Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 16:22 - ಕನ್ನಡ ಸತ್ಯವೇದವು C.L. Bible (BSI)

22 ಆಗ ಅಬ್ಷಾಲೋಮನಿಗಾಗಿ ಮಾಳಿಗೆಯ ಮೇಲೆ ಗುಡಾರಹಾಕಿದರು. ಅವನು ಎಲ್ಲ ಇಸ್ರಯೇಲರ ಮುಂದೆಯೇ ತನ್ನ ತಂದೆಯ ಉಪಪತ್ನಿಗಳನ್ನು ಕೂಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆಗ ಅವರು ಅಬ್ಷಾಲೋಮನಿಗೋಸ್ಕರ ಮಾಳಿಗೆಯ ಮೇಲೆ ಗುಡಾರ ಹಾಕಿದರು. ಅವನು ಎಲ್ಲಾ ಇಸ್ರಾಯೇಲ್ಯರ ಮುಂದೆಯೇ ತನ್ನ ತಂದೆಯ ಉಪಪತ್ನಿಗಳನ್ನು ಸಂಗಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಆಗ ಅಬ್ಷಾಲೋಮನಿಗೋಸ್ಕರ ಮಾಳಿಗೆಯ ಮೇಲೆ ಗುಡಾರಹಾಕಿದರು. ಅವನು ಎಲ್ಲಾ ಇಸ್ರಾಯೇಲ್ಯರ ಮುಂದೆಯೇ ತನ್ನ ತಂದೆಯ ಉಪಪತ್ನಿಗಳನ್ನು ಕೂಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಆಗ ಅವರು ಅಬ್ಷಾಲೋಮನಿಗಾಗಿ ಮನೆಯ ಮಾಳಿಗೆಯ ಮೇಲೆ ಒಂದು ಗುಡಾರವನ್ನು ಹಾಕಿದರು. ಅಬ್ಷಾಲೋಮನು ತನ್ನ ತಂದೆಯ ಪತ್ನಿಯರೊಡನೆ ಮಲಗಿಕೊಂಡನು. ಇಸ್ರೇಲರೆಲ್ಲ ಇದನ್ನು ನೋಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಹಾಗೆಯೇ ಅವರು ಅಬ್ಷಾಲೋಮನ ಮನೆಯ ಮೇಲೆ ಡೇರೆ ಹಾಕಿದರು. ಅಲ್ಲಿ ಅಬ್ಷಾಲೋಮನು ಸಮಸ್ತ ಇಸ್ರಾಯೇಲರ ಕಣ್ಣುಗಳ ಮುಂದೆ ತನ್ನ ತಂದೆಯ ಉಪಪತ್ನಿಗಳ ಸಂಗಡ ಮಲಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 16:22
11 ತಿಳಿವುಗಳ ಹೋಲಿಕೆ  

ಆಗ ಅರಸನು ಮನೆಕಾಯುವುದಕ್ಕಾಗಿ ಹತ್ತುಮಂದಿ ಉಪಪತ್ನಿಯರನ್ನು ಬಿಟ್ಟು ಉಳಿದವರನ್ನೆಲ್ಲಾ ಕರೆದುಕೊಂಡು ಹೊರಟನು.


ಅರಸನಾದ ದಾವೀದನು ಜೆರುಸಲೇಮಿಗೆ ಬಂದ ಮೇಲೆ ತಾನು ಮನೆಕಾಯುವುದಕ್ಕಾಗಿ ಇಟ್ಟಿದ್ದ ತನ್ನ ಹತ್ತು ಮಂದಿ ಉಪಪತ್ನಿಯರನ್ನು ಪ್ರತ್ಯೇಕವಾದ ಒಂದು ಮನೆಯಲ್ಲಿಟ್ಟು ಅವರಿಗೆ ಅನ್ನವಸ್ತ್ರ ಕೊಡುತ್ತಿದ್ದನು. ಆದರೆ ಅವರನ್ನು ತಿರುಗಿ ಕೂಡಲಿಲ್ಲ. ಅವರು ಜೀವದಿಂದ ಇರುವವರೆಗೂ ವಿಧವೆಯರಂತೆ ಇದ್ದು ಕಾವಲಲ್ಲಿರಬೇಕಾಯಿತು.


ಹೊಟ್ಟೆಯೇ ಅವರ ದೇವರು, ನಾಚಿಕೆಪಡಿಸುವ ಕಾರ್ಯಗಳಲ್ಲಿಯೇ ಅವರಿಗೆ ಹೆಮ್ಮೆ, ನಶ್ವರವಾದ ವಿಷಯಗಳಲ್ಲಿಯೇ ಅವರಿಗೆ ವ್ಯಾಮೋಹ. ಹೀಗಾಗಿ, ವಿನಾಶವೇ ಅವರ ಅಂತ್ಯ.


ಜೆರುಸಲೇಮ್ ನಗರ ಸುರಿಸಿದ ರಕ್ತ ಅದರಲ್ಲೇ ನಿಂತಿದೆ. ಧೂಳು ಮುಚ್ಚೀತೆಂದು ಆ ಪಟ್ಟಣದವರು ಅದನ್ನು ನೆಲದ ಮೇಲೆ ಹೊಯ್ಯದೆ, ಬರೀ ಬಂಡೆಯ ಮೇಲೆ ನಿಲ್ಲಿಸಿರುತ್ತಾರೆ.


ಅಸಹ್ಯಕಾರ್ಯಗಳನ್ನು ಮಾಡಿ ಅವಮಾನಕ್ಕೆ ಗುರಿಯಾಗಿದ್ದರೂ ಎಳ್ಳಷ್ಟೂ ನಾಚಿಕೆ ಇಲ್ಲದಿದ್ದಾರೆ. ಲಜ್ಜೆಯ ಗಂಧವೂ ಅವರಿಗಿಲ್ಲ. ಆದಕಾರಣ ಬೇರೆಯವರಂತೆ ಅವರೂ ಬೀಳುವರು. ನಾನು ದಂಡಿಸುವಾಗ ಅವರು ಏಳಲಾಗದಂತೆ ಮುಗ್ಗರಿಸಿ ಬೀಳುವರು. ಇದು ಸರ್ವೇಶ್ವರನಾದ ನನ್ನ ನುಡಿ.


ಆದಕಾರಣವೇ ಹದಮಳೆಗೆ ಅಡ್ಡಿಯಾಯಿತು. ವಸಂತಕಾಲದ ಮಳೆ ಬರದೆಹೋಯಿತು. ಇನ್ನೂ ನೀನು ವೇಶ್ಯೆ ಮುಖದವಳು, ಲಜ್ಜೆಗೆಟ್ಟವಳು !


ಅವರ ಮುಖಲಕ್ಷಣವೇ ಅವರ ವಿರುದ್ಧ ಸಾಕ್ಷಿಯಾಗಿದೆ. ಅವರು ಸೊದೋಮಿನವರಂತೆ ತಮ್ಮ ಪಾಪಗಳನ್ನು ಮುಚ್ಚುಮರೆಯಿಲ್ಲದೆ ಮೆರೆಯಿಸುತ್ತಾರೆ. ಅಯ್ಯೋ, ಅವರಿಗೆ ಕೇಡು! ತಮಗೆ ತಾವೇ ಕೇಡನ್ನು ಬರಮಾಡಿಕೊಂಡಿದ್ದಾರೆ.


ಒಂದು ದಿನ ಸಂಜೆ ಹೊತ್ತಿನಲ್ಲಿ ದಾವೀದನು ಮಂಚದಿಂದೆದ್ದು ಅರಮನೆಯ ಮಾಳಿಗೆಯ ಮೇಲೆ ತಿರುಗಾಡುತ್ತಿದ್ದನು. ಆಗ ಅಲ್ಲಿಂದ ಬಹು ಸುಂದರಿಯಾದ ಒಬ್ಬ ಸ್ತ್ರೀ ಸ್ನಾನಮಾಡುವುದನ್ನು ಕಂಡನು.


ಇಸ್ರಯೇಲರ ಸರ್ವಸಮುದಾಯದವರು ದೇವದರ್ಶನದ ಗುಡಾರದ ಬಾಗಿಲಿನ ಹತ್ತಿರ ವಿಲಾಪಿಸುತ್ತಿದ್ದರು. ಇಸ್ರಯೇಲನಾದ ಒಬ್ಬ ವ್ಯಕ್ತಿ ಮೋಶೆಗೂ ಸರ್ವಸಮೂಹದವರಿಗೂ ಕಾಣುವಂತೆ ಒಬ್ಬ ಮಿದ್ಯಾನ್ ಮಹಿಳೆಯನ್ನು ತನ್ನ ಮನೆಯೊಳಗೆ ಕರೆದುಕೊಂಡು ಹೋದನು.


ಇಸ್ರಯೇಲನು ಆ ನಾಡಿನಲ್ಲಿ ವಾಸವಾಗಿದ್ದಾಗ ರೂಬೇನ್ ತನ್ನ ತಂದೆಯ ಉಪಪತ್ನಿಯಾದ ಬಿಲ್ಹಳಲ್ಲಿ ಸಂಗಮಿಸಿದನು, ಈ ಸಂಗತಿ ತಿಳಿದುಬಂದಾಗ ಇಸ್ರಯೇಲನಿಗೆ ಕಡುಕೋಪವಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು