Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 17:25 - ಕನ್ನಡ ಸತ್ಯವೇದವು C.L. Bible (BSI)

25 ಅವನು ಯೋವಾಬನಿಗೆ ಬದಲಾಗಿ ಅಮಾಸನನ್ನು ಸೇನಾಪತಿಯನ್ನಾಗಿ ನೇಮಿಸಿದನು. ಇಸ್ರಯೇಲನಾದ ಇತ್ರನು ನಾಹಾಷನ ಮಗಳೂ ಯೋವಾಬನ ತಾಯಿಯಾದ ಚೆರೂಯಳ ತಂಗಿಯೂ ಆದ ಅಬೀಗಲ್ ಎಂಬುವಳನ್ನು ಕೂಡಿದ್ದರಿಂದ ಹುಟ್ಟಿದವನು ಈ ಅಮಾಸನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಅವನು ಯೋವಾಬನಿಗೆ ಬದಲಾಗಿ ಅಮಾಸನನ್ನು ಸೇನಾಧಿಪತಿಯನ್ನಾಗಿ ನೇಮಿಸಿದನು. ಇಸ್ರಾಯೇಲನಾದ ಇತ್ರನು, ನಾಹಾಷನ ಮಗಳೂ ಯೋವಾಬನ ತಾಯಿಯಾದ ಚೆರೂಯಳ ತಂಗಿಯೂ ಆದ ಅಬೀಗೈಲ್ ಎಂಬುವಳನ್ನು ಸಂಗಮಿಸಿದ್ದರಿಂದ ಈ ಅಮಾಸನು ಹುಟ್ಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಅವನು ಯೋವಾಬನಿಗೆ ಬದಲಾಗಿ ಅಮಾಸನನ್ನು ಸೇನಾಪತಿಯನ್ನಾಗಿ ನೇವಿುಸಿದನು. ಇಸ್ರಾಯೇಲ್ಯನಾದ ಇತ್ರನು ನಾಹಾಷನ ಮಗಳೂ ಯೋವಾಬನ ತಾಯಿಯಾದ ಚೆರೂಯಳ ತಂಗಿಯೂ ಆದ ಅಬೀಗಲ್ ಎಂಬವಳನ್ನು ಕೂಡಿದ್ದರಿಂದ ಈ ಅಮಾಸನು ಹುಟ್ಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಅಬ್ಷಾಲೋಮನು ಅಮಾಸನನ್ನು ಸೈನ್ಯದ ಅಧಿಪತಿಯನ್ನಾಗಿ ಮಾಡಿದನು. ಅಮಾಸನು ಯೋವಾಬನ ಸ್ಥಾನಕ್ಕೆ ಬಂದನು. ಅಮಾಸನು ಇಸ್ರೇಲನಾದ ಇತ್ರನ ಮಗ. ಅಮಾಸನ ತಾಯಿಯಾದ ಅಬೀಗಲಳು, ನಾಹಾಷನ ಮಗಳು ಮತ್ತು ಚೆರೂಯಳ ಸೋದರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಅಬ್ಷಾಲೋಮನು ಯೋವಾಬನಿಗೆ ಬದಲಾಗಿ ಅಮಾಸನನ್ನು ಸೈನ್ಯದ ಅಧಿಪತಿಯಾಗಿ ಇಟ್ಟಿದ್ದನು. ಈ ಅಮಾಸನು ಇಸ್ರಾಯೇಲನಾದ ಇತ್ರನ ಮಗನು. ಈ ಇತ್ರನು ನಾಹಾಷನ ಮಗಳೂ, ಯೋವಾಬನ ತಾಯಿಯೂ, ಚೆರೂಯಳ ಸಹೋದರಿಯೂ ಆದ ಅಬೀಗೈಲಳನ್ನು ಮದುವೆಯಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 17:25
11 ತಿಳಿವುಗಳ ಹೋಲಿಕೆ  

ಜೆಸ್ಸೆಯ ಏಳು ಜನ ಮಕ್ಕಳು: ಎಲೀಯಾಬ್, ಅಬೀನಾದಾಬ್, ಶಿಮ್ಮ,


ಎಂಬುದಾಗಿ ತಿಳಿಸಿರಿ. ಅದಲ್ಲದೆ ಅಮಾಸನಿಗೆ, ‘ನೀನೂ ನನ್ನ ರಕ್ತಸಂಬಂಧಿಯಾಗಿದ್ದಿ; ನಾನು ಯೋವಾಬನ ಬದಲಿಗೆ ನಿನ್ನನ್ನೇ ನಿತ್ಯಸೇನಾಪತಿಯನ್ನಾಗಿ ಮಾಡುತ್ತೇನೆ. ಹಾಗೆ ಮಾಡದಿದ್ದರೆ ಸರ್ವೇಶ್ವರ ನನಗೆ ಮಾಡಬೇಕಾದದ್ದನ್ನು ಮಾಡಲಿ,’ ಎಂಬುದಾಗಿಯೂ ತಿಳಿಸಿರಿ,” ಎಂದು ಹೇಳಿ ಕಳುಹಿಸಿದನು.


ಸರ್ವೇಶ್ವರ ಈ ರಕ್ತ ಅಪರಾಧವನ್ನು ಅವನ ತಲೆಯ ಮೇಲೆಯೇ ಬರಮಾಡಲಿ; ಅವನು ನನ್ನ ತಂದೆ ದಾವೀದನಿಗೆ ತಿಳಿಯದೆ ತನಗಿಂತ ಉತ್ತಮರೂ ನೀತಿವಂತರೂ ಆದ ಇಬ್ಬರು ವ್ಯಕ್ತಿಗಳನ್ನು ಅಂದರೆ, ಇಸ್ರಯೇಲ್ ಸೇನಾಪತಿಯೂ ನೇರನ ಮಗನೂ ಆದ ಅಬ್ನೇರನನ್ನೂ ಯೆಹೂದ ಸೇನಾಪತಿಯೂ ಯೆತೆರನ ಮಗನೂ ಆದ ಅಮಾಸನನ್ನೂ ಕೊಂದನಲ್ಲವೆ?


“ಚೆರೂಯಳ ಮಗ ಯೋವಾಬನು ನನಗೆ ಮಾಡಿರುವುದನ್ನು ನೀನು ಬಲ್ಲೆ; ಅವನು ಇಬ್ಬರು ಇಸ್ರಯೇಲ್ ಸೇನಾಪತಿಗಳನ್ನು ಅಂದರೆ, ನೇರನ ಮಗ ಅಬ್ನೇರನನ್ನೂಯೆತೆರನ ಮಗ ಅಮಾಸನನ್ನೂ ಕೊಂದುಹಾಕಿದನು. ಯುದ್ಧಕಾಲದಲ್ಲಿಯೋ ಎಂಬಂತೆ ಸಮಾಧಾನಕಾಲದಲ್ಲಿಯೂ ರಕ್ತಸುರಿಸಿ ಆ ಕಲೆಯನ್ನು ತನ್ನ ನಡುಕಟ್ಟಿಗೂ ಪಾದರಕ್ಷೆಗಳಿಗೂ ಹಚ್ಚಿಕೊಂಡನು.


ಅನಂತರ ಅರಸನು ಅಮಾಸನಿಗೆ, “ನೀನು ಮೂರು ದಿನಗಳೊಳಗಾಗಿ ಯೆಹೂದ್ಯರನ್ನು ಕೂಡಿಸಿಕೊಂಡು ಇಲ್ಲಿ ಸಿದ್ಧವಾಗಿರು,” ಎಂದು ಆಜ್ಞಾಪಿಸಿದನು.


ಇಸ್ರಯೇಲರೂ ಅಬ್ಷಾಲೋಮನೂ ಗಿಲ್ಯಾದ್ ದೇಶದಲ್ಲಿ ಪಾಳೆಯಮಾಡಿಕೊಂಡರು.


ಈ ಸುದ್ದಿ ಯೋವಾಬನಿಗೆ ಮುಟ್ಟಿತು. ಅವನು ಕೂಡಲೆ ಸರ್ವೇಶ್ವರನ ಗುಡಾರಕ್ಕೆ ಓಡಿಹೋಗಿ ಬಲಿಪೀಠದ ಕೊಂಬುಗಳನ್ನು ಹಿಡಿದುಕೊಂಡನು. (ಅವನು ಅಬ್ಷಾಲೋಮನ ವಿರೋಧವಾಗಿದ್ದರೂ ಅದೋನೀಯನಿಗೆ ಪರವಾಗಿದ್ದನು.)


ಆಗ ಯೆಹೂದ್ಯರೆಲ್ಲರೂ ಏಕ ಮನಸ್ಸಿನಿಂದ ಅರಸನ ಕಡೆಗೆ ತಿರುಗಿಕೊಂಡು ಅವನಿಗೆ, ” ನೀವು ನಿಮ್ಮ ಎಲ್ಲಾ ಸೇವಕರೊಡನೆ ಮರಳಿ ಬನ್ನಿ,” ಎಂದು ಹೇಳಿಕಳುಹಿಸಿದರು.


ಅರಸ ಸೌಲನಿಗೆ ವಿರುದ್ಧ ಯುದ್ಧಮಾಡಲು ಫಿಲಿಷ್ಟಿಯರೊಂದಿಗೆ ಹೋಗುತ್ತಿದ್ದಾಗ ಮನಸ್ಸೆ ಗೋತ್ರದ ಕೆಲವು ಜನ ಸೈನಿಕರು ಬಂದು ದಾವೀದನ ಪಕ್ಷದಲ್ಲಿ ಸೇರಿಕೊಂಡರು. ದಾವೀದನು ನಿಜವಾಗಿಯೂ ಫಿಲಿಷ್ಟಿಯರಿಗೆ ಸಹಾಯಮಾಡಲಿಲ್ಲ. ತನ್ನ ಮೊದಲಿನ ಯಜಮಾನ ಸೌಲನಿಗೆ ತಮ್ಮನ್ನು ಹಿಡಿದುಕೊಡಬಹುದೆಂಬ ಭಯ ಫಿಲಿಷ್ಟಿಯ ರಾಜರುಗಳಿಗೆ ಇದ್ದುದರಿಂದ ಅವರು ಅವನನ್ನು ಚಿಕ್ಲಗಿಗೆ ಹಿಂದಕ್ಕೆ ಕಳುಹಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು