Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 18:27 - ಕನ್ನಡ ಸತ್ಯವೇದವು C.L. Bible (BSI)

27 ಕಾವಲುಗಾರನು, “ಮುಂದಾಗಿ ಬರುತ್ತಿರುವವನ ಓಟ ಚಾದೋಕನ ಮಗನಾದ ಅಹೀಮಾಚನ ಓಟದ ಹಾಗೆ ಕಾಣುತ್ತದೆ,” ಎಂದನು. ಅದಕ್ಕೆ ಅರಸನು, “ಅವನು ಒಳ್ಳೆಯವನು; ಶುಭವರ್ತಮಾನ ತರುವವನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಆಗ ಕಾವಲುಗಾರನು, “ಮುಂದಾಗಿ ಬರುತ್ತಿರುವವನ ಓಟವು ಚಾದೋಕನ ಮಗನಾದ ಅಹೀಮಾಚನ ಓಟದ ಹಾಗೆ ಕಾಣುತ್ತದೆ” ಎಂದನು. ಅದಕ್ಕೆ ಅರಸನು, “ಅವನು ಒಳ್ಳೆಯವನು, ಶುಭವರ್ತಮಾನ ತರುವವನು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಕಾವಲುಗಾರನು - ಮುಂದಾಗಿ ಬರುತ್ತಿರುವವನ ಓಟವು ಚಾದೋಕನ ಮಗನಾದ ಅಹೀಮಾಚನ ಓಟದ ಹಾಗೆ ಕಾಣುತ್ತದೆ ಎಂದನು. ಅದಕ್ಕೆ ಅರಸನು - ಅವನು ಒಳ್ಳೆಯವನು; ಶುಭವರ್ತಮಾನತರುವವನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಕಾವಲುಗಾರನು, “ಮೊದಲನೆಯ ಮನುಷ್ಯನು ಓಡುತ್ತಿರುವುದು ಚಾದೋಕನ ಮಗನಾದ ಅಹೀಮಾಚನಂತಿದೆಯೆಂದು ನನ್ನ ಭಾವನೆ” ಎಂದು ಹೇಳಿದನು. ರಾಜನು, “ಅಹೀಮಾಚನು ಒಳ್ಳೆಯ ಮನುಷ್ಯ. ಅವನು ಶುಭಸಮಾಚಾರವನ್ನು ತರುತ್ತಿರಬೇಕು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಕಾವಲುಗಾರನು, “ಮೊದಲನೆಯವನ ಓಟವು ಚಾದೋಕನ ಮಗ ಅಹೀಮಾಚನ ಓಟದ ಹಾಗೆ ಇರುವುದೆಂದು ನನಗೆ ಕಾಣುತ್ತದೆ,” ಎಂದನು. ಅದಕ್ಕೆ ಅರಸನು, “ಅವನು ಒಳ್ಳೆಯವನು, ಒಳ್ಳೆಯ ಸಮಾಚಾರ ತರುತ್ತಾನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 18:27
7 ತಿಳಿವುಗಳ ಹೋಲಿಕೆ  

ಕಾವಲುಗಾರನು ಪುನಃ ಅರಸನಿಗೆ, “ಎರಡನೆಯವನೂ ಆ ಗುಂಪನ್ನು ಮುಟ್ಟಿದನು; ಆದರೆ ಹಿಂದಿರುಗಿ ಬರುವುದು ಕಾಣಿಸುವುದೇ ಇಲ್ಲ. ರಥದಲ್ಲಿ ಕುಳಿತಿರುವವನು ಕುದುರೆಗಳನ್ನು ಹುಚ್ಚುಹಿಡಿದವನಂತೆ ಓಡಿಸುವುದನ್ನು ನೋಡಿದರೆ ಅವನು, ನಿಂಷಿಯ ಮೊಮ್ಮಗನಾದ ಯೇಹುವಾಗಿರಬೇಕು,” ಎಂದು ಹೇಳಿದನು.


ಯಾಜಕ ಎಬ್ಯಾತಾರನ ಮಗ ಯೋನಾತಾನನು ಅಲ್ಲಿಗೆ ಬಂದನು. ಅದೋನೀಯನು ಅವನಿಗೆ, “ನಿನ್ನಂಥ ಯೋಗ್ಯಪುರುಷ ಶುಭಸಮಾಚಾರವನ್ನೇ ತಂದಿರಬೇಕು, ಒಳಗೆ ಬಾ,” ಎಂದನು.


ಬೋಧಿಸುವವರನ್ನು ಕಳುಹಿಸದೆಹೋದರೆ, ಅವರು ಶುಭಸಂದೇಶವನ್ನು ಬೋಧಿಸುವುದಾದರೂ ಹೇಗೆ? “ಶುಭಸಂದೇಶವನ್ನು ತರುವವರ ಬರುವಿಕೆ ಎಷ್ಟೋ ಶುಭದಾಯಕ,” ಎಂದು ಪವಿತ್ರಗ್ರಂಥದಲ್ಲೇ ಬರೆಯಲಾಗಿದೆ.


ಶುಭಕರ ಸಮಾಚಾರವನು ತರುವ ಶಾಂತಿಸಮಾಧಾನವನು ಸಾರುವ ಸಂತಸದ ಸಂದೇಶವನು ಅರುಹುವ ಜೀವೋದ್ಧಾರವನು ಪ್ರಕಟಿಸುವ ‘ನಿನ್ನ ದೇವರೇ ರಾಜ್ಯಭಾರ ವಹಿಸುವ ಎಂದು ಸಿಯೋನಿಗೆ ತಿಳಿಯಪಡಿಸುತ್ತ ಪರ್ವತಗಳಿಂದ ಇಳಿದುಬರುವ ಶಾಂತಿದೂತನ ಪಾದಪದ್ಮಗಳು ಎಷ್ಟೊಂದು ಸುಂದರ!


ದೂರನಾಡಿನಿಂದ ಬಂದ ಶುಭವರದಿ, ದಣಿದ ಪ್ರಾಣಕ್ಕೆ ತಣ್ಣೀರ ತೃಪ್ತಿ.


ಸುಗ್ಗಿಯ ಕಾಲದಲ್ಲಿ ಹಿಮದ ತಂಪು ಹೇಗೋ ಹಾಗೆ ಕಳುಹಿಸುವ ಒಡೆಯನಿಗೆ ಪ್ರಾಮಾಣಿಕ ದೂತನೂ ಹಾಗೆ.


ಅಷ್ಟರಲ್ಲಿ ಕಾವಲುಗಾರನು ಓಡುತ್ತಾ ಬರುವ ಇನ್ನೊಬ್ಬನನ್ನು ಕಂಡು ದ್ವಾರಪಾಲಕನ ಮುಖಾಂತರ, “ಇಗೋ, ಇನ್ನೊಬ್ಬನು ಒಂಟಿಗನಾಗಿ ಬರುತ್ತಿದ್ಪಾನೆ,” ಎಂದು ಅರಸನಿಗೆ ತಿಳಿಸಿದನು. ಅರಸನು, “ಹಾಗಾದರೆ ಅವನೂ ಸಮಾಚಾರ ತರುವವನು,” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು