Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 18:28 - ಕನ್ನಡ ಸತ್ಯವೇದವು C.L. Bible (BSI)

28 ಅಹೀಮಾಚನು ಹತ್ತಿರ ಬಂದು ಅರಸನಿಗೆ, “ಶುಭವಾಗಲಿ!” ಎಂದು ಹೇಳಿ ಸಾಷ್ಟಾಂಗ ನಮಸ್ಕಾರ ಮಾಡಿದನು. “ಅರಸನಿಗೆ ವಿರುದ್ಧ ಬಂಡೆದ್ದವರನ್ನು ಅಧೀನಪಡಿಸಿದ ನಿಮ್ಮ ದೇವರಾದ ಸರ್ವೇಶ್ವರನಿಗೆ ಸ್ತೋತ್ರವಾಗಲಿ!” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಅಹೀಮಾಚನು ಹತ್ತಿರ ಬಂದು ಅರಸನಿಗೆ, “ಶುಭವಾಗಲಿ” ಎಂದು ಹೇಳಿ ಸಾಷ್ಟಾಂಗನಮಸ್ಕಾರ ಮಾಡಿ, “ಅರಸನಿಗೆ ವಿರೋಧವಾಗಿ ಕೈಯೆತ್ತಿದವರನ್ನು ಸ್ವಾಧೀನಪಡಿಸಿದ ನಿನ್ನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಅಹೀಮಾಚನು ಹತ್ತಿರ ಬಂದು ಅರಸನಿಗೆ ಶುಭವಾಗಲಿ ಎಂದು ಹೇಳಿ ಸಾಷ್ಟಾಂಗನಮಸ್ಕಾರಮಾಡಿ - ಅರಸನಿಗೆ ವಿರೋಧವಾಗಿ ಕೈಯೆತ್ತಿದವರನ್ನು ಸ್ವಾಧೀನಪಡಿಸಿದ ನಿನ್ನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಅಹೀಮಾಚನು ರಾಜನ ಬಳಿಗೆ ಬಂದು, “ಎಲ್ಲವೂ ಶುಭಕರವಾಗಿದೆ” ಎಂದು ಹೇಳಿ ರಾಜನಿಗೆ ಸಾಷ್ಟಾಂಗನಮಸ್ಕಾರ ಮಾಡಿದನು. ಅಹೀಮಾಚನು, “ನಿನ್ನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ! ರಾಜನಾದ ಒಡೆಯನೇ, ನಿನ್ನ ವಿರುದ್ಧವಾಗಿದ್ದ ಜನರನ್ನು ಯೆಹೋವನು ಸೋಲಿಸಿದ್ದಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಆಗ ಅಹೀಮಾಚನು ಕೂಗಿ ಅರಸನಿಗೆ, “ಎಲ್ಲವೂ ಕ್ಷೇಮ,” ಎಂದು ಹೇಳಿ ಅರಸನ ಮುಂದೆ ಮೋರೆ ಕೆಳಗಾಗಿ, ನೆಲಕ್ಕೆ ಅಡ್ಡಬಿದ್ದು, “ಅರಸನಾದ ನನ್ನ ಒಡೆಯನಿಗೆ ವಿರೋಧವಾಗಿ ತಮ್ಮ ಕೈಗಳನ್ನೆತ್ತಿದ ಮನುಷ್ಯರನ್ನು ಒಪ್ಪಿಸಿಕೊಟ್ಟ ನಿಮ್ಮ ದೇವರಾದ ಯೆಹೋವ ದೇವರು ಸ್ತುತಿಹೊಂದಲಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 18:28
16 ತಿಳಿವುಗಳ ಹೋಲಿಕೆ  

ತೆಕೋವದ ಆ ಸ್ತ್ರೀ ಅರಸನ ಹತ್ತಿರಕ್ಕೆ ಹೋಗಿ ಅವನ ಮುಂದೆ ನೆಲಕ್ಕೆಬಿದ್ದು, “ಅರಸರೇ, ರಕ್ಷಿಸಿರಿ,” ಎಂದು ಕೂಗಿದಳು.


ಅಬ್ರಾಮನು ತಾನು ಗೆದ್ದು ತಂದಿದ್ದ ಎಲ್ಲ ವಸ್ತುಗಳಲ್ಲಿ ಹತ್ತನೆಯ ಒಂದು ಭಾಗವನ್ನು ಮೆಲ್ಕಿಸದೇಕನಿಗೆ ಕೊಟ್ಟನು.


ತುತ್ತಾಗಿಸಲಿಲ್ಲ ನಮ್ಮನ್ನು ಶತ್ರುಗಳ ಬಾಯಿಗೆ I ಕೃತಜ್ಞತಾಪೂರ್ವಕ ಸ್ತೋತ್ರ ಇಗೋ ಪ್ರಭುವಿಗೆ II


ನಮಗಲ್ಲ ಹೇ ಪ್ರಭು, ನಮಗಲ್ಲ ಮಹಿಮೆ I ನಿನ್ನ ನಾಮಕೇ ಸಲ್ಲಲಿ ಆ ಮಹಿಮೆ I ನಿನ್ನ ನೀತಿ ಸತ್ಯತೆಗಳ ನಿಮಿತ್ತವೆ II


ವಿರೋಧಿಗಳ ವಶಕ್ಕೆ ಎನ್ನನು ನೀ ಬಿಟ್ಟುಬಿಡಲಿಲ್ಲ I ನಿರಾತಂಕದೆಡೆಯಲಿ ನನ್ನ ನಿಲ್ಲಿಸಿದೆಯಲ್ಲಾ II


ನಾಲ್ಕನೆಯ ದಿನದಲ್ಲಿ ಬೆರಾಕ ಕಣಿವೆಗೆ ಕೂಡಿಬಂದರು. ಅಲ್ಲಿ ಅವರು ಸರ್ವೇಶ್ವರನನ್ನು ಸ್ತುತಿಸಿದ್ದರಿಂದ ಆ ಸ್ಥಳಕ್ಕೆ ಇಂದಿನವರೆಗೂ ‘ಬೆರಾಕ ಕಣಿವೆ’ ಎಂಬ ಹೆಸರಿದೆ.


ಶುದ್ಧನಿಗಾತ ಪರಿಶುದ್ಧನು ಮೂರ್ಖನಿಗಾತ ಮಹಾವಕ್ರನು.


ಮೂರನೆಯ ದಿನ ಸೌಲನ ಪಾಳೆಯದಿಂದ ಒಬ್ಬ ವ್ಯಕ್ತಿ ದಾವೀದನ ಬಳಿಗೆ ಬಂದು ನೆಲದ ಮಟ್ಟಿಗೂ ಬಾಗಿ ನಮಸ್ಕರಿಸಿದನು. ಅವನು ಸಂತಾಪದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡು ತಲೆಯ ಮೇಲೆ ಮಣ್ಣು ಹಾಕಿಕೊಂಡಿದ್ದನು.


ಅಬೀಷೈಯು ದಾವೀದನಿಗೆ, “ದೇವರು ಈ ದಿನ ನಿನ್ನ ವೈರಿಯನ್ನು ನಿನ್ನ ಕೈಗೆ ಒಪ್ಪಿಸಿಕೊಟ್ಟಿದ್ದಾರೆ; ಅಪ್ಪಣೆಯಾಗಲಿ, ನಾನು ಭರ್ಜಿಯಿಂದ ಒಂದೇ ಪೆಟ್ಟಿನಲ್ಲಿ ಅವನನ್ನು ನೆಲಕ್ಕೆ ಕಚ್ಚಿಕೊಳ್ಳುವಂತೆ ತಿವಿಯುತ್ತೇನೆ. ಎರಡನೆಯ ಸಾರಿ ಹೊಡೆಯುವ ಅವಶ್ಯಕತೆ ಇರುವುದಿಲ್ಲ,” ಎಂದು ಹೇಳಿದನು.


ಸರ್ವೇಶ್ವರ ನನ್ನನ್ನು ನಿನ್ನ ಕೈಗೆ ಒಪ್ಪಿಸಿಕೊಟ್ಟರೂ ನೀನು ನನ್ನನ್ನು ಕೊಲ್ಲಲಿಲ್ಲ. ಇದರಿಂದ ನೀನು ನನಗೆ ಹಿತವನ್ನೇ ಮಾಡುವಂಥವನೆಂಬುದು ಈ ದಿನ ಖಚಿತವಾಯಿತು.


“ನನ್ನೊಡೆಯ ಅಬ್ರಹಾಮನ ದೇವರಾಗಿರುವ ಸರ್ವೇಶ್ವರ ಸ್ವಾಮಿಗೆ ಸ್ತೋತ್ರಸಲ್ಲಲಿ! ಅವರು ನನ್ನೊಡೆಯನ ಮೇಲಿಟ್ಟಿದ್ದ ಅಚಲ ಪ್ರೀತಿ ಪ್ರಾಮಾಣಿಕತೆಯನ್ನು ಕೈಬಿಟ್ಟಿಲ್ಲ. ನನ್ನೊಡೆಯನ ಬಂಧುಬಳಗದವರ ಮನೆಗೆ ನನ್ನನ್ನು ನೆಟ್ಟಗೆ ಕರೆತಂದಿದ್ದಾರೆ,” ಎಂದನು.


“ಈಜಿಪ್ಟಿನವರ ಕೈಯಿಂದಲೂ ಫರೋಹನ ಕೈಯಿಂದಲೂ ನಿಮ್ಮನ್ನು ಬಿಡುಗಡೆಮಾಡಿದ ಸರ್ವೇಶ್ವರ ಸ್ವಾಮಿಗೆ ಸ್ತೋತ್ರವಾಗಲಿ.


ಅವರು ಈ ದಿನ ನಿನ್ನನ್ನು ನನ್ನ ಕೈಗೆ ಒಪ್ಪಿಸಿಕೊಡುವರು. ನಾನು ನಿನ್ನನ್ನು ಕೊಂದು, ನಿನ್ನ ತಲೆಯನ್ನು ಕಡಿದು, ಫಿಲಿಷ್ಟಿಯ ಸೈನ್ಯದ ಶವಗಳನ್ನು ಆಕಾಶದ ಪಕ್ಷಿಗಳಿಗೂ ವನ್ಯಮೃಗಗಳಿಗೂ ಹಂಚಿಕೊಡುವೆನು. ಇದರಿಂದ ಇಸ್ರಯೇಲರ ಸಂಗಡ ದೇವರಿದ್ದಾರೆಂಬುದು ಜಗತ್ತಿಗೆಲ್ಲಾ ತಿಳಿದುಬರುವುದು.


ಅಬೀಗೈಲಳು ದಾವೀದನನ್ನು ಕಂಡ ಕೂಡಲೆ ಕತ್ತೆಯಿಂದಿಳಿದು ಅವನಿಗೆ ಸಾಷ್ಟಾಂಗ ನಮಸ್ಕರಿಸಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು