Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 15:2 - ಕನ್ನಡ ಸತ್ಯವೇದವು C.L. Bible (BSI)

2 ಅವನು ಮುಂಜಾನೆಯೇ ಎದ್ದು ಊರುಬಾಗಿಲ ಬಳಿಯಲ್ಲಿ ನಿಂತುಕೊಳ್ಳುತ್ತಿದ್ದನು. ಯಾರಾದರೂ ತಮ್ಮ ವ್ಯಾಜ್ಯ ತೀರಿಸಿಕೊಳ್ಳುವುದಕ್ಕಾಗಿ ಅರಸನ ಬಳಿಗೆ ಹೋಗುವುದನ್ನು ಅಬ್ಷಾಲೋ‍ಮನು ಕಂಡರೆ ಅಂಥವನನ್ನು ತನ್ನ ಬಳಿಗೆ ಕರೆದು, “ನೀನು ಯಾವ ಊರಿನವನು?” ಎಂದು ವಿಚಾರಿಸುತ್ತಿದ್ದನು. ಅವರು, “ನಿನ್ನ ಸೇವಕರಾದ ನಾವು ಇಸ್ರಯೇಲರ ಇಂಥ ಕುಲಕ್ಕೆ ಸೇರಿದವರು,” ಎಂದು ಉತ್ತರಕೊಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅವನು ಹೊತ್ತಾರೆಯಲ್ಲಿ ಎದ್ದು ಊರ ಬಾಗಿಲಿನ ಬಳಿಯಲ್ಲಿ ನಿಂತುಕೊಳ್ಳುವನು. ಯಾರಾದರೂ ತಮ್ಮ ವ್ಯಾಜ್ಯವನ್ನು ತೀರಿಸಿಕೊಳ್ಳುವುದಕ್ಕಾಗಿ ಅರಸನ ಬಳಿಗೆ ಹೋಗುವುದನ್ನು ಅಬ್ಷಾಲೋಮನು ಕಂಡರೆ ಅಂಥವರನ್ನು ತನ್ನ ಬಳಿಗೆ ಕರೆದು, “ನೀವು ಯಾವ ಊರಿನರವರು?” ಎಂದು ಕೇಳುವನು. ಅವರು, “ನಿನ್ನ ಸೇವಕರಾದ ನಾವು ಇಸ್ರಾಯೇಲರ ಒಂದು ಕುಲಕ್ಕೆ ಸೇರಿದವರು” ಎಂದು ಉತ್ತರ ಕೊಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅವನು ಹೊತ್ತಾರೆಯಲ್ಲೆದ್ದು ಊರುಬಾಗಲ ಬಳಿಯಲ್ಲಿ ನಿಂತುಕೊಳ್ಳುವನು. ಯಾವನಾದರೂ ತನ್ನ ವ್ಯಾಜ್ಯತೀರಿಸಿಕೊಳ್ಳುವದಕ್ಕಾಗಿ ಅರಸನ ಬಳಿಗೆ ಹೋಗುವದನ್ನು ಅಬ್ಷಾಲೋಮನು ಕಂಡರೆ ಅಂಥವನನ್ನು ತನ್ನ ಬಳಿಗೆ ಕರೆದು ನೀನು ಯಾವ ಊರಿನವನು ಎಂದು ಕೇಳುವನು. ಅವನು - ನಿನ್ನ ಸೇವಕನಾದ ನಾನು ಇಸ್ರಾಯೇಲ್ಯರ ಇಂಥ ಕುಲಕ್ಕೆ ಸೇರಿದವನು ಎಂದು ಉತ್ತರ ಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಅಬ್ಷಾಲೋಮನು ಹೊತ್ತಾರೆಯಲ್ಲಿಯೇ ಎದ್ದು ದ್ವಾರದ ಹತ್ತಿರದಲ್ಲಿ ನಿಂತುಕೊಳ್ಳುತ್ತಿದ್ದನು. ತೊಂದರೆಯಲ್ಲಿ ಸಿಕ್ಕಿಕೊಂಡಿರುವ ಯಾವನಾದರೂ ತೀರ್ಪಿಗಾಗಿ ರಾಜನಾದ ದಾವೀದನ ಬಳಿಗೆ ಹೋಗುತ್ತಿರುವುದನ್ನು ಅಬ್ಷಾಲೋಮನು ಕಂಡರೆ ಅವನನ್ನು ತನ್ನ ಬಳಿಗೆ ಕರೆಯುತ್ತಿದ್ದನು. ಅಬ್ಷಾಲೋಮನು, “ನೀನು ಯಾವ ನಗರದಿಂದ ಬಂದೆ?” ಎಂದು ಕೇಳುತ್ತಿದ್ದನು. ಆ ಮನುಷ್ಯನು, “ನಾನು ಇಸ್ರೇಲಿನ ಇಂಥ ಕುಲಕ್ಕೆ ಸೇರಿದವನು” ಎಂದು ಉತ್ತರಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಇದಲ್ಲದೆ ಅಬ್ಷಾಲೋಮನು ಬೆಳಿಗ್ಗೆ ಎದ್ದು ಬಾಗಿಲ ಬಳಿಯಲ್ಲಿ ನಿಂತುಕೊಂಡು, ವ್ಯಾಜ್ಯ ಉಂಟಾದವನು ಯಾವನಾದರೂ ನ್ಯಾಯಕ್ಕೋಸ್ಕರ ಅರಸನ ಬಳಿಗೆ ಬರುವವನಾಗಿದ್ದರೆ ಅವನನ್ನು ಕರೆದು, “ನೀನು ಯಾವ ಪಟ್ಟಣದವನು?” ಎಂದು ಕೇಳಿದನು. ಅದಕ್ಕವನು, “ನಿನ್ನ ಸೇವಕರಾದ ನಾವು ಇಸ್ರಾಯೇಲರ ಇಂಥ ಕುಲಕ್ಕೆ ಸೇರಿದವರು,” ಎಂದು ಉತ್ತರ ಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 15:2
13 ತಿಳಿವುಗಳ ಹೋಲಿಕೆ  

ಬೆಳಗಾಯಿತು. ಎಲ್ಲ ಮುಖ್ಯಯಾಜಕರೂ ಜನರ ಪ್ರಮುಖರೂ ಸೇರಿ ಯೇಸುವನ್ನು ಕೊಲ್ಲಿಸುವುದಕ್ಕೆ ಸಮಾಲೋಚನೆಮಾಡಿದರು.


ಕೇಡು ಮಾಡದಿದ್ದರೆ ಆ ದುರುಳರಿಗೆ ನಿದ್ರೆಬಾರದು, ವಂಚಿಸಿ ಬೀಳಿಸದಿದ್ದರೆ ಅವರಿಗೆ ನಿದ್ರೆ ಹತ್ತದು.


ಕೊಲೆಪಾತಕ ಏಳುತ್ತಾನೆ ಮುಂಜಾನೆಯೇ ದೀನದಲಿತರನ್ನು ಕೊಂದುಹಾಕುತ್ತಾನೆ ರಾತ್ರಿಯಲ್ಲಿ ವರ್ತಿಸುತ್ತಾನೆ ಕಳ್ಳನಂತೆ.


ಆಗ ಅರಸನು ಎದ್ದು ಬಂದು ಊರುಬಾಗಿಲಲ್ಲಿ ಕುಳಿತುಕೊಂಡನು. “ಇಗೋ, ಅರಸರು ಊರುಬಾಗಿಲಲ್ಲಿ ಕುಳಿತುಕೊಂಡಿದ್ದಾರೆ,” ಎಂಬ ಸುದ್ದಿ ಪ್ರಜೆಗಳಿಗೆ ಮುಟ್ಟಿದಾಗ ಅವರೆಲ್ಲರೂ ಬಂದು ಅವನ ಸುತ್ತಲೂ ನೆರೆದರು.


ಇತ್ತ ಬೋವಜನು ಊರಿನ ಸಭಾಮಂಟಪದ ಬಳಿ ಹೋಗಿ ಅಲ್ಲಿ ಕುಳಿತುಕೊಂಡನು.


ಇವರು ಸದಾ ಜನರಿಗೆ ನ್ಯಾಯತೀರಿಸುವವರಾದರು. ಜಟಿಲವಾದ ವ್ಯಾಜ್ಯಗಳನ್ನು ಮೋಶೆಯ ಬಳಿಗೆ ತರುತ್ತಿದ್ದರು. ಸುಲಭವಾದುವುಗಳನ್ನು ಅವರೇ ತೀರಿಸುತ್ತಾ ಬಂದರು.


ಅವರಲ್ಲಿ ವ್ಯಾಜ್ಯವೇನಾದರು ಉಂಟಾದರೆ ನನ್ನ ಬಳಿಗೆ ಬರುತ್ತಾರೆ. ನಾನು ವಿಚಾರಣೆ ಮಾಡಿ, ಅವರಿಗೆ ನ್ಯಾಯ ತೀರಿಸಿ, ದೇವರ ಆಜ್ಞಾವಿಧಿಗಳನ್ನು ಬೋಧಿಸುತ್ತೇನೆ,” ಎಂದು ಉತ್ತರಿಸಿದನು.


ಮೋಶೆ ಜನರಿಗಾಗಿ ಮಾಡುತ್ತಿದ್ದುದ್ದೆಲ್ಲವನ್ನು ಅವನ ಮಾವ ನೋಡಿ, “ಜನರಿಗೋಸ್ಕರ ಇಷ್ಟು ಪ್ರಯಾಸಪಡುತ್ತಿರುವೆ ಏಕೆ? ಬೆಳಿಗ್ಗೆಯಿಂದ ಸಂಜೆಯವರೆಗೂ ಜನರು ನಿನ್ನ ಸುತ್ತಲೂ ನಿಂತುಕೊಂಡಿದ್ದಾರೆ; ನೀನೊಬ್ಬನೇ ನ್ಯಾಯ ತೀರಿಸಲು ಕುಳಿತುಕೊಳ್ಳಬೇಕೆ?” ಎಂದು ಕೇಳಿದನು.


ಎಂತಲೆ ಹಮೋರನು ಮತ್ತು ಅವನ ಮಗ ಶೆಕೆಮನು ಊರಬಾಗಿಲಿಗೆ ಬಂದರು. ಊರಿನವರನ್ನೆಲ್ಲಾ ಸಂಬೋಧಿಸುತ್ತಾ, ಹೀಗೆಂದರು:


“ವಿಧವಿಧವಾದ ಜೀವಹತ್ಯ, ಹಕ್ಕುಬಾಧ್ಯತೆ, ಹೊಡೆದಾಟ ಇವುಗಳ ವಿಷಯದಲ್ಲಿ ಅನುಮಾನ, ಚರ್ಚೆಗಳು ನಿಮ್ಮ ಊರಲ್ಲಿ ಉಂಟಾಗಬಹುದು. ಆಗ ಸರಿಯಾಗಿ ವಿವೇಚಿಸುವುದು ನಿಮ್ಮ ಶಕ್ತಿಗೆ ಮೀರಿದ ಪಕ್ಷಕ್ಕೆ ನೀವು ಊರಿನಿಂದ ಹೊರಟು ನಿಮ್ಮ ದೇವರಾದ ಸರ್ವೇಶ್ವರ ಆರಿಸಿಕೊಳ್ಳುವ ಸ್ಥಳದಲ್ಲಿ


ಅವರು, “ನೀವು ಈ ಜನರಿಗೆ ದಯೆತೋರಿಸಿ, ಅವರನ್ನು ಮೆಚ್ಚಿಸುವ ಒಳ್ಳೆಯ ಉತ್ತರಕೊಟ್ಟರೆ ಅವರು ಯಾವಾಗಲೂ ನಿಮಗೆ ಅಧೀನರಾಗಿರುವರು,” ಎಂದರು.


“ಅವನ ಸ್ಥಾನದಲ್ಲಿ ನೀಚನೊಬ್ಬನು ಏಳುವನು. ಅವನು ರಾಜಪದವಿಗೆ ಹಕ್ಕುದಾರನಲ್ಲ. ಆದರೂ ನೆಮ್ಮದಿಯ ಕಾಲದಲ್ಲಿ ನಯವಾದ ನುಡಿಗಳಿಂದ ರಾಜ್ಯವನ್ನು ಪಡೆದುಕೊಳ್ಳುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು