Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 17:9 - ಕನ್ನಡ ಸತ್ಯವೇದವು C.L. Bible (BSI)

9 ಅವನು ಈಗ ಒಂದು ಗುಹೆಯಲ್ಲೋ ಬೇರೆ ಯಾವುದಾದರೊಂದು ಸ್ಥಳದಲ್ಲಾಗಲೋ ಅಡಗಿಕೊಂಡಿರುವನು. ಮೊದಲು ನಮ್ಮವರಲ್ಲೇ ಕೆಲವರು ಮಡಿದರೆ, ಜನರು ಇದನ್ನು ಕೇಳಿ, ಅಬ್ಷಾಲೋಮನ ಪಕ್ಷದವರಿಗೆ ಮಹಾ ಅಪಜಯವಾಯಿತೆಂದು ಸುದ್ದಿಹಬ್ಬಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅವನು ಈಗ ಒಂದು ಗುಹೆಯಲ್ಲಾಗಲಿ, ಬೇರೆ ಯಾವುದಾದರೊಂದು ಸ್ಥಳದಲ್ಲಾಗಲಿ ಅಡಗಿಕೊಂಡಿರುವನು. ಮೊದಲು ನಮ್ಮವರಲ್ಲೇ ಕೆಲವರು ಸತ್ತರೆ, ಜನರು ಇದನ್ನು ಕೇಳಿ ಅಬ್ಷಾಲೋಮನ ಪಕ್ಷದವರಿಗೆ ಅಪಜಯವುಂಟಾಯಿತೆಂದು ಸುದ್ದಿ ಹಬ್ಬಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅವನು ಈಗ ಒಂದು ಗುಹೆಯಲ್ಲಾಗಲಿ ಬೇರೆ ಯಾವದಾದರೊಂದು ಸ್ಥಳದಲ್ಲಾಗಲಿ ಅಡಗಿಕೊಂಡಿರುವನು. ಮೊದಲು ನಮ್ಮವರಲ್ಲೇ ಕೆಲವರು ಮಡಿದರೆ ಜನರು ಇದನ್ನು ಕೇಳಿ ಅಬ್ಷಾಲೋಮನ ಪಕ್ಷದವರಿಗೆ ಮಹಾಪಜಯವಾಯಿತೆಂದು ಸುದ್ದಿ ಹಬ್ಬಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಈಗಾಗಲೇ ಅವನು ಒಂದು ಗವಿಯಲ್ಲಾಗಲಿ ಇಲ್ಲವೆ ಬೇರೆ ಯಾವ ಸ್ಥಳದಲ್ಲಾಗಲಿ ಅಡಗಿಕೊಂಡಿರಬಹುದು. ನಿನ್ನ ತಂದೆಯು ನಿನ್ನ ಜನರ ಮೇಲೆ ಆಕ್ರಮಣ ಮಾಡಿದರೆ, ಆಗ ಜನರಿಗೆ ಸುದ್ದಿಯು ತಿಳಿಯುತ್ತದೆ. ‘ಅಬ್ಷಾಲೋಮನ ಹಿಂಬಾಲಕರು ಸೋಲುತ್ತಿದ್ದಾರೆ’ ಎಂದು ಅವರು ಯೋಚಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅವನು ಈಗ ಒಂದು ಗವಿಯಲ್ಲಾದರೂ, ಒಂದು ಸ್ಥಳದಲ್ಲಾದರೂ ಅಡಗಿಕೊಂಡಿದ್ದಾನೆ. ಮೊದಲೇ ಇವರಲ್ಲಿ ಕೆಲವರು ಸತ್ತರೆ, ಅದನ್ನು ಕೇಳುವವರು ಅಬ್ಷಾಲೋಮನನ್ನು ಹಿಂಬಾಲಿಸುವ ಜನರಲ್ಲಿ ಸಂಹಾರವಾಯಿತೆಂದು ಹೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 17:9
10 ತಿಳಿವುಗಳ ಹೋಲಿಕೆ  

ಮಾರ್ಗದಲ್ಲಿ ಕುರಿಹಟ್ಟಿಗಳ ಬಳಿಯಲ್ಲಿ ಒಂದು ಗವಿಯನ್ನು ಕಂಡು ಶೌಚಕ್ಕಾಗಿ ಅದರೊಳಗೆ ಪ್ರವೇಶಿಸಿದನು. ದಾವೀದನೂ ಅವನ ಜನರೂ ಅದೇ ಗವಿಯ ಹಿಂಗಡೆಯಲ್ಲಿ ಅಡಗಿಕೊಂಡಿದ್ದರು.


ದಾವೀದನು ಅಲ್ಲಿಂದ ತಪ್ಪಿಸಿಕೊಂಡು ಅದುಲ್ಲಾಮ್ ಎಂಬ ಗವಿಗೆ ಹೋದನು. ಈ ಸಮಾಚಾರ, ಅವನ ಅಣ್ಣಂದಿರಿಗೂ ಬೇರೆ ಎಲ್ಲಾ ಸಂಬಂಧಿಕರಿಗೂ ಮುಟ್ಟಿತು. ಅವರೂ ಬಂದು ಅವನನ್ನು ಸೇರಿಕೊಂಡರು.


‘ಇವರು ಮುಂಚಿನಂತೆ ನಮಗೆ ಹೆದರಿ ಓಡಿಹೋಗುತ್ತಿದ್ದಾರೆ’ ಎಂದು ಭಾವಿಸಿ, ಅವರು ನಮ್ಮನ್ನು ಹಿಂದಟ್ಟುವರು. ನಾವು ಓಡುತ್ತಲೇ ಇರುತ್ತೇವೆ.


ಆಯಿ ಊರಿನವರು ಅವರನ್ನು ಊರ ಬಾಗಿಲಿನಿಂದ ಕಲ್ಲುಗಣಿಯವರೆಗೂ ಹಿಂದಟ್ಟಿ ಇಳಿನೆಲದಲ್ಲಿ ಅವರನ್ನು ಸೋಲಿಸಿ ಸುಮಾರು ಮೂವತ್ತಾರು ಮಂದಿಯನ್ನು ಕೊಂದುಹಾಕಿದರು. ಇದರಿಂದ ಇಸ್ರಯೇಲರ ಧೈರ್ಯ ಕರಗಿ ನೀರಾಯಿತು.


ತಮ್ಮ ತಂದೆ ಮತ್ತು ಅವನ ಜನರೂ ಶೂರರಾಗಿದ್ದಾರೆಂದೂ, ಈಗಲಾದರೋ ಅವರು ಮರಿಯನ್ನು ಕಳೆದುಕೊಂಡ ಕರಡಿಯಂತೆ ರೋಷ ಉಳ್ಳವರಾಗಿದ್ದಾರೆಂದೂ ತಮಗೆ ಗೊತ್ತುಂಟಲ್ಲವೆ? ಇದಲ್ಲದೆ ತಮ್ಮ ತಂದೆ ಯುದ್ಧ ನಿಪುಣನು; ಜನರ ಮಧ್ಯದಲ್ಲಿ ರಾತ್ರಿ ಕಳೆಯುವುದಿಲ್ಲ.


ಆಗ ಸಿಂಹಹೃದಯಿಗಳಾದ ಶೂರರ ಎದೆಯೂ ಕರಗಿ ನೀರಾಗುವುದು. ನಿಮ್ಮ ತಂದೆ ರಣವೀರನೆಂದೂ ಅವನ ಸಂಗಡ ಇದ್ದವರು ಪರಾಕ್ರಮಶಾಲಿಗಳೆಂದೂ ಎಲ್ಲಾ ಇಸ್ರಯೇಲರು ಬಲ್ಲರಷ್ಟೆ.


“ಇಷ್ಮಾಯೇಲನು ತಾನು ಕೊಂದವರ ಶವಗಳನ್ನು ಗೆದಲ್ಯನ ಶವದ ಮೇಲೆ ಹಾಕಿಸಿದನು. ಹೀಗೆ ಹಾಕಿಸಿದ ಆ ಬಾವಿಯು ಇಸ್ರಯೇಲಿನ ಅರಸನಾದ ಬಾಷನ ಭಯದಿಂದ ಅರಸನಾದ ಆಸನು ತೋಡಿಸಿದ್ದ ಬಾವಿಯೇ ಆಗಿತ್ತು. ಆ ಬಾವಿಯನ್ನು ನೆತನ್ಯನ ಮಗ ಇಷ್ಮಾಯೇಲನು ಹತರಾದವರ ಶವಗಳಿಂದ ತುಂಬಿಸಿಬಿಟ್ಟನು.


ನೀವು ದಯವಿಟ್ಟು ಹೋಗಿ ಅವನು ತಿರುಗಾಡುವ ಸ್ಥಳವನ್ನೂ ಅಲ್ಲಿ ಅವನ ಗುರುತು ಕಂಡಿರುವವರನ್ನೂ ಸೂಕ್ಷ್ಮವಾಗಿ ವಿಚಾರಿಸಿ ಗೊತ್ತುಮಾಡಿಕೊಳ್ಳಿ. ಅವನು ಬಹಳ ಯುಕ್ತಿವಂತನೆಂದು ಕೇಳಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು