Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 15:31 - ಕನ್ನಡ ಸತ್ಯವೇದವು C.L. Bible (BSI)

31 ಅಬ್ಷಾಲೋಮನ ಸಂಗಡ ಒಳಸಂಚು ಮಾಡಿದವರಲ್ಲಿ ಅಹೀತೋಫೆಲನೂ ಇದ್ದಾನೆಂಬ ವರ್ತಮಾನ ದಾವೀದನಿಗೆ ಮುಟ್ಟಿತು. ಅವನು, “ಸರ್ವೇಶ್ವರಾ, ಅಹೀತೋಫೆಲನ ಆಲೋಚನೆಗಳನ್ನು ನಿರರ್ಥಕಪಡಿಸು,” ಎಂದು ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಅಬ್ಷಾಲೋಮನ ಸಂಗಡ ಒಳಸಂಚು ಮಾಡಿದವರಲ್ಲಿ ಅಹೀತೋಫೆಲನೂ ಇದ್ದಾನೆಂಬ ವರ್ತಮಾನವು ದಾವೀದನಿಗೆ ಮುಟ್ಟಿದಾಗ ಅವನು, “ಯೆಹೋವನೇ ಅಹೀತೋಫೆಲನ ಆಲೋಚನೆಗಳನ್ನು ನಿರರ್ಥಕಪಡಿಸು” ಎಂದು ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಅಬ್ಷಾಲೋಮನ ಸಂಗಡ ಒಳಸಂಚುಮಾಡಿದವರಲ್ಲಿ ಅಹೀತೋಫೆಲನೂ ಇದ್ದಾನೆಂಬ ವರ್ತಮಾನವು ದಾವೀದನಿಗೆ ಮುಟ್ಟಿದಾಗ ಅವನು - ಯೆಹೋವನೇ, ಅಹೀತೋಫೆಲನ ಆಲೋಚನೆಗಳನ್ನು ನಿರರ್ಥಕಪಡಿಸು ಎಂದು ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಒಬ್ಬನು ದಾವೀದನಿಗೆ, “ಅಬ್ಷಾಲೋಮನ ಜೊತೆಯಲ್ಲಿ ಉಪಾಯಗಳನ್ನು ಮಾಡಿದ ಜನರಲ್ಲಿ ಅಹೀತೋಫೆಲನೂ ಒಬ್ಬನು” ಎಂದು ಹೇಳಿದನು. ಆಗ ದಾವೀದನು, “ಯೆಹೋವನೇ, ಅಹೀತೋಫೆಲನ ಸಲಹೆಗಳನ್ನು ವಿಫಲಗೊಳಿಸು” ಎಂದು ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಅಹೀತೋಫೆಲನು ಅಬ್ಷಾಲೋಮನ ಬಳಿಯಲ್ಲಿ ಒಳಸಂಚಿನವರ ಸಂಗಡ ಇದ್ದಾನೆಂದು ದಾವೀದನಿಗೆ ತಿಳಿಸಲಾಯಿತು. ಆಗ ದಾವೀದನು, “ಯೆಹೋವ ದೇವರೇ, ಅಹೀತೋಫೆಲನ ಆಲೋಚನೆಯನ್ನು ಹುಚ್ಚುತನವನ್ನಾಗಿ ಮಾಡಿಬಿಡು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 15:31
23 ತಿಳಿವುಗಳ ಹೋಲಿಕೆ  

ಅಹೀತೋಫೆಲನು ತನ್ನ ಆಲೋಚನೆ ನಡೆಯಲಿಲ್ಲವೆಂದು ತಿಳಿದು, ಕತ್ತೆಗೆ ತಡಿಹಾಕಿಸಿ ಕುಳಿತುಕೊಂಡು ತನ್ನ ಊರಿಗೆ ಹೋಗಿದ್ದನು. ಮನೆಯ ವ್ಯವಸ್ಥೆಮಾಡಿ ಅನಂತರ ಉರ್ಲು ಹಾಕಿಕೊಂಡು ಸತ್ತನು. ಅವನ ಶವವನ್ನು ಅವನ ತಂದೆಯ ಸ್ಮಶಾನಭೂಮಿಯಲ್ಲಿ ಸಮಾಧಿ ಮಾಡಿದರು.


ಇದನ್ನು ಕೇಳಿ ಅಬ್ಷಾಲೋಮನೂ ಎಲ್ಲ ಇಸ್ರಯೇಲರೂ, “ಅರ್ಕಿಯನಾದ ಹೂಷೈಯ ಆಲೋಚನೆಯು ಅಹೀತೋಫೆಲನ ಆಲೋಚನೆಗಿಂತ ಒಳ್ಳೆಯದಾಗಿದೆ,” ಎಂದರು. ಹೀಗೆ ಸರ್ವೇಶ್ವರ ಅಬ್ಷಾಲೋಮನಿಗೆ ಕೇಡನ್ನುಂಟುಮಾಡಬೇಕೆಂದು, ಅಹೀತೋಫೆಲನ ಆಲೋಚನೆಯನ್ನು ವ್ಯರ್ಥಮಾಡಿದರು.


ಅಂಥ ಜ್ಞಾನ ದೇವರಿಂದ ಬಂದ ಜ್ಞಾನವಲ್ಲ; ಅದು ಪ್ರಾಪಂಚಿಕವಾದುದು, ಪ್ರಾಕೃತವಾದುದು, ಪೈಶಾಚಿಕವಾದುದು.


ನನ್ನಾಪ್ತಮಿತ್ರನು, ನನ್ನ ನಂಬಿಕೆಗೆ ಪಾತ್ರನು I ನನ್ನೊಡನೆ ಉಂಡವನು, ನನಗೆರಡು ಬಗೆದಿಹನು II


ಆ ದಿನಗಳಲ್ಲಿ ಅಹೀತೋಫೆಲನ ಆಲೋಚನೆಗಳಿಗೆ ದೈವೋತ್ತರಗಳಿಗಿರುವಷ್ಟೇ ಬೆಲೆಯಿತ್ತು. ದಾವೀದನೂ ಅಬ್ಷಾಲೋಮನೂ ಅವನ ಸಲಹೆಗಳನ್ನು ಮಾನ್ಯಮಾಡುತ್ತಿದ್ದರು.


ಹೀಗಿರುವಾಗ ಜ್ಞಾನಿಯೆಲ್ಲಿ? ಶಾಸ್ತ್ರಜ್ಞನೆಲ್ಲಿ? ಜಗತ್ತಿನ ತರ್ಕನಿಪುಣನೆಲ್ಲಿ? ಪ್ರಪಂಚದ ಜ್ಞಾನವನ್ನು ದೇವರು ಹುಚ್ಚುತನವಾಗಿಸಿಲ್ಲವೇ?


ಪ್ರಭೂ, ನನಗೆ ವಿರೋಧಿಗಳು ಅನೇಕ I ನನಗೆದುರಾಗಿ ನಿಂತವರು ಅತ್ಯಧಿಕ II


ಭಂಗಪಡಿಸುತ್ತಾನೆ ವಂಚಕರ ಉಪಾಯಗಳನು ಕೈಗೂಡಗೊಳಿಸನು ಅವರ ಪ್ರಯತ್ನಗಳನು.


ಇದಲ್ಲದೆ ಅವನು ಶಾಂತಿಸಮಾಧಾನದ ಬಲಿದಾನ ಮಾಡುತ್ತಿರುವಾಗ ದಾವೀದನ ಮಂತ್ರಿಯಾಗಿದ್ದ ಗೀಲೋವಿನ ಅಹೀತೋಫೆಲನೆಂಬವನನ್ನು ಅವನ ಊರಾದ ಗೀಲೋವಿನಿಂದ ಬರಮಾಡಿಸಿದ್ದನು. ಜನರು ಅಬ್ಷಾಲೋಮನನ್ನು ಕೂಡಿಕೊಳ್ಳುತ್ತಾ ಬಂದುದರಿಂದ ಒಳಸಂಚು ಪ್ರಬಲವಾಗುತ್ತಾ ಹೋಯಿತು.


“ನಾನು ನಿಮ್ಮೆಲ್ಲರನ್ನೂ ಕುರಿತು ಹೀಗೆ ಹೇಳುತ್ತಾ ಇಲ್ಲ. ಯಾರನ್ನು ನಾನು ಆರಿಸಿಕೊಂಡಿದ್ದೇನೆಂಬುದು ನನಗೆ ಗೊತ್ತು. ಆದರೆ ‘ನನ್ನೊಡನೆ ಉಂಡವನೇ ನನಗೆ ದ್ರೋಹ ಬಗೆದನು’ ಎಂಬುದಾಗಿ ಪವಿತ್ರಗ್ರಂಥದಲ್ಲಿ ಬರೆದಿದೆ. ಆ ಮಾತು ಈಡೇರಬೇಕಾಗಿದೆ.


ಈಜಿಪ್ಟಿನವರ ಚೈತನ್ಯ ಉಡುಗಿಹೋಗುವುದು. ಅವರ ಯೋಜನೆಗಳು ಭಂಗವಾಗುವುವು. ಜನರು ವಿಗ್ರಹಗಳನ್ನು, ಮಂತ್ರಗಾರರನ್ನು, ಪ್ರೇತವಿಚಾರಕರನ್ನು, ಕಣಿಹೇಳುವವರನ್ನು ಆಶ್ರಯಿಸುವರು.”


ಹಾಕಿಹರು ದ್ವೇಷತುಂಬಿದ ಮಾತುಗಳ ಮುತ್ತಿಗೆ I ನನ್ನ ಎದುರಿಸುತಿಹರು ನಿಷ್ಕಾರಣವಾಗಿಯೆ II


ನಾ ಸಹಿಸಿಕೊಳ್ಳುತ್ತಿದ್ದೆ ದೂಷಿಸುವವನು ಶತ್ರುವಾಗಿದ್ದರೆ I ನಾನವಿತುಕೊಳ್ಳುತ್ತಿದ್ದೆ ದ್ವೇಷಿಸುವವನು ವೈರಿಯಾಗಿದ್ದರೆ II


ಸುಳ್ಳುಶಕುನ ಹೇಳುವವರನು ನಿರರ್ಥಕಗೊಳಿಸುವವನು ನಾನೆ ಕಣಿ ಹೇಳುವವರನು ಮರುಳುಗೊಳಿಸುವವನು ನಾನೆ ವಿವೇಕಿಗಳೊಡನೆ ವಾದಿಸಿ ಅವರ ವಿವೇಕವೇ ಅವಿವೇಕವೆಂದು ತೋರಿಸಿದವನು ನಾನೆ.


ಆಮೇಲೆ ಅಬ್ಷಾಲೋಮನು, “‍ಅರ್ಕೀಯನಾದ ಹೂಷೈಯನ್ನು ಕರೆದು ಅವನ ಅಭಿಪ್ರಾಯವನ್ನೂ ಕೇಳೋಣ,” ಎಂದುಕೊಂಡನು.


ಆಗ ಹೂಷೈಯು ಅಬ್ಷಾಲೋಮನಿಗೆ, “ಈ ಸಾರಿ ಅಹೀತೋಫೆಲನು ಹೇಳಿದ ಆಲೋಚನೆ ಒಳ್ಳೆಯದಲ್ಲ;


ಗೋಡೆ ಸುತ್ತಲೂ ತಿರುಗುತಿಹರವರು ಹಗಲಿರುಳು I ನಗರದೊಳಗೆ ತುಂಬಿವೆ ಅಕ್ರಮ ಅನಾಚಾರಗಳು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು