2 ಸಮುಯೇಲ 18:29 - ಕನ್ನಡ ಸತ್ಯವೇದವು C.L. Bible (BSI)29 ಆಗ ಅರಸನು, “ಆ ಯುವಕ ಅಬ್ಷಾಲೋಮನು ಸುರಕ್ಷಿತನಾಗಿದ್ದಾನೋ?” ಎಂದು ಕೇಳಿದನು. ಅದಕ್ಕೆ ಅಹೀಮಾಚನು, “ಯೋವಾಬನು ಒಡೆಯರ ಸೇವಕನಾದ ನನ್ನನ್ನು ಕಳುಹಿಸುವಾಗ ನಾನು ಒಂದು ದೊಡ್ಡ ದೊಂಬಿಯನ್ನು ಕಂಡೆ.ಆದರೆ ಸಂಗತಿಯೇನೆಂಬುದು ನನಗೆ ಗೊತ್ತಾಗಲಿಲ್ಲ,” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಆಗ ಅರಸನು ಅವನನ್ನು, “ಯೌವನಸ್ಥನಾದ ಅಬ್ಷಾಲೋಮನು ಸುರಕ್ಷಿತವಾಗಿದ್ದಾನೋ” ಎಂದು ಕೇಳಿದನು. ಅದಕ್ಕೆ ಅಹೀಮಾಚನು, “ಯೋವಾಬನು ಒಡೆಯರ ಸೇವಕನಾದ ನನ್ನನ್ನು ಕಳುಹಿಸುವಾಗ ನಾನು ಒಂದು ದೊಡ್ಡ ದೊಂಬಿಯನ್ನು ಕಂಡೆನು, ಆದರೆ ಸಂಗತಿ ಏನೆಂಬುದು ನನಗೆ ಗೊತ್ತಾಗಲಿಲ್ಲ” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಆಗ ಅರಸನು ಅವನನ್ನು - ಯೌವನಸ್ಥನಾದ ಅಬ್ಷಾಲೋಮನು ಸುರಕ್ಷಿತನಾಗಿದ್ದಾನೋ ಎಂದು ಕೇಳಿದನು. ಅದಕ್ಕೆ ಅಹೀಮಾಚನು ಯೋವಾಬನು ಒಡೆಯರ ಸೇವಕನಾದ ನನ್ನನ್ನು ಕಳುಹಿಸುವಾಗ ನಾನು ಒಂದು ದೊಡ್ಡ ದೊಂಬಿಯನ್ನು ಕಂಡೆನು. ಆದರೆ ಸಂಗತಿಯೇನೆಂಬದು ನನಗೆ ಗೊತ್ತಾಗಲಿಲ್ಲ ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ರಾಜನು, “ಯುವಕನಾದ ಅಬ್ಷಾಲೋಮನು ಕ್ಷೇಮವಾಗಿರುವನೇ?” ಎಂದು ಕೇಳಿದನು. ಅಹೀಮಾಚನು, “ಯೋವಾಬನು ನನ್ನನ್ನು ಕಳುಹಿಸಿದಾಗ, ನಾನು ಒಂದು ದೊಡ್ಡ ಕೋಲಾಹಲವನ್ನು ನೋಡಿದೆನು. ಆದರೆ ಅದು ಏನೆಂದು ನನಗೆ ಗೊತ್ತಿಲ್ಲ” ಎಂದು ಉತ್ತರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಅರಸನು, “ಯುವಕನಾದ ಅಬ್ಷಾಲೋಮನಿಗೆ ಕ್ಷೇಮವೋ?” ಎಂದು ಕೇಳಿದನು. ಅದಕ್ಕೆ ಅಹೀಮಾಚನು ಉತ್ತರವಾಗಿ, “ಯೋವಾಬನು ಅರಸನ ಸೇವಕನನ್ನೂ, ನಿನ್ನ ಸೇವಕನಾದ ನನ್ನನ್ನೂ ಕಳುಹಿಸಿದಾಗ ದೊಡ್ಡ ಗೊಂದಲವನ್ನು ಕಂಡೆನು. ಆದರೆ ಅದು ಏನೋ ನಾನರಿಯೆ,” ಎಂದನು. ಅಧ್ಯಾಯವನ್ನು ನೋಡಿ |