Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 18:8 - ಕನ್ನಡ ಸತ್ಯವೇದವು C.L. Bible (BSI)

8 ಯುದ್ಧವು ಸುತ್ತಣ ಪ್ರದೇಶಗಳಿಗೆ ಹಬ್ಬಿಕೊಂಡಿತು. ಆ ದಿನ ಕತ್ತಿಯಿಂದ ಸತ್ತವರಿಗಿಂತ, ಮರುಳುಗಾಡಿನಲ್ಲಿ ಸತ್ತವರ ಸಂಖ್ಯೆಯೇ ಹೆಚ್ಚಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಯುದ್ಧವು ಸುತ್ತಣ ಪ್ರದೇಶಗಳಲ್ಲಿ ಹಬ್ಬಿಕೊಂಡಿತು. ಆ ದಿನ ಕತ್ತಿಯಿಂದ ಹತರಾದವರಿಗಿಂತ ಕಾಡಿನಲ್ಲಿ ಹತರಾದವರೇ ಹೆಚ್ಚಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಯುದ್ಧವು ಸುತ್ತಣ ಪ್ರದೇಶಗಳಲ್ಲಿ ಹಬ್ಬಿಕೊಂಡಿತು. ಆ ದಿವಸ ಕತ್ತಿಗಿಂತ ಕಾಡೇ ಹೆಚ್ಚಿನ ಸಂಹಾರಕ್ಕೆ ಕಾರಣವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಯುದ್ಧವು ದೇಶವನ್ನೆಲ್ಲ ವ್ಯಾಪಿಸಿತು. ಆದರೆ ಅಂದು ಕತ್ತಿಯಿಂದ ಸತ್ತ ಜನರಿಗಿಂತ ಹೆಚ್ಚು ಜನರು ಕಾಡಿನಲ್ಲಿ ಸತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆ ಹೊತ್ತು ಅಲ್ಲಿ ದೊಡ್ಡ ಸಂಹಾರವಾಯಿತು. ಇಪ್ಪತ್ತು ಸಾವಿರ ಸೈನಿಕರು ಸತ್ತರು. ಅಲ್ಲಿನ ಯುದ್ಧವು ಸುತ್ತಣ ಪ್ರದೇಶಗಳಲ್ಲಿ ಹಬ್ಬಿಕೊಂಡಿತು. ಆ ದಿನ ಸೈನಿಕರಲ್ಲಿ ಖಡ್ಗದಿಂದ ಹತರಾದವರಿಗಿಂತ ಕಾಡಿನಲ್ಲಿ ಹತರಾದವರೇ ಹೆಚ್ಚಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 18:8
10 ತಿಳಿವುಗಳ ಹೋಲಿಕೆ  

ಆದರೆ ನಿನ್ನದೊಂದು ಉಸಿರುಗಾಳಿ ಸಾಕಾಯಿತು ಅವರು ಸೀಸದ ಗುಂಡಿನಂತೆ ಮುಳುಗಿ ಹೋಗಲು. ಅವರನ್ನು ಸಮುದ್ರವು ನುಂಗಿಬಿಡಲು


ನಿರ್ಣಯಿಸು ನನ್ನ ನ್ಯಾಯವನು ಓ ದೇವಾ I ವಾದಿಸು ಆ ಭಕ್ತಿಹೀನ ಜನತೆಯ ವಿರುದ್ಧ I ಬಿಡಿಸೆನ್ನನು ವಂಚಕರಿಂದ, ಅಧರ್ಮಿಗಳಿಂದ II


ಎದ್ದೇಳು ದೇವ, ಕಾಪಾಡ ಬಾ ಪ್ರಭುವೆ I ವೈರಿಗಳ ದವಡೆ ಬಡಿದವನು ನೀನಲ್ಲವೇ I ದುರುಳರ ಹಲ್ಲುದುರಿಸಿದವನು ನೀನಲ್ಲವೆ? II


ಉಳಿದ ಇಪ್ಪತ್ತೇಳು ಸಾವಿರಮಂದಿ ಸೈನಿಕರು ಅಫೇಕ ಪಟ್ಟಣವನ್ನು ಹೊಕ್ಕರು. ಆದರೆ ಆ ಪಟ್ಟಣದ ಗೋಡೆ ಅವರ ಮೇಲೆ ಬಿದ್ದುದರಿಂದ ಅವರೂ ಸತ್ತರು. ಬೆನ್ಹದದನೂ ಆ ಪಟ್ಟಣವನ್ನು ಹೊಕ್ಕು, ಒಂದು ಮನೆಯ ಒಳಕೋಣೆಯಲ್ಲಿ ಅಡಗಿಕೊಂಡನು.


ಅವರು ಇಸ್ರಯೇಲರಿಗೆ ಬೆಂಗೊಟ್ಟು ಬೇತ್ ಹೋರೋನಿನ ಇಳಿಜಾರಿನಲ್ಲಿ ಓಡುತ್ತಾ ಅಜೇಕವನ್ನು ಮುಟ್ಟುವವರೆಗೂ ಸರ್ವೇಶ್ವರ ಆಕಾಶದಿಂದ ದೊಡ್ಡ ಕಲ್ಮಳೆಯನ್ನು ಸುರಿಸಿದರು. ಈ ಕಾರಣ ಅನೇಕರು ಸತ್ತರು. ಇಸ್ರಯೇಲರ ಕತ್ತಿಗೆ ಈಡಾದವರಿಗಿಂತ ಕಲ್ಮಳೆಯಿಂದ ನಾಶವಾದವರೇ ಹೆಚ್ಚುಮಂದಿ.


ಇಸ್ರಯೇಲರು ದಾವೀದನ ಸೈನಿಕರಿಂದ ಪೂರ್ಣವಾಗಿ ಪರಾಭವಗೊಂಡರು. ಆ ದಿನ ಇಪ್ಪತ್ತು ಸಾವಿರ ಜನರು ಹತರಾದರು.


ಅಬ್ಷಾಲೋಮನು ದಾವೀದನ ಸೇವಕರ ಕೈಗೆ ಸಿಕ್ಕಿದನು. ಅದು ಹೇಗೆಂದರೆ, ಅವನು ಹತ್ತಿದ್ದ ಹೇಸರಗತ್ತೆ ಒಂದು ದೊಡ್ಡ ಓಕ್ ಮರದ ಕೆಳಗೆ ಹಾದುಹೋಗುವಾಗ ಅವನ ತಲೆ ನಿಬಿಡವಾದ ಅದರ ಕೊಂಬೆಗಳಲ್ಲಿ ಸಿಕ್ಕಿಕೊಂಡಿತು; ಆ ಹೇಸರಗತ್ತೆ ಅವನ ಕೆಳಗಿನಿಂದ ಓಡಿಹೋಯಿತು. ಅವನು ಭೂಮಿಗೂ ಆಕಾಶಕ್ಕೂ ಮಧ್ಯೆ ನೇತಾಡಬೇಕಾಯಿತು.


ಮಗನೇ, ಸರ್ವೇಶ್ವರನಿಗೂ ರಾಜನಿಗೂ ಭಯಪಡು; ಅವರನ್ನು ವಿರೋಧಿಸುವವರ ಗೊಡವೆಗೆ ಹೋಗಬೇಡ.


ಅವರಿಬ್ಬರು ವಿಧಿಸುವ ವಿಪತ್ತು ಫಕ್ಕನೆ ಸಂಭವಿಸೀತು, ಅವರಿಂದಾಗುವ ನಾಶವು ಯಾರಿಗೆ ತಿಳಿದೀತು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು