Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 17:20 - ಕನ್ನಡ ಸತ್ಯವೇದವು C.L. Bible (BSI)

20 ಅಬ್ಷಾಲೋಮನ ಸೇವಕರು ಆ ಸ್ತ್ರೀಯ ಮನೆಗೆ ಹೋಗಿ, “ಅಹೀಮಾಚ್ ಮತ್ತು ಯೋನಾತಾನರೆಲ್ಲಿ?” ಎಂದು ಆಕೆಯನ್ನು ಕೇಳಿದ್ದಕ್ಕೆ ಆಕೆ, ” ಅವರು ಹಳ್ಳದಾಟಿ ಹೋಗಿಬಿಟ್ಟರು,” ಎಂದು ಉತ್ತರಕೊಟ್ಟಳು. ಸೇವಕರು ಅವರನ್ನು ಹುಡುಕುವುದಕ್ಕೆ ಹೋಗಿ ಕಾಣದೆ ಜೆರುಸಲೇಮಿಗೆ ಹಿಂದಿರುಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅಬ್ಷಾಲೋಮನ ಸೇವಕರು ಆ ಸ್ತ್ರೀಯ ಮನೆಗೆ ಹೋಗಿ, “ಅಹೀಮಾಚ ಮತ್ತು ಯೋನಾತಾನರು ಎಲ್ಲಿದ್ದಾರೆ?” ಎಂದು ಆಕೆಯನ್ನು ಕೇಳಿದ್ದಕ್ಕೆ ಆಕೆಯು, “ಅವರು ಹಳ್ಳ ದಾಟಿ ಹೋಗಿಬಿಟ್ಟರು” ಎಂದು ಉತ್ತರ ಕೊಟ್ಟಳು. ಅವರು ಅಹೀಮಾಚ ಮತ್ತು ಯೋನಾತಾನರನ್ನು ಹುಡುಕುವುದಕ್ಕೆ ಹೋಗಿ, ಕಾಣದೆ ಯೆರೂಸಲೇಮಿಗೆ ಹಿಂತಿರುಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಅಬ್ಷಾಲೋಮನ ಸೇವಕರು ಸ್ತ್ರೀಯ ಮನೆಗೆ ಹೋಗಿ - ಅಹೀಮಾಚ್ ಯೋನಾತಾನರೆಲ್ಲಿ ಎಂದು ಆಕೆಯನ್ನು ಕೇಳಿದ್ದಕ್ಕೆ ಆಕೆಯು - ಅವರು ಹಳ್ಳದಾಟಿ ಹೋಗಿ ಬಿಟ್ಟರು ಎಂದು ಉತ್ತರ ಕೊಟ್ಟಳು. ಅವರು ಅವರನ್ನು ಹುಡುಕುವದಕ್ಕೆ ಹೋಗಿ ಕಾಣದೆ ಯೆರೂಸಲೇವಿುಗೆ ಹಿಂದಿರುಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಅಬ್ಷಾಲೋಮನ ಸೇವಕರು ಆ ಮನೆಯಲ್ಲಿದ್ದ ಹೆಂಗಸಿನ ಬಳಿಗೆ ಬಂದು, “ಅಹೀಮಾಚ್ ಮತ್ತು ಯೋನಾತಾನರು ಎಲ್ಲಿ?” ಎಂದು ಕೇಳಿದರು. ಆ ಸ್ತ್ರೀಯು ಅಬ್ಷಾಲೋಮನ ಸೇವಕರಿಗೆ, “ಅವರು ಈಗಾಗಲೇ ಹಳ್ಳವನ್ನು ದಾಟಿಹೋಗಿರಬೇಕು” ಎಂದಳು. ಆಗ ಅಬ್ಷಾಲೋಮನ ಸೇವಕರು ಯೋನಾತಾನ್ ಮತ್ತು ಅಹೀಮಾಚರನ್ನು ಹುಡುಕಲು ಹೋದರು. ಆದರೆ ಅವರು ಸೇವಕರಿಗೆ ಸಿಗಲಿಲ್ಲ. ಆದ್ದರಿಂದ ಅಬ್ಷಾಲೋಮನ ಸೇವಕರು ಜೆರುಸಲೇಮಿಗೆ ಹಿಂದಿರುಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಅಬ್ಷಾಲೋಮನ ಸೇವಕರು ಮನೆಯೊಳಗೆ ಬಂದು ಆ ಸ್ತ್ರೀಯನ್ನು, “ಅಹೀಮಾಚನೂ, ಯೋನಾತಾನನೂ ಎಲ್ಲಿ,” ಎಂದು ಕೇಳಿದರು. ಅವಳು ಅವರಿಗೆ, “ಹಳ್ಳವನ್ನು ದಾಟಿಹೋದರು,” ಎಂದಳು. ಅವರು ಹುಡುಕಿ ಕಾಣದೆ ಹೋಗಿ ಯೆರೂಸಲೇಮಿಗೆ ಹಿಂದಿರುಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 17:20
9 ತಿಳಿವುಗಳ ಹೋಲಿಕೆ  

ಆ ಫರೋಹನಿಗೆ ಸೂಲಗಿತ್ತಿಯರು, “ಹಿಬ್ರಿಯ ಮಹಿಳೆಯರು ಈಜಿಪ್ಟಿನ ಮಹಿಳೆಯರಂತಲ್ಲ; ಏಕೆಂದರೆ ಅವರು ಗಟ್ಟಿಮುಟ್ಟಾದವರು. ಸೂಲಗಿತ್ತಿಯರು ಹತ್ತಿರ ಬರುವುದಕ್ಕೆ ಮುಂಚೆಯೇ ಹೆರುತ್ತಾರೆ,” ಎಂದು ಹೇಳಿದರು.


ಆದರೆ ನೀನು ಹಿಂದಿರುಗಿ ಪಟ್ಟಣಕ್ಕೆ ಹೋಗಿ ಅಬ್ಷಾಲೋಮನಿಗೆ, ‘ಅರಸರೇ, ನಾನು ನಿಮ್ಮ ಸೇವಕನು; ಹಿಂದೆ ನಿಮ್ಮ ತಂದೆಗೆ ಸೇವೆಸಲ್ಲಿಸಿದಂತೆ ಈಗ ನಿಮ್ಮ ಸೇವೆಮಾಡುತ್ತೇನೆ,’ ಎಂದು ಹೇಳುವುದಾದರೆ ಅಹೀತೋಫೆಲನ ಆಲೋಚನೆಯನ್ನು ವ್ಯರ್ಥಮಾಡುವುದಕ್ಕೆ ನೀನು ನನಗೆ ಅನುಕೂಲ ಮಾಡಿಕೊಟ್ಟಂತಾಗುವುದು.


ಅವನು, “ಅರಸರು ಒಂದು ಕೆಲಸವನ್ನು ಆಜ್ಞಾಪಿಸಿ ಇದನ್ನು ಯಾರಿಗೂ ತಿಳಿಸಬಾರದೆಂದು ಕಟ್ಟಪ್ಪಣೆಮಾಡಿ ನನ್ನನ್ನು ಕಳುಹಿಸಿದ್ದಾರೆ. ನನ್ನ ಆಳುಗಳು ಇಂಥಿಂಥ ಸ್ಥಳದಲ್ಲಿ ನನ್ನನ್ನು ಸಂಧಿಸಬೇಕೆಂದು ಗೊತ್ತುಮಾಡಿದ್ದೇನೆ.


“ಕಳಬೇಡ; ಹುಸಿಯನ್ನು ನುಡಿಯಲು ಬೇಡ; ಒಬ್ಬರನ್ನೊಬ್ಬರು ಮೋಸಗೊಳಿಸುವುದು ಬೇಡ.


ಅವನು ಆಕೆಗೆ, “ನೀನು ಗುಡಾರದ ಬಾಗಿಲಲ್ಲೇ ನಿಂತಿರು; ಯಾರಾದರೂ ಬಂದು ‘ಇಲ್ಲಿ ಒಬ್ಬ ಮನುಷ್ಯ ಇರುವನೇ?’ ಎಂದು ವಿಚಾರಿಸಿದರೆ, ‘ಇಲ್ಲ’ ಎನ್ನು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು