Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 16:12 - ಕನ್ನಡ ಸತ್ಯವೇದವು C.L. Bible (BSI)

12 ಬಹುಶಃ ಸರ್ವೇಶ್ವರ ನನ್ನ ಕಷ್ಟವನ್ನು ನೋಡಿ ಈ ದಿನ ಶಾಪಕ್ಕೆ ಬದಲಾಗಿ ನನಗೆ ಶುಭವನ್ನು ಅನುಗ್ರಹಿಸಿಯಾರು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಒಂದು ವೇಳೆ ಯೆಹೋವನು ನನ್ನ ಕಷ್ಟವನ್ನು ನೋಡಿ ಈ ಹೊತ್ತಿನ ಶಾಪಕ್ಕೆ ಬದಲಾಗಿ ನನಗೆ ಶುಭವನ್ನು ಅನುಗ್ರಹಿಸಾನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಒಂದು ವೇಳೆ ಯೆಹೋವನು ನನ್ನ ಕಷ್ಟವನ್ನು ನೋಡಿ ಈಹೊತ್ತಿನ ಶಾಪಕ್ಕೆ ಬದಲಾಗಿ ನನಗೆ ಶುಭವನ್ನು ಅನುಗ್ರಹಿಸಾನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಯೆಹೋವನು ನನಗುಂಟಾಗುತ್ತಿರುವ ಕೇಡುಗಳನ್ನು ನೋಡಿ ಶಿಮ್ಮಿಯ ಶಾಪಕ್ಕೆ ಬದಲಾಗಿ ಶುಭವನ್ನು ಅನುಗ್ರಹಿಸಬಹುದೇನೋ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಒಂದು ವೇಳೆ ಯೆಹೋವ ದೇವರು ನನ್ನ ಕಷ್ಟವನ್ನು ಕಂಡು, ಈ ದಿನದಲ್ಲಿ ಅವನು ಮಾಡಿದ ಶಾಪಕ್ಕೆ ಪ್ರತಿಯಾಗಿ, ನನಗೆ ಒಳ್ಳೆಯದನ್ನು ಮಾಡಬಹುದು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 16:12
22 ತಿಳಿವುಗಳ ಹೋಲಿಕೆ  

ಲೌಕಿಕ ತಂದೆಯಾದವರು ತಮ್ಮ ಮನಸ್ಸಿಗೆ ಸರಿದೋರಿದಂತೆ ನಮ್ಮನ್ನು ಶಿಕ್ಷಿಸುತ್ತಾರೆ. ಅದು ಕೊಂಚಕಾಲಕ್ಕೆ ಮಾತ್ರ ಪರಿಣಾಮಕರವಾಗಿರುತ್ತದೆ. ದೇವರಾದರೋ ನಾವು ಅವರ ಪರಿಶುದ್ಧತೆಯಲ್ಲೇ ಭಾಗಿಗಳಾಗುವಂತೆ ನಮ್ಮ ಹಿತಕ್ಕೋಸ್ಕರ ಶಿಕ್ಷಿಸುತ್ತಾರೆ.


ಆದರೂ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಪ್ರೀತಿಸಿದ್ದರಿಂದ ಬಿಳಾಮನ ಮಾತಿಗೆ ಸಮ್ಮತಿಸದೆ, ಅವನಿಂದ ಶಾಪವನ್ನು ನುಡಿಸದೆ, ಆಶೀರ್ವಾದವನ್ನೇ ಹೇಳಿಸಿದರು.


ದೇವರನ್ನು ಪ್ರೀತಿಸುವವರಿಗೂ ದೇವರ ಸಂಕಲ್ಪದ ಮೇರೆಗೆ ಕರೆಹೊಂದಿದವರಿಗೂ ಸಕಲವೂ ಹಿತಕರವಾಗಿ ಪರಿಣಮಿಸುವುದು.ಇದನ್ನು ನಾವು ಚೆನ್ನಾಗಿ ಅರಿತಿದ್ದೇವೆ.


ನೋಡೆನ್ನ ಬಾಧೆ ಬವಣೆಗಳನು I ತೊಡೆದು ಹಾಕೆನ್ನ ಪಾಪಗಳನು II


ಪ್ರಭು ಯೇಸು ತಮ್ಮ ಪ್ರಭಾವಯುತ ದೂತರೊಂದಿಗೆ ಸ್ವರ್ಗದಿಂದ ಪ್ರತ್ಯಕ್ಷರಾಗುವಾಗ, ಬೆಂಕಿಯ ಜ್ವಾಲೆಗಳು ಕಂಡುಬರುವುವು; ದೇವರನ್ನು ಅರಿತು ಅಲ್ಲಗಳೆದವರಿಗೂ ನಮ್ಮ ಪ್ರಭು ಯೇಸುವಿನ ಶುಭಸಂದೇಶಕ್ಕೆ ಅವಿಧೇಯರಾಗಿ ವರ್ತಿಸಿದವರಿಗೂ ತಕ್ಕ ಪ್ರತೀಕಾರವಾಗುವುದು.


“ಸರ್ವಶಕ್ತರಾದ ಸರ್ವೇಶ್ವರಾ, ನಿಮ್ಮ ದಾಸಿ ಆದ ನನ್ನ ದುಃಖವನ್ನು ನೀಗಿಸಿರಿ; ನನ್ನನ್ನು ಪರಾಂಬರಿಸಿರಿ; ನನ್ನನ್ನು ತಿರಸ್ಕರಿಸದೆ ಕನಿಕರಪಟ್ಟು ನನಗೊಬ್ಬ ಮಗನನ್ನು ಅನುಗ್ರಹಿಸಿ. ಅವನನ್ನು ಅಮರಣಾಂತರ ನಿಮಗೇ ಸಮರ್ಪಿಸುವೆನು; ಅವನ ತಲೆಯ ಮೇಲೆ ಕ್ಷೌರಕತ್ತಿಯನ್ನು ಬರಗೊಡಿಸುವುದಿಲ್ಲ ಎಂದು ಹರಕೆ ಮಾಡುತ್ತೇನೆ.”


ನಾವು ಅನುಭವಿಸುತ್ತಿರುವ ಕಷ್ಟಸಂಕಟಗಳು ಅಲ್ಪವಾದುವು, ಕ್ಷಣಿಕವಾದುವು. ಅವುಗಳಿಂದ ಲಭಿಸುವ ಮಹಿಮೆಯಾದರೋ ಅಪಾರವಾದುದು, ಅನಂತವಾದುದು.


ಸರ್ವೇಶ್ವರ ತಮ್ಮ ಪ್ರಜೆಯ ಘಾತುಕರನ್ನು ದಂಡಿಸಿದಷ್ಟು ತಮ್ಮ ಪ್ರಜೆಯನ್ನು ದಂಡಿಸಲಿಲ್ಲ. ಘಾತುಕರಿಗಾದ ಪ್ರಾಣನಷ್ಟ ತಮ್ಮ ಪ್ರಜೆಗೆ ಆಗಲಿಲ್ಲ.


ದಾವೀದನೂ ಅವನ ಜನರೂ ದಾರಿಹಿಡಿದು ಹೋಗುವಾಗ ಶಿಮ್ಮಿಯು ಶಪಿಸುತ್ತಾ ಕಲ್ಲುಮಣ್ಣು ತೂರುತ್ತಾ, ಗುಡ್ಡದ ಓರೆಯಲ್ಲಿ ಸಮಾನಾಂತರದಲ್ಲೇ ನಡೆಯುತ್ತಿದ್ದನು.


ಜೀವಸ್ವರೂಪರಾದ ದೇವರನ್ನು ದೂಷಿಸುವುದಕ್ಕಾಗಿ ತನ್ನ ಯಜಮಾನ ಅಸ್ಸೀರಿಯದ ರಾಜನಿಂದ ಕಳುಹಿಸಲಾಗಿದ್ದ ರಬ್ಷಾಕೆಯ ನಿಂದಾವಾಕ್ಯಗಳನ್ನು ನಿಮ್ಮ ದೇವರಾದ ಸರ್ವೇಶ್ವರ ಕೇಳಿದ್ದಾರೆ. ನಿಮ್ಮ ದೇವರಾದ ಸರ್ವೇಶ್ವರ ತಾವು ಕೇಳಿದ ಆ ವಾಕ್ಯಗಳ ನಿಮಿತ್ತ ಮುಯ್ಯಿತೀರಿಸಾರು; ಹೀಗಿರಲು ಉಳಿದಿರುವ ಸ್ವಲ್ಪ ಜನರಿಗಾಗಿ ದೇವರನ್ನು ನೀವು ಪ್ರಾರ್ಥನೆ ಮಾಡಿ’ ಎಂದು ಹಿಜ್ಕೀಯ ಕೇಳಿಕೊಂಡಿದ್ದಾರೆ ಎಂದು ತಿಳಿಸಿ,” ಎಂದನು.


ಅವರೆನ್ನನು ಶಪಿಸಿದರೂ ನೀನೆನ್ನನು ಹರಸು I ನನ್ನೆದುರಾಳಿಗೆ ಅಪಮಾನವನು ಹೊರಿಸು I ನಿನ್ನ ದಾಸನೆನಗೆ ಆನಂದವನು ಪಾಲಿಸು II


ನೆನಸಿಕೋ ಹೇ ಪ್ರಭೂ, ದಾವೀದನನು I ಆತ ಸಹಿಸಿದ ಕಷ್ಟದುಃಖಗಳನು II


ಹೀಗೆ ಅವನ ತಲೆಯ ಮೇಲೆ ಉರಿಕೆಂಡ ಸುರಿವೆ; ಸರ್ವೇಶ್ವರನಿಂದಲೂ ಪ್ರತಿಫಲ ಪಡೆಯುವೆ.


ಕುಪ್ಪಳಿಸುವ ಗುಬ್ಬಿಯಂತೆ, ಹಾರಾಡುವ ಬಾನಕ್ಕಿಯಂತೆ, ಕಾರಣವಿಲ್ಲದೆ ಕೊಟ್ಟ ಶಾಪ ಗಾಳಿ ಪಾಲಾಗುತ್ತದೆ.


ನಿಮ್ಮ ಜೀವಮಾನಕಾಲವನ್ನೆಲ್ಲಾ ಅವರ ಯೋಗಕ್ಷೇಮವನ್ನು ಬಯಸಲೇಬಾರದು.


ಹೌದು ದೇವಾ, ನೀ ವಿಚಾರಿಪವನು; ದುಃಖದುಗುಡ ಲೆಕ್ಕಿಸುವವನು I ತಬ್ಬಲಿಗಳಿಗೆ ತಂದೆ ನೀನು, ನಿರ್ಗತಿಕ ನಿನಗೆ ಶರಣಾಗತನು II


ಒಂದು ವೇಳೆ ಸರ್ವೇಶ್ವರ ತಮ್ಮ ಮನಸ್ಸನ್ನು ಬದಲಾಯಿಸಬಹುದು. ನಿಮ್ಮ ಕಡೆಗೆ ತಿರುಗಿ ನಿಮ್ಮನ್ನು ಆಶೀರ್ವದಿಸಬಹುದು; ನಿಮ್ಮ ದೇವರಾದ ಅವರಿಗೆ ಅರ್ಪಿಸಲು ಬೇಕಾದ ನೈವೇದ್ಯಗಳನ್ನು ಧಾರಾಳವಾಗಿ ಅನುಗ್ರಹಿಸಬಹುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು