Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 16:23 - ಕನ್ನಡ ಸತ್ಯವೇದವು C.L. Bible (BSI)

23 ಆ ದಿನಗಳಲ್ಲಿ ಅಹೀತೋಫೆಲನ ಆಲೋಚನೆಗಳಿಗೆ ದೈವೋತ್ತರಗಳಿಗಿರುವಷ್ಟೇ ಬೆಲೆಯಿತ್ತು. ದಾವೀದನೂ ಅಬ್ಷಾಲೋಮನೂ ಅವನ ಸಲಹೆಗಳನ್ನು ಮಾನ್ಯಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಆ ಕಾಲದಲ್ಲಿ ಅಹೀತೋಫೆಲನ ಆಲೋಚನೆಗಳಿಗೆ ದೈವೋತ್ತರಗಳಿರುವಷ್ಟು ಬೆಲೆಯಿತ್ತು. ದಾವೀದನೂ ಮತ್ತು ಅಬ್ಷಾಲೋಮನೂ ಅವನ ಆಲೋಚನೆಗಳನ್ನು ಗೌರವಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಆ ಕಾಲದಲ್ಲಿ ಅಹೀತೋಫೆಲನ ಆಲೋಚನೆಗಳಿಗೆ ದೈವೋತ್ತರಗಳಿಗಿರುವಷ್ಟು ಬೆಲೆಯಿತ್ತು. ದಾವೀದನೂ ಅಬ್ಷಾಲೋಮನೂ ಅವನ ಆಲೋಚನೆಗಳನ್ನು ಗೌರವಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಆ ಸಮಯದಲ್ಲಿ ದಾವೀದನಿಗೆ ಮತ್ತು ಅಬ್ಷಾಲೋಮನಿಗೆ ಅಹೀತೋಫೆಲನ ಸಲಹೆಯು ಬಹಳ ಮುಖ್ಯವಾಗಿತ್ತು. ದೇವರ ವಾಕ್ಯವು ಮನುಷ್ಯನಿಗೆಷ್ಟು ಮುಖ್ಯವೋ ಅಷ್ಟೇ ಮುಖ್ಯವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆ ದಿವಸಗಳಲ್ಲಿ ಅಹೀತೋಫೆಲನು ತಿಳಿಸಿದ ಆಲೋಚನೆಯು ದೇವರನ್ನು ವಿಚಾರಿಸುವ ಹಾಗೆ ಇತ್ತು. ಅಹೀತೋಫೆಲನ ಆಲೋಚನೆಗಳನ್ನು ದಾವೀದನೂ, ಅಬ್ಷಾಲೋಮನೂ ಹಾಗೆಯೇ ಗೌರವಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 16:23
20 ತಿಳಿವುಗಳ ಹೋಲಿಕೆ  

ಇದಲ್ಲದೆ ಅವನು ಶಾಂತಿಸಮಾಧಾನದ ಬಲಿದಾನ ಮಾಡುತ್ತಿರುವಾಗ ದಾವೀದನ ಮಂತ್ರಿಯಾಗಿದ್ದ ಗೀಲೋವಿನ ಅಹೀತೋಫೆಲನೆಂಬವನನ್ನು ಅವನ ಊರಾದ ಗೀಲೋವಿನಿಂದ ಬರಮಾಡಿಸಿದ್ದನು. ಜನರು ಅಬ್ಷಾಲೋಮನನ್ನು ಕೂಡಿಕೊಳ್ಳುತ್ತಾ ಬಂದುದರಿಂದ ಒಳಸಂಚು ಪ್ರಬಲವಾಗುತ್ತಾ ಹೋಯಿತು.


ಅಹೀತೋಫೆಲನು ತನ್ನ ಆಲೋಚನೆ ನಡೆಯಲಿಲ್ಲವೆಂದು ತಿಳಿದು, ಕತ್ತೆಗೆ ತಡಿಹಾಕಿಸಿ ಕುಳಿತುಕೊಂಡು ತನ್ನ ಊರಿಗೆ ಹೋಗಿದ್ದನು. ಮನೆಯ ವ್ಯವಸ್ಥೆಮಾಡಿ ಅನಂತರ ಉರ್ಲು ಹಾಕಿಕೊಂಡು ಸತ್ತನು. ಅವನ ಶವವನ್ನು ಅವನ ತಂದೆಯ ಸ್ಮಶಾನಭೂಮಿಯಲ್ಲಿ ಸಮಾಧಿ ಮಾಡಿದರು.


ಇದನ್ನು ಕೇಳಿ ಅಬ್ಷಾಲೋಮನೂ ಎಲ್ಲ ಇಸ್ರಯೇಲರೂ, “ಅರ್ಕಿಯನಾದ ಹೂಷೈಯ ಆಲೋಚನೆಯು ಅಹೀತೋಫೆಲನ ಆಲೋಚನೆಗಿಂತ ಒಳ್ಳೆಯದಾಗಿದೆ,” ಎಂದರು. ಹೀಗೆ ಸರ್ವೇಶ್ವರ ಅಬ್ಷಾಲೋಮನಿಗೆ ಕೇಡನ್ನುಂಟುಮಾಡಬೇಕೆಂದು, ಅಹೀತೋಫೆಲನ ಆಲೋಚನೆಯನ್ನು ವ್ಯರ್ಥಮಾಡಿದರು.


ಬೋಧಿಸುವ ವರವನ್ನು ಪಡೆದವನು ದೇವರ ವಾಕ್ಯವನ್ನು ಬೋಧಿಸುವವನಂತೆ ಬೋಧನೆಮಾಡಲಿ. ಸೇವೆಮಾಡುವ ವರವನ್ನು ಪಡೆದವನು, ದೇವರಿಂದ ಶಕ್ತಿಯನ್ನು ಪಡೆದವನಂತೆ ಸೇವೆಮಾಡಲಿ. ಇದರಿಂದ ಯೇಸುಕ್ರಿಸ್ತರ ಮುಖಾಂತರ ಎಲ್ಲದರಲ್ಲಿಯೂ ದೇವರಿಗೆ ಸ್ತುತಿಯುಂಟಾಗುವುದು. ಅವರಿಗೆ ಸದಾಕಾಲ ಮಹಿಮೆಯೂ ಸರ್ವಾಧಿಕಾರವೂ ಸಲ್ಲಲಿ. ಆಮೆನ್.


ತಾವೇ ಜ್ಞಾನಿಗಳೆಂದುಕೊಚ್ಚಿಕೊಳ್ಳುತ್ತ ಅವರು ನಿಜವಾಗಿಯೂ ಮೂರ್ಖರಾದರು.


“ಈ ಅಪ್ರಾಮಾಣಿಕ ಮೇಸ್ತ್ರಿ ಮಾಡಿದ ಮುಂದಾಲೋಚನೆಯನ್ನು ಅವನ ಯಜಮಾನ ಪ್ರಶಂಶಿಸಿದ. ಏಕೆಂದರೆ, ತಮ್ಮ ತಮ್ಮ ವ್ಯವಹಾರಗಳಲ್ಲಿ ಲೌಕಿಕ ಜನರು ಬೆಳಕಿನ ರಾಜ್ಯದ ಜನರಿಗಿಂತ ಜಾಣರು.


ಆ ಸಮಯದಲ್ಲಿ ಯೇಸುಸ್ವಾಮಿ, “ಪಿತನೇ, ಪರಲೋಕ ಭೂಲೋಕಗಳ ಒಡೆಯನೇ, ಜ್ಞಾನಿಗಳಿಗೂ ಮೇಧಾವಿಗಳಿಗೂ ಈ ವಿಷಯಗಳನ್ನು ಮರೆಮಾಡಿ ಮಕ್ಕಳಂಥವರಿಗೆ ನೀವು ಶ್ರುತಪಡಿಸಿದ್ದೀರಿ; ಇದಕ್ಕಾಗಿ ನಿಮ್ಮನ್ನು ವಂದಿಸುತ್ತೇನೆ.


ಜ್ಞಾನಿಗಳು ನಾಚಿಕೆಪಡುವರು, ನಿಬ್ಬೆರಗಾಗಿ ಬೋನಿಗೆ ಸಿಕ್ಕಿಬೀಳುವರು. ಏಕೆಂದರೆ ಸರ್ವೇಶ್ವರನಾದ ನನ್ನ ಮಾತನ್ನು ಅವರು ನಿರಾಕರಿಸಿದ್ದಾರೆ. ಇದು ತಾನೋ ಅವರ ಜ್ಞಾನ?


ಸರ್ವೇಶ್ವರ ಹೀಗೆನ್ನುತ್ತಾರೆ: ನನ್ನ ಜನರು ಮೂರ್ಖರು, ನನ್ನನ್ನು ತಿಳಿಯರು. ಪೆದ್ದ ಮಕ್ಕಳು, ಬುದ್ಧಿಯಿಲ್ಲದವರು ಕೇಡುಮಾಡುವುದರಲ್ಲಿ ಪ್ರವೀಣರು ಒಳಿತನ್ನು ಮಾಡಲು ಅರಿಯರು


ಸತ್ತ ನೊಣಗಳಿಂದ ಗಂದಿಗನ ತೈಲ ಕೂಡ ನಾರುತ್ತದೆ. ಅಂತೆಯೇ ಹುಚ್ಚುತನ ಕೊಂಚವಾದರೂ ಜ್ಞಾನಮಾನಗಳನ್ನು ಕೆಡಿಸಿಬಿಡುತ್ತದೆ.


ನಿನ್ನ ಪರಿಶುದ್ಧಾಲಯದತ್ತ ಕೈಯೆತ್ತಿ ಮುಗಿವೆನು I ಕರುಣೆಯಿಂದಾಲಿಸು ಪ್ರಭು, ನನ್ನಾರ್ತ ಮನವಿಯನು II


ಪ್ರಭುವಿನ ಆಜ್ಞೆ ಪರಿಪೂರ್ಣ; ಜೀವನಕದು ನವಚೇತನ I ನಂಬಲರ್ಹ; ಪ್ರಭುವಿನ ಶಾಸನ ಮುಗ್ದರಿಗದು ಸುಜ್ಞಾನ II


ಬಳಿಕ ಮಾನವನಿಗೆ ಇಂತೆಂದನು: ‘ಸರ್ವೇಶ್ವರನಲ್ಲಿ ಭಯಭಕ್ತಿ ಇಡುವುದೇ ಸುಜ್ಞಾನ ದುಷ್ಟತನವನ್ನು ಬಿಟ್ಟುಬಿಡುವುದೇ ವಿವೇಕ’.”


ಭಂಗಪಡಿಸುತ್ತಾನೆ ವಂಚಕರ ಉಪಾಯಗಳನು ಕೈಗೂಡಗೊಳಿಸನು ಅವರ ಪ್ರಯತ್ನಗಳನು.


ಆಗ ದಾವೀದನು ಸರ್ವೇಶ್ವರನನ್ನು, “ನಾನು ಆ ದಾಳಿಕಾರರನ್ನು ಬೆನ್ನಟ್ಟಬಹುದೇ? ಅವರು ನನಗೆ ವಶವಾಗುವರೇ?” ಎಂದು ಕೇಳಿದನು. “ಬೆನ್ನಟ್ಟು, ಅವರು ನಿನ್ನ ವಶವಾಗುವರು, ನೀನು ನಿನ್ನವರೆಲ್ಲರನ್ನೂ ಬಿಡಿಸಿಕೊಂಡು ಬರುವೆ,” ಎಂದು ಉತ್ತರಕೊಟ್ಟನು ಸರ್ವೇಶ್ವರ.


ದೈವೇಚ್ಛೆಯನ್ನು ತಿಳಿದುಕೊಳ್ಳಲು ಅವನು ಮಹಾಯಾಜಕ ಎಲ್ಲಾಜಾರನ ಹತ್ತಿರ ಬರಬೇಕು. ಎಲ್ಲಾಜಾರನು ಸರ್ವೇಶ್ವರನ ಸನ್ನಿಧಿಯಲ್ಲಿ ‘ಊರಿಮ್’ ಎಂಬ ವಸ್ತುವಿನ ಮೂಲಕ ಅವನ ಪರವಾಗಿ ವಿಚಾರಿಸುವನು, ಯೆಹೋಶುವನು ಮತ್ತು ಇಸ್ರಾಯೇಲ್ ಸಮಾಜದವರೆಲ್ಲರು ಅವನ ಮಾತಿನಂತೆ ಹೊರಡಬೇಕು ಹಾಗು ಹಿಂದಿರುಗಬೇಕು,” ಎಂದು ಆಜ್ಞಾಪಿಸಿದರು.


ಅಬ್ಷಾಲೋಮನ ಸಂಗಡ ಒಳಸಂಚು ಮಾಡಿದವರಲ್ಲಿ ಅಹೀತೋಫೆಲನೂ ಇದ್ದಾನೆಂಬ ವರ್ತಮಾನ ದಾವೀದನಿಗೆ ಮುಟ್ಟಿತು. ಅವನು, “ಸರ್ವೇಶ್ವರಾ, ಅಹೀತೋಫೆಲನ ಆಲೋಚನೆಗಳನ್ನು ನಿರರ್ಥಕಪಡಿಸು,” ಎಂದು ಪ್ರಾರ್ಥಿಸಿದನು.


ತರುವಾಯ ಅಹೀತೋಫೆಲನು ಅಬ್ಷಾಲೋಮನಿಗೆ, “ಅಪ್ಪಣೆಯಾಗಲಿ, ನಾನು ಹನ್ನೆರಡು ಸಾವಿರ ಜನರನ್ನು ಆರಿಸಿಕೊಂಡು ಈ ರಾತ್ರಿಯೇ ದಾವೀದನನ್ನು ಹಿಂದಟ್ಟುವೆನು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು