Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 15:3 - ಕನ್ನಡ ಸತ್ಯವೇದವು C.L. Bible (BSI)

3 ಆಗ ಅಬ್ಷಾಲೋಮನು‍, “ನೋಡಿ, ನಿಮ್ಮ ವ್ಯಾಜ್ಯ ಒಳ್ಳೆಯದು ಹಾಗು ನ್ಯಾಯವಾದದ್ದು. ಆದರೆ ವ್ಯಾಜ್ಯಗಳನ್ನು ವಿಚಾರಿಸುವುದಕ್ಕೆ ರಾಜಪ್ರತಿನಿಧಿ ಒಬ್ಬನೂ ನೇಮಕವಾಗಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆಗ ಅಬ್ಷಾಲೋಮನು, “ನೋಡಿ ನಿಮ್ಮ ಕಾರ್ಯವು ಒಳ್ಳೆಯದೂ, ನ್ಯಾಯವಾದದ್ದೂ ಆಗಿದೆ. ಆದರೆ ವ್ಯಾಜ್ಯಗಳನ್ನು ವಿಚಾರಿಸುವುದಕ್ಕೆ ಅರಸನಿಂದ ಯಾರೂ ನೇಮಕವಾಗಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆಗ ಅಬ್ಷಾಲೋಮನು - ನೋಡು, ನಿನ್ನ ಕಾರ್ಯವು ಒಳ್ಳೇದೂ ನ್ಯಾಯವಾದದ್ದೂ ಆಗಿದೆ; ಆದರೆ ವ್ಯಾಜ್ಯಗಳನ್ನು ವಿಚಾರಿಸುವದಕ್ಕೆ ಅರಸನಿಂದ ಒಬ್ಬನೂ ನೇಮಕವಾಗಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆಗ ಅಬ್ಷಾಲೋಮನು ಆ ಮನುಷ್ಯನಿಗೆ, “ನೋಡು, ನಿನ್ನ ಬೇಡಿಕೆಗಳು ಸರಿಯಾಗಿವೆ. ಆದರೆ ರಾಜನಾದ ದಾವೀದನು ನಿನ್ನ ಮಾತುಗಳನ್ನು ಕೇಳುವುದಿಲ್ಲ” ಎಂದು ಹೇಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆಗ ಅಬ್ಷಾಲೋಮನು ಅವನಿಗೆ, “ನೋಡು ನಿನ್ನ ಕಾರ್ಯವು ಒಳ್ಳೆಯದೂ, ನ್ಯಾಯವಾದದದ್ದೂ ಆಗಿದೆ. ಆದರೆ ಅರಸನ ಬಳಿಯಲ್ಲಿ ನಿನ್ನನ್ನು ವಿಚಾರಿಸುವುದಕ್ಕೆ ಯಾವನೂ ಇಲ್ಲ,” ಅನ್ನುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 15:3
16 ತಿಳಿವುಗಳ ಹೋಲಿಕೆ  

ಮುಖ್ಯವಾಗಿ, ತುಚ್ಛವಾದ ದೈಹಿಕ ವ್ಯಾಮೋಹಗಳಿಗೆ ಬಲಿಯಾಗಿರುವವರನ್ನು ಮತ್ತು ದೇವರ ಅಧಿಕಾರವನ್ನು ತೃಣೀಕರಿಸುವವರನ್ನು ಅವರು ಶಿಕ್ಷಿಸದೆ ಬಿಡುವುದಿಲ್ಲ.


ಸರ್ವರನ್ನೂ ಸನ್ಮಾನಿಸಿರಿ, ಸಹೋದರರನ್ನು ಸ್ನೇಹಿಸಿರಿ, ದೇವರಲ್ಲಿ ಭಯಭಕ್ತಿ ಇಡಿ, ದೇಶಾಧಿಕಾರಿಗಳಿಗೆ ಗೌರವ ನೀಡಿ.


ಪ್ರತ್ಯುತ್ತರವಾಗಿ ಪೌಲನು, “ಸಹೋದರರೇ, ಇವರು ಪ್ರಧಾನ ಯಾಜಕರೆಂದು ನನಗೆ ತಿಳಿಯದೆ ಹೋಯಿತು. ‘ನಿಮ್ಮ ಪ್ರಜಾಪಾಲನನ್ನು ದೂಷಿಸಬೇಡ’ ಎಂದು ಪವಿತ್ರಗ್ರಂಥದಲ್ಲೇ ಬರೆದಿದೆ ಅಲ್ಲವೆ?” ಎಂದನು.


‘ನಿಮ್ಮ ತಂದೆತಾಯಿಗಳನ್ನು ಗೌರವಿಸಬೇಕು; ತಂದೆಗಾಗಲೀ, ತಾಯಿಗಾಗಲೀ, ಶಾಪಹಾಕುವವನಿಗೆ ಮರಣದಂಡನೆ ಆಗಲೇಬೇಕು’ ಎಂದು ದೇವರ ಕಟ್ಟಳೆ ಇದೆ.


“ಅವನ ಸ್ಥಾನದಲ್ಲಿ ನೀಚನೊಬ್ಬನು ಏಳುವನು. ಅವನು ರಾಜಪದವಿಗೆ ಹಕ್ಕುದಾರನಲ್ಲ. ಆದರೂ ನೆಮ್ಮದಿಯ ಕಾಲದಲ್ಲಿ ನಯವಾದ ನುಡಿಗಳಿಂದ ರಾಜ್ಯವನ್ನು ಪಡೆದುಕೊಳ್ಳುವನು.


ನಿನ್ನವರು ತಾಯಿತಂದೆಗಳನ್ನು ತುಚ್ಛೀಕರಿಸಿದ್ದಾರೆ, ನಿನ್ನವರು ವಿದೇಶಿಯರನ್ನು ಬಾದಿಸಿದ್ದಾರೆ, ನಿನ್ನವರು ಅನಾಥರನ್ನೂ ವಿಧವೆಯರನ್ನೂ ಹಿಂಸಿಸಿದ್ದಾರೆ.


ತಂದೆಯನ್ನು ಪರಿಹಾಸ್ಯಮಾಡುವ ಕಣ್ಣನ್ನು, ತಾಯಿಯ ಆಜ್ಞೆಯನ್ನು ಧಿಕ್ಕರಿಸುವ ನೇತ್ರವನ್ನು ಹಳ್ಳಕೊಳ್ಳದ ಕಾಗೆಗಳು ಕುಕ್ಕುವುವು, ರಣಹದ್ದುಗಳು ತಿಂದುಬಿಡುವುವು.


ತಂದೆಯನ್ನೇ ಶಪಿಸುವ, ತಾಯಿಗು ಮರ್ಯಾದೆಯನ್ನೂ ತರದ ಮಕ್ಕಳುಂಟು.


ಒಳ್ಳೆಯವನು ಸರ್ವೇಶ್ವರನ ದಯೆಯನ್ನು ಗಳಿಸುವನು; ಕೆಟ್ಟವನ ಕುಯುಕ್ತಿ ದೈವಖಂಡನೆಯನ್ನು ಪಡೆಯುವುದು.


ಹುಸಿಯ ನುಡಿವರು ನೆರೆಯವರೊಡನೆ ಪ್ರತಿಯೋರ್ವರು I ಕಪಟ ಮನದ ತುಟಿಮಾತಿನ ಸ್ತುತಿಗಾರರವರು II


ದಾವೀದನು ಸಮಸ್ತ ಇಸ್ರಯೇಲಿಗೂ ಅರಸನಾಗಿ ಪ್ರಜೆಗಳೆಲ್ಲರನ್ನೂ ಧರ್ಮಾನುಸಾರ ನ್ಯಾಯಯುತವಾಗಿ ನಡೆಸುತ್ತಿದ್ದನು.


ಇವರೆಲ್ಲರೂ ಜೊತೆಗೂಡಿ ಮೋಶೆ ಮತ್ತು ಆರೋನರ ಬಳಿಗೆ ಬಂದು, “ನಿಮ್ಮ ವರ್ತನೆ ಅಧಿಕವಾಯಿತು. ಈ ಸಮುದಾಯದಲ್ಲಿ ಪ್ರತಿಯೊಬ್ಬನೂ ಪ್ರತಿಷ್ಠಿತನೇ. ಸರ್ವೇಶ್ವರ ಇವರೆಲ್ಲರಲ್ಲಿ ವಾಸವಾಗಿದ್ದಾರಲ್ಲವೇ? ಹೀಗಿರಲಾಗಿ ಸರ್ವೇಶ್ವರನ ಸಮುದಾಯದವರಿಗಿಂತ ನಿಮ್ಮನ್ನು ನೀವೇ ಹೆಚ್ಚಿಸಿಕೊಳ್ಳುವುದೇಕೆ?” ಎಂದು ವಾದಿಸಿದರು.


“ತಂದೆಯನ್ನಾಗಲಿ, ತಾಯಿಯನ್ನಾಗಲಿ ಶಪಿಸುವವನಿಗೆ ಮರಣ ದಂಡನೆ ಆಗಬೇಕು.”


ನಿನ್ನ ತಂದೆತಾಯಿಗಳನ್ನು ಗೌರವಿಸು; ಗೌರವಿಸಿದರೆ ನಿನ್ನ ದೇವರೂ ಸರ್ವೇಶ್ವರನೂ ಆದ ನಾನು ನಿನಗೆ ಅನುಗ್ರಹಿಸುವ ನಾಡಿನಲ್ಲಿ ಬಹುಕಾಲ ಬಾಳುವೆ.


ವ್ಯಾಜ್ಯವಾಗಲಿ ಬಿನ್ನಹವಾಗಲಿ ಉಳ್ಳವರು ಬಂದು ನ್ಯಾಯವನ್ನು ಪಡೆದುಕೊಳ್ಳುವ ಹಾಗೆ ನನ್ನನ್ನೇ ನಾಡಿನ ನ್ಯಾಯಾಧಿಪತಿಯನ್ನಾಗಿ ನೇಮಿಸಿದ್ದರೆ ಎಷ್ಟೋ ಒಳ್ಳೆಯದಾಗುತ್ತಿತ್ತು,” ಎಂದು ಸೂಚಿಸುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು