಿದ ಕಿವಿ ನನ್ನನು ಧನ್ಯನೆನ್ನುತ್ತಿತ್ತು ನೋಡಿದ ಕಣ್ಣು ನನ್ನನು ಗೌರವಿಸುತ್ತಿತ್ತು.


ಮತ್ತು ಸ್ವಂತ ಇಚ್ಛೆಯಿಂದ ಜೆರುಸಲೇಮಿನಲ್ಲಿ ವಾಸಿಸುವುದಕ್ಕೆ ಮನಸ್ಸು ಮಾಡಿದಂಥವರನ್ನು ಜನರು ಆಶೀರ್ವದಿಸಿದರು.


ಜನರೆಲ್ಲರು ನದಿ ದಾಟಿದರು. ಅರಸನು ದಾಟಿದ ಮೇಲೆ ಬರ್ಜಿಲ್ಲೈಯನ್ನು ಮುದ್ದಿಟ್ಟು ಆಶೀರ್ವದಿಸಿದನು. ಅನಂತರ ಬರ್ಜಿಲ್ಲೈಯು ತನ್ನ ಊರಿಗೆ ಮರಳಿದನು.


ಅದಕ್ಕೆ ದಾವೀದನು, “ನಿನಗೆ ನಾನು ಪ್ರೀತಿಪಾತ್ರನೆಂದು ನಿನ್ನ ತಂದೆಗೆ ಗೊತ್ತಿದೆ. ಆದುದರಿಂದ ಇದನ್ನು ಯೋನಾತಾನನಿಗೆ ತಿಳಿಸಿದರೆ ಅವನಿಗೆ ದುಃಖವಾಗುವುದೆಂದು ಮರೆಮಾಡುತ್ತಾರೆ. ನಿನ್ನ ಜೀವದಾಣೆ, ಸರ್ವೇಶ್ವರನ ಆಣೆ, ನನಗೂ ಮರಣಕ್ಕೂ ಒಂದು ಗೇಣು ಮಾತ್ರ ಅಂತರ,” ಎಂದು ಖಂಡಿತವಾಗಿ ಹೇಳಿದನು.


ರೂತಳು ನವೊಮಿಗೆ: “ನಾನು ಹೊಲಗಳಿಗೆ ಹೋಗಿ ತೆನೆಗಳನ್ನು ಆಯ್ದುಕೊಂಡು ಬರಲೇ? ಇದಕ್ಕೆ ಯಾರಾದರು ನನಗೆ ನೆರವಾಗಬಹುದು,” ಎಂದು ಕೇಳಿದಳು. ನವೊಮಿ, “ಹೋಗಿ ಬಾ, ಮಗಳೇ,” ಎಂದು ಅಪ್ಪಣೆಕೊಟ್ಟಳು.


ಆದರೆ ನೋಹನ ವಿಷಯದಲ್ಲಿ ಸರ್ವೇಶ್ವರ ಸ್ವಾಮಿಗೆ ಮೆಚ್ಚುಗೆಯಿತ್ತು.


ಬಳಿಕ ಜೋಸೆಫನು ತನ್ನ ತಂದೆ ಯಕೋಬನನ್ನು ಕರೆದುಕೊಂಡು ಬಂದು ಫರೋಹನ ಸನ್ನಿಧಿಯಲ್ಲಿ ನಿಲ್ಲಿಸಿದನು. ಯಕೋಬನು ಫರೋಹನನ್ನು ಆಶೀರ್ವದಿಸಿದನು.


ಅನಂತರ ಅರಸನು ಯೋವಾಬನಿಗೆ, “ನೀನು ಕೇಳಿಕೊಂಡದ್ದನ್ನು ಅನುಗ್ರಹಿಸಿದ್ದೇನೆ; ಹೋಗಿ ಆ ಯುವಕ ಅಬ್ಷಾಲೋಮನನ್ನು ಕರೆದುಕೊಂಡು ಬಾ,” ಎಂದನು.


ಬಳಿಕ ಎದ್ದು ಗೆಷೂರಿಗೆ ಹೋಗಿ ಅಬ್ಷಾಲೋಮನನ್ನು ಜೆರೂಸ‍ಲೇಮಿಗೆ ಕರೆದುಕೊಂಡು ಬಂದನು.


ತೆಕೋವದ ಆ ಸ್ತ್ರೀ ಅರಸನ ಹತ್ತಿರಕ್ಕೆ ಹೋಗಿ ಅವನ ಮುಂದೆ ನೆಲಕ್ಕೆಬಿದ್ದು, “ಅರಸರೇ, ರಕ್ಷಿಸಿರಿ,” ಎಂದು ಕೂಗಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು