2 ಸಮುಯೇಲ 18:24 - ಕನ್ನಡ ಸತ್ಯವೇದವು C.L. Bible (BSI)24 ದಾವೀದನು ಎರಡು ಬಾಗಿಲುಗಳ ಮಧ್ಯೆ ಕುಳಿತುಕೊಂಡಿದ್ದನು. ಅಷ್ಟರಲ್ಲಿ ಕಾವಲುಗಾರನು ಗೋಪುರದ ಮಾಳಿಗೆಯನ್ನು ಹತ್ತಿ ಪಾಗಾರದ ಬಳಿಯಲ್ಲಿ ನಿಂತು ನೋಡಲು ಒಂಟಿಗನಾಗಿ ಬರುವ ಒಬ್ಬ ವ್ಯಕ್ತಿಯನ್ನು ಕಂಡನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ದಾವೀದನು ಒಳಗಣ ಮತ್ತು ಹೊರಗಣ ಬಾಗಿಲುಗಳ ಮಧ್ಯದಲ್ಲಿ ಕುಳಿತುಕೊಂಡಿದ್ದನು. ಅಷ್ಟರಲ್ಲಿ ಕಾವಲುಗಾರರು ಗೋಪುರದ ಮಾಳಿಗೆಯನ್ನು ಹತ್ತಿ ಪ್ರಾಕಾರದ ಗೋಡೆಯ ಬಳಿಯಲ್ಲಿ ನಿಂತು ನೋಡಲು ಒಬ್ಬಂಟಿಗನಾಗಿ ಬರುವ ಒಬ್ಬ ಮನುಷ್ಯನನ್ನು ಕಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ದಾವೀದನು ಎರಡು ಬಾಗಲುಗಳ ಮಧ್ಯದಲ್ಲಿ ಕೂತುಕೊಂಡಿದ್ದನು. ಅಷ್ಟರಲ್ಲಿ ಕಾವಲುಗಾರನು ಗೋಪುರದ ಮಾಳಿಗೆಯನ್ನು ಹತ್ತಿ ಪಾಗಾರದ ಬಳಿಯಲ್ಲಿ ನಿಂತು ನೋಡಲು ಒಂಟಿಗನಾಗಿ ಬರುವ ಒಬ್ಬ ಮನುಷ್ಯನನ್ನು ಕಂಡನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ದಾವೀದನು ನಗರದ ಎರಡು ಬಾಗಿಲುಗಳ ನಡುವೆ ಕುಳಿತಿದ್ದನು. ಕಾವಲುಗಾರನು ಊರಬಾಗಿಲುಗಳ ಮಾಳಿಗೆಯ ಮೇಲಕ್ಕೆ ಹೋದನು. ಕಾವಲುಗಾರನು ದೃಷ್ಟಿಸಿ ನೋಡಿದಾಗ, ಒಬ್ಬ ಮನುಷ್ಯನು ಒಬ್ಬಂಟಿಗನಾಗಿ ಓಡಿಬರುತ್ತಿರುವುದನ್ನು ನೋಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ದಾವೀದನು ಒಳಗಣ ಮತ್ತು ಹೊರಗಣ ಬಾಗಿಲುಗಳ ಮಧ್ಯದಲ್ಲಿ ಕುಳಿತಿದ್ದನು. ಕಾವಲುಗಾರನು ಗೋಪುರದ ಮಾಳಿಗೆಯ ಮೇಲೆ ಏರಿ, ಕಣ್ಣುಗಳನ್ನೆತ್ತಿ ನೋಡಲಾಗಿ, ಒಬ್ಬ ಮನುಷ್ಯನು ಒಂಟಿಯಾಗಿ ಓಡಿಬರುವುದನ್ನು ಕಂಡನು. ಅಧ್ಯಾಯವನ್ನು ನೋಡಿ |