Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 16:9 - ಕನ್ನಡ ಸತ್ಯವೇದವು C.L. Bible (BSI)

9 ಆಗ ಚೆರೂಯಳ ಮಗ ಅಬೀಷೈಯು ಅರಸನಿಗೆ, “ಈ ಸತ್ತನಾಯಿ ಅರಸನಾದ ನನ್ನ ಒಡೆಯರನ್ನು ಶಪಿಸುವುದೇನು? ಅಪ್ಪಣೆಯಾಗಲಿ, ನಾನು ಅವನಿರುವಲ್ಲಿಗೇ ಹೋಗಿ, ಅವನ ತಲೆ ಹಾರಿಸಿಕೊಂಡು ಬರುತ್ತೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆಗ ಚೆರೂಯಳ ಮಗನಾದ ಅಬೀಷೈಯು ಅರಸನಿಗೆ, “ಈ ಸತ್ತ ನಾಯಿ, ಅರಸನಾದ ನನ್ನ ಒಡೆಯನನ್ನು ಶಪಿಸುವುದೇನು? ಅಪ್ಪಣೆಯಾಗಲಿ. ನಾನು ಅವನಿರುವಲ್ಲಿಗೆ ಹೋಗಿ, ಅವನ ತಲೆಯನ್ನು ಹಾರಿಸಿಕೊಂಡು ಬರುವೆನು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆಗ ಚೆರೂಯಳ ಮಗನಾದ ಅಬೀಷೈಯು ಅರಸನಿಗೆ - ಈ ಸತ್ತ ನಾಯಿ ಅರಸನಾದ ನನ್ನ ಒಡೆಯನನ್ನು ಶಪಿಸುವದೇನು? ಅಪ್ಪಣೆಯಾಗಲಿ, ನಾನು ಅವನಿರುವಲ್ಲಿಗೆ ಹೋಗಿ ಅವನ ತಲೆ ಹಾರಿಸಿಕೊಂಡು ಬರುವೆನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಚೆರೂಯಳ ಮಗನಾದ ಅಬೀಷೈಯು ರಾಜನಿಗೆ “ನನ್ನ ರಾಜನಾದ ಪ್ರಭುವೇ, ಈ ಸತ್ತನಾಯಿಯು ನಿನ್ನನ್ನು ಶಪಿಸುವುದೇಕೆ? ಶಿಮ್ಮಿಯ ತಲೆಯನ್ನು ಕತ್ತರಿಸಿಹಾಕುತ್ತೇನೆ, ನನಗೆ ಅಪ್ಪಣೆಕೊಡು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆಗ ಚೆರೂಯಳ ಮಗ ಅಬೀಷೈಯನು ಅರಸನಿಗೆ, “ಈ ಸತ್ತ ನಾಯಿ, ಅರಸನಾದ ನನ್ನ ಒಡೆಯನನ್ನು ದೂಷಿಸುವುದೇನು? ನಾನು ದಾಟಿ ಹೋಗಿ ಅವನ ತಲೆಯನ್ನು ತೆಗೆದುಕೊಳ್ಳಲು ಅಪ್ಪಣೆ ಆಗಲಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 16:9
13 ತಿಳಿವುಗಳ ಹೋಲಿಕೆ  

“ದೇವರನ್ನು ದೂಷಿಸಬಾರದು; ನಿಮ್ಮ ಜನನಾಯಕನನ್ನು ಶಪಿಸಬಾರದು.


ಮೆಫೀಬೋಶೆತನು ಇದನ್ನು ಕೇಳಿ ಅರಸನಿಗೆ ಸಾಷ್ಟಾಂಗ ನಮಸ್ಕಾರ ಮಾಡಿ, “ಸತ್ತ ನಾಯಿಯಂತಿರುವ ನನ್ನನ್ನು ತಾವು ಗಮನಿಸಲು ನಿಮ್ಮ ಗುಲಾಮನಾದ ನಾನು ಅಪಾತ್ರನೇ!” ಎಂದನು.


ಅಬ್ನೇರನು ಈ ಮಾತನ್ನು ಕೇಳಿ ಕೋಪಗೊಂಡು ಈಷ್ಬೋಶೆತನಿಗೆ, “ಈವರೆಗೆ ನಾನು ನಿನ್ನ ತಂದೆ ಸೌಲನ ಕುಟುಂಬಕ್ಕೂ ಅವನ ಬಂಧುಮಿತ್ರರಿಗೂ ಪ್ರಾಮಾಣಿಕನಾಗಿ ನಡೆದುಕೊಂಡೆನಲ್ಲವೇ? ನಿನ್ನನ್ನು ದಾವೀದನ ಕೈಗೆ ಒಪ್ಪಿಸಿಕೊಡಲಿಲ್ಲ. ಆದರೂ ಈಗ ಈ ಹೆಂಗಸಿನ ಕಾರಣ ನನ್ನಲ್ಲಿ ತಪ್ಪುಹಿಡಿಯುವುದಕ್ಕೆ ನಾನೇನು ಯೆಹೂದ ನಾಯಿಯ ತಲೆಯೋ?


ಇಸ್ರಯೇಲರ ಅರಸರೇ, ಯಾರನ್ನು ಹಿಂದಟ್ಟಿ ಹೊರಟಿದ್ದೀರಿ? ಯಾರನ್ನು ಹಿಡಿಯಬೇಕೆಂದಿರುತ್ತೀರಿ? ಸತ್ತ ನಾಯಿಯನ್ನೇ? ಒಂದು ಬಡ ಸೊಳ್ಳೆಯನ್ನೇ?


ಸರ್ವರನ್ನೂ ಸನ್ಮಾನಿಸಿರಿ, ಸಹೋದರರನ್ನು ಸ್ನೇಹಿಸಿರಿ, ದೇವರಲ್ಲಿ ಭಯಭಕ್ತಿ ಇಡಿ, ದೇಶಾಧಿಕಾರಿಗಳಿಗೆ ಗೌರವ ನೀಡಿ.


ಪ್ರತ್ಯುತ್ತರವಾಗಿ ಪೌಲನು, “ಸಹೋದರರೇ, ಇವರು ಪ್ರಧಾನ ಯಾಜಕರೆಂದು ನನಗೆ ತಿಳಿಯದೆ ಹೋಯಿತು. ‘ನಿಮ್ಮ ಪ್ರಜಾಪಾಲನನ್ನು ದೂಷಿಸಬೇಡ’ ಎಂದು ಪವಿತ್ರಗ್ರಂಥದಲ್ಲೇ ಬರೆದಿದೆ ಅಲ್ಲವೆ?” ಎಂದನು.


ಇದನ್ನು ಕಂಡು ಶಿಷ್ಯರಾದ ಯಕೋಬ ಮತ್ತು ಯೊವಾನ್ನ, “ಪ್ರಭೂ, ಆಕಾಶದಿಂದ ಅಗ್ನಿಮಳೆ ಸುರಿದು ಇವರನ್ನು ನಾಶಮಾಡಲಿ ಎಂದು ಆಜ್ಞೆಮಾಡಬಹುದಲ್ಲವೇ?” ಎಂದರು.


ಅಬ್ನೇರನು ಗಿಬ್ಯೋನಿನ ಸಮೀಪದಲ್ಲಾದ ಯುದ್ಧದಲ್ಲಿ ಯೋವಾಬ ಅಬೀಷೈಯರ ತಮ್ಮನಾದ ಅಸಾಹೇಲನನ್ನು ವಧಿಸಿದ್ದರಿಂದ ಅವರು ಇವನನ್ನು ಕೊಂದು ಹಾಕಿದರು.


ಚೆರೂಯಳ ಮಗ ಅಬೀಷೈಯು, “ಸರ್ವೇಶ್ವರನ ಅಭಿಷಿಕ್ತನನ್ನು ಶಪಿಸಿದ್ದಕ್ಕಾಗಿ ಶಿಮ್ಮಿಗೆ ಮರಣದಂಡನೆಯಾಗಬೇಕಲ್ಲವೇ?’ ಎಂದನು.


ಅದಕ್ಕೆ ದಾವೀದನು, “ಚೆರೂಯಳ ಮಕ್ಕಳೇ, ನನಗೆ ನಿಮ್ಮ ಗೊಡವೆಯೇ ಬೇಡ; ನೀವು ಈ ದಿನ ನನ್ನನ್ನು ಆ ಕೃತ್ಯಕ್ಕೆ ಪ್ರೇರಿಸುವವರಾಗಿದ್ದೀರಿ. ಇಂಥ ದಿನದಲ್ಲಿ ಇಸ್ರಯೇಲರಲ್ಲಿ ಒಬ್ಬನಿಗೆ ಮರಣದಂಡನೆ ಆಗುವುದು ಸರಿಯೇ? ನಾನು ಇಸ್ರಯೇಲರ ಅರಸನೆಂಬುವುದು ಈ ದಿನ ಸ್ಪಷ್ಟವಾಗಿ ಗೊತ್ತಾಯಿತು,” ಎಂದು ನುಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು