Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 18:6 - ಕನ್ನಡ ಸತ್ಯವೇದವು C.L. Bible (BSI)

6 ಅನಂತರ ಸೈನಿಕರು ಇಸ್ರಯೇಲರಿಗೆ ವಿರೋಧವಾಗಿ ಹೊರಟು ಬಯಲಿಗೆ ಬಂದರು. ಎಫ್ರಯಿಮ್ ಕಾಡಿನಲ್ಲಿ ಯುದ್ಧನಡೆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅನಂತರ ಸೈನಿಕರು ಇಸ್ರಾಯೇಲರಿಗೆ ವಿರೋಧವಾಗಿ ಹೊರಟು ಬಯಲಿಗೆ ಬಂದರು. ಎಫ್ರಾಯೀಮಿನ ಕಾಡಿನಲ್ಲಿ ಯುದ್ಧವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅನಂತರ ಸೈನಿಕರು ಇಸ್ರಾಯೇಲ್ಯರಿಗೆ ವಿರೋಧವಾಗಿ ಹೊರಟು ಬೈಲಿಗೆ ಬಂದರು; ಎಫ್ರಾಯೀಮ್‍ಕಾಡಿನಲ್ಲಿ ಯುದ್ಧವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ದಾವೀದನ ಸೈನ್ಯವು ಇಸ್ರೇಲರಾದ ಅಬ್ಷಾಲೋಮನ ವಿರುದ್ಧ ಎಫ್ರಾಯೀಮ್ ಕಾಡಿನಲ್ಲಿ ಯುದ್ಧಮಾಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅನಂತರ ಸೈನಿಕರು ಇಸ್ರಾಯೇಲಿಗೆ ವಿರೋಧವಾಗಿ ಹೊರಟರು. ಯುದ್ಧವು ಎಫ್ರಾಯೀಮ್ ಅಡವಿಯಲ್ಲಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 18:6
5 ತಿಳಿವುಗಳ ಹೋಲಿಕೆ  

ಆಮೇಲೆ ನಾಡನ್ನು ನಿಮಗೆ ಕೊಟ್ಟಿರುತ್ತೇನೆ. ಅದರಲ್ಲಿ ಕಾಡುಗಳಿದ್ದರೂ ನೀವು ಅವುಗಳನ್ನು ಕಡಿದು ಹಾಕಬಹುದು. ಅದಕ್ಕೆ ಸೇರಿರುವ ಬಯಲುಭೂಮಿ ನಿಮ್ಮದೇ. ಕಾನಾನ್ಯರು ಬಲಿಷ್ಠರು ಹಾಗೂ ಕಬ್ಬಿಣದ ರಥಗಳುಳ್ಳವರು. ಆದರೂ ನೀವು ಅವರನ್ನು ಹೊರದೂಡಬಲ್ಲಿರಿ,” ಎಂದು ಉತ್ತರ ಕೊಟ್ಟನು.


ಅದಕ್ಕೆ ಯೆಹೋಶುವನು, “ಮಹಾಜನಾಂಗವಾದ ನಿಮಗೆ ಎಫ್ರಯಿಮ್ ಮಲೆನಾಡು ಸಾಲದಿದ್ದರೆ ಪೆರಿಜ್ಜೀಯರ ಮತ್ತು ರೆಫಾಯರ ನಾಡುಗಳಿಗೆ ಹೋಗಿ ಅಲ್ಲಿನ ಕಾಡು ಕಡಿದು ಸ್ಥಳ ಮಾಡಿಕೊಳ್ಳಿ,” ಎಂದನು.


ಇಸ್ರಯೇಲರೂ ಅಬ್ಷಾಲೋಮನೂ ಗಿಲ್ಯಾದ್ ದೇಶದಲ್ಲಿ ಪಾಳೆಯಮಾಡಿಕೊಂಡರು.


ಇಸ್ರಯೇಲರು ದಾವೀದನ ಸೈನಿಕರಿಂದ ಪೂರ್ಣವಾಗಿ ಪರಾಭವಗೊಂಡರು. ಆ ದಿನ ಇಪ್ಪತ್ತು ಸಾವಿರ ಜನರು ಹತರಾದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು