Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 15:5 - ಕನ್ನಡ ಸತ್ಯವೇದವು C.L. Bible (BSI)

5 ಯಾವನಾದರು ಅವನಿಗೆ ಸಾಷ್ಟಾಂಗ ನಮಸ್ಕಾರ ಮಾಡುವುದಕ್ಕೆ ಬಂದರೆ ಅಂಥವನನ್ನು ಕೂಡಲೆ ಕೈಚಾಚಿ ಅವನನ್ನು ಎತ್ತಿ ಮುದ್ದಿಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಯಾರಾದರೂ ಅವನಿಗೆ ಸಾಷ್ಟಾಂಗ ನಮಸ್ಕಾರ ಮಾಡುವುದಕ್ಕೆ ಬಂದರೆ ಅಂಥವರನ್ನು ಕೂಡಲೆ ಕೈಚಾಚಿ ಅವರನ್ನು ಹಿಡಿದು ಮುದ್ದಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಯಾವನಾದರೂ ಅವನಿಗೆ ಸಾಷ್ಟಾಂಗನಮಸ್ಕಾರ ಮಾಡುವದಕ್ಕೆ ಬಂದರೆ ಅವನು ಕೂಡಲೆ ಕೈಚಾಚಿ ಅವನನ್ನು ಹಿಡಿದು ಮುದ್ದಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಯಾವನಾದರೂ ಅಬ್ಷಾಲೋಮನ ಹತ್ತಿರಕ್ಕೆ ಬಂದು ಸಾಷ್ಟಾಂಗನಮಸ್ಕಾರಮಾಡಲು ಬಾಗಿದಾಗ, ಅಬ್ಷಾಲೋಮನು ಕೈಚಾಚಿ ಅವನನ್ನು ಅಪ್ಪಿಕೊಂಡು ಮುದ್ದಿಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಯಾವನಾದರೂ ಅವನಿಗೆ ವಂದಿಸುವುದಕ್ಕೆ ಬಂದರೆ, ಕೂಡಲೆ ತನ್ನ ಕೈಯನ್ನು ಚಾಚಿ ಅಂಥವನನ್ನು ಎತ್ತಿ ಮುದ್ದಿಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 15:5
6 ತಿಳಿವುಗಳ ಹೋಲಿಕೆ  

ಯೋವಾಬನು ಹೋಗಿ ಇದನ್ನು ಅರಸನಿಗೆ ತಿಳಿಸಿದಾಗ ಅರಸನು ಅಬ್ಷಾಲೋಮನನ್ನು ಕರೆಯಿಸಿದನು. ಅವನು ಅರಸನ ಬಳಿಗೆ ಬಂದು ಸಾಷ್ಟಾಂಗ ನಮಸ್ಕಾರ ಮಾಡಿದನು. ಅರಸನು ಅವನಿಗೆ ಮುದ್ದಿಟ್ಟನು.


ಹಗೆಗಾರ ಸವಿನುಡಿದರೂ ನಂಬಬೇಡ; ಹೃದಯದಲ್ಲಿದೆ ಏಳ್ಮಡಿ ಹೇಯ ಕೃತ್ಯ.


ಅವನ ಬಾಯಿ ಬೆಣ್ಣೆಗಿಂತ ನಯ, ಆದರೆ ಹೃದಯ ಕಲಹಭರಿತ I ನುಡಿ ಎಣ್ಣೆಗಿಂತ ನುಣುಪು, ಆದರೆ ಬಿಚ್ಚುಗತ್ತಿಗಿಂತ ಹರಿತ II


ನೀನು ನನಗೆ ಮುತ್ತಿಟ್ಟು ಸ್ವಾಗತಿಸಲಿಲ್ಲ; ಆದರೆ ಈಕೆ ಒಳಗೆ ಬಂದಾಗಿನಿಂದ ನನ್ನ ಪಾದಗಳಿಗೆ ಮುತ್ತಿಡುವುದನ್ನು ನಿಲ್ಲಿಸಿಲ್ಲ;


ಅವನು ಅಮಾಸನನ್ನು, “ಸಹೋದರಾ, ಕ್ಷೇಮವೇ?” ಎಂದು ಕೇಳಿ ಮುದ್ದಿಡುವುದಕ್ಕೋ ಎಂಬಂತೆ ಬಲಗೈಯಿಂದ ಅವನ ಗಡ್ಡವನ್ನು ಹಿಡಿದು, ಕೈಯಲ್ಲಿದ್ದ ಕತ್ತಿಯನ್ನು ಗಮನಿಸದಿದ್ದ ಅಮಾಸನ ಹೊಟ್ಟೆಯನ್ನು ಇರಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು