Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 17:2 - ಕನ್ನಡ ಸತ್ಯವೇದವು C.L. Bible (BSI)

2 ಅವನು ದಣಿದವನೂ ಧೈರ್ಯಗುಂದಿದವನೂ ಆಗಿರುವಾಗಲೇ ಫಕ್ಕನೆ ಅವನ ಮೇಲೆ ಬಿದ್ದು ಅವನನ್ನು ಬೆದರಿಸುವೆನು; ಅವನ ಜನರೆಲ್ಲರೂ ಓಡಿಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅವನು ದಣಿದವನೂ, ಧೈರ್ಯಗುಂದಿದವನೂ ಆಗಿರುವಾಗಲೇ ಪಕ್ಕನೇ ಅವನ ಮೇಲೆ ಬಿದ್ದು ಅವನನ್ನು ಬೆದರಿಸುವೆನು. ಅವನ ಜನರೆಲ್ಲರೂ ಓಡಿಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅವನು ದಣಿದವನೂ ಧೈರ್ಯಗುಂದಿದವನೂ ಆಗಿರುವಾಗಲೇ ಫಕ್ಕನೆ ಅವನ ಮೇಲೆ ಬಿದ್ದು ಅವನನ್ನು ಬೆದರಿಸುವೆನು, ಅವನ ಜನರೆಲ್ಲರೂ ಓಡಿಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಅವನು ಆಯಾಸದಿಂದ ಬಲಹೀನನಾದಾಗ ಅವನ ಮೇಲೆ ದಾಳಿಮಾಡಿ ಹೆದರಿಸುವೆನು; ಆಗ ಅವನ ಜನರೆಲ್ಲರೂ ಓಡಿಹೋಗುತ್ತಾರೆ. ಆದರೆ ನಾನು ರಾಜನಾದ ದಾವೀದನನ್ನು ಮಾತ್ರ ಕೊಲ್ಲುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅವನು ದಣಿದು ಅವನ ಕೈ ದುರ್ಬಲವಾಗಿರುವಾಗ, ಹೋಗಿ ಅವನ ಮೇಲೆ ಬಿದ್ದು ಅವನನ್ನು ಹೆದರಿಸುವೆನು. ಆಗ ಅವನ ಸಂಗಡ ಇರುವ ಜನರೆಲ್ಲರು ಓಡಿಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 17:2
10 ತಿಳಿವುಗಳ ಹೋಲಿಕೆ  

ಸಿರಿಯಾದವರ ಅರಸನು ತನ್ನ ರಥಬಲದ ಮೂವತ್ತೆರಡು ಮಂದಿ ಅಧಿಪತಿಗಳಿಗೆ, “ನೀವು ಶತ್ರುಗಳ ಸಾಧಾರಣ ಸೈನಿಕರನ್ನೂ ಅಧಿಪತಿಗಳನ್ನೂ ಬಿಟ್ಟು ಇಸ್ರಯೇಲರ ಅರಸನಿಗೇ ಗುರಿ ಇಡಿ,” ಎಂದು ಆಜ್ಞಾಪಿಸಿದ್ದನು.


ಅರಸನೂ ಅವನ ಜೊತೆಯಲ್ಲಿ ಬಂದವರೆಲ್ಲರೂ ದಣಿದವರಾಗಿ ಜೋರ್ಡನ್ ಸ್ಥಳವನ್ನು ಸೇರಿ ಅಲ್ಲಿ ವಿಶ್ರಮಿಸಿಕೊಂಡರು.


“ಇಡೀ ರಾಷ್ಟ್ರವೇ ನಿರ್ನಾಮವಾಗುವುದಕ್ಕಿಂತ ಜನತೆಗೋಸ್ಕರ ಒಬ್ಬನು ಸಾಯುವುದೇ ವಿಹಿತವೆಂದು ನಿಮಗೆ ಅರ್ಥವಾಗುತ್ತಿಲ್ಲವಲ್ಲಾ,” ಎಂದು ನುಡಿದನು.


ಆಗ ಯೇಸು ತಮ್ಮ ಶಿಷ್ಯರಿಗೆ, “ ‘ಕುರಿಗಾಹಿಯನ್ನು ಕೊಲ್ಲುವೆನು ಕುರಿಗಳು ಚದರುವುವು,’ ಎಂದು ಪವಿತ್ರಗ್ರಂಥದಲ್ಲೇ ಬರೆದಿದೆ. ಅದರಂತೆಯೇ ನೀವೆಲ್ಲರೂ ಇದೇ ರಾತ್ರಿ ನನ್ನಲ್ಲಿ ವಿಶ್ವಾಸ ಕಳೆದುಕೊಂಡು ಹಿಮ್ಮೆಟ್ಟುವಿರಿ.


ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: “ನನ್ನ ಕುರಿಗಾಹಿಗೆ ವಿರುದ್ಧವಾಗಿ, ನನ್ನಾಸಂಗಡಿಗನಿಗೆದುರಾಗಿ, ಓ ಖಡ್ಗವೇ, ಎಚ್ಚರಗೊಳ್ಳು; ಕೊಲ್ಲು ಕುರಿಗಾಹಿಯನು. ಆಗ ಚದರುವುವು ಕುರಿಗಳು, ಕೈಮಾಡಲಿರುವೆ ಮರಿಗಳ ಮೇಲೂ.


ಆದರೆ ಗೇಣಿದಾರರು ಮಗನನ್ನು ಕಂಡೊಡನೇ, ‘ಈ ತೋಟಕ್ಕೆ ಇವನೇ ಉತ್ತರಾಧಿಕಾರಿ; ಬನ್ನಿ ಇವನನ್ನು ಮುಗಿಸಿಬಿಡೋಣ. ಇವನಿಗೆ ಬರುವ ಸೊತ್ತನ್ನು ನಮ್ಮದಾಗಿಸಿಕೊಳ್ಳೋಣ,’ ಎಂದು ತಮ್ಮ ತಮ್ಮಲ್ಲೇ ಒಳಸಂಚು ಮಾಡಿಕೊಂಡರು.


ಅವರು ದೇವರಲ್ಲಿ ಸ್ವಲ್ಪವೂ ಭಯಭಕ್ತಿಯಿಲ್ಲದವರು; ನೀವು ದಣಿದು ಬಳಲಿದ್ದಾಗ ನಿಮ್ಮವರಲ್ಲಿ ಹಿಂದೆಬಿದ್ದ ಬಲಹೀನರನ್ನು ಸಂಹಾರಮಾಡಿದರು.


ತರುವಾಯ ಅಹೀತೋಫೆಲನು ಅಬ್ಷಾಲೋಮನಿಗೆ, “ಅಪ್ಪಣೆಯಾಗಲಿ, ನಾನು ಹನ್ನೆರಡು ಸಾವಿರ ಜನರನ್ನು ಆರಿಸಿಕೊಂಡು ಈ ರಾತ್ರಿಯೇ ದಾವೀದನನ್ನು ಹಿಂದಟ್ಟುವೆನು;


ಅವರ ಅಪರಾಧವನ್ನು ಕ್ಷಮಿಸಬೇಡಿ. ನಿಮ್ಮೆದುರಿಗಿರುವ ಅವರ ಪಾಪವನ್ನು ಅಳಿಸಿಬಿಡಬೇಡಿ. ಏಕೆಂದರೆ ಕಟ್ಟುವವರ ಮುಂದೆಯೇ ಅವರು ನಿಮ್ಮನ್ನು ಕೆಣಕಿದ್ದಾರೆ,” ಎಂದು ನಾನು ಪ್ರಾರ್ಥಿಸಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು