Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 18:9 - ಕನ್ನಡ ಸತ್ಯವೇದವು C.L. Bible (BSI)

9 ಅಬ್ಷಾಲೋಮನು ದಾವೀದನ ಸೇವಕರ ಕೈಗೆ ಸಿಕ್ಕಿದನು. ಅದು ಹೇಗೆಂದರೆ, ಅವನು ಹತ್ತಿದ್ದ ಹೇಸರಗತ್ತೆ ಒಂದು ದೊಡ್ಡ ಓಕ್ ಮರದ ಕೆಳಗೆ ಹಾದುಹೋಗುವಾಗ ಅವನ ತಲೆ ನಿಬಿಡವಾದ ಅದರ ಕೊಂಬೆಗಳಲ್ಲಿ ಸಿಕ್ಕಿಕೊಂಡಿತು; ಆ ಹೇಸರಗತ್ತೆ ಅವನ ಕೆಳಗಿನಿಂದ ಓಡಿಹೋಯಿತು. ಅವನು ಭೂಮಿಗೂ ಆಕಾಶಕ್ಕೂ ಮಧ್ಯೆ ನೇತಾಡಬೇಕಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅಬ್ಷಾಲೋಮನು ದಾವೀದನ ಸೇವಕರ ಕೈಗೆ ಸಿಕ್ಕಿದನು. ಹೇಗೆಂದರೆ ಅವನು ಹತ್ತಿದ ಹೆಸರುಗತ್ತೆಯು ಒಂದು ದೊಡ್ಡ ದೇವದಾರು (ಕರ್ಪೂರತೈಲದ) ಮರದ ಕೆಳಗೆ ಹಾದುಹೋಗುವಾಗ ಅವನ ತಲೆಯ ಕೂದಲು ಒಂದು ದೊಡ್ಡದಾದ ಕೊಂಬೆಗೆ ಸಿಕ್ಕಿಕೊಂಡಿತು. ಹೇಸರಗತ್ತೆಯು ಅವನ ಕೆಳಗಿನಿಂದ ಓಡಿಹೋಯಿತು. ಅವನು ಭೂಮಿಗೂ ಆಕಾಶಕ್ಕೂ ಮಧ್ಯದಲ್ಲಿ ನೇತಾಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅಬ್ಷಾಲೋಮನು ದಾವೀದನ ಸೇವಕರಿಗೆ ಸಿಕ್ಕಿದನು; ಹೇಗಂದರೆ - ಅವನು ಹತ್ತಿದ ಹೇಸರಕತ್ತೆಯು ಒಂದು ದೊಡ್ಡ ಏಲಾಮರದ ಕೆಳಗೆ ಹಾದುಹೋಗುವಾಗ ಅವನ ತಲೆಯು ನಿಬಿಡವಾದ ಅದರ ಕೊಂಬೆಗಳಲ್ಲಿ ಸಿಕ್ಕಿಕೊಂಡಿತು; ಹೇಸರಕತ್ತೆಯು ಅವನ ಕೆಳಗಿನಿಂದ ಓಡಿಹೋಯಿತು. ಅವನು ಭೂವಿುಗೂ ಆಕಾಶಕ್ಕೂ ಮಧ್ಯದಲ್ಲಿ ನೇತಾಡುವವನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಅಬ್ಷಾಲೋಮನು ದಾವೀದನ ಸೈನಿಕರ ಕೈಗೆ ಸಿಕ್ಕಿಕೊಂಡನು. ಅವನು ಹೇಸರಕತ್ತೆಯ ಮೇಲೆ ಸವಾರಿ ಮಾಡುತ್ತಾ ತಪ್ಪಿಸಿಕೊಳ್ಳಲು ಹೋದನು. ಆ ಹೇಸರಕತ್ತೆಯು ದೊಡ್ಡ ಓಕ್ ಮರದ ರೆಂಬೆಗಳ ಕೆಳಗೆ ಓಡುತ್ತಾ ಹೋಯಿತು. ಆ ರೆಂಬೆಗಳು ದಟ್ಟವಾಗಿದ್ದುದರಿಂದ ಅಬ್ಷಾಲೋಮನ ತಲೆಯು ಮರದಲ್ಲಿ ಸಿಕ್ಕಿಹಾಕಿಕೊಂಡಿತು. ಅವನು ಕುಳಿತುಕೊಂಡಿದ್ದ ಹೇಸರಕತ್ತೆಯು ಓಡಿಹೋದುದರಿಂದ ಅಬ್ಷಾಲೋಮನು ಮರದಲ್ಲಿ ನೇತಾಡುವವನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆಗ ಅಬ್ಷಾಲೋಮನು ದಾವೀದನ ಸೇವಕರಿಗೆ ಎದುರಾಗಿ ಬಂದನು. ಅಬ್ಷಾಲೋಮನು ಹೇಸರಗತ್ತೆಯ ಮೇಲೆ ಏರಿದ್ದನು. ಆ ಹೇಸರಗತ್ತೆಯು ಒಂದು ದೊಡ್ಡ ಏಲಾ ಮರದ ಬಲವಾದ ಕೊಂಬೆಗಳ ಕೆಳಗೆ ಬಂದಾಗ, ಅವನ ತಲೆಯು ಆ ಮರದ ಕೊಂಬೆಯಲ್ಲಿ ಸಿಕ್ಕಿಕೊಂಡಿತು. ಆದ್ದರಿಂದ ಅವನು ಹತ್ತಿದ್ದ ಹೇಸರಗತ್ತೆಯು ಹೊರಟುಹೋಯಿತು. ಅವನು ಭೂಮಿಗೂ ಆಕಾಶಕ್ಕೂ ಮಧ್ಯದಲ್ಲಿ ನೇತಾಡುವವನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 18:9
18 ತಿಳಿವುಗಳ ಹೋಲಿಕೆ  

ಅವನ ತಲೆಗೂದಲು ಬಹುಭಾರವಾಗುತ್ತಿದ್ದುದರಿಂದ ಪ್ರತಿವರ್ಷದ ಅಂತ್ಯದಲ್ಲಿ ಬೋಳಿಸಿಕೊಳ್ಳುತ್ತಿದ್ದನು. ಆಗ ಅವನ ತಲೆಗೂದಲು ಸರಕಾರೀ ತೂಕದ ಪ್ರಕಾರ ಎರಡು ಕಿಲೋಗ್ರಾಂ ತೂಕವಾಗುತ್ತಿತ್ತು.


ತಂದೆಯನ್ನು ಪರಿಹಾಸ್ಯಮಾಡುವ ಕಣ್ಣನ್ನು, ತಾಯಿಯ ಆಜ್ಞೆಯನ್ನು ಧಿಕ್ಕರಿಸುವ ನೇತ್ರವನ್ನು ಹಳ್ಳಕೊಳ್ಳದ ಕಾಗೆಗಳು ಕುಕ್ಕುವುವು, ರಣಹದ್ದುಗಳು ತಿಂದುಬಿಡುವುವು.


ದುರ್ಜನರಿಗೆ ವಿಪತ್ತು ಬರಮಾಡುತ್ತಾನಲ್ಲವೆ? ಕೇಡಿಗರಿಗೆ ಉಪದ್ರವ ಕೊಡುತ್ತಾನಲ್ಲವೆ?


ಮರಕ್ಕೆ ತೂಗುಹಾಕಲಾದ ಪ್ರತಿ ಒಬ್ಬನೂ ಶಾಪಗ್ರಸ್ತನು,” ಎಂದು ಬರೆದಿರುವಂತೆ, ನಮಗೋಸ್ಕರ ಕ್ರಿಸ್ತಯೇಸು ಶಾಪಸ್ವರೂಪಿಯಾಗಿ ಧರ್ಮಶಾಸ್ತ್ರದಲ್ಲಿ ಹೇಳಲಾಗಿರುವ ಶಾಪದಿಂದ ನಮ್ಮನ್ನು ಪಾರುಮಾಡಿದರು.


‘ನಿಮ್ಮ ತಂದೆತಾಯಿಗಳನ್ನು ಗೌರವಿಸಬೇಕು; ತಂದೆಯನ್ನಾಗಲೀ ತಾಯಿಯನ್ನಾಗಲೀ ದೂಷಿಸುವವನಿಗೆ ಮರಣದಂಡನೆ ಆಗಲೇಬೇಕು,’ ಎಂಬುದು ಮೋಶೆ ವಿಧಿಸಿದ ಆಜ್ಞೆ.


ಭಯಕ್ಕೆ ಓಡುವವನು ಗುಂಡಿಯಲ್ಲಿ ಬೀಳುವನು ಗುಂಡಿಯಿಂದ ಹತ್ತಿ ಬರುವವನು ಬಲೆಗೆ ಸಿಕ್ಕುವನು. ದಂಡನೆಯ ವರ್ಷವನ್ನು ಮೋವಾಬಿಗೆ ಖಂಡಿತ ಬರಮಾಡುವೆನು - ಇದು ಸರ್ವೇಶ್ವರನ ನುಡಿ.


ಹೆತ್ತವರನ್ನು ಶಪಿಸುವವನ ದೀಪ ಕಾರಿರುಳಲ್ಲೆ ಆರಿಹೋಗುವುದು ಖಚಿತ.


ಆಗ ಯೋವಾಬನು, “ಇಲ್ಲಿ ನಿಂತು ನಿನ್ನೊಡನೆ ಸಮಯ ಕಳೆಯಲಾರೆ,” ಎಂದು ಹೇಳಿ ಕೂಡಲೆ ಕೈಯಲ್ಲಿ ಮೂರು ಈಟಿಗಳನ್ನು ತೆಗೆದುಕೊಂಡು ಹೋಗಿ ಅಬ್ಷಾಲೋಮನ ಎದೆಗೆ ತಿವಿದನು.


ಅಹೀತೋಫೆಲನು ತನ್ನ ಆಲೋಚನೆ ನಡೆಯಲಿಲ್ಲವೆಂದು ತಿಳಿದು, ಕತ್ತೆಗೆ ತಡಿಹಾಕಿಸಿ ಕುಳಿತುಕೊಂಡು ತನ್ನ ಊರಿಗೆ ಹೋಗಿದ್ದನು. ಮನೆಯ ವ್ಯವಸ್ಥೆಮಾಡಿ ಅನಂತರ ಉರ್ಲು ಹಾಕಿಕೊಂಡು ಸತ್ತನು. ಅವನ ಶವವನ್ನು ಅವನ ತಂದೆಯ ಸ್ಮಶಾನಭೂಮಿಯಲ್ಲಿ ಸಮಾಧಿ ಮಾಡಿದರು.


‘ಅವರು, ‘ಮಲತಾಯಿಯನ್ನು ಸಂಗಮಿಸಿ ತಂದೆಗೆ ಅವಮಾನಪಡಿಸಿದವನು ಶಾಪಗ್ರಸ್ತ,’ ಎನ್ನಲು ಜನರೆಲ್ಲರು, ‘ಆಮೆನ್’, ಎನ್ನಬೇಕು.


“ಲೇವಿಯರು, ‘ತಂದೆತಾಯಿಗಳನ್ನು ಅವಮಾನಪಡಿಸಿದವನು ಶಾಪಗ್ರಸ್ತ,’ ಎನ್ನಲು ಜನರೆಲ್ಲರು, ‘ಆಮೆನ್’, ಎನ್ನಬೇಕು.


ಅವನ ಶವವನ್ನು ನೀವು ರಾತ್ರಿಯೆಲ್ಲಾ ಆ ಮರದ ಮೇಲೆ ಇರಿಸಬಾರದು; ಅದನ್ನು ಅದೇ ದಿನ ನೆಲದಲ್ಲಿ ಹೂಣಬೇಕು. ಏಕೆಂದರೆ ಮರಕ್ಕೆ ತೂಗಹಾಕಲಾದವನು ದೇವರ ಶಾಪವನ್ನು ಹೊಂದಿದವನು. ಹೀಗೆ ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಸ್ವದೇಶವಾಗಲೆಂದು ಕೊಡುವ ನಾಡನ್ನು ನೀವೇ ಅಪವಿತ್ರಗೊಳಿಸಬಾರದು.


ಆಗ ಅವನು ಆ ಹಣವನ್ನು ದೇವಾಲಯದಲ್ಲೇ ಎಸೆದು, ಹೊರಟುಹೋಗಿ ನೇಣುಹಾಕಿಕೊಂಡು ಸತ್ತನು.


ಅಬ್ಷಾಲೋಮನ ಆಳುಗಳು ಅವನ ಆಜ್ಞೆಯಂತೆ ಅಮ್ನೋನನನ್ನು ಕೊಂದರು. ರಾಜಪುತ್ರರೆಲ್ಲರೂ ತಮ್ಮ ತಮ್ಮ ಹೇಸರಗತ್ತೆಗಳನ್ನು ಹತ್ತಿ ಓಡಿಹೋದರು.


ಯುದ್ಧವು ಸುತ್ತಣ ಪ್ರದೇಶಗಳಿಗೆ ಹಬ್ಬಿಕೊಂಡಿತು. ಆ ದಿನ ಕತ್ತಿಯಿಂದ ಸತ್ತವರಿಗಿಂತ, ಮರುಳುಗಾಡಿನಲ್ಲಿ ಸತ್ತವರ ಸಂಖ್ಯೆಯೇ ಹೆಚ್ಚಾಗಿತ್ತು.


ಇದನ್ನು ನೋಡಿದ ಒಬ್ಬ ವ್ಯಕ್ತಿ ಯೋವಾಬನಿಗೆ, “ನೋಡಿ, ಆ ಓಕ್ ಮರದಲ್ಲಿ ಅಬ್ಷಾಲೋಮನು ನೇತಾಡುತ್ತಿರುವುದನ್ನು ಕಂಡೆ,” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು