Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 15:24 - ಕನ್ನಡ ಸತ್ಯವೇದವು C.L. Bible (BSI)

24 ಚಾದೋಕನೂ ಅವನ ವಶದಲ್ಲಿದ್ದ ಲೇವಿಯರೆಲ್ಲರೂ ದೇವರ ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಬಂದು, ಅದನ್ನು ಜನರೆಲ್ಲರು ದಾಟಿ ಹೋಗುವವರೆಗೆ ಕೆಳಗಿಳಿಸಿದ್ದರು. ಎಬ್ಯಾತಾರನೂ ಬಂದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಚಾದೋಕನೂ ಅವನ ವಶದಲ್ಲಿದ್ದ ಎಲ್ಲಾ ಲೇವಿಯರೂ ದೇವರ ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಬಂದು ಅದನ್ನು ಜನರೆಲ್ಲರೂ ದಾಟಿಹೋಗುವವರೆಗೆ ಕೆಳಗಿಳಿಸಿದರು. ಎಬ್ಯಾತಾರನೂ ಯಜ್ಞವನ್ನು ಅರ್ಪಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಚಾದೋಕನೂ ಅವನ ವಶದಲ್ಲಿದ್ದ ಎಲ್ಲಾ ಲೇವಿಯರೂ ದೇವರ ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಬಂದು ಅದನ್ನು ಜನರೆಲ್ಲರೂ ದಾಟಿಹೋಗುವವರೆಗೆ ಕೆಳಗಿಳಿಸಿದ್ದರು. ಎಬ್ಯಾತಾರನೂ ಬಂದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಚಾದೋಕನು ಮತ್ತು ಅವನೊಂದಿಗಿದ್ದ ಲೇವಿಯರೆಲ್ಲ ದೇವರ ಒಡಂಬಡಿಕೆಯ ಪೆಟ್ಟಿಗೆಯನ್ನು ಹೊತ್ತುಕೊಂಡಿದ್ದರು. ಅವರು ದೇವರ ಪವಿತ್ರ ಪೆಟ್ಟಿಗೆಯನ್ನು ಇಳಿಸಿದರು. ಜೆರುಸಲೇಮಿನಿಂದ ಜನರೆಲ್ಲರೂ ಹೊರಗೆ ಹೋಗುವವರೆಗೆ ಎಬ್ಯಾತಾರನು ಪ್ರಾರ್ಥನೆಗಳನ್ನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಚಾದೋಕನೂ, ಅವನ ಸಂಗಡ ಇರುವ ಸಮಸ್ತ ಲೇವಿಯರೂ ದೇವರ ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಬಂದು ಇಳಿಸಿದರು. ಅಬಿಯಾತರನು, ಜನರೆಲ್ಲರು ಪಟ್ಟಣದಿಂದ ದಾಟಿಹೋಗುವವರೆಗೆ ಯಜ್ಞ ಸಮರ್ಪಿಸುತ್ತಾ ಮುಂದೆ ನಡೆಯುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 15:24
23 ತಿಳಿವುಗಳ ಹೋಲಿಕೆ  

ಅಹೀಟೂಬನ ಮಗ ಚಾದೋಕನೂ ಹಾಗು ಅಹೀಮೆಲೆಕನ ಮಗನಾದ ಎಬ್ಯಾತಾರನೂ ಅವನ ಯಾಜಕರಾಗಿದ್ದರು; ಸರಾಯನು ಅವನಿಗೆ ಲೇಖಕ ಆಗಿದ್ದನು.


ಆರೋನನು ಮತ್ತು ಅವನ ಮಕ್ಕಳು ದಂಡು ಹೊರಡುವ ಕಾಲದಲ್ಲಿ ದೇವಸ್ಥಾನದ ಎಲ್ಲ ಸಾಮಾನುಗಳನ್ನು ಮುಚ್ಚಿ ಸಿದ್ಧಮಾಡಿದ ನಂತರ ಕೆಹಾತ್ಯರು ಅವುಗಳನ್ನು ಹೊರುವುದಕ್ಕೆ ಬರಬೇಕು. ಇವರು ದೇವಸ್ಥಾನದ ಸಾಮಾನುಗಳನ್ನು ಮುಟ್ಟಬಾರದು. ಮುಟ್ಟಿದರೆ ಬದುಕಲಾರರು. ಕೆಹಾತ್ಯರು ದೇವದರ್ಶನದ ಗುಡಾರದ ಸಲಕರಣೆಗಳಲ್ಲಿ ಹೊರಬೇಕಾದವುಗಳು ಇವೇ.


ಶೆವನು ಕಾರ್ಯದರ್ಶಿ, ಚಾದೋಕ್ ಹಾಗು ಎಬ್ಯಾತಾರರು ಯಾಜಕರು;


ಅಹೀಟೂಬನ ಮಗನಾದ ಅಹೀಮೆಲೆಕನ ಮಕ್ಕಳಲ್ಲೊಬ್ಬನಾದ ಏಬ್ಯಾತಾರನೆಂಬವನು ತಪ್ಪಿಸಿಕೊಂಡು ದಾವೀದನ ಬಳಿಗೆ ಓಡಿಬಂದನು.


ಆ ಕ್ಷೇತ್ರ ಚಾದೋಕನ ಸಂತಾನದವರಲ್ಲಿ ನನಗಾಗಿ ಪ್ರತಿಷ್ಠಿತರು ಹಾಗು ನನ್ನ ಆಲಯದ ಪಾರುಪತ್ಯವನ್ನು ನೆರವೇರಿಸಿದವರು ಆದ ಯಾಜಕರಿಗೇ ಸೇರತಕ್ಕದ್ದು. ಇಸ್ರಯೇಲರು ನನ್ನನ್ನು ತೊರೆದಾಗ ಲೇವಿಯರೂ ತೊರೆದಂತೆ ಇವರು ತೊರೆಯಲಿಲ್ಲ.


‘ಲೇವಿಯರು ಮಾತ್ರವೇ ದೇವಮಂಜೂಷವನ್ನು ಹೊರಬೇಕು. ಏಕೆಂದರೆ ಸದಾಕಾಲ ತಮ್ಮ ಸೇವೆಮಾಡುವುದಕ್ಕೂ ಮಂಜೂಷವನ್ನು ಹೊರುವುದಕ್ಕೂ ಸರ್ವೇಶ್ವರನಿಂದ ಆಯ್ಕೆಯಾದವರು ಅವರೇ’ ಎಂದು ನಿಶ್ಚಯಿಸಿಕೊಂಡನು.


ಅರಸನು ಯೋವಾಬನಿಗೆ ಬದಲಾಗಿ ಯೆಹೋಯಾದಾವನ ಮಗ ಬೆನಾಯನನ್ನು ಸೈನ್ಯಾಧಿಪತಿಯನ್ನಾಗಿ ಹಾಗು ಎಬ್ಯಾತಾರನಿಗೆ ಬದಲಾಗಿ ಚಾದೋಕನನ್ನು ಯಾಜಕನನ್ನಾಗಿ ನೇಮಿಸಿದನು.


ಆದರೆ ಯಾಜಕ ಚಾದೋಕ್, ಯೆಹೋಯಾದಾವನ ಮಗ ಬೆನಾಯ, ಪ್ರವಾದಿ ನಾತಾನ್, ಶಿಮ್ಮೀ, ರೇಗೀ ಎಂಬವರೂ ದಾವೀದನ ವಿಶೇಷ ಕಾವಲಾಳುಗಳೂ ಅದೋನಿಯನನ್ನು ಬೆಂಬಲಿಸಲಿಲ್ಲ.


ಅಲ್ಲಿ ನಿನ್ನ ಸಂಗಡ ಯಾಜಕರಾದ ಚಾದೋಕ್ ಹಾಗು ಎಬ್ಯಾತಾರರು ಇರುತ್ತಾರೆ ಅಲ್ಲವೆ; ಅರಮನೆಯಲ್ಲಿ ನಿನಗೆ ಗೊತ್ತಾಗುವ ವರ್ತಮಾನವನ್ನೆಲ್ಲಾ ಆ ಇಬ್ಬರು ಯಾಜಕರಿಗೆ ತಿಳಿಸು. ಅವರ ಬಳಿಯಲ್ಲಿ ಇಬ್ಬರು ಹುಡುಗರಿದ್ದಾರೆ;


ಇದಲ್ಲದೆ ಅರಸನು ಯಾಜಕನಾದ ಚಾದೋಕನಿಗೆ, “ನೀನು ದೇವದರ್ಶಿ; ನೀನು ನಿನ್ನ ಮಗನಾದ ಅಹೀಮಾಚನು ಮತ್ತು ಎಬ್ಯಾತಾರನ ಮಗನಾದ ಯೋನಾತಾನನು ಎಂಬ ಈ ಇಬ್ಬರು ಹುಡುಗರನ್ನು ಕರೆದುಕೊಂಡು ಸುರಕ್ಷಿತವಾಗಿ ಪಟ್ಟಣಕ್ಕೆ ಹೋಗಬೇಕು.


ಸರ್ವೇಶ್ವರನ ಮಂಜೂಷವನ್ನು ಹೊತ್ತವರು ಆರು ಹೆಜ್ಜೆ ನಡೆದನಂತರ ದಾವೀದನು ಒಂದು ಎತ್ತನ್ನೂ ಒಂದು ಕೊಬ್ಬಿದ ಕರುವನ್ನೂ ಬಲಿದಾನ ಮಾಡಿದನು.


ದೇವರ ಮಂಜೂಷ ಶತ್ರುವಶವಾಯಿತು. ಏಲಿಯ ಮಕ್ಕಳಾದ ಹೊಫ್ನಿ ಮತ್ತು ಫೀನೆಹಾಸ ಹತರಾದರು.


ನೂನನ ಮಗ ಯೆಹೋಶುವನು ಯಾಜಕರನ್ನು ಕರೆದು ಅವರಿಗೆ, “ನೀವು ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಹೋಗಿರಿ. ಏಳು ಮಂದಿ ಯಾಜಕರು ಕೊಂಬುಗಳನ್ನು ಹಿಡಿದುಕೊಂಡು ಸರ್ವೇಶ್ವರನ ಮಂಜೂಷದ ಮುಂದೆ ನಡೆಯಲಿ,” ಎಂದು ತಿಳಿಸಿದನು.


ಏಳುಮಂದಿ ಯಾಜಕರು ಕೊಂಬುಗಳನ್ನು ಹಿಡಿದುಕೊಂಡು ಮಂಜೂಷದ ಮುಂದೆ ನಡೆಯಲಿ. ಏಳನೆಯ ದಿವಸ ನೀವು ಪಟ್ಟಣವನ್ನು ಏಳುಸಾರಿ ಸುತ್ತಬೇಕು. ಯಾಜಕರು ಕೊಂಬುಗಳನ್ನು ಊದಬೇಕು.


ಯಾಜಕರಿಗೆ, “ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಜನರ ಮುಂದಾಗಿ ನಡೆದು ನದಿದಾಟಿರಿ,” ಎಂದು ಆಜ್ಞಾಪಿಸಿದನು. ಅವರು ಅಂತೆಯೇ ಮಂಜೂಷವನ್ನು ಹೊತ್ತುಕೊಂಡು ಹೋದರು.


“ನಿಮ್ಮ ದೇವರಾದ ಸರ್ವೇಶ್ವರನ ಒಡಂಬಡಿಕೆಯ ಮಂಜೂಷವನ್ನು ಯಾಜಕರಾದ ಲೇವಿಯರು ಹೊತ್ತಿರುವುದನ್ನು ನೀವು ಕಂಡಕೂಡಲೆ ನೀವು ಕೂಡ ನಿಮ್ಮ ನಿಮ್ಮ ಸ್ಥಳವನ್ನು ಬಿಟ್ಟು ಅದರ ಹಿಂದೆ ಹೋಗಿ.


ಕೆಹಾತ್ಯರಿಗೆ ಮಾತ್ರ ಏನನ್ನೂ ಕೊಡಲಿಲ್ಲ. ಏಕೆಂದರೆ ದೇವದರ್ಶನದ ಗುಡಾರದ ಸಾಮಾನುಗಳನ್ನು ಸಾಗಿಸುವುದೇ ಅವರಿಗೆ ನೇಮಕವಾದ ಕೆಲಸವಾಗಿತ್ತು. ಅವರು ಅವುಗಳನ್ನು ಹೆಗಲ ಮೇಲೆ ಹೊರಬೇಕಾಗಿತ್ತು.


ಬಳಿಕ ಅರಸ ಸೊಲೊಮೋನನು ಯಾಜಕನಾದ ಎಬ್ಯಾತಾರನಿಗೆ, “ನೀನು ಅಣತೋತಿನಲ್ಲಿರುವ ನಿನ್ನ ಮನೆಗೆ ಹೋಗು; ನೀನು ಮರಣಕ್ಕೆ ಪಾತ್ರನು. ಆದರೆ ನೀನು ಸ್ವಾಮಿ ಸರ್ವೇಶ್ವರನ ಮಂಜೂಷವನ್ನು ಹೊತ್ತುಕೊಂಡು ನನ್ನ ತಂದೆ ದಾವೀದನೊಡನೆ ಸಂಚರಿಸುತ್ತಾ ಅವರ ಕಷ್ಟ-ದುಃಖಗಳಲ್ಲಿ ಪಾಲುಗಾರನಾಗಿದ್ದುದರಿಂದ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು