Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 18:14 - ಕನ್ನಡ ಸತ್ಯವೇದವು C.L. Bible (BSI)

14 ಆಗ ಯೋವಾಬನು, “ಇಲ್ಲಿ ನಿಂತು ನಿನ್ನೊಡನೆ ಸಮಯ ಕಳೆಯಲಾರೆ,” ಎಂದು ಹೇಳಿ ಕೂಡಲೆ ಕೈಯಲ್ಲಿ ಮೂರು ಈಟಿಗಳನ್ನು ತೆಗೆದುಕೊಂಡು ಹೋಗಿ ಅಬ್ಷಾಲೋಮನ ಎದೆಗೆ ತಿವಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆಗ ಯೋವಾಬನು, “ಇಲ್ಲಿ ನಿಂತು ತಡಮಾಡುವುದೇಕೆ” ಎಂದು ಹೇಳಿ ಕೂಡಲೆ ಕೈಯಲ್ಲಿ ಮೂರು ಈಟಿಗಳನ್ನು ತೆಗೆದುಕೊಂಡು ಹೋಗಿ ಅಬ್ಷಾಲೋಮನ ಎದೆಗೆ ತಿವಿದನು. ಅವನು ಇನ್ನೂ ಜೀವದಿಂದ ಓಕ್ ಮರದಲ್ಲಿ ನೇತಾಡುತ್ತಿರುವಾಗಲೇ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆಗ ಯೋವಾಬನು - ಇಲ್ಲಿ ನಿಂತು ತಡ ಮಾಡುವದೇಕೆ ಎಂದು ಹೇಳಿ ಕೂಡಲೆ ಕೈಯಲ್ಲಿ ಮೂರು ಈಟಿಗಳನ್ನು ತೆಗೆದುಕೊಂಡು ಹೋಗಿ ಅಬ್ಷಾಲೋಮನ ಎದೆಗೆ ತಿವಿದನು. ಅವನು ಇನ್ನೂ ಜೀವದಿಂದ ಮರದಲ್ಲಿ ನೇತಾಡುತ್ತಿರುವಾಗಲೇ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಯೋವಾಬನು, “ನಿನ್ನೊಂದಿಗೆ ನಾನಿಲ್ಲಿ ನನ್ನ ಕಾಲವನ್ನು ವ್ಯರ್ಥಮಾಡುವುದಿಲ್ಲ” ಎಂದನು. ಅಬ್ಷಾಲೋಮನು ಓಕ್ ಮರದಲ್ಲಿ ನೇತಾಡುತ್ತಾ ಇನ್ನೂ ಜೀವಂತವಾಗಿದ್ದನು. ಯೋವಾಬನು ಮೂರು ಬರ್ಜಿಗಳನ್ನು ತೆಗೆದುಕೊಂಡು ಅಬ್ಷಾಲೋಮನತ್ತ ಎಸೆದನು. ಬರ್ಜಿಗಳು ಅಬ್ಷಾಲೋಮನ ಹೃದಯವನ್ನು ಛೇದಿಸಿಕೊಂಡು ಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆಗ ಯೋವಾಬನು, “ನಾನು ಹೀಗೆ ನಿನ್ನ ಮುಂದೆ ಆಲಸ್ಯ ಮಾಡೆನು,” ಎಂದು ಹೇಳಿ, ಮೂರು ಈಟಿಗಳನ್ನು ತನ್ನ ಕೈಯಲ್ಲಿ ತೆಗೆದುಕೊಂಡು, ಅಬ್ಷಾಲೋಮನು ಇನ್ನೂ ಏಲಾ ಮರದ ಮಧ್ಯದಲ್ಲಿ ಜೀವದಿಂದಿರುವಾಗ, ಅವುಗಳನ್ನು ಅವನ ಹೃದಯದಲ್ಲಿ ತಿವಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 18:14
14 ತಿಳಿವುಗಳ ಹೋಲಿಕೆ  

ಎಲ್ಲವೂ ಶಾಂತ, ಸುಭದ್ರವೆಂದು ಜನರು ಎಣಿಸುತ್ತಿರುವಾಗಲೇ, ಗರ್ಭಿಣಿಗೆ ಪ್ರಸವವೇದನೆ ಉಂಟಾಗುವಂತೆ, ವಿನಾಶವು ಫಕ್ಕನೆ ಅವರ ಮೇಲೆ ಬಂದೆರಗುವುದು. ಇದರಿಂದ ಯಾರೂ ತಪ್ಪಿಸಿಕೊಳ್ಳುವಂತಿಲ್ಲ.


ಯೋನನು ಮೂರುದಿನ ಹಗಲು ರಾತ್ರಿ ದೊಡ್ಡ ಮೀನಿನ ಉದರದಲ್ಲಿದ್ದನು. ಅದರಂತೆಯೇ ನರಪುತ್ರನು ಮೂರುದಿನ ಹಗಲು ರಾತ್ರಿ ಭೂಗರ್ಭದಲ್ಲಿರುವನು.


ನಿನ್ನಂಬು ಬಾಣಗಳು ಹರಿತವಾದುವು I ರಾಜದ್ರೋಹಿಗಳನು ಅವು ಇರಿಯುವುವು I ಜನಾಂಗಗಳು ನಿನ್ನ ಪಾದಕ್ಕೆರಗುವುವು II


ಅರಸನು ಯೋವಾಬ್, ಅಬೀಷೈ ಹಾಗು ಇತ್ತೈ ಎಂಬವರಿಗೆ, “ನನ್ನ ಸಲುವಾಗಿ ಯುವಕ ಅಬ್ಷಾಲೋಮನಿಗೆ ಹಾನಿಮಾಡಬೇಡಿ,” ಎಂದು ಆಜ್ಞಾಪಿಸಿದನು. ದಾವೀದನು ಸೇನಾಪತಿಗಳಿಗೆ ಕೊಟ್ಟ ಈ ಅಪ್ಪಣೆ ಸೈನ್ಯದವರಿಗೆಲ್ಲಾ ಕೇಳಿಸಿತು.


ಆದುದರಿಂದ ಅಬ್ಷಾಲೋಮನು ತನ್ನ ಸೇವಕರಿಗೆ, “ನೋಡಿ, ಸಮೀಪದಲ್ಲೇ ಯೋವಾಬನ ಜವೆಗೋದಿಹೊಲವುಂಟಲ್ಲವೇ, ಹೋಗಿ ಅದಕ್ಕೆ ಬೆಂಕಿ ಹಚ್ಚಿರಿ,” ಎಂದು ಆಜ್ಞಾಪಿಸಿದನು. ಅವರು ಹಾಗೆಯೇ ಮಾಡಿದರು.


ಸರ್ವೇಶ್ವರನ ಶತ್ರುಗಳೆಲ್ಲರು ನಾಶವಾಗಲಿ ಇವರಂತೆ ಆತನ ಭಕ್ತರು ಬೆಳಗಲಿ ಉದಯಕಾಲದ ಸೂರ್ಯನಂತೆ! ನಾಡಿನಲಿ ನಾಲ್ವತ್ತು ವರ್ಷಕಾಲ ಶಾಂತಿ ನೆಲಸಿತ್ತು!


ಗೂಟ ತೆಗೆದುಕೊಂಡಳು ಕೈಚಾಚಿ ಹಿಡಿದಳು ಬಲಗೈಯಲಿ ದೊಡ್ಡಕೊಡತಿ ಜಡಿದಳು ಸೀಸೆರನ ತಲೆಯನು ಬಡಿದಳಾ ಕೊಡತಿಯಿಂದ ಕಣತಲೆಗೇ ತಿವಿದು.


ಆದರೆ ಹೆಬೆರನ ಹೆಂಡತಿ ಯಾಯೇಲಳು ಕೈಯಲ್ಲಿ ಗುಡಾರದ ಗೂಟವನ್ನೂ ಒಂದು ಕೊಡತಿಯನ್ನೂ ತೆಗೆದುಕೊಂಡು ಅವನು ಆಯಾಸದಿಂದ ಗಾಢನಿದ್ರೆಯಲ್ಲಿದ್ದಾಗ ಮೆಲ್ಲಗೆ ಹತ್ತಿರ ಹೋಗಿ ಅವನ ಕಣತಲೆಯಲ್ಲಿ ಆ ಗೂಟವನ್ನು ಹೊಡೆದು ನೆಲಕ್ಕೆ ನಾಟಿಸಿದಳು; ಅವನು ಸತ್ತನು.


ನೀನು ನನ್ನ ಆಜ್ಞೆಯನ್ನು ತಿರಸ್ಕರಿಸಿದೆ; ಹಾಗು ಹಿತ್ತಿಯನಾದ ಊರೀಯನನ್ನು ಅಮ್ಮೋನಿಯರ ಕತ್ತಿಯಿಂದ ಕೊಲ್ಲಿಸಿ ಅವನ ಹೆಂಡತಿಯನ್ನು ನಿನ್ನ ಹೆಂಡತಿಯನ್ನಾಗಿ ತೆಗೆದುಕೊಂಡೆ. ಆದ್ದರಿಂದ ಕತ್ತಿ ನಿನ್ನ ಮನೆಯನ್ನು ಬಿಟ್ಟು ತೊಲಗುವುದಿಲ್ಲ.


ಅವನು ಇನ್ನೂ ಜೀವದಿಂದ ಮರದಲ್ಲಿ ನೇತಾಡುತ್ತಿರುವಾಗಲೇ ಯೋವಾಬನ ಆಯುಧಗಳನ್ನು ಹೊರುವ ಹತ್ತುಮಂದಿ ಯುವಕರು ಬಂದು ಅವನನ್ನು ಕೊಂದುಹಾಕಿದರು.


ಅರಸನು ಅಬ್ಷಾಲೋಮನಿಗಾಗಿ ಅಳುತ್ತಾ ಗೋಳಾಡುತ್ತಾ ಇದ್ದಾನೆಂಬ ಸಮಾಚಾರ ಯೋವಾಬನಿಗೆ ಮುಟ್ಟಿತು.


ಇಸ್ರಯೇಲರು ಹೀಗೆ ಮಾತಾಡಿಕೊಂಡ ಸಮಾಚಾರ ದಾವೀದನಿಗೆ ಮುಟ್ಟಿತು. ಅವನು ಯಾಜಕರಾದ ಚಾದೋಕ್ ಹಾಗು ಎಬ್ಯಾತಾರರಿಗೆ, “ನೀವು ನನ್ನ ಹೆಸರಿನಲ್ಲಿ ಯೆಹೂದಕುಲದ ಹಿರಿಯರಿಗೆ, ‘ಅರಸನಾದ ನನ್ನನ್ನು ಮತ್ತೆ ಅರಮನೆಗೆ ಕರೆದುಕೊಂಡು ಹೋಗುವುದರಲ್ಲಿ ನೀವೇಕೆ ಹಿಂದುಳಿದಿರುವಿರಿ?


ದುಷ್ಟನ ಜಯಘೋಷ ಅಲ್ಪಕಾಲದ್ದು ಭ್ರಷ್ಟನ ಉಲ್ಲಾಸ ಕ್ಷಣಿಕವಾದದ್ದು.


ದುರುಳನೋರ್ವ ಮಹಾಗರ್ವದಿಂದ ಬಾಳುತ್ತಿದ್ದ I ಹುಲುಸಾಗಿ ಬೆಳೆದ ದೇವದಾರು ಮರದಂತಿದ್ದ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು