Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 15:25 - ಕನ್ನಡ ಸತ್ಯವೇದವು C.L. Bible (BSI)

25 ಅರಸನು ಚಾದೋಕನಿಗೆ, “ನೀನು ದೇವರ ಒಡಂಬಡಿಕೆಯ ಮಂಜೂಷವನ್ನು ಹಿಂದಕ್ಕೆ ತೆಗೆದುಕೊಂಡುಹೋಗು; ಸರ್ವೇಶ್ವರನ ದೃಷ್ಟಿಯಲ್ಲಿ ನನಗೆ ದಯೆದೊರಕಿದರೆ ನಾನು ಅವರನ್ನೂ ಅವರ ಆಲಯವನ್ನೂ ನೋಡುವ ಹಾಗೆ ತಾವೇ ನನ್ನನ್ನು ಹಿಂದಕ್ಕೆ ಬರಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಅರಸನು ಚಾದೋಕನಿಗೆ, “ನೀನು ದೇವರ ಒಡಂಬಡಿಕೆಯ ಮಂಜೂಷವನ್ನು ಹಿಂದಿರುಗಿ ತೆಗೆದುಕೊಂಡು ಹೋಗು. ಯೆಹೋವನ ದೃಷ್ಟಿಯಲ್ಲಿ ನನಗೆ ದಯೆ ದೊರಕಿದರೆ ನಾನು ಆತನನ್ನೂ, ಆತನ ಆಲಯವನ್ನೂ ನೋಡುವ ಹಾಗೆ ಆತನೇ ನನ್ನನ್ನು ಪುನಃ ಬರಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಅರಸನು ಚಾದೋಕನಿಗೆ - ನೀನು ದೇವರ ಒಡಂಬಡಿಕೆಯ ಮಂಜೂಷವನ್ನು ಹಿಂದಿರುಗಿ ತೆಗೆದುಕೊಂಡು ಹೋಗು; ಯೆಹೋವನ ದೃಷ್ಟಿಯಲ್ಲಿ ನನಗೆ ದಯೆದೊರಕಿದರೆ ನಾನು ಆತನನ್ನೂ ಆತನ ಆಲಯವನ್ನೂ ನೋಡುವ ಹಾಗೆ ತಾನೇ ನನ್ನನ್ನು ಹಿಂದಕ್ಕೆ ಬರಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ರಾಜನಾದ ದಾವೀದನು ಚಾದೋಕನಿಗೆ, “ದೇವರ ಪವಿತ್ರ ಪೆಟ್ಟಿಗೆಯನ್ನು ಜೆರುಸಲೇಮಿಗೆ ಮತ್ತೆ ತೆಗೆದುಕೊಂಡು ಹೋಗು. ಯೆಹೋವನು ನನಗೆ ದಯಾಪರನಾಗಿದ್ದರೆ, ನನ್ನನ್ನು ಮತ್ತೆ ಬರಮಾಡುತ್ತಾನೆ. ಜೆರುಸಲೇಮನ್ನು ಮತ್ತು ಆತನ ಆಲಯವನ್ನು ಮತ್ತೆ ನಾನು ನೋಡುವ ಹಾಗೆ ಯೆಹೋವನು ಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಆಗ ಅರಸನು ಚಾದೋಕನಿಗೆ, “ದೇವರ ಮಂಜೂಷವನ್ನು ಪಟ್ಟಣಕ್ಕೆ ತಿರುಗಿ ತೆಗೆದುಕೊಂಡು ಹೋಗು. ಯೆಹೋವ ದೇವರ ದೃಷ್ಟಿಯಲ್ಲಿ ಮುಂದೆ ನನಗೆ ಕೃಪೆ ದೊರಕಿದರೆ, ಅವರು ತಿರುಗಿ ನನ್ನನ್ನು ಬರಮಾಡಿ ಅದನ್ನೂ, ಅದರ ವಾಸಸ್ಥಳವನ್ನೂ ನನಗೆ ತೋರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 15:25
19 ತಿಳಿವುಗಳ ಹೋಲಿಕೆ  

“(ಯೆರೆಮೀಯನೇ), ನೀನು ಪ್ರವಾದಿಸುತ್ತಾ ಅವರಿಗೆ ಈ ಮಾತುಗಳನ್ನು ಹೇಳು: ‘ಸರ್ವೇಶ್ವರ ಗರ್ಜಿಸುವನು ಮೇಲಣಲೋಕದಿಂದ ದನಿಗೈವನು ತನ್ನ ಘನ ನಿವಾಸದಿಂದ ಗಟ್ಟಿಯಾಗಿ ಕೂಗುವನು ತನ್ನ ಹುಲ್ಲುಗಾವಲಿನ ಮಂದೆಯ ವಿರುದ್ಧ ಕೂಗಾಡುವನು ದ್ರಾಕ್ಷೆಯ ಹಣ್ಣನ್ನು ತುಳಿಯುವವರಂತೆ ಭೂನಿವಾಸಿಗಳೆಲ್ಲರು ಭಯಭ್ರಾಂತರಾಗುವಂತೆ.


ದುರುಳರ ಬಿಡಾರದಲಿ ನಾ ವಾಸಮಾಡುವುದರ ಬದಲು I ನಿನ್ನಾಲಯದ ದ್ವಾರಪಾಲಕನಾಗಿರುವುದೆ ಮೇಲು II


ಪ್ರಿಯವಾದುದೆನಗೆ ನಿನ್ನ ನಿವಾಸದ ಮಂದಿರ I ಸುಪ್ರೀತವಾದುದು ನಿನ್ನ ಮಹಿಮೆಯ ಆಗರ II


ನೀ ಬಿಡುಗಡೆ ಮಾಡಿದ ಜನರನ್ನು ನಡೆಸಿಕೊಂಡೆ ಪ್ರೀತಿಯಿಂದ ನಿನ್ನ ಶ್ರೀನಿವಾಸದ ತನಕ ಅವರನ್ನು ಬರಮಾಡಿದೆ ಶಕ್ತಿಯಿಂದ.


‘ಇದು ಸರ್ವೇಶ್ವರನ ಗರ್ಭಗುಡಿ, ಸರ್ವೇಶ್ವರನ ಗರ್ಭಗುಡಿ, ಸರ್ವೇಶ್ವರನ ಗರ್ಭಗುಡಿ, (ಆದುದರಿಂದ ಎಲ್ಲ ಸುಭದ್ರ)’ ಎಂಬ ಮೋಸಕರ ಮಾತುಗಳಲ್ಲಿ ಭರವಸೆ ಇಡಬೇಡಿ.


ಹಿಜ್ಕೀಯನು, “ನಾನು ಗುಣಹೊಂದಿ ಸರ್ವೇಶ್ವರ ಸ್ವಾಮಿಯ ಆಲಯವನ್ನು ಸೇರುವೆನು ಎಂಬುದಕ್ಕೆ ಗುರುತೇನು?” ಎಂದು ಕೇಳಿದನು.


ನಮ್ಮ ಸ್ವಾಮಿದೇವರ ಮಂದಿರದ ನಿಮಿತ್ತ I ಹರಸುವೆ ನಿನ್ನ ಸುಕ್ಷೇಮವನು ಹಾರೈಸುತ II


ಪ್ರಭುವಿನಾಲಯಕೆ ಹೋಗೋಣ ಬಾ ಎಂದಾಗ I ಆಯಿತೆನಗೆ ಆನಂದ, ಜನರೆನ್ನ ಕರೆದಾಗ II


ಒಂದು ದಿನ ಅವನು ಪ್ರವಾದಿ ನಾತಾನನಿಗೆ, “ನೋಡು, ನಾನು ವಾಸಮಾಡುತ್ತಿರುವುದು ದೇವದಾರು ಮರದಿಂದ ಮಾಡಿದ ಅರಮನೆಯಲ್ಲಿ ; ಆದರೆ ದೇವರ ಮಂಜೂಷ ಇರುವುದು ಬಟ್ಟೆಯ ಗುಡಾರದಲ್ಲಿ!” ಎಂದನು.


ಜನರು ಸರ್ವೇಶ್ವರನ ಮಂಜೂಷವನ್ನು ತಂದು ದಾವೀದನು ಕಟ್ಟಿಸಿದ್ದ ಗುಡಾರದೊಳಗೆ ನಿಯಮಿತ ಸ್ಥಳದಲ್ಲಿ ಇಟ್ಟರು; ಆಗ ದಾವೀದನು ಸರ್ವೇಶ್ವರನಿಗೆ ದಹನಬಲಿಗಳನ್ನೂ ಶಾಂತಿಸಮಾಧಾನ ಬಲಿಗಳನ್ನೂ ಸಮರ್ಪಿಸಿದನು.


ಮೋಶೆ ಸರ್ವೇಶ್ವರ ಸ್ವಾಮಿಗೆ, ” ಈ ಜನರನ್ನು ಇಂಥ ಈ ನಾಡಿಗೆ ನಡೆಸಿಕೊಂಡು ಹೋಗಬೇಕೆಂದು ನನಗೆ ನೀವು ವಿಧಿಸಿದಿರಿ. ನನ್ನ ಸಂಗಡ ಬೇರೆ ಯಾರನ್ನು ಕಳುಹಿಸುವಿರೆಂದು ನನಗೆ ತಿಳಿಸಲಿಲ್ಲ. ‘ನಿನ್ನನ್ನು ಹೆಸರಿಡಿದು ಗುರುತಿಸಿದ್ದೇನೆ. ನಿನಗೆ ನನ್ನ ದಯೆ ದೊರಕಿದೆ,’ ಎಂದು ಹೇಳಿದ್ದೀರಿ.


ನನಗೆ ನಿಮ್ಮ ದಯೆ ದೊರಕಿದೆಯಾದರೆ ನಾನು ನಿಮ್ಮನ್ನು ಬಲ್ಲವನಾಗಿರುವಂತೆ ನಿಮ್ಮ ಮಾರ್ಗವನ್ನು ನನಗೆ ತೋರಿಸಿರಿ. ಆಗ ನಿಮ್ಮ ದಯೆ ನನಗೆ ದೊರಕಿದೆಯೆಂದು ತಿಳಿದುಕೊಳ್ಳುತ್ತೇನೆ. ಈ ಜನ ನಿಮ್ಮ ಪ್ರಜೆಯೆಂಬುದನ್ನು ನೆನಪಿನಲ್ಲಿಡಿ,” ಎಂದು ಅರಿಕೆ ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು