Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 14:9 - ಕನ್ನಡ ಸತ್ಯವೇದವು C.L. Bible (BSI)

9 ಅದಕ್ಕೆ ಆ ತೆಕೋವದ ಸ್ತ್ರೀ, “ಅರಸರೇ, ಒಡೆಯರೇ, ಅಪರಾಧ ನನ್ನ ಮೇಲೆಯೂ ನನ್ನ ಕುಟುಂಬದ ಮೇಲೆಯೂ ಇರಲಿ; ಅರಸರಿಗೂ ಅವರ ಸಿಂಹಾಸನಕ್ಕೂ ದೋಷಹತ್ತದಿರಲಿ,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆ ತೆಕೋವದ ಸ್ತ್ರೀಯು, “ಅರಸನೇ, ಒಡೆಯನೇ ಅಪರಾಧವು ನನ್ನ ಮೇಲೆಯೂ, ನನ್ನ ಕುಟುಂಬದ ಮೇಲೆಯು ಇರಲಿ. ಅರಸನಿಗೂ ಅವನ ಸಿಂಹಾಸನಕ್ಕೂ ದೋಷ ಹತ್ತದಿರಲಿ” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆ ತೆಕೋವದ ಸ್ತ್ರೀಯು - ಅರಸನೇ, ಒಡೆಯನೇ, ಅಪರಾಧವು ನನ್ನ ಮೇಲೆಯೂ ನನ್ನ ಕುಟುಂಬದ ಮೇಲೆಯೂ ಇರಲಿ; ಅರಸನಿಗೂ ಅವನ ಸಿಂಹಾಸನಕ್ಕೂ ದೋಷಹತ್ತದಿರಲಿ ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ತೆಕೋವದ ಆ ಸ್ತ್ರೀಯು ರಾಜನಿಗೆ, “ರಾಜನಾದ ನನ್ನ ಒಡೆಯನೇ, ದೋಷವೆಲ್ಲವೂ ನನ್ನ ಮೇಲೆಯೇ ಬರಲಿ. ನನ್ನ ಒಡೆಯನಾದ ರಾಜನೇ, ನೀನೂ ನಿನ್ನ ರಾಜ್ಯವೂ ನಿರ್ದೋಷಿಗಳಾಗಿದ್ದೀರಿ” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆದರೆ ತೆಕೋವದ ಸ್ತ್ರೀಯು ಅರಸನಿಗೆ, “ಅರಸನಾದ ನನ್ನ ಒಡೆಯನೇ, ಆ ಅಕ್ರಮವು ನನ್ನ ಮೇಲೆಯೂ, ನನ್ನ ತಂದೆಯ ಮನೆಯ ಮೇಲೆಯೂ ಇರಲಿ. ಅರಸನೂ, ಅವನ ಸಿಂಹಾಸನವೂ ನಿರಪರಾಧವಾಗಿರಲಿ,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 14:9
10 ತಿಳಿವುಗಳ ಹೋಲಿಕೆ  

ಆಮೇಲೆ ಅವನ ಪಾದಗಳ ಮೇಲೆ ಬಿದ್ದು, “ಒಡೆಯಾ, ಅಪರಾಧವು ನನ್ನ ಮೇಲಿರಲಿ; ನಿಮ್ಮ ದಾಸಿಯಾದ ನಾನು ಮಾತಾಡುವುದಕ್ಕೆ ಅಪ್ಪಣೆಯಾಗಲಿ. ನನ್ನ ಮಾತನ್ನು ಆಲಿಸಬೇಕು;


ಈ ಇಬ್ಬರನ್ನೂ ವಧಿಸಿದ ಪಾಪವು ಯೋವಾಬನ ತಲೆಯ ಮೇಲೂ ಅವನ ಸಂತಾನದವರ ತಲೆಯ ಮೇಲೂ ಇರಲಿ; ಆದರೆ ದಾವೀದನಿಗೂ ಅವನ ಸಿಂಹಾಸನವನ್ನೇರುವ ಸಂತಾನದವರಿಗೂ ಸರ್ವೇಶ್ವರನಿಂದ ನಿತ್ಯಸೌಭಾಗ್ಯ ದೊರಕಲಿ!” ಎಂದನು.


ಅದಕ್ಕೆ ಜನರೆಲ್ಲರೂ, “ಅವನ ರಕ್ತ ನಮ್ಮ ಮೇಲೂ ನಮ್ಮ ಮಕ್ಕಳ ಮೇಲೂ ಇರಲಿ,” ಎಂದು ಕೂಗಿಕೊಂಡರು.


“ನೀವು ಈ ಪ್ರಕಾರ ನಡೆದುಕೊಂಡರೆ ನಿಮ್ಮ ನಾಡು ಅಪವಿತ್ರವಾಗುವುದಿಲ್ಲ. ರಕ್ತಪಾತವು ನಾಡನ್ನು ಅಪವಿತ್ರಗೊಳಿಸುತ್ತದೆ. ಅದಕ್ಕೆ ಕೊಲ್ಲಲ್ಪಟ್ಟವನ ರಕ್ತಕ್ಕಾಗಿ ಕೊಂದವನ ರಕ್ತದಿಂದಲೇ ಹೊರತು ಬೇರೆ ಪ್ರಾಯಶ್ಚಿತ್ತವಿಲ್ಲ.


ಆಗ ಅವನ ತಾಯಿ, “ಮಗನೇ, ಅವರು ನಿನಗೆ ಶಾಪ ಕೊಟ್ಟರೆ ಆ ಶಾಪ ನನಗಿರಲಿ; ನೀನು ನನ್ನ ಮಾತನ್ನು ಕೇಳಿ ಆ ಮರಿಗಳನ್ನು ತೆಗೆದುಕೊಂಡು ಬಾ,” ಎಂದಳು.


ಅವನಿಗೆ ನಾನೇ ಹೊಣೆ; ಅವನ ವಿಷಯ ನನಗೆ ಬಿಡಿ. ನಾನು ಅವನನ್ನು ಮತ್ತೆ ಕರೆದುಕೊಂಡು ಬಂದು ನಿಮ್ಮ ಎದುರಿನಲ್ಲಿ ನಿಲ್ಲಿಸದೆಹೋದರೆ ಆ ದೋಷ ಸದಾಕಾಲ ನನ್ನ ಮೇಲೆ ಇರಲಿ.


ಆಗ ಅರಸನು, “ಮನೆಗೆ ಹೋಗು, ನಿನ್ನ ವಿಷಯದಲ್ಲಿ ಆಜ್ಞಾಪಿಸುತ್ತೇನೆ,” ಎಂದು ಹೇಳಿದನು.


ಅರಸ ಆಕೆಗೆ, “ಹಾಗೆ ಅಂದವರನ್ನು ನನ್ನ ಬಳಿಗೆ ಕರೆದುಕೊಂಡು ಬಾ; ಅವರು ನಿನ್ನನ್ನು ಮುಟ್ಟದಂತೆ ಮಾಡುತ್ತೇನೆ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು