Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 18:18 - ಕನ್ನಡ ಸತ್ಯವೇದವು C.L. Bible (BSI)

18 ಅಬ್ಷಾಲೋಮನು ಇನ್ನೂ ಜೀವದಿಂದಿದ್ದಾಗ, ತನ್ನ ಹೆಸರನ್ನುಳಿಸುವ ಮಗ ಇಲ್ಲದ್ದರಿಂದ ಒಂದು ಕಲ್ಲಿನ ಕಂಬವನ್ನು ತರಿಸಿ, ಅದನ್ನು ಅರಸನ ಕಣಿವೆಯಲ್ಲಿ ತನ್ನ ಜ್ಞಾಪಕಾರ್ಥವಾಗಿ ನಿಲ್ಲಿಸಿ, ಅದಕ್ಕೆ ತನ್ನ ಹೆಸರನ್ನಿಟ್ಟಿದ್ದನು. ಅದನ್ನು ಇಂದಿನವರೆಗೂ ‘ಅಬ್ಷಾಲೋಮನ ಸ್ಮಾರಕಸ್ತಂಭ’ ಎಂದು ಕರೆಯಲಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅಬ್ಷಾಲೋಮನು ಜೀವದಿಂದ ಇದ್ದಾಗ ತನ್ನ ಹೆಸರನ್ನುಳಿಸಲು ಮಗನಿಲ್ಲದೆ ಇದ್ದುದರಿಂದ ಒಂದು ಕಲ್ಲಿನ ಕಂಬವನ್ನು ತರಿಸಿ, ಅದನ್ನು ಅರಸನ ತಗ್ಗಿನಲ್ಲಿ ತನ್ನ ಜ್ಞಾಪಕಾರ್ಥವಾಗಿ ನಿಲ್ಲಿಸಿ, ಅದಕ್ಕೆ ತನ್ನ ಹೆಸರನ್ನಿಟ್ಟಿದ್ದನು. ಅದು ಇಂದಿನ ವರೆಗೂ ಅಬ್ಷಾಲೋಮನ ಜ್ಞಾಪಕಸ್ತಂಭ ಎಂದು ಕರೆಯಲಾಗುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅಬ್ಷಾಲೋಮನು ಇನ್ನೂ ಜೀವದಿಂದಿದ್ದಾಗ ತನ್ನ ಹೆಸರನ್ನುಳಿಸುವ ಮಗನಿಲ್ಲದ್ದರಿಂದ ಒಂದು ಕಲ್ಲಿನ ಕಂಬವನ್ನು ತರಿಸಿ ಅದನ್ನು ಅರಸನ ತಗ್ಗಿನಲ್ಲಿ ತನ್ನ ಜ್ಞಾಪಕಾರ್ಥವಾಗಿ ನಿಲ್ಲಿಸಿ ಅದಕ್ಕೆ ತನ್ನ ಹೆಸರನ್ನಿಟ್ಟನು. ಅದು ಇಂದಿನವರೆಗೂ ಅಬ್ಷಾಲೋಮನ ಜ್ಞಾಪಕಸ್ತಂಭವೆಂದೆನಿಸಿಕೊಳ್ಳುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಅಬ್ಷಾಲೋಮನು ಬದುಕಿದ್ದಾಗ, ರಾಜನ ಕಣಿವೆಯಲ್ಲಿ ಒಂದು ಸ್ತಂಭವನ್ನು ನೆಡಿಸಿದ್ದನು. ಅಬ್ಷಾಲೋಮನು, “ನನ್ನ ಹೆಸರನ್ನು ಜೀವಂತವಾಗಿರಿಸಲು ನನಗೆ ಗಂಡುಮಕ್ಕಳಿಲ್ಲ” ಎಂದು ಹೇಳಿ ಆ ಸ್ತಂಭಕ್ಕೆ ತನ್ನ ಹೆಸರನ್ನೇ ಕೊಟ್ಟಿದ್ದನು. ಆ ಸ್ತಂಭವನ್ನು “ಅಬ್ಷಾಲೋಮನ ಸ್ಮಾರಕಸ್ತಂಭ” ಎಂದು ಇಂದಿಗೂ ಕರೆಯುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಅಬ್ಷಾಲೋಮನು ಜೀವದಿಂದಿರುವಾಗ, “ನನ್ನ ಹೆಸರನ್ನು ಜ್ಞಾಪಕಾರ್ಥವಾಗಿ ಉಳಿಸಲು ನನಗೆ ಮಗನಿಲ್ಲ,” ಎಂದು ಹೇಳಿ, ಅವನು ತಗ್ಗಿನಲ್ಲಿರುವ ಒಂದು ಕಲ್ಲಿನ ಸ್ತಂಭವನ್ನು ತರಿಸಿ, ಅದನ್ನು ಅರಸನ ಕಣಿವೆಯಲ್ಲಿ ತನ್ನ ಜ್ಞಾಪಕಾರ್ಥವಾಗಿ ನಿಲ್ಲಿಸಿ, ಆ ಸ್ತಂಭಕ್ಕೆ ತನ್ನ ಹೆಸರನ್ನಿಟ್ಟಿದ್ದನು. ಅದು ಈ ದಿನದವರೆಗೂ ಅಬ್ಷಾಲೋಮನ ಸ್ಮಾರಕಸ್ತಂಭ ಎಂದು ಕರೆಯಲಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 18:18
13 ತಿಳಿವುಗಳ ಹೋಲಿಕೆ  

ಆಗ ಅವನು, “ಹಾ, ಬಾಬಿಲೋನ್ ಎಂಥಾ ಮಹಾನಗರ! ಇಗೋ, ನನ್ನ ಶಕ್ತಿ ಸಾಮರ್ಥ್ಯದಿಂದ ನಾನು ಕಟ್ಟಿಸಿರುವ ರಾಜಭವನ! ನನ್ನ ಕೀರ್ತಿ ಪರಾಕ್ರಮವನ್ನು ಇದು ಪ್ರಕಟಿಸುತ್ತಿದೆ!” ಎಂದು ಕೊಚ್ಚಿಕೊಂಡನು.


ಅವನಿಗೆ ಮೂರುಮಂದಿ ಗಂಡುಮಕ್ಕಳೂ ಒಬ್ಬ ಮಗಳೂ ಇದ್ದರು. ಮಗಳ ಹೆಸರು ತಾಮಾರ್; ಈಕೆ ಬಹು ಸುಂದರಿಯಾಗಿದ್ದಳು.


ಬೆಳಿಗ್ಗೆ ಎದ್ದು ಸೌಲನನ್ನು ಕರ್ಮೆಲಿಗೆ ಹೋಗಿ ಅಲ್ಲಿ ತನಗಾಗಿ ಒಂದು ಜ್ಞಾಪಕಸ್ತಂಭವನ್ನು ನಿಲ್ಲಿಸಿ, ಅಲ್ಲಿಂದ ದಿಬ್ಬ ಇಳಿದು ಗಿಲ್ಗಾಲಿಗೆ ಹೋದನು ಎಂಬ ಸಮಾಚಾರ ಸಿಕ್ಕಿತು.


ಅಬ್ರಾಮನು ಕೆದೊರ್ಲಗೋಮರನನ್ನೂ ಅವನೊಂದಿಗಿದ್ದ ರಾಜರನ್ನೂ ಸೋಲಿಸಿ ಬಂದಾಗ ಸೊದೋಮಿನ ಅರಸನು ಅವನನ್ನು ಶಾವೆ ತಗ್ಗಿನಲ್ಲಿ (ಅದಕ್ಕೆ ಅರಸನ ತಗ್ಗು ಎಂಬ ಹೆಸರೂ ಉಂಟು) ಭೇಟಿಯಾಗಲು ಬಂದನು.


ನಿರ್ಮೂಲವಾಗಲಿ ಅವನಾ ಪೀಳಿಗೆ I ನಿರ್ನಾಮವಾಗಲಿ ಮರುವಂಶದೊಳಗೆ II


ತಮ್ಮ ಹೆಸರಲೆಸ್ಟೋ ಸೊತ್ತಿದ್ದರೂ I ಸಮಾಧಿಯೇ ಅವರಿಗೆ ಶಾಶ್ವತ ಮಂದಿರವು I ಅದುವದುವೇ ಅವರಿಗೆ ನಿತ್ಯ ನಿವಾಸವು II


ಹೀಗೆ ಸರ್ವೇಶ್ವರ ಇಡೀ ಜಗತ್ತಿನ ಭಾಷೆಯನ್ನು ಗಲಿಬಿಲಿಗೊಳಿಸಿ ಅಲ್ಲಿಂದ ಜನರನ್ನು ಜಗದೆಲ್ಲೆಡೆಗೆ ಚದರಿಸಿದ ಕಾರಣ ಆ ಪಟ್ಟಣಕ್ಕೆ ‘ಬಾಬೆಲೋನ್‍’ ಎಂದು ಹೆಸರಾಯಿತು.


ಒಂದು ಪಟ್ಟಣವನ್ನು ಕಟ್ಟೋಣ; ಆಕಾಶವನ್ನು ಮುಟ್ಟುವಂಥ ಗೋಪುರವನ್ನು ನಿರ್ಮಿಸಿ ಪ್ರಖ್ಯಾತಿ ಪಡೆಯೋಣ. ಹೀಗೆ ಮಾಡಿದರೆ ನಾವು ಜಗದಲ್ಲೆಲ್ಲಾ ಚದರಿಹೋಗುವುದಕ್ಕೆ ಆಸ್ಪದವಿರುವುದಿಲ್ಲ” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು. ಕಟ್ಟುವಾಗ ಕಲ್ಲಿಗೆ ಬದಲಾಗಿ ಇಟ್ಟಿಗೆಯನ್ನೂ ಗಾರೆಗೆ (ಸುಣ್ಣಕ್ಕೆ) ಬದಲಾಗಿ ಕಲ್ಲರಗನ್ನೂ ಉಪಯೋಗಿಸಿದರು.


ಹೀಗಿದೆ ಸರ್ವೇಶ್ವರನ ನುಡಿ: “ಇವನು ಮಕ್ಕಳನ್ನು ಕಳೆದುಕೊಂಡ ವ್ಯಕ್ತಿ ತನ್ನ ಜನ್ಮವನ್ನು ಸಾರ್ಥಕ ಮಾಡಿಕೊಳ್ಳದ ವ್ಯಕ್ತಿ ಇವನ ಸಂತಾನದಲ್ಲಿ ಇನ್ನು ಯಾವನೂ ದಾವೀದನ ಸಿಂಹಾಸನದಲ್ಲಿ ಕೂರನು, ಜುದೇಯವನ್ನು ಆಳಿ ಬಾಳನು.”


ನೋಬಹನು ಯುದ್ಧಮಾಡಿ ಕೆನಾತ್ ಎಂಬ ಪಟ್ಟಣವನ್ನೂ ಅದಕ್ಕೆ ಸೇರಿದ ಊರುಗಳನ್ನೂ ಜಯಿಸಿದನು. ಆ ಪಟ್ಟಣಕ್ಕೆ ನೋಬಹ ಎಂದು ತನ್ನ ಹೆಸರನ್ನೇ ಕೊಟ್ಟನು.


ನಿನಗೇನು ಕೆಲಸವಿಲ್ಲಿ? ನಿನಗಾರಿಹರಿಲ್ಲಿ? ತೋಡಿಸಿಕೊಂಡಿರುವೆಯಾ ಗೂಡನ್ನಿಲ್ಲಿ? ಗೋರಿಯನ್ನು ಕೊರೆಯಿಸಿಕೊಂಡಿರುವೆಯಾ ಎತ್ತರದ ಬಂಡೆಯಲ್ಲಿ? ಕೆತ್ತಿಸಿಕೊಂಡಿರುವೆಯಾ ನಿನಗೊಂದು ನಿವಾಸವನಿಲ್ಲಿ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು