Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 14:32 - ಕನ್ನಡ ಸತ್ಯವೇದವು C.L. Bible (BSI)

32 ಅಬ್ಷಾಲೋಮನು, “ನಾನು ಗೆಷೂರಿನಿಂದ ಇಲ್ಲಿಗೆ ಬಂದದ್ದೇಕೆ? ಅಲ್ಲೇ ಇದ್ದಿದ್ದರೆ ಒಳ್ಳೇದಾಗುತ್ತಿತ್ತಲ್ಲವೇ?’ ಎಂದು ನಿನ್ನ ಮುಖಾಂತರ ಅರಸನಿಗೆ ತಿಳಿಸುವುದಕ್ಕಾಗಿ ನಿನ್ನನ್ನು ಕರೇಕಳುಹಿಸಿದೆ; ನಾನು ಹೇಗೂ ಅರಸನ ಮುಖವನ್ನು ನೋಡಬೇಕು; ನಾನು ಅಪರಾಧಿ ಆಗಿದ್ದರೆ ಅವರು ನನ್ನನ್ನು ಕೊಲ್ಲಿಸಲಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಅದಕ್ಕೆ ಅಬ್ಷಾಲೋಮನು ಅವನಿಗೆ, “ನಾನು ಗೆಷೂರಿನಿಂದ ಇಲ್ಲಿಗೆ ಬಂದದ್ದೇಕೆ, ಅಲ್ಲೇ ಇದ್ದರೆ ಒಳ್ಳೆಯದಾಗುತ್ತಿತ್ತಲ್ಲವೋ ಎಂದು ನಿನ್ನ ಮುಖಾಂತರ ಅರಸನಿಗೆ ತಿಳಿಸುವುದಕ್ಕಾಗಿ ನಿನ್ನನ್ನು ಕರೇಕಳುಹಿಸಿದೆನು. ನಾನು ಹೇಗೂ ಅರಸನ ದರ್ಶನ ಮಾಡಬೇಕು. ನಾನು ಅಪರಾಧಿಯಾಗಿದ್ದರೆ ನನ್ನನ್ನು ಕೊಲ್ಲಿಸಲಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಅಬ್ಷಾಲೋಮನು ಅವನಿಗೆ - ನಾನು ಗೆಷೂರಿನಿಂದ ಇಲ್ಲಿಗೆ ಬಂದದ್ದೇಕೆ? ಅಲ್ಲೇ ಇದ್ದರೆ ಒಳ್ಳೇದಾಗುತ್ತಿತ್ತಲ್ಲವೋ ಎಂದು ನಿನ್ನ ಮುಖಾಂತರ ಅರಸನಿಗೆ ತಿಳಿಸುವದಕ್ಕಾಗಿ ನಿನ್ನನ್ನು ಕರೇಕಳುಹಿಸಿದೆನು; ನಾನು ಹೇಗೂ ಅರಸನ ಮೋರೆಯನ್ನು ನೋಡಬೇಕು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಅಬ್ಷಾಲೋಮನು ಯೋವಾಬನಿಗೆ, “ನಾನು ನಿನಗೆ ಸಂದೇಶವನ್ನು ಕಳುಹಿಸಿ ಇಲ್ಲಿಗೆ ಬರಲು ಹೇಳಿ ಕಳುಹಿಸಿದ್ದೆನು. ರಾಜನ ಬಳಿಗೆ ನಿನ್ನನ್ನು ಕಳುಹಿಸಲು ನಾನು ಅಪೇಕ್ಷಿಸಿದೆನು. ಗೆಷೂರಿನಿಂದ ನನ್ನನ್ನು ಮನೆಗೆ ಕರೆಸಲು ಅವನು ಇಚ್ಛಿಸಿದ್ದು ಏಕೆ ಎಂಬುದನ್ನು ನೀನು ಕೇಳಬೇಕೆಂದು ನಾನು ಅಪೇಕ್ಷಿಸಿದೆನು. ನಾನು ಅವನನ್ನು ನೋಡಲಾಗದಿದ್ದರೆ ಗೆಷೂರಿನಲ್ಲಿ ವಾಸಿಸುವುದೇ ನನಗೆ ಚೆನ್ನಾಗಿರುತ್ತಿತ್ತು. ಈಗ ರಾಜನನ್ನು ನೋಡಲು ನನಗೆ ಅವಕಾಶವನ್ನು ಕೊಡು. ನಾನು ಪಾಪವನ್ನು ಮಾಡಿದ್ದರೆ ಅವನು ನನ್ನನ್ನು ಕೊಂದುಬಿಡಲಿ!” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಅಬ್ಷಾಲೋಮನು ಯೋವಾಬನಿಗೆ, “ನಾನು ಗೆಷೂರಿನಿಂದ ಏಕೆ ಬಂದೆನೆಂದು ಅರಸನಿಗೆ ಹೇಳುವುದಕ್ಕೆ ನಿನ್ನನ್ನು ಕಳುಹಿಸುವ ಹಾಗೆ ‘ಇಲ್ಲಿಗೆ ಬಾ’ ಎಂದು ನಿನ್ನನ್ನು ಕರೆಕಳುಹಿಸಿದೆನು. ನಾನು ಇನ್ನೂ ಅಲ್ಲಿಯೇ ಇದ್ದಿದ್ದರೆ ನನಗೆ ಉತ್ತಮವಾಗಿತ್ತು. ಈಗ ನಾನು ಅರಸನ ಮುಖವನ್ನು ನೋಡಬೇಕು. ನನ್ನಲ್ಲಿ ಅಕ್ರಮ ಇದ್ದರೆ, ಅವನು ನನ್ನನ್ನು ಕೊಂದು ಹಾಕಲಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 14:32
15 ತಿಳಿವುಗಳ ಹೋಲಿಕೆ  

ಪಾಪಗಳನ್ನು ಮುಚ್ಚಿಟ್ಟುಕೊಳ್ಳುವವನಿಗೆ ಮುಕ್ತಿ ದೊರಕದು; ಅವುಗಳನ್ನು ಒಪ್ಪಿಕೊಂಡು ಬಿಟ್ಟರೆ ಕರುಣೆ ದೊರಕುವುದು.


ಸೇವಕನ ಮೇಲೆ ದಯವಿರಲಿ. ನೀನು ಸರ್ವೇಶ್ವರನ ಸನ್ನಿಧಿಯಲ್ಲಿ ನನ್ನೊಡನೆ ಒಡಂಬಡಿಕೆ ಮಾಡಿಕೊಂಡಿರುವೆಯಲ್ಲವೆ? ನಾನು ಅಪರಾಧಿಯಾಗಿದ್ದರೆ, ನನ್ನನ್ನು ನಿನ್ನ ತಂದೆಗೆ ಒಪ್ಪಿಸಬೇಕಾಗಿಲ್ಲ, ನೀನೆ ಕೊಂದುಹಾಕು,” ಎಂದು ಹೇಳಿದನು.


ನಾವು ಈಜಿಪ್ಟಿನಲ್ಲಿರುವಾಗಲೇ, ‘ನಮ್ಮ ಗೊಡವೆಗೆ ಬರಬೇಡಿ, ನಾವು ಈಜಿಪ್ಟಿನವರಿಗೆ ಗುಲಾಮರಾಗಿಯೇ ಇರುತ್ತೇವೆ,” ಎಂದು ನಿಮಗೆ ನಾವು ಹೇಳಲಿಲ್ಲವೆ? ನಾವು ಈ ಮರುಭೂಮಿಯಲ್ಲಿ ಸಾಯುವುದಕ್ಕಿಂತ ಈಜಿಪ್ಟಿನವರಿಗೆ ಗುಲಾಮರಾಗಿರುವುದೇ ಮೇಲಲ್ಲವೇ?” ಎಂದು ದೂರಿದರು.


ಧರ್ಮಶಾಸ್ತ್ರದ ನೇಮನಿಯಮಗಳು ಆ ಶಾಸ್ತ್ರಕ್ಕೆ ಅಧೀನರಾದವರಿಗೆ ಮಾತ್ರ ಅನ್ವಯಿಸುತ್ತವೆಂದು ನಾವು ಬಲ್ಲೆವು. ಆದ್ದರಿಂದ ಯಾರೂ ಯಾವ ನೆಪವನ್ನು ಹೇಳಲೂ ಬಾಯಿ ತೆರೆಯುವಂತಿಲ್ಲ. ಜಗತ್ತೆಲ್ಲವೂ ದೇವರ ನ್ಯಾಯತೀರ್ಪಿಗೆ ಗುರಿಯಾಗಿದೆ.


ಅದಕ್ಕೆ ಅವರು ಕೂಡ, ‘ಸ್ವಾಮೀ, ತಾವು ಯಾವಾಗ ಹಸಿದಿದ್ದಿರಿ, ಬಾಯಾರಿದ್ದಿರಿ, ಅಪರಿಚಿತರಾಗಿದ್ದಿರಿ, ಯಾವಾಗ ಬಟ್ಟೆಬರೆ ಇಲ್ಲದೆ ಇದ್ದಿರಿ, ರೋಗಿಯಾಗಿದ್ದಿರಿ, ಮತ್ತು ಬಂಧಿಯಾಗಿ ಇದ್ದಿರಿ ಮತ್ತು ನಾವು ಅವನ್ನು ಕಂಡು ನಿಮಗೆ ಉಪಚಾರಮಾಡದೆಹೋದೆವು? ಎಂದು ಪ್ರಶ್ನಿಸುವರು.


ಅಸಹ್ಯಕಾರ್ಯಗಳನ್ನು ಮಾಡಿ ಅವಮಾನಕ್ಕೆ ಗುರಿಯಾಗಿದ್ದರೂ ಎಳ್ಳಷ್ಟೂ ನಾಚಿಕೆ ಇಲ್ಲದಿದ್ದಾರೆ. ಲಜ್ಜೆಯ ಗಂಧವೂ ಅವರಿಗಿಲ್ಲ. ಆದಕಾರಣ ಬೇರೆಯವರಂತೆ ಅವರೂ ಬೀಳುವರು. ನಾನು ದಂಡಿಸುವಾಗ ಅವರು ಏಳಲಾಗದಂತೆ ಮುಗ್ಗರಿಸಿ ಬೀಳುವರು. ಇದು ಸರ್ವೇಶ್ವರನಾದ ನನ್ನ ನುಡಿ.


“ಬೈಲಿಗೆ ಬಾರದು ನಿನ್ನ ದೋಷವು, ನಿನಗದು ಕೇಡು ತರದು” I ಇಂತುಲಿದು ಆ ಪಾಪದ ಜಿನುಗು ಅವನನು ವಂಚಿಸುತಿಹುದು II


ಸಮುವೇಲನು ಅಲ್ಲಿಗೂ ಹೋದನು. ಸೌಲನು ಅವನನ್ನು ಕಂಡು, “ಸರ್ವೇಶ್ವರ ನಿನ್ನನ್ನು ಹರಸಲಿ! ನಾನು ಅವರ ಅಪ್ಪಣೆಯನ್ನು ನೆರವೇರಿಸಿದ್ದೇನೆ,” ಎಂದನು.


ಅಲ್ಲಿ ಜನರು ನೀರಿಲ್ಲದೆ ಬಾಯಾರಿಕೆಯ ಬೇಸರದಿಂದ ಮೋಶೆಯ ವಿರುದ್ಧ ಗೊಣಗುಟ್ಟಿದರು. “ನೀನು ನಮ್ಮನ್ನು, ನಮ್ಮ ಮಕ್ಕಳನ್ನು ಹಾಗು ದನಕರುಗಳನ್ನು ಈಜಿಪ್ಟಿನಿಂದ ಕರೆದು ತಂದದ್ದು ಏಕೆ? ನೀರಿಲ್ಲದೆ ಸಾಯಿಸುವುದಕ್ಕೋ?” ಎಂದು ದೂರಿದರು.


“ಈ ಸಮಾಜವನ್ನೆಲ್ಲ ಹಸಿವೆಯಿಂದ ಸಾಯಿಸಬೇಕೆಂದು ಈ ಮರುಭೂಮಿಗೆ ನಮ್ಮನ್ನು ಕರೆದು ತಂದಿದ್ದೀರಿ; ನಾವು ಈಜಿಪ್ಟಿನಲ್ಲಿದ್ದಾಗ ಸರ್ವೇಶ್ವರನ ಕೈಯಿಂದಲೆ ಸತ್ತಿದ್ದರೆ ಎಷ್ಟೊ ಲೇಸಾಗಿತ್ತು. ಆಗ ಮಾಂಸ ಪಾತ್ರೆಗಳ ಪಕ್ಕದಲ್ಲೇ ಕುಳಿತು ಹೊಟ್ಟೇ ತುಂಬ ಊಟಮಾಡುತ್ತಿದ್ದೆವು,” ಎಂದು ಗುಣಗಿದರು.


ಅದಕ್ಕೆ ಆದಾಮನು, “ನನ್ನ ಜೊತೆಯಲ್ಲಿ ಇರಲು ತಾವು ಕೊಟ್ಟ ಮಹಿಳೆ ಆ ಮರದ ಹಣ್ಣನ್ನು ನನಗೆ ಕೊಟ್ಟಳು; ನಾನು ತಿಂದೆ,” ಎಂದನು


ಎರಡನೆಯವನು ಕಿಲಾಬನು; ಇವನು ಕರ್ಮೆಲ್ಯನಾದ ನಾಬಾಲನ ಹೆಂಡತಿಯಾಗಿದ್ದ ಅಬೀಗೈಲಳ ಮಗ. ಮೂರನೆಯವನು ಅಬ್ಷಾಲೋಮನು; ಇವನು ಗೆಷೂರಿನ ಅರಸನಾದ ತಲ್ಮೈ ಎಂಬವನ ಮಗಳಾದ ಮಾಕಳ ಪುತ್ರ.


ದಾವೀದನು ತನ್ನ ಮಗನಿಗೋಸ್ಕರ ನಿತ್ಯವೂ ದುಃಖಪಡುತ್ತಿದ್ದನು. ಅಬ್ಷಾಲೋಮನು ತಪ್ಪಿಸಿಕೊಂಡು ಗೆಷೂರಿಗೆ ಓಡಿಹೋಗಿ ಅಲ್ಲಿನ ಅರಸನೂ ಅಮ್ಮೀಹೂದನ ಮಗನೂ ಆದ ತಲ್ಮೈಯ ಬಳಿಯಲ್ಲಿ ಮೂರು ವರ್ಷ ಇದ್ದನು.


ಆಗ ಯೋವಾಬನು ಅಬ್ಷಾಲೋಮನ ಮನೆಗೆ ಹೋಗಿ, “ನಿನ್ನ ಸೇವಕರು ನನ್ನ ಹೊಲಕ್ಕೆ ಬೆಂಕಿಹಚ್ಚಿದ್ದೇಕೆ?” ಎಂದು ಅವನನ್ನು ಕೇಳಲು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು