Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 15:26 - ಕನ್ನಡ ಸತ್ಯವೇದವು C.L. Bible (BSI)

26 ‘ನಿನ್ನಲ್ಲಿ ನನಗೆ ಇಷ್ಟವಿಲ್ಲ,’ ಎಂದು ತೋರಿದರೆ ತಮಗೆ ಸರಿಕಂಡಂತೆ ಮಾಡಲಿ. ಅವರ ಚಿತ್ತದಂತೆ ಆಗಲಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಒಂದು ವೇಳೆ ಆತನು ‘ನಿನ್ನಲ್ಲಿ ನನಗೆ ಇಷ್ಟವಿಲ್ಲ’ ಎಂದುಕೊಂಡರೆ ಇಗೋ, ನಾನು ಇಲ್ಲಿದ್ದೇನೆ. ಆತನು ತನಗೆ ಸರಿ ಕಂಡಂತೆ ಮಾಡಲಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಆತನು - ನಿನ್ನಲ್ಲಿ ನನಗೆ ಇಷ್ಟವಿಲ್ಲವೆಂದು ತೋರಿಸಿದರೆ ತನಗೆ ಸರಿಕಂಡಂತೆ ಮಾಡಲಿ, ಆತನ ಚಿತ್ತ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಆದರೆ ನನ್ನ ಮೇಲೆ ಯೆಹೋವನಿಗೆ ಇಷ್ಟವಿಲ್ಲವೆಂದು ತೋರಿದರೆ, ಆಗ ನನ್ನ ವಿರುದ್ಧವಾಗಿ ಆತನು ತನಗೆ ತೋಚಿದ್ದನ್ನು ಮಾಡಲಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಒಂದು ವೇಳೆ ಅವರು, ‘ನಿನ್ನಲ್ಲಿ ನನಗೆ ಇಷ್ಟವಿಲ್ಲವೆಂದು’ ಹೇಳಿದರೆ ಇಗೋ, ಅವರು ತಮ್ಮ ದೃಷ್ಟಿಗೆ ತೋಚಿದ ಹಾಗೆ ನನಗೆ ಮಾಡಲಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 15:26
18 ತಿಳಿವುಗಳ ಹೋಲಿಕೆ  

ಸಮುವೇಲನು ಮುಚ್ಚುಮರೆಯಿಲ್ಲದೆ ಎಲ್ಲವನ್ನೂ ತಿಳಿಸಿದನು. ಏಲಿ ಅದನ್ನು ಕೇಳಿ, “ಅವರೇ ಸರ್ವೇಶ್ವರ. ತಮಗೆ ಸರಿಕಂಡಂತೆ ಮಾಡಲಿ,” ಎಂದನು.


ನಿಮ್ಮನ್ನು ಮೆಚ್ಚಿ ಇಸ್ರಯೇಲ್ ಸಿಂಹಾಸನದ ಮೇಲೆ ಕುಳ್ಳಿರಿಸಿದ ನಿಮ್ಮ ದೇವರಾದ ಸರ್ವೇಶ್ವರನಿಗೆ ಸ್ತೋತ್ರವಾಗಲಿ! ಅವರು ಇಸ್ರಯೇಲರನ್ನು ಸದಾ ಪ್ರೀತಿಸುವವರಾಗಿರುವುದರಿಂದ ಆ ಜನರ ನೀತಿನ್ಯಾಯಗಳನ್ನು ಸ್ಥಾಪಿಸುವುದಕ್ಕಾಗಿ ನಿಮ್ಮನ್ನು ಅರಸನನ್ನಾಗಿ ನೇಮಿಸಿದ್ದಾರೆ,” ಎಂದು ಹೇಳಿದಳು.


ಬಿಕ್ಕಟ್ಟಿನಿಂದ ಬಿಡಿಸಿ ತಂದನು ಬಯಲಿಗೆ ಅಕ್ಕರೆಯಿಂದ ಮೆಚ್ಚಿ ನನಗಾದನು ರಕ್ಷೆ.


“ಎನ್ನ ಮನದನ್ನೆ” ಎನಿಸಿಕೊಳ್ಳುವೆ ನೀನು “ಸುವಿವಾಹಿತೆ” ಎನಿಸಿಕೊಳ್ಳುವುದು ನಿನ್ನ ನಾಡು. ನಿನ್ನಲ್ಲಿದೆ ಉಲ್ಲಾಸ ಸರ್ವೇಶ್ವರನಿಗೆ ವಿವಾಹವಾಗುವುದಿದೆ ನಿನ್ನ ನಾಡಿಗೆ.


ನಿಮ್ಮನ್ನು ಮೆಚ್ಚಿ, ತಮ್ಮ ಸಮ್ಮುಖದಲ್ಲಿ ಅರಸನಾಗಿಸಲು, ತಮ್ಮ ಸಿಂಹಾಸನದ ಮೇಲೆ ನಿಮ್ಮನ್ನು ಕುಳ್ಳಿರಿಸಿದ ಆ ದೇವರಾದ ಸರ್ವೇಶ್ವರನಿಗೆ ಸ್ತೋತ್ರವಾಗಲಿ! ನಿಮ್ಮ ದೇವರು ಇಸ್ರಯೇಲರನ್ನು ಪ್ರೀತಿಸಿ ಅವರನ್ನು ನಿರಂತರವಾಗಿ ಸ್ಥಿರಗೊಳಿಸಬೇಕೆಂದಿದ್ದಾರೆ. ಆದ್ದರಿಂದಲೇ ಈ ಜನರ ನೀತಿನ್ಯಾಯಗಳನ್ನು ಸ್ಥಾಪಿಸುವುದಕ್ಕಾಗಿ ನಿಮ್ಮನ್ನೇ ಅರಸನನ್ನಾಗಿ ನೇಮಿಸಿದ್ದಾರೆ,” ಎಂದು ಹೇಳಿದಳು.


ಹಾಲೂ ಜೇನೂ ಹರಿಯುವ ನಾಡದು! ಸರ್ವೇಶ್ವರನಿಗೆ ಮೆಚ್ಚುಗೆಯಾದರೆ ಅದರಲ್ಲಿ ನಮ್ಮನ್ನು ಸೇರಿಸುವರು, ಅದನ್ನೇ ನಮ್ಮ ಸ್ವಾಧೀನಕ್ಕೆ ಕೊಡುವರು.


ಹಿಜ್ಕೀಯನಿಗೆ ಮನಸ್ಸೆ, ಮನಸ್ಸೆಗೆ ಆಮೋನ್,


ಅವರಿಗೆ ಒಳಿತನ್ನು ಮಾಡುವುದರಲ್ಲಿ ಸಂತೋಷಿಸುವೆನು.


ಕೊನ್ಯನು ಬಿಸಾಡಲ್ಪಟ್ಟ ಒಡಕು ಕುಡಿಕೆಯೆ? ಯಾರಿಗೂ ಬೇಡವಾದ ಮಣ್ಣಿನ ಮಡಿಕೆಯೆ? ಅವನೂ ಅವನ ಮಡದಿಮಕ್ಕಳೇಕೆ ಬೀದಿಪಾಲಾಗಿದ್ದಾರೆ?


ಇಗೋ, ನನ್ನ ದಾಸನು ! ನನ್ನ ಆಧಾರ ಪಡೆದವನು ನನ್ನಿಂದ ಆಯ್ಕೆಯಾದವನು ನನಗೆ ಪರಮ ಪ್ರಿಯನು. ನೆಲೆಗೊಳಿಸಿರುವೆ ಇವನಲ್ಲಿ ನನ್ನ ಆತ್ಮವನು ಅನ್ಯರಾಷ್ಟ್ರಗಳಿಗೆ ಸಾರುವನಿವನು ಸದ್ಧರ್ಮವನು.


ಮೌನದಿಂದಿರುವೆ, ಬಾಯ್ದೆರೆಯದಿರುವೆ I ನನಗೊದಗಿರುವುದು ನಿನ್ನಿಂದಲ್ಲವೆ? II


ಇಸ್ರಯೇಲರು ಮರಳಿ ಸರ್ವೇಶ್ವರನಿಗೆ, “ಪಾಪ ಮಾಡಿದ್ದೇವೆ; ನಿಮಗೆ ಸರಿ ತೋರಿದಂತೆ ನಮಗೆ ಮಾಡಿ; ಆದರೆ ಈ ಸಾರಿ ಹೇಗೂ ನಮ್ಮನ್ನು ರಕ್ಷಿಸಬೇಕು,” ಎಂದು ಮೊರೆಯಿಟ್ಟರು. ಅನ್ಯದೇವತೆಗಳನ್ನು ಹೊರಗೆ ಹಾಕಿ ಸರ್ವೇಶ್ವರನನ್ನು ಪೂಜಿಸತೊಡಗಿದರು.


ದುಃಖಕಾಲ ತೀರಿದನಂತರ ದಾವೀದನು ಆಕೆಯನ್ನು ತನ್ನ ಮನೆಗೆ ಕರೆಯಿಸಿ ತನ್ನ ಹೆಂಡತಿಯನ್ನಾಗಿ ಮಾಡಿಕೊಂಡನು. ಆಕೆ ಅವನಿಂದ ಒಬ್ಬ ಮಗನನ್ನು ಹೆತ್ತಳು. ದಾವೀದನ ಈ ಕೃತ್ಯ ಸರ್ವೇಶ್ವರನ ದೃಷ್ಟಿಯಲ್ಲಿ ಕೆಟ್ಟದ್ದಾಗಿತ್ತು.


ಜನಗಣತಿ ಮಾಡಿದ್ದು ದೇವರಿಗೆ ಕೆಟ್ಟದ್ದು ಎಂದು ಕಂಡಿತು. ಆದ್ದರಿಂದ ಅವರು ಇಸ್ರಯೇಲರನ್ನು ಶಿಕ್ಷಿಸಿದರು.


ಇಗೋ, ಈಗ ನಾವು ನಿಮ್ಮ ಕೈಯಲ್ಲಿ ಇದ್ದೇವೆ. ನಿಮಗೆ ಯಾವುದು ಒಳ್ಳೆಯದು, ನ್ಯಾಯವಾದುದು ಎಂದು ತೋರುತ್ತದೋ ಅದರಂತೆ ನಮಗೆ ಮಾಡಿ,” ಎಂದು ಉತ್ತರಕೊಟ್ಟರು.


ಧೈರ್ಯದಿಂದಿರು, ನಮ್ಮ ಜನರಿಗಾಗಿ ಹಾಗು ನಮ್ಮ ದೇವರ ಪಟ್ಟಣಗಳಿಗಾಗಿ ನಮ್ಮ ಪೌರುಷವನ್ನು ತೋರಿಸೋಣ; ಸರ್ವೇಶ್ವರ ತಮಗೆ ಸರಿಕಾಣುವಂಥದ್ದನ್ನು ಮಾಡಲಿ,” ಎಂದು ಹೇಳಿ ಅವನನ್ನು ಅಮ್ಮೋನಿಯರಿಗೆ ವಿರೋಧವಾಗಿ ಕಳುಹಿಸಿದನು.


ನನ್ನ ತಂದೆಯ ಮನೆಯವರೆಲ್ಲರೂ ಅರಸರಾದ ನನ್ನ ಒಡೆಯರ ದೃಷ್ಟಿಯಲ್ಲಿ ಮರಣಕ್ಕೆ ಪಾತ್ರರಾಗಿದ್ದರು. ಆದರೂ ತಮ್ಮ ಸೇವಕನಾದ ನನ್ನನ್ನು ಭೋಜನಕ್ಕೆ ತಮ್ಮ ಪಂಕ್ತಿಯಲ್ಲಿ ಕುಳ್ಳಿರಿಸಿಕೊಂಡಿರಿ. ಅರಸರಿಗೆ ಹೆಚ್ಚಾಗಿ ಮೊರೆ ಇಡುವುದಕ್ಕೆ ನಾನು ಯೋಗ್ಯನಲ್ಲ,” ಎಂದು ಉತ್ತರಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು